ಆಕ್ಸಿಜನ್ ಸಿಲಿಂಡರ್ ಸ್ಫೋಟ: ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ – Kannada News | Fire Breaks Out in Davangere District Hospitals Operation Theatre After Oxygen Cylinder Blast
ದಾವಣಗೆರೆ, ಜೂನ್ 30: ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ದಾವಣಗೆರೆಯ ಚಿಗಟೇರಿಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಸಕಾಲಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದಿದ್ದರಿಂದ ಸಂಭವನೀಯ ದೊಡ್ಡ ದುರಂತವೊಂದು ತಪ್ಪಿದೆ. ಆಸ್ಪತ್ರೆಯ ಗಾಜು ಒಡೆದು ಒಳ ಪ್ರವೇಶಿಸಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ಇನ್ನಷ್ಟು ಆಕ್ಸಿಜನ್ ಸಿಲಿಂಡರ್‌ಗಳಿದ್ದವು. ಅವು ಕೂಡ ಸ್ಫೋಟಗೊಂಡಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಆದರೆ ಸಕಾಲದಲ್ಲಿ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ತಪ್ಪಿರುವ ಭಾರಿ ಅವಘಡ…