IPL 2026: ಡಗೌಟ್​ನಿಂದಲೇ ಹಾರ್ದಿಕ್​ಗೆ ನಾಯಕನ ಪಾಠ ಮಾಡಿದ ರೋಹಿತ್ ಶರ್ಮಾ – Kannada News | Rohit Sharma teaches Hardik Pandya a lesson in Captain from the dugout Watch the video

ಬೆಂಗಳೂರು (ಮೇ. 03): ಗಾಯದ ಕಾರಣದಿಂದಾಗಿ ರೋಹಿತ್ ಶರ್ಮಾ (Rohit Sharma) ಪ್ರಸ್ತುತ ಐಪಿಎಲ್ 2026 ರಲ್ಲಿ ಆಟದಿಂದ ಹೊರಗುಳಿದಿದ್ದಾರೆ. ಇಂಜುರಿ ಮಧ್ಯೆಯೂ ಅವರು ತಂಡದೊಂದಿಗೆ ಪ್ರತಿ ಪಂದ್ಯದಲ್ಲೂ ಕಾಣಿಸಿಕೊಳ್ಳುತ್ತಾರೆ, ಪ್ಲೇಯಿಂಗ್ ಇಲೆವೆನ್‌ನಲ್ಲಿ ಇಲ್ಲದಿದ್ದರೂ ಡಗೌಟ್​ನಲ್ಲಿದ್ದು ತಂಡಕ್ಕೆ ಸಪೋರ್ಟ್ ಮಾಡುತ್ತಿದ್ದಾರೆ. ಆರ್‌ಸಿಬಿ ವಿರುದ್ಧದ ಋತುವಿನ 20 ನೇ ಪಂದ್ಯದ ಸಮಯದಲ್ಲಿ, ರೋಹಿತ್ ಮಂಡಿರಜ್ಜು ಗಾಯಕ್ಕೆ ತುತ್ತಾದರು. ಗಂಭೀರ ಗಾಯವಾಗಿಲ್ಲ ಎಂದು ವರದಿಯಾಗಿದ್ದರೂ ಅವರನ್ನು ಇನ್ನೂ ಸಂಪೂರ್ಣ ಫೀಟ್ ಆಗಿಲ್ಲ.

ರೋಹಿತ್ ಅವರ ಸಲಹೆಯಿಂದ ಸಿಎಸ್​ಕೆ ವಿಕೆಟ್‌ ಪತನ

ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ರೋಹಿತ್ ಶರ್ಮಾ ನೀಡಿದ ಸಲಹೆ ಬಹಳ ಉಪಯುಕ್ತವಾಗಿತ್ತು. ಸಂಜು ಸ್ಯಾಮ್ಸನ್ ಔಟಾದ ನಂತರವೂ ಚೆನ್ನೈ ಸೂಪರ್ ಕಿಂಗ್ಸ್ ಬಿರುಸಿನ ರನ್ ಕಲೆಹಾಕುತ್ತಿತ್ತು. ಈ ಸಂದರ್ಭ ಐದನೇ ಓವರ್‌ನಲ್ಲಿ, ರೋಹಿತ್ ಡಗೌಟ್‌ನಿಂದ ಸ್ಪಿನ್ನರ್​ಗೆ ಬೌಲಿಂಗ್ ನೀಡಲು ಹಾರ್ದಿಕ್​ಗೆ ಸಿಗ್ನಲ್ ನೀಡಿದರು. ಮುಂದಿನ ಓವರ್‌ನಲ್ಲಿ, ನಾಯಕ ಹಾರ್ದಿಕ್ ಪಾಂಡ್ಯ ಅಲ್ಲಾ ಅಜ್ನಾಫರ್ ಅವರನ್ನು ಕರೆತಂದರು. ಅದರಂತೆ ನಾಲ್ಕನೇ ಎಸೆತದಲ್ಲಿ ಉರ್ವಿಲ್ ಪಟೇಲ್ ಬೌಲ್ಡ್ ಆದರು. ಉರ್ವಿಲ್ 12 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 24 ರನ್ ಗಳಿಸಿದರು. ಸ್ಟಾರ್ ಸ್ಪೋರ್ಟ್ಸ್ ಕೂಡ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದೆ.

5 ಬಾರಿ ಚಾಂಪಿಯನ್ ನಾಯಕ ರೋಹಿತ್ ಶರ್ಮಾ

ರೋಹಿತ್ ಶರ್ಮಾ ಅವರನ್ನು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಅವರು 2013 ರಿಂದ 2023 ರವರೆಗೆ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ವಹಿಸಿದ್ದರು. ಈ 11 ಸೀಸನ್‌ಗಳಲ್ಲಿ ಮುಂಬೈ ಐದು ಪ್ರಶಸ್ತಿಗಳನ್ನು ಗೆದ್ದುಕೊಂಡಿತು. 2024 ರ ಸೀಸನ್‌ಗೆ ಮೊದಲು, ಮುಂಬೈ ಇಂಡಿಯನ್ಸ್ ರೋಹಿತ್ ಅವರನ್ನು ಬದಲಾಯಿಸಿ ಹಾರ್ದಿಕ್ ಪಾಂಡ್ಯ ಅವರಿಗೆ ನಾಯಕತ್ವವನ್ನು ಹಸ್ತಾಂತರಿಸಿತು.

CSK vs MI: ಇದು ನಮ್ಮ ಸೀಸನ್ ಅಲ್ಲ: ಸಿಎಸ್​ಕೆ ವಿರುದ್ಧದ ಸೋಲಿನ ನಂತರ ದುಃಖಿತರಾದ ಹಾರ್ದಿಕ್ ಪಾಂಡ್ಯ

ಮುಂಬೈ ಇಂಡಿಯನ್ಸ್​ಗೆ 8 ವಿಕೆಟ್‌ಗಳ ಸೋಲು

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 8 ವಿಕೆಟ್‌ಗಳಿಂದ ಸೋತಿತು. ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ತಂಡವು 7 ವಿಕೆಟ್‌ಗಳಿಗೆ 159 ರನ್ ಗಳಿಸಿತು. 11 ನೇ ಓವರ್‌ನಲ್ಲಿ ತಂಡದ ಸ್ಕೋರ್ 99 ರನ್‌ಗಳಾಗಿತ್ತು. ಆದರೆ ಇದರ ನಂತರ, ಸಿಎಸ್‌ಕೆ ಬೌಲರ್‌ಗಳು ಬಲವಾದ ಪುನರಾಗಮನ ಮಾಡಿದರು. ಪವರ್‌ಪ್ಲೇನಲ್ಲಿ ಎರಡು ವಿಕೆಟ್‌ಗಳನ್ನು ಕಳೆದುಕೊಂಡರೂ, ಸಿಎಸ್‌ಕೆ 8 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ನಾಯಕ ರುತುರಾಜ್ ಗಾಯಕ್ವಾಡ್ ಅಜೇಯ 67 ರನ್‌ಗಳನ್ನು ಮತ್ತು ಕಾರ್ತಿಕ್ ಶರ್ಮಾ ಅಜೇಯ 54 ರನ್‌ಗಳನ್ನು ಗಳಿಸಿದರು. ಇಬ್ಬರ ನಡುವೆ 98 ರನ್‌ಗಳ ಪಾಲುದಾರಿಕೆ ಇತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಏನು ಮಾಡ್ತಿದ್ದೀರಾ? ರೋಹಿತ್ ಶರ್ಮಾ ಮುಖದಲ್ಲಿ ಹತಾಶೆ, ನೋವು, ನಿರಾಸೆ! – Kannada News | Rohit Sharma in the dugout unhappy MI vs CSK Match

ಐಪಿಎಲ್ 2026ರ ಅತ್ಯಂತ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿಯು ಅಭಿಮಾನಿಗಳಿಗೆ ಕೇವಲ ಆಟದ ರೋಮಾಂಚನವನ್ನಷ್ಟೇ ನೀಡಲಿಲ್ಲ, ಬದಲಿಗೆ ಒಂದು ಭಾವನಾತ್ಮಕ ಕ್ಷಣಕ್ಕೂ ಸಾಕ್ಷಿಯಾಯಿತು. ಮೇ 2ರಂದು ನಡೆದ ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರು ಡಗೌಟ್‌ನಲ್ಲಿ ಅತ್ಯಂತ ನಿರಾಶೆ ಮತ್ತು ಅಸಮಾಧಾನದಿಂದ ಕುಳಿತಿದ್ದ ದೃಶ್ಯಗಳು ಈಗ ಕ್ರೀಡಾ ಲೋಕದಲ್ಲಿ ಚರ್ಚೆಗೆ ಕಾರಣವಾಗಿವೆ.

ಈ ಪಂದ್ಯದ ವೇಳೆ ನಾಯಕ ಹಾರ್ದಿಕ್ ಪಾಂಡ್ಯ ತೆಗೆದುಕೊಳ್ಳುತ್ತಿದ್ದ ಕೆಲ ನಿರ್ಧಾರಗಳಿಂದ, ಪ್ರಮುಖವಾಗಿ ಬೌಲಿಂಗ್ ಬದಲಾವಣೆಗಳ ವೇಳೆ ರೋಹಿತ್ ಶರ್ಮಾ ಡಗೌಟ್​ನಲ್ಲಿ ನಿರಾಸೆ ವ್ಯಕ್ತಪಡಿಸುತ್ತಿರುವುದು ಕಂಡು ಬಂತು. ಅಲ್ಲದೆ ತಂಡದ ಒಟ್ಟಾರೆ ಪ್ರದರ್ಶನವನ್ನು ನೋಡಿ ಹತಾಶರಾಗಿ ಕೂತಿದ್ದರು. ಇದೀಗ ಹಿಟ್​ಮ್ಯಾನ್ ಅವರ ಈ ಭಾವನಾತ್ಮಕ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2024ರಲ್ಲೇ ನಿರಾಸೆ ವ್ಯಕ್ತಪಡಿಸಿದ್ದ ಹಿಟ್​ಮ್ಯಾನ್!

ಐಪಿಎಲ್ 2024ರ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಸಹಾಯಕ ಕೋಚ್ ಅಭಿಷೇಕ್ ನಾಯರ್ ನಡುವಿನ ಖಾಸಗಿ ಸಂಭಾಷಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿತ್ತು.

ಈ ವಿಡಿಯೋದಲ್ಲಿ ರೋಹಿತ್ ಶರ್ಮಾ, ಒಂದೊಂದಾಗಿ ಎಲ್ಲವೂ ಬದಲಾಗುತ್ತಿದೆ… ಅದು ಅವರ ಇಷ್ಟ, ನಾನದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾರ್ದಿಕ್ ಪಾಂಡ್ಯ ಅವರಿಗೆ ನಾಯಕತ್ವ ನೀಡಿದ ನಂತರ ತಂಡದಲ್ಲಿ ಆದ ಬದಲಾವಣೆಗಳ ಬಗ್ಗೆ ಅವರು ಈ ಮಾತು ಹೇಳಿರಬಹುದು ಎಂದು ವಿಶ್ಲೇಷಿಸಲಾಗಿತ್ತು.

ಅಷ್ಟೇ ಅಲ್ಲದೆ ಇದೇ ವೇಳೆ  ಮುಂಬೈ ಇಂಡಿಯನ್ಸ್ ತಂಡದೊಂದಿಗಿನ ತಮ್ಮ ದಶಕದ ಸುದೀರ್ಘ ಸಂಬಂಧವನ್ನು ಸ್ಮರಿಸಿದ ರೋಹಿತ್, “ಏನೇ ಆದರೂ ಇದು ನನ್ನ ಮನೆ. ಈ ತಂಡವನ್ನು ಕಟ್ಟಿದ್ದು ನಾನು” ಎಂದು ಭಾವುಕರಾಗಿ ನುಡಿದಿದ್ದರು. ಇದೀಗ ಅದೇ ತಂಡದ ಕುಸಿತವನ್ನು ರೋಹಿತ್ ಶರ್ಮಾ ಕಣ್ಣಾರೆ ಕಾಣುತ್ತಿದ್ದಾರೆ. ಇದಕ್ಕೆ ಸಾಕ್ಷಿ ಸಿಎಸ್​ಕೆ ವಿರುದ್ಧದ ಪಂದ್ಯದ ವೇಳೆ ಹಿಟ್​ಮ್ಯಾನ್ ಮುಖದಲ್ಲಿ ಕಾಣಿಸಿಕೊಂಡ ಹಾವಭಾವ.

ರೋಹಿತ್ ಶರ್ಮಾ ಬೇಸರಕ್ಕೆ ಕಾರಣವೇನು?

  • ಗಾಯದ ಸಮಸ್ಯೆ ಮತ್ತು ಅಸಹಾಯಕತೆ: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ರೋಹಿತ್, ಈ ಮಹತ್ವದ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಗುಳಿಯಬೇಕಾಯಿತು. ತಮ್ಮ ನೆಚ್ಚಿನ ತಂಡ ಸಂಕಷ್ಟದಲ್ಲಿರುವಾಗ ಮೈದಾನಕ್ಕಿಳಿದು ನೆರವಾಗಲು ಸಾಧ್ಯವಾಗದ ಅಸಹಾಯಕತೆ ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು.
  • ತಂಡದ ಕಳಪೆ ಪ್ರದರ್ಶನ: ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಕೇವಲ 159 ರನ್‌ಗಳಿಗೆ ಸೀಮಿತವಾಯಿತು. ಈ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಸಿಎಸ್‌ಕೆ, ತುತುರಾಜ್ ಗಾಯಕ್ವಾಡ್ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ತನ್ನ ತಂಡದ ಸತತ ಸೋಲು ರೋಹಿತ್ ಅವರ ಬೇಸರಕ್ಕೆ ಮುಖ್ಯ ಕಾರಣವಾಗಿತ್ತು.
  • ಅಂಕಪಟ್ಟಿಯಲ್ಲಿ ಕುಸಿತ: ಈ ಸೋಲಿನೊಂದಿಗೆ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿಯಿತು. 9 ಪಂದ್ಯಗಳಲ್ಲಿ ಕೇವಲ ಎರಡು ಜಯ ದಾಖಲಿಸಿರುವ ಮುಂಬೈ ತಂಡಕ್ಕೆ ಪ್ಲೇ-ಆಫ್ ಹಾದಿ ಬಹುತೇಕ ಮುಚ್ಚಿಹೋಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ರೋಹಿತ್ ಅವರ ಈ ಫೋಟೋಗಳು ವೈರಲ್ ಆಗಿದ್ದು, “ಮುಂಬೈ ಸಾಮ್ರಾಜ್ಯವನ್ನು ಕಟ್ಟಿದ ವ್ಯಕ್ತಿ ಇಂದು ಅಸಹಾಯಕನಾಗಿ ಕುಳಿತಿದ್ದಾರೆ” ಎಂದು ಅಭಿಮಾನಿಗಳು ಮರುಗುತ್ತಿದ್ದಾರೆ. ಅನೇಕರು ಇದನ್ನು ಮುಂಬೈ ಇಂಡಿಯನ್ಸ್‌ನಲ್ಲಿ ರೋಹಿತ್ ಶರ್ಮಾ ಅವರ ಶಕೆಯ ಅಂತ್ಯ ಎಂದು ಬಣ್ಣಿಸುತ್ತಿದ್ದಾರೆ.

ಇದನ್ನೂ ಓದಿ: IPL 2026: ಐಪಿಎಲ್​ ಅಂಗಳದಲ್ಲಿ CSK ಯುವ ದಾಂಡಿಗನ ಗನ್ ಸೆಲೆಬ್ರೇಷನ್!

ಒಟ್ಟಾರೆಯಾಗಿ, ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯವು ಮುಂಬೈ ಇಂಡಿಯನ್ಸ್​ ಅಭಿಮಾನಿಗಳಿಗೆ ಕೇವಲ ಸೋಲನ್ನಷ್ಟೇ ಅಲ್ಲದೆ, ತಮ್ಮ ನೆಚ್ಚಿನ ಆಟಗಾರನ ಕಣ್ಣಲ್ಲಿನ ನೋವನ್ನೂ ಉಣಬಡಿಸಿತು ಎಂದರೆ ತಪ್ಪಾಗಲಾರದು.

Source link

‘ಜೀ5’ ಮೂಲಕ ಒಟಿಟಿ ಅಂಗಳಕ್ಕೆ ಕಾಲಿಡುತ್ತಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ; ಪ್ರಸಾರ ಯಾವಾಗ? – Kannada News | Love Mocktail 3 Movie OTT Release Darling Krishna new movie streaming on Zee5 on 8 May

ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ (Darling Krishna) ಅವರು ‘ಲವ್ ಮಾಕ್ಟೇಲ್’ ಸರಣಿಯ ಮೂರು ಸಿನಿಮಾಗಳ ಮೂಲಕ ಗೆಲುವು ಕಂಡಿದ್ದಾರೆ. ‘ಲವ್ ಮಾಕ್ಟೇಲ್’ ಮತ್ತು ‘ಲವ್ ಮಾಕ್ಟೇಲ್ 2’ ಯಶಸ್ಸಿನ ಬಳಿಕ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾಗೆ ನಿರ್ದೇಶನ ಮಾಡಿದರು. ಅಲ್ಲದೇ, ಅವರೇ ಮುಖ್ಯ ಭೂಮಿಕೆ ನಿಭಾಯಿಸಿದರು. ಮಾರ್ಚ್ 19ಕ್ಕೆ ಬಿಡುಗಡೆ ಆಗಿದ್ದ ಈ ಸಿನಿಮಾ ಹಿಟ್ ಆಗಿದೆ. ಈಗ ಒಟಿಟಿಯಲ್ಲಿ (OTT) ಈ ಸಿನಿಮಾವನ್ನು ನೋಡುವ ಸಮಯ ಹತ್ತಿರ ಆಗಿದೆ. ಆ ಕುರಿತು ಮಾಹಿತಿ ಹೊರಬಿದ್ದಿದೆ.

‘ಜೀ5’ ಒಟಿಟಿ ಮೂಲಕ ‘ಲವ್ ಮಾಕ್ಟೇಲ್ 3’ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ಮೇ 8ರಿಂದ ಈ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಆಗಲಿದೆ. ಚಿತ್ರಮಂದಿರದಲ್ಲಿ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಪಾಸಿಟಿವ್ ವಿಮರ್ಶೆ ಪಡೆದಿದ್ದ ಈ ಸಿನಿಮಾಗೆ ಈಗ ಒಟಿಟಿ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ತಂದೆ-ಮಗಳ ಎಮೋಷನಲ್ ಕಹಾನಿ ಇದೆ. ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್, ಯದುನಂದನ್ ಅವರು ಈ ಕಥೆ ಬರೆದಿದ್ದಾರೆ. ‘ಕ್ರಿಸ್ಮಿ ಫಿಲ್ಮ್ಸ್’ ಮೂಲಕ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತಾ, ಅಮೃತಾ ಐಯ್ಯಂಗಾರ್, ದಿಲೀಪ್ ರಾಜ್, ಶ್ವೇತಾ ಪ್ರಸಾದ್, ರೇಖಾ ಕೂಡ್ಲಿಗಿ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.

ಏನು ಈ ಸಿನಿಮಾ ಕಥೆ?

ಈ ಕಥೆಯು ಆದಿತ್ಯ (ಡಾರ್ಲಿಂಗ್ ಕೃಷ್ಣ) ಮತ್ತು ನಿಧಿ(ಸಂವೃತಾ) ಸುತ್ತ ನಡೆಯುತ್ತದೆ. ನಿಧಿಯನ್ನು ಆದಿತ್ಯ ದತ್ತು ತೆಗೆದುಕೊಂಡಿರುತ್ತಾನೆ. ಅವರಿಬ್ಬರ ನಡುವಿನ ತಂದೆ-ಮಗಳ ಬಾಂಧವ್ಯವನ್ನು ಈ ಕಥೆ ಎತ್ತಿ ಹಿಡಿಯಲಿದೆ. ತಂದೆ-ಮಗಳ ದಿನಚರಿ, ತುಂಟಾಟ, ಅವರಿಬ್ಬರ ನಡುವಿನ ಪ್ರೀತಿ, ಅವರೊಂದಿಗೆ ಅವರ ಮನೆಯ ಕೇರ್‌ಟೇಕರ್‌ ಜಗ್ಗನ ತಮಾಷೆ ಮುಂತಾದವುಗಳನ್ನು ಈ ಸಿನಿಮಾ ವಿವರಿಸುತ್ತದೆ. ಬಳಿಕ ಭಾವುಕ ತಿರುವು ಸಿಗುತ್ತದೆ.

ಇದನ್ನೂ ಓದಿ: ‘ಧುರಂಧರ್ 2’ ಎದುರು ತೆರೆಕಂಡರೂ ಸೂಪರ್ ಹಿಟ್ ಆದ ‘ಲವ್ ಮಾಕ್ಟೇಲ್ 3’

ಇಷ್ಟೆಲ್ಲ ಪ್ರೀತಿಯಿಂದ ಸಾಕಿದ ದತ್ತು ಮಗಳನ್ನು ಆದಿತ್ಯ ಕಳೆದುಕೊಳ್ಳುತ್ತಾನಾ ಎಂಬ ಪ್ರಶ್ನೆ ಮೂಡುತ್ತದೆ. ಅದು ಯಾಕೆ ಎಂಬುದನ್ನು ಸಿನಿಮಾದಲ್ಲಿಯೇ ನೋಡಬೇಕು. ದ್ವಿತಿಯಾರ್ಧ ಪೂರ್ತಿ ಎಮೋಷನಲ್ ಆಗಿಯೇ ಸಿನಿಮಾ ಸಾಗುತ್ತದೆ. ಆದ್ದರಿಂದ ಫ್ಯಾಮಿಲಿ ಪ್ರೇಕ್ಷಕರಿಗೆ ಈ ಸಿನಿಮಾ ಹೆಚ್ಚು ಇಷ್ಟ ಆಗುತ್ತದೆ. ‘ಜೀ5’ ಮೂಲಕ ‘ಲವ್ ಮಾಕ್ಟೇಲ್ 3’ ಸಿನಿಮಾ ಬಿಡುಗಡೆ ಆಗುತ್ತಿರುವುದು ಡಾರ್ಲಿಂಗ್ ಕೃಷ್ಣ ಅವರಿಗೆ ಸಂತಸ ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಸೂಪರ್​ ಮಾರ್ಕೆಟ್​​ ಲೂಟಿ ಮಾಡಲು ಬಂದ ಕಳ್ಳರಿಗೆ ಸಿಬ್ಬಂದಿ ಕಲಿಸಿದ ಪಾಠ ನೋಡಿ – Kannada News | Robbery Attempt in Brazil Foiled as Staff Fight Back, Suspects Arrested

ಬ್ರೆಜಿಲ್‌ನಲ್ಲಿ ನಡೆದ ಈ ದರೋಡೆ ಯತ್ನವು ಕಳ್ಳರ ಪಾಲಿಗೆ ಅಕ್ಷರಶಃ ದುಸ್ವಪ್ನವಾಗಿ ಪರಿಣಮಿಸಿತ್ತು. ಶಸ್ತ್ರಸಜ್ಜಿತರಾಗಿ ಬಂದ ದರೋಡೆಕೋರರಿಗೆ ಸೂಪರ್​ ಮಾರ್ಕೆಟ್​ನ ಸಿಬ್ಬಂದಿ ನೀಡಿರುವ ತಿರುಗೇಟು ಎಲ್ಲೆಡೆ ಚರ್ಚೆಯಾಗುತ್ತಿದೆ. ಬ್ರೆಜಿಲ್‌ನ ಮಳಿಗೆಯೊಂದಕ್ಕೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು, ಸಿಬ್ಬಂದಿಯನ್ನು ಬೆದರಿಸಿ ನಗದು ರಿಜಿಸ್ಟರ್‌ನಲ್ಲಿದ್ದ ಹಣವನ್ನು ಲೂಟಿ ಮಾಡಲು ಯತ್ನಿಸಿದ್ದಾರೆ.

ದರೋಡೆಕೋರರಲ್ಲೊಬ್ಬ ಹಣವನ್ನು ಚೀಲಕ್ಕೆ ತುಂಬಿಸಿಕೊಳ್ಳುತ್ತಿದ್ದಾಗ, ಅಲ್ಲಿನ ಸಿಬ್ಬಂದಿ ಧೈರ್ಯ ಪ್ರದರ್ಶಿಸಿ ಮಚ್ಚಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ.ದರೋಡೆಕೋರರಲ್ಲಿ ಒಬ್ಬನನ್ನು ಬಂಧಿಸಿ ಈಗಾಗಲೇ ಜೈಲಿಗೆ ಕಳುಹಿಸಲಾಗಿದೆ. ಉದ್ಯೋಗಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಶಂಕಿತ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನಿಗೆ ಚಿಕಿತ್ಸೆ ಮುಂದುವರೆದಿದೆ. ಶಸ್ತ್ರಸಜ್ಜಿತರಾಗಿ ಬಂದಿದ್ದರೂ, ಪ್ರಾಣದ ಹಂಗು ತೊರೆದು ಮಳಿಗೆಯ ಸಿಬ್ಬಂದಿ ತೋರಿದ ಈ ಸಾಹಸವು ದರೋಡೆಕೋರರ ಯೋಜನೆಯನ್ನು ಸಂಪೂರ್ಣವಾಗಿ ವಿಫಲಗೊಳಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಗರ್ಭಿಣಿ ಪತ್ನಿ ಎಂಟ್ರಿ! ಮುಂದೇನಾಯ್ತು ಗೊತ್ತಾ? – Kannada News | Pregnant Wife Stops Husband’s Second Marriage in Doddaballapura: Groom Detained

ಕುಮಾರ್ ಮತ್ತು ಆತನ ಗರ್ಭಿಣಿ ಪತ್ನಿ

ದೊಡ್ಡಬಳ್ಳಾಪುರ, ಮೇ 03: ಮನೆಯವರ ಒತ್ತಡಕ್ಕೆ ಮಣಿದು ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ವರನೊಬ್ಬನ ಮದುವೆಯನ್ನು ಗರ್ಭಿಣಿ ಪತ್ನಿ (Pregnant Wife) ಮಂಟಪಕ್ಕೇ ಬಂದು ನಿಲ್ಲಿಸಿರುವ ಘಟನೆ ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ಮನೆಯವರ ಒತ್ತಾಯಕ್ಕೆ ಎರಡನೇ ಮದುವೆ

ಕೇರಳ ಮೂಲದ ಮಹಿಳೆಯನ್ನು ಪ್ರೀತಿಸಿ ಕಳೆದ ಒಂದು ವರ್ಷದ ಹಿಂದೆಯಷ್ಟೇ ಕುಮಾರ್ ಎಂಬ ಯುವಕ ವಿವಾಹವಾಗಿದ್ದ. ಈಗ ಕುಮಾರ್ ಪತ್ನಿ ಏಳು ತಿಂಗಳ ಗರ್ಭಿಣಿ. ಆದರೆ ಮನೆಯವರ ಒತ್ತಡಕ್ಕೆ ಮಣಿದ ಕುಮಾರ್, ತನ್ನ ಮೊದಲ ಮದುವೆಯ ವಿಷಯ ಮರೆಮಾಚಿ ಮತ್ತೊಬ್ಬ ಯುವತಿಯೊಂದಿಗೆ ಎರಡನೇ ಮದುವೆಯಾಗಲು ಸಿದ್ಧತೆ ನಡೆಸಿದ್ದ. ವಿಶೇಷವೆಂದರೆ ತಾನು ಎರಡನೇ ಮದುವೆಯಾಗುತ್ತಿರುವ ವಿಷಯವನ್ನು ಸ್ವತಃ ಕುಮಾರ್ ಅವರೇ ತಡರಾತ್ರಿ ಮೊದಲ ಪತ್ನಿ ಕರೆ ಮಾಡಿ ತಿಳಿಸಿದ್ದ. ಮನೆಯವರು ಬಲವಂತವಾಗಿ ಈ ಮದುವೆ ಮಾಡಿಸುತ್ತಿದ್ದಾರೆ ಎಂದು ಆಕೆ ಬಳಿ ಅಸಹಾಯಕತನ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕಂಗಾಲಾದ ಗರ್ಭಿಣಿ ರಾತ್ರೋರಾತ್ರಿ ಕೇರಳದಿಂದ ದೊಡ್ಡಬಳ್ಳಾಪುರಕ್ಕೆ ಧಾವಿಸಿದ್ದಾರೆ.

ಇದನ್ನೂ ಓದಿ ಹನಿಯೂರು ಚಂದ್ರೇಗೌಡ ಒಬ್ಬರಿಗೆ ನಟ, ಇನ್ನೊಬ್ಬರಿಗೆ ಪ್ರೊಫೆಸರ್: ತನಿಖೆ ವೇಳೆ ಸ್ಫೋಟಕ ಸತ್ಯ ಬಯಲು

ಮದುವೆ ಮಂಟಪದಲ್ಲಿ ಹೈಡ್ರಾಮಾ

ಇಂದು (ಮೇ 3) ಬೆಳಗ್ಗೆ ಮದುವೆ ಶಾಸ್ತ್ರಗಳು ಆರಂಭವಾಗುವ ಮುನ್ನವೇ ಕಲ್ಯಾಣ ಮಂಟಪಕ್ಕೆ ಎಂಟ್ರಿ ಕೊಟ್ಟ ಕುಮಾರ್ ಪತ್ನಿ, ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿ ಮದುವೆಯನ್ನು ತಡೆದಿದ್ದಾರೆ. ತನ್ನ ಮದುವೆಯ ದಾಖಲೆಗಳು ಮತ್ತು ಗರ್ಭಿಣಿಯಾಗಿರುವ ವಿಷಯವನ್ನು ತಿಳಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದ್ದಂತೆಯೇ ದೊಡ್ಡಬಳ್ಳಾಪುರ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತಕ್ಷಣವೇ ವರ ಕುಮಾರ್‌ನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ವರನನ್ನು ವಶಕ್ಕೆ ಪಡೆದಿದ್ದು, ಮೊದಲ ಮದುವೆಯ ದಾಖಲೆಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಸದ್ಯ ಹಸೆಮಣೆ ಏರಬೇಕಿದ್ದ ವರ ಈಗ ಕಂಬಿ ಎಣಿಸುವಂತಾಗಿದ್ದು, ಎರಡನೇ ಮದುವೆಯಾಗಬೇಕಿದ್ದ ಯುವತಿಯ ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಐಪಿಎಲ್​ ಅಂಗಳದಲ್ಲಿ CSK ಯುವ ದಾಂಡಿಗನ ಗನ್ ಸೆಲೆಬ್ರೇಷನ್! – Kannada News | IPL 2026: Kartik Sharma recreates MS Dhoni’s gun celebration

ಕ್ರಿಕೆಟ್ ಲೋಕದಲ್ಲಿ ಎಂ.ಎಸ್. ಧೋನಿ ಎಂದರೆ ಅದೊಂದು ಭಾವನೆ. ಅವರ ಆಟ, ನಾಯಕತ್ವದಷ್ಟೇ ಅವರ ಹಳೆಯ ಸ್ಟೈಲ್‌ಗಳು ಕೂಡ ಇಂದಿಗೂ ಅಭಿಮಾನಿಗಳ ಮನಸ್ಸಿನಲ್ಲಿ ಹಸಿರಾಗಿವೆ. ಇದಕ್ಕೆ ಸಾಕ್ಷಿ ಎಂಬಂತೆ, ಶನಿವಾರ (ಮೇ 2, 2026) ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ಯುವ ಆಟಗಾರ ಕಾರ್ತಿಕ್ ಶರ್ಮಾ ಧೋನಿಯವರ ಐಕಾನಿಕ್ ‘ಗನ್ ಸೆಲೆಬ್ರೇಷನ್’ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಹಂತದಲ್ಲಿ, ಟ್ರೆಂಟ್ ಬೌಲ್ಟ್ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಕಾರ್ತಿಕ್ ಶರ್ಮಾ ತಂಡಕ್ಕೆ ಜಯ ತಂದುಕೊಟ್ಟರು. ಈ ವೇಳೆ ತಮ್ಮ ಬ್ಯಾಟ್ ಅನ್ನು ಗನ್‌ನಂತೆ ಹಿಡಿದು ಸಂಭ್ರಮಿಸಿದರು. ಇದು 2005ರಲ್ಲಿ ಜೈಪುರದಲ್ಲಿ ಶ್ರೀಲಂಕಾ ವಿರುದ್ಧ 183 ರನ್ ಚಚ್ಚಿದಾಗ ಧೋನಿ ಮಾಡಿದ್ದ ಸಂಭ್ರಮಾಚರಣೆಯನ್ನು ನೆನಪಿಸಿತು.
ಇದೀಗ ಕಾರ್ತಿಕ್ ಶರ್ಮಾ ಅವರ ಗನ್ ಸೆಲೆಬ್ರೇಷನ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾರ್ತಿಕ್ ಶರ್ಮಾ ಇನಿಂಗ್ಸ್ ವಿಶೇಷ:

  • ಚೊಚ್ಚಲ ಅರ್ಧಶತಕ: ಈ ಪಂದ್ಯದಲ್ಲಿ ಕಾರ್ತಿಕ್ ಶರ್ಮಾ ಕೇವಲ 40 ಎಸೆತಗಳಲ್ಲಿ ಅಜೇಯ 54 ರನ್ ಸಿಡಿಸಿದರು. ಇದು ಐಪಿಎಲ್‌ನಲ್ಲಿ ಅವರ ಚೊಚ್ಚಲ ಅರ್ಧಶತಕವಾಗಿದೆ.
  • ಜವಾಬ್ದಾರಿಯುತ ಬ್ಯಾಟಿಂಗ್: ಸಿಎಸ್​ಕೆ ತಂಡವು ಆರಂಭದಲ್ಲಿ 2 ವಿಕೆಟ್ ಕಳೆದುಕೊಂಡಾಗ ಕ್ರೀಸ್​ಗೆ ಆಗಮಿಸಿದ ಕಾರ್ತಿಕ್ ಶರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಎಂಟು ವಿಕೆಟ್‌ಗಳ ಭರ್ಜರಿ ಜಯ ತಂದುಕೊಡುವಲ್ಲಿ ಯಶಸ್ವಿಯಾದರು.
  •  ಪೂರ್ವ ನಿಯೋಜಿತ ಸಂಭ್ರಮ: ಪಂದ್ಯದ ನಂತರ ಮಾತನಾಡಿದ ಕಾರ್ತಿಕ್ ಶರ್ಮಾ, “ಇಂದು ನಾನು ರನ್ ಗಳಿಸಿದರೆ ಧೋನಿ ಸರ್ ಅವರಂತೆ ಸಂಭ್ರಮಿಸಬೇಕೆಂದು ಮೊದಲೇ ನಿರ್ಧರಿಸಿದ್ದೆ” ಎಂದು ಹೇಳಿಕೊಂಡಿದ್ದಾರೆ.

ಯಾರು ಈ ಕಾರ್ತಿಕ್ ಶರ್ಮಾ?

ರಾಜಸ್ಥಾನದ ದೇಶೀಯ ಕ್ರಿಕೆಟ್‌ನಿಂದ ಬಂದಿರುವ 20 ವರ್ಷದ ಕಾರ್ತಿಕ್ ಶರ್ಮಾ ಅವರನ್ನು ಅಭಿಮಾನಿಗಳು ಪ್ರೀತಿಯಿಂದ “ರಾಜಸ್ಥಾನದ ಧೋನಿ” ಎಂದೇ ಕರೆಯುತ್ತಾರೆ. 2026ರ ಹರಾಜಿನಲ್ಲಿ ಸಿಎಸ್‌ಕೆ ಫ್ರಾಂಚೈಸಿ ಕಾರ್ತಿಕ್ ಅವರನ್ನು ಬರೋಬ್ಬರಿ 14.20 ಕೋಟಿ ರೂಪಾಯಿಗೆ ಖರೀದಿಸಿತ್ತು. ವಿಕೆಟ್ ಕೀಪರ್-ಬ್ಯಾಟರ್ ಆಗಿರುವ ಇವರು ಧೋನಿಯ ಉತ್ತರಾಧಿಕಾರಿ ಎಂದೇ ಬಿಂಬಿತವಾಗುತ್ತಿದ್ದಾರೆ.

ಇದನ್ನೂ ಓದಿ: ಬೆಂಕಿಯ ಉಂಡೆಗಳನ್ನೇ ಎಸೆಯಬೇಕಿತ್ತೇನೋ… ಪಾಂಡ್ಯ ಅಸಹಾಯಕತೆ!

ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧದ ಈ ಗೆಲುವಿನೊಂದಿಗೆ  ಚೆನ್ನೈ ಸೂಪರ್ ಕಿಂಗ್ಸ್ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದ್ದು, ಪ್ಲೇ-ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಇನ್ನುಳಿದ 5 ಪಂದ್ಯಗಳಲ್ಲಿ 4 ಮ್ಯಾಚ್​ಗಳಲ್ಲಿ ಸಿಎಸ್​ಕೆ ತಂಡ ಗೆದ್ದರೆ ಪ್ಲೇಆಫ್ ಪ್ರವೇಶಿಸುವುದು ಖಚಿತ.

Source link

ಕ್ಷುಲ್ಲಕ ಕಾರಣಕ್ಕೆ ಹರಿದ ನೆತ್ತರು: ಮದ್ಯಕ್ಕೆ ನೀರು ತರಲು ನಿರಾಕರಿಸಿದ್ದಕ್ಕೆ 9 ವರ್ಷದ ಬಾಲಕನಿಗೆ ಗುಂಡು ಹಾರಿಸಿ ಕೊಲೆ – Kannada News | Kasganj Boy Shot Dead for Refusing Water for Alcohol: Naming Ceremony Tragic

ಗುಂಡಿನ ದಾಳಿ ಸಾಂದರ್ಭಿಕ ಚಿತ್ರ Image Credit source: Shutterstock

ಲಕ್ನೋ, ಮೇ 03:   ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಸಂಭ್ರಮದ ಮನೆಯೊಂದು ಮದ್ಯದ ಅಮಲಿನಿಂದಾಗಿ ಕ್ಷಣಮಾತ್ರದಲ್ಲಿ ಸ್ಮಶಾನ ಮೌನಕ್ಕೆ ಸಾಕ್ಷಿಯಾದ ದಾರುಣ ಘಟನೆ ನಡೆದಿದೆ. ಕೇವಲ ನೀರು ತರಲು ನಿರಾಕರಿಸಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತು ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಲೆ(Murder) ಮಾಡಲಾಗಿದೆ. ಕಾಸ್ಗಂಜ್ ಜಿಲ್ಲೆಯ ಸಹವರ್ ಪೊಲೀಸ್ ಠಾಣೆ ವ್ಯಾಪ್ತಿಯ ಯಾಕುತ್‌ಗಂಜ್ ಗ್ರಾಮದಲ್ಲಿ ಕಳೆದ ಶುಕ್ರವಾರದಂದು ನಾಮಕರಣ ಸಮಾರಂಭವೊಂದನ್ನು ಆಯೋಜಿಸಲಾಗಿತ್ತು. ಸಂಬಂಧಿಕರು ಮತ್ತು ಗ್ರಾಮಸ್ಥರು ಸೇರಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಬಾಲಕನ ತಂದೆಯ ಸಂಬಂಧಿಯಾದ ಧನೇಶ್ ಯಾದವ್ ಎಂಬಾತ ಮದ್ಯ ಸೇವಿಸುತ್ತಾ ಕುಳಿತಿದ್ದ.

ಮದ್ಯದ ಅಮಲಿನಲ್ಲಿ ಸಾರಾಯಿ ಕುಡಿಯುತ್ತಿದ್ದ ಧನೇಶ್, ಮದ್ಯಕ್ಕೆ ಬೆರೆಸಲು ನೀರು ತರುವಂತೆ ಅಲ್ಲಿಯೇ ಇದ್ದ ಒಂಬತ್ತು ವರ್ಷದ ಬಾಲಕನಿಗೆ ಹೇಳಿದ್ದಾನೆ. ಆದರೆ ಬಾಲಕ ನೀರು ತರಲು ನಿರಾಕರಿಸಿದಾಗ, ಕೋಪಗೊಂಡ ಧನೇಶ್ ತನ್ನ ಬಳಿಯಿದ್ದ ಬಂದೂಕಿನಿಂದ ಮಗುವಿನ ಹೊಟ್ಟೆಗೆ ಗುಂಡು ಹಾರಿಸಿದ್ದಾನೆ. ಗುಂಡಿನ ಸದ್ದಿನಿಂದಾಗಿ ಅಲ್ಲಿ ನೆರೆದಿದ್ದ ಅತಿಥಿಗಳು ಬೆಚ್ಚಿಬಿದ್ದಿದ್ದು, ಸಮಾರಂಭದಲ್ಲಿ ಭೀತಿ ಮತ್ತು ಆತಂಕದ ವಾತಾವರಣ ನಿರ್ಮಾಣವಾಯಿತು.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ಕಾಸ್ಗಂಜ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಲಿಗಢಕ್ಕೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆಯ ವೇಳೆ ಶನಿವಾರ ಬಾಲಕ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಮತ್ತಷ್ಟು ಓದಿ: ಗಂಗಾವತಿ ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಆರು ಜನ ಹಂತಕರಿಗೆ ಗಲ್ಲು ಶಿಕ್ಷೆ

ಘಟನೆ ನಡೆದ ತಕ್ಷಣ ಆರೋಪಿ ಧನೇಶ್ ಸ್ಥಳದಿಂದ ಪರಾರಿಯಾಗಿದ್ದ, ಸಂತ್ರಸ್ತ ಕುಟುಂಬದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಖಿತೌಲಿ ಕಾಲುವೆ ಸೇತುವೆಯ ಬಳಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪರಾಧಕ್ಕೆ ಬಳಸಲಾದ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಜೈಲಿಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ. ಸಣ್ಣ ಕಾರಣಕ್ಕಾಗಿ ಮದ್ಯದ ಅಮಲಿನಲ್ಲಿ ನಡೆದ ಈ ಕೊಲೆ ಪ್ರಕರಣವು ಇಡೀ ಗ್ರಾಮವನ್ನೇ ಆಘಾತಕ್ಕೀಡು ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹನಿಯೂರು ಚಂದ್ರೇಗೌಡ ಒಬ್ಬರಿಗೆ ನಟ, ಇನ್ನೊಬ್ಬರಿಗೆ ಪ್ರೊಫೆಸರ್: ತನಿಖೆ ವೇಳೆ ಸ್ಫೋಟಕ ಸತ್ಯ ಬಯಲು – Kannada News | RR Nagar Police Uncover Chandregowda’s physical Exploitation Ring, 20+ Women Victims

ಬೆಂಗಳೂರು, ಮೇ.3: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿ ಹನಿಯೂರು ಚಂದ್ರೇಗೌಡನ ಅಸಲಿ ಮುಖ ಈಗ ಬಯಲಾಗಿದೆ. ಆರ್.ಆರ್.ನಗರ ಪೊಲೀಸರ ತನಿಖೆಯ ವೇಳೆ ಈತನ ಕಾಮದಾಟದ ಸ್ಫೋಟಕ ಸತ್ಯಗಳು ಹೊರಬಂದಿವೆ. ಈ ಹಿಂದೆ ನಾನು ಬೆಂಗಳೂರಿನಲ್ಲಿ ರಾಮನಗರ ಮಕ್ಕಳ ಆಯೋಗದ ಸದಸ್ಯ ಎಂದು ಹೇಳಿಕೊಂಡು ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತನಾಗಿದ್ದ, ಇದೀಗ ತನಿಖೆಯ ವೇಳೆ ಹಲವು ಸ್ಫೋಟಕ ಸತ್ಯ ಬೆಳಕಿಗೆ ಬಂದಿದೆ.

ಆರೋಪಿ ಚಂದ್ರೇಗೌಡ ಒಂದೊಂದು ಮಹಿಳೆಗೆ ಒಂದೊಂದು ರೀತಿ ತನ್ನನ್ನು ಪರಿಚಯಿಸಿಕೊಳ್ಳುತ್ತಿದ್ದ. ಕೆಲವರಿಗೆ ತಾನು ಸೀರಿಯಲ್ ನಟ ಎಂದರೆ, ಇನ್ನು ಕೆಲವರಿಗೆ ಪ್ರೊಫೆಸರ್ ಎಂದು ಸುಳ್ಳು ಹೇಳಿ ನಂಬಿಸುತ್ತಿದ್ದ. 43 ವರ್ಷದ ಮಹಿಳೆಯೊಬ್ಬರ ಜೊತೆ ಸಂಬಂಧದಲ್ಲಿದ್ದ ಈತ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಈ ಮಹಿಳೆ ತನ್ನ ಪತಿಯಿಂದ ದೂರವಾಗಿದ್ದನ್ನು ಬಂಡವಾಳ ಮಾಡಿಕೊಂಡಿದ್ದ ಈತ, ಆಕೆಯ ಮೇಲೆ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.

ಪೊಲೀಸರು ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಬೆಚ್ಚಿ ಬೀಳುವ ವಿಷಯಗಳು ಬೆಳಕಿಗೆ ಬಂದಿವೆ. ಈತನ ಮೊಬೈಲ್‌ನಲ್ಲಿ ಹತ್ತಾರು ಮಹಿಳೆಯರ ಜೊತೆಗಿನ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳು ಪತ್ತೆಯಾಗಿವೆ. ಸದ್ಯ ಆರೋಪಿಯನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದು, ಈತನಿಂದ ಇನ್ನೂ ಎಷ್ಟು ಮಹಿಳೆಯರು ವಂಚನೆಗೊಳಗಾಗಿದ್ದಾರೆ ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ; ಯಾರಿಗಾದರೂ ಹೇಳಿದ್ರೆ ಗಂಡ-ಮಗ ರಕ್ತ ಕಾರಿ ಸಾಯ್ತಾರೆ: ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ!

ಮಹಿಳೆಯರ ವಿಡಿಯೋ, ಫೋಟೋ ಪತ್ತೆ:

ಪೊಲೀಸರು ಹನಿಯೂರು ಚಂದ್ರೇಗೌಡನ ಮೊಬೈಲ್​​​ ಪರಿಶೀಲನೆ ಮಾಡಿದಾಗ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ, ಫೋಟೋ ಪತ್ತೆಯಾಗಿವೆ. ಗಂಡನಿಂದ ದೂರವಾಗಿದ್ದ ಮಹಿಳೆ ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಗೆ ನಾನು ಲೆಕ್ಚರ್ ಎಂದು ಪರಿಚಯ ಮಾಡಿಕೊಂಡಿದ್ದ. ನನಗೆ ಡಿವೋರ್ಸ್ ಆಗಿದ್ದು, ನಿನ್ನನ್ನು ಮದುವೆ ಆಗುತ್ತೇನೆಂದು ನಂಬಿಸಿ ಆಕೆಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದ. ಖಾಸಗಿ ಕ್ಷಣವನ್ನು ವಿಡಿಯೋ ಮಾಡಿಕೊಂಡಿದ್ದ ಚಂದ್ರೇಗೌಡ ಅದನ್ನು ಇಟ್ಟುಕೊಂಡು ಮಹಿಳೆಗೆ ಹೆದರಿಸಿ ಆಕೆಯಿಂದ 5 ಲಕ್ಷ ಹಣ ಪಡೆದಿದ್ದ ಎಂದು ದೂರಲಾಗಿದೆ. ಈ ಬಗ್ಗೆ ಮಹಿಳೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಳು. ಇದೀಗ ಈ ಕುರಿತು ತನಿಖೆ ನಡೆಸುವಾಗ ಮಹತ್ವದ ಸುಳಿವು ಸಿಕ್ಕಿದೆ.

ರಾಜ್ಯದ ಸದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾವು ಬೇಕೇ ಮಾವು! ಒಂದೇ ಸೂರಿನಡಿ ಬಗೆಬಗೆಯ ಮಾವಿನ ಹಣ್ಣುಗಳ ಮಾರಾಟ ಹೇಗಿದೆ ನೋಡಿ – Kannada News | Dharwad Mango Mela: Farmers Direct Sale to End Broker Menace and Offer Chemical Free Mangoes

ಸಾಮಾನ್ಯವಾಗಿ ದಲ್ಲಾಳಿಗಳು ರೈತರಿಂದ ಕಡಿಮೆ ಬೆಲೆಗೆ ಹಣ್ಣುಗಳನ್ನು ಖರೀದಿಸಿ, ಗ್ರಾಹಕರಿಗೆ ದುಬಾರಿ ದರಕ್ಕೆ ಮಾರಾಟ ಮಾಡುತ್ತಾರೆ. ಇದರಿಂದ ರೈತರಿಗೆ ಲಾಭ ಸಿಗುತ್ತಿರಲಿಲ್ಲ. ಈಗ ಧಾರವಾಡದ ಮಾವು ಬೆಳೆಗಾರರ ಬಳಗವು ನೇರವಾಗಿ ಗ್ರಾಹಕರಿಗೆ ಹಣ್ಣು ತಲುಪಿಸುವ ಮೂಲಕ ಈ ಮಧ್ಯವರ್ತಿಗಳ ವ್ಯವಸ್ಥೆಯನ್ನು ತಪ್ಪಿಸಿದೆ. ಇದರಿಂದ ಲಾಭಾಂಶವು ನೇರವಾಗಿ ರೈತರ ಕೈ ಸೇರುತ್ತಿದೆ.

Source link

ಯಾರಿಗಾದರೂ ಹೇಳಿದ್ರೆ ಗಂಡ-ಮಗ ರಕ್ತ ಕಾರಿ ಸಾಯ್ತಾರೆ: ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ! – Kannada News | Bengaluru: ‘Pooja’ Pretext for Astrologer’s physical harassment, Beautician Victim Files Police Complaint

ಬೆಂಗಳೂರು, ಮೇ.3: ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಂಡ ಮತ್ತು ಮಗನ ಮೇಲೆ ವಾಮಾಚಾರ ಮಾಡಿಸಿ ಅವರು ರಕ್ತ ಕಾರಿ ಸಾಯುವಂತೆ ಮಾಡುವುದಾಗಿ ಬೆದರಿಸಿ ಆರೋಪಿ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಹಿಳೆ ದೂರು ಕೂಡ ನೀಡಿದ್ದಾರೆ. ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಮಹಿಳೆಗೆ, ತನ್ನ ಸಹೋದರಿಯ ಅಡ್ಮಿಷನ್ ನೆಪದಲ್ಲಿ ಆರೋಪಿ ಮೋಹನ್ ಕುಮಾರ್ ಎಂಬಾತ ಪರಿಚಯವಾಗಿದ್ದ.

ಮಹಿಳೆಯ ಆರ್ಥಿಕ ಅಭಿವೃದ್ಧಿಗೆ ಪೂಜೆ ಮಾಡಿಸಬೇಕು ಎಂದು ನಂಬಿಸಿದ್ದ ಆರೋಪಿ, 2025ರ ಜನವರಿ 30ರಂದು ರಾಮನಗರದ ಪಿರಮಿಡ್ ವ್ಯಾಲಿಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದ. ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗೆಂದು ಕರೆದೊಯ್ದು ವಾಪಸ್ಸಾಗುವಾಗ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕುಟುಂಬದ ಮೇಲೆ ಮಾಟ-ಮಂತ್ರ ಮಾಡಿಸುವುದಾಗಿ ಹೆದರಿಸಿದ್ದ.

ಇದನ್ನೂ ಓದಿ: ಹೊಸ ಮನೆ ಕಟ್ಟುವ ಆಸೆ ಮಣ್ಣುಪಾಲು; ಗೋಡೆ ಕುಸಿದು ಮಾಲೀಕ ಸ್ಥಳದಲ್ಲೇ ಸಾವು!

ಫೆಬ್ರವರಿ 10ರಂದು ದೀಕ್ಷೆ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದಿದ್ದ ಜ್ಯೋತಿಷಿ, ಗಂಡ ಮತ್ತು ಮಗನನ್ನು ಮನೆಯಿಂದ ಹೊರಗೆ ಕಳುಹಿಸಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ತಾನು ಹೇಳಿದಂತೆ ಕೇಳದಿದ್ದರೆ ಕುಟುಂಬವನ್ನೇ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಆರೋಪಿ ಮೋಹನ್ ಕುಮಾರ್ ಕಾಟ ತಾಳಲಾರದೆ ಮಹಿಳೆ ಈಗ ಪೊಲೀಸರ ಮೊರೆ ಹೋಗಿದ್ದಾರೆ. ಸಿ.ಕೆ. ಅಚ್ಚುಕಟ್ಟು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version