10 ಲಕ್ಷ ರೂ.ಗೆ ಹೊಸ ತಂಡ ಸೇರಿದ ಅರ್ಜುನ್ ತೆಂಡೂಲ್ಕರ್ – Kannada News | Arjun Tendulkar Joins Mumbai T20 League for ₹10 Lakh Amidst IPL 2024 Wait

ಲೆಜೆಂಡರಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್​ಗೆ (Arjun Tendulkar) ಈ ಬಾರಿಯ ಐಪಿಎಲ್‌ನಲ್ಲಿ (IPL 2026) ಇದುವರೆಗೆ ಆಡುವ ಅವಕಾಶ ಸಿಕ್ಕಿಲ್ಲ. ಪ್ರಸ್ತುತ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಭಾಗವಾಗಿರುವ ಅರ್ಜುನ್ ತೆಂಡೂಲ್ಕರ್ ಮೊದಲ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಅರ್ಜುನ್ ತೆಂಡೂಲ್ಕರ್ ಹೊಸ ತಂಡವನ್ನು ಕೂಡಿಕೊಂಡಿದ್ದಾರೆ. ವಾಸ್ತವವಾಗಿ ಮುಂಬರುವ ದಿನಗಳಲ್ಲಿ ಮುಂಬೈನಲ್ಲಿ ಮುಂಬೈ ಟಿ20 ಲೀಗ್ ನಡೆಯಲಿದ್ದು, ಈ ಲೀಗ್​ಗೆ ನಡೆದ ಹರಾಜಿನಲ್ಲಿ ಅರ್ಜುನ್ ಅವರನ್ನು 10 ಲಕ್ಷ ರೂಗಳಿಗೆ ಖರೀದಿ ಮಾಡಲಾಗಿದೆ.

ಮೇ 2 ರ ಶನಿವಾರದಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಟಿ20 ಲೀಗ್‌ಗಾಗಿ ಆಟಗಾರರ ಹರಾಜು ನಡೆಸಿತು. ಈ ಹರಾಜಿನಲ್ಲಿ ಅರ್ಜುನ್ ತೆಂಡೂಲ್ಕರ್ ಪ್ರಮುಖ ಗಮನ ಸೆಳೆದಿದ್ದರು. ಏಕೆಂದರೆ ಅರ್ಜುನ್ ದೇಶೀಯ ಸರ್ಕ್ಯೂಟ್‌ನಲ್ಲಿ ಗೋವಾ ತಂಡಕ್ಕಾಗಿ ಆಡುತ್ತಾರೆ. ಆದರೆ ಟಿ20 ಮುಂಬೈ ಲೀಗ್ MCA ಯ ಭಾಗವಾಗಿರುವ ಆಟಗಾರರಿಗೆ ಮಾತ್ರ ಅವಕಾಶ ನೀಡುತ್ತದೆ. ಆದಾಗ್ಯೂ ಅರ್ಜುನ್​ಗೆ ಲೀಗ್‌ನಲ್ಲಿ ಆಡಲು ಅನುಮೋದನೆ ನೀಡಲಾಗಿದೆ.

10 ಲಕ್ಷಕ್ಕೆ ಅರ್ಜುನ್ ಮಾರಾಟ

26 ವರ್ಷದ ಅರ್ಜುನ್ ತೆಂಡೂಲ್ಕರ್ ಲೀಗ್‌ನಲ್ಲಿ ಆಡಲು ಅವಕಾಶ ಪಡೆದಿದ್ದಲ್ಲದೆ, ಹರಾಜಿನಲ್ಲಿ ARCS ಅಂಧೇರಿ ತಂಡವನ್ನುಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅರ್ಜುನ್ ಅವರನ್ನು ಈ ತಂಡ 10 ಲಕ್ಷ ರೂ.ಗೆ ಬಿಡ್ ಮಾಡಿ ತನ್ನ ತೆಕ್ಕೆಗೆ ಹಾಕಿಕೊಂಡಿತು. ವಾಸ್ತವವಾಗಿ 2 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ಅರ್ಜುನ್ ಅವರನ್ನು 5 ಪಟ್ಟು ಹೆಚ್ಚು ಮೊತ್ತ ನೀಡಿ ಖರೀದಿ ಮಾಡಲಾಗಿದೆ. ಅರ್ಜುನ್ ತೆಂಡೂಲ್ಕರ್ ಜೊತೆಗೆ, ARCS ಅಂಧೇರಿ ಯುವ ಸ್ಟಾರ್ ಬ್ಯಾಟ್ಸ್‌ಮನ್ ಮುಶೀರ್ ಖಾನ್ ಅವರನ್ನು 11 ಲಕ್ಷ ರೂ.ಗೆ ಖರೀದಿಸಿತು.

5 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದ ಅರ್ಜುನ್ ತೆಂಡೂಲ್ಕರ್

ಐಪಿಎಲ್​ನಲ್ಲಿ ಆಡುವ ಅವಕಾಶ ಸಿಕ್ಕಿಲ್ಲ

ಕಳೆದ ಕೆಲವು ತಿಂಗಳುಗಳು ಅರ್ಜುನ್‌ಗೆ ಏರಿಳಿತಗಳಿಂದ ತುಂಬಿವೆ. ಕಳೆದ ವರ್ಷ, ಅವರನ್ನು ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ ಬಿಡುಗಡೆ ಮಾಡಿತು ಆದರೆ ಮರುಖರೀದಿ ಮಾಡಲಿಲ್ಲ. ಹರಾಜಿನಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ಅವರನ್ನು 30 ಲಕ್ಷ ರೂ. ಮೂಲ ಬೆಲೆಗೆ ಖರೀದಿಸಿತು. ಆದಾಗ್ಯೂ, ಅವರು ಐಪಿಎಲ್ 19 ರಲ್ಲಿ ಇನ್ನೂ ಒಂದೇ ಒಂದು ಪಂದ್ಯವನ್ನು ಆಡಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:27 pm, Sat, 2 May 26

Source link

ಬೆಂಗಳೂರು: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್; ದುರಂತ ಅಂತ್ಯ ​ – Kannada News | Bengaluru Tragedy: Private Bus Runs Over Boy Carrying Medicine for Father

ಮೃತ ಬಾಲಕ, ಖಾಸಗಿ ಬಸ್​Image Credit source: tv9 kannada

ಬೆಂಗಳೂರು, ಮೇ 02: ತಂದೆಗೆ ಔಷಧಿ ತರಲೆಂದು ಮನೆಯಿಂದ ಹೊರಟಿದ್ದ ಹನ್ನೊಂದು ವರ್ಷದ ಬಾಲಕನೊಬ್ಬ ದಾರುಣವಾಗಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ (death) ಹೃದಯವಿದ್ರಾವಕ ಘಟನೆ ನಗರದ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ತಲೆಸುತ್ತಿ ಬಿದ್ದ ಬಾಲಕನ ಮೇಲೆ ಖಾಸಗಿ ಬಸ್​​ ಹರಿದು ಮೃತಪಟ್ಟಿದ್ದಾನೆ. ವರುಣ್ (11) ಮೃತ ಬಾಲಕ. ಮಗ‌ನ ಭವಿಷ್ಯದ ಕನಸು ಕಾಣುತ್ತಿದ್ದ ಕಂದನನ್ನು ಕಳೆದುಕೊಂಡ ಪೋಷಕರು ಇದೀಗ ಗೋಳಾಡುವಂತಾಗಿದೆ. ಸಾವಿಗೆ ರಸ್ತೆ ಕಾಮಗಾರಿಯೇ ಕಾರಣ ಅಂತಾ ಆಕ್ರೋಶ‌ ಹೊರಹಾಕಿದ್ದಾರೆ.

ನಡೆದಿದ್ದೇನು?

ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ವರುಣ್ ಎಂಬ 11 ವರ್ಷದ ಬಾಲಕ ತನ್ನ ತಂದೆಗೆ ಔಷಧಿ ತರಲು ಹೋದಾಗ ಈ ದುರಂತ ಸಂಭವಿಸಿದೆ. ಬಾಲಕ ರಸ್ತೆ ದಾಟಲು ಬ್ಯಾರಿಕೇಡ್ ಬಳಿ ನಿಂತಿದ್ದ. ಇದ್ದಕ್ಕಿದ್ದ ಹಾಗೆ ತಲೆಸುತ್ತಿ ಹಿಂದಕ್ಕೆ ಬಿದ್ದಿದ್ದಾನೆ. ಬಾಲಕ ಬಿದ್ದ ತಕ್ಷಣ, ಅದೇ ರಸ್ತೆಯಲ್ಲಿ ಬರುತ್ತಿದ್ದ ಖಾಸಗಿ ಬಸ್‌ನ ಹಿಂಬದಿ ಚಕ್ರ ಆತನ ಎದೆಯ ಮೇಲೆ ಹರಿದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಿಸಿಲಿನ ತಾಪಕ್ಕೆ ಹೀಟ್ ಸ್ಟ್ರೋಕ್ ಆಗಿ ಬಾಲಕ ತಲೆಸುತ್ತಿ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಇನ್ನು ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್ ಎನ್ನಿಸುವಂತಿದೆ.

ರಸ್ತೆ ಕಾಮಗಾರಿಯ ಅವ್ಯವಸ್ಥೆಗೆ ಪೋಷಕರು ಆಕ್ರೋಶ

ಇನ್ನು ಘಟನೆ ಸಂಬಂಧ ಬಾಲಕನ‌ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ಕಳೆದ ಕೆಲ ತಿಂಗಳಿಂದ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಯುತ್ತಿದೆ. ಇದರಿಂದ ಸ್ಥಳೀಯರಿಗೆ ಸಾಕಷ್ಟು ಸಮಸ್ಯೆ ಉಂಟಾಗಿದ್ದು, ಕೆಲ ದಿನಗಳ ಹಿಂದಷ್ಟೇ ಅಪಘಾತದಲ್ಲಿ ಡೆಲಿವರಿ ಬಾಯ್ ಕೂಡ ಮೃತಪಟ್ಟಿದ್ದ. ಅಲ್ಲದೇ ಕಾಮಗಾರಿ ಹಿನ್ನೆಲೆ ಎರಡೂ ಬದಿಯ ವಾಹನಗಳು ಒಂದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು, ರಸ್ತೆ ದಾಟಲು ಸಮಸ್ಯೆ, ಕಿರಿಕಿರಿ ಆಗುತ್ತಿದೆ. ಈ ವೈಟ್ ಟ್ಯಾಪಿಂಗ್​ನಿಂದ ನನ್ನ ಮಗನನ್ನ ಕಳೆದುಕೊಂಡೆವು ಅಂತಾ ಮೃತ ಬಾಲಕನ ತಾಯಿ ಆಕ್ರೋಶ‌ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗೃಹಿಣಿ ಅನುಮಾನಾಸ್ಪದ ಸಾವು, ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪ

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹೆಣ್ಣೂರು ಸಂಚಾರಿ ಪೊಲೀಸರು ಈಗಾಗಲೇ ಬಸ್ ಚಾಲಕನನ್ನ ಅರೆಸ್ಟ್ ಮಾಡಿದ್ದಾರೆ. ಸಿಸಿಟಿವಿ ದೃಶ್ಯ ನೋಡಿದರೆ ಬಸ್ ಚಾಲಕನದ್ದು ತಪ್ಪು ಅಂತಾ ಮೇಲ್ನೋಟಕ್ಕೆ ಕಂಡುಬರದಿದ್ದರೂ, ಸಾವು ಸಂಭವಿಸಿರುವುದರಿಂದ ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗಿದೆ. ಸದ್ಯ ಪೊಲೀಸರು ತನಿಖೆ ನಡೆಸಿದ್ದಾರೆ. ಬಾಲಕ ತಲೆಸುತ್ತಿ ಬಿದ್ದಿದ್ದು ಏಕೆ? ಆರೋಗ್ಯ ಸಮಸ್ಯೆ ಇತ್ತಾ? ಅಥವಾ ಹೀಟ್ ಸ್ಟ್ರೋಕ್ ಆಗಿತ್ತಾ? ಎಂಬ ಎಲ್ಲಾ ಆಯಾಮದಲ್ಲಿ ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ – Kannada News | Karnataka Weather Forecast: IMD Predicts Thunderstorms, Heavy Rain for Bengaluru, South Interior Districts for 3 Days

ಬೆಂಗಳೂರು, ಮೇ 2: ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ.

ಮುನ್ಸೂಚನೆಯ ಮುಖ್ಯಾಂಶಗಳು

  • ದಕ್ಷಿಣ ಒಳನಾಡು ಹವಾಮಾನ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಮತ್ತು ರಾಮನಗರ ಜಿಲ್ಲೆಗಳಲ್ಲಿ ಮೇ 3 ರಿಂದ ಮೇ 5 ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮೇ 4 ಮತ್ತು 5 ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನೂ ನೀಡಲಾಗಿದೆ.
  • ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ: ಬೀದರ್, ಕಲಬುರ್ಗಿ, ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಉಳಿದಂತೆ ಶುಷ್ಕ ಹವಾಮಾನ ಮುಂದುವರಿಯಲಿದೆ. ಮೇ 3 ರಂದು ಬೀದರ್ ಮತ್ತು ಕಲಬುರ್ಗಿಯಲ್ಲಿ ತಾಪಮಾನ ಏರಿಕೆಯ ಮುನ್ಸೂಚನೆ ಇದೆ.
  • ಕರಾವಳಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿ ಮತ್ತು ಆರ್ದ್ರತೆಯ ವಾತಾವರಣ (Hot and Humid) ಇರಲಿದೆ ಎಂದು ತಿಳಿಸಲಾಗಿದೆ.

ಬೆಂಗಳೂರು ನಗರ ಹವಾಮಾನ

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್​ನಿಂದ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಶಿಯಸ್ ಆಸುಪಾಸಿನಲ್ಲಿರಲಿದೆ.

ಇದನ್ನೂ ಓದಿ: ಬತ್ತಿದ ಬೋರ್​​ವೆಲ್​​ಗಳು: ರಾಜ್ಯದ 652 ಹಳ್ಳಿಗಳಲ್ಲಿ ನೀರಿಗೆ ಬರ; ಯಾವೆಲ್ಲ ಜಿಲ್ಲೆಗಳು ಭಾದಿತ?

ಗುಡುಗು ಸಹಿತ ಮಳೆಯಾಗುವ ಸಂದರ್ಭದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಜನೀಕಾಂತ್​ರ ಭೇಟಿಯಾಗಿ ಪತಿ ಚಿರು ಸರ್ಜಾರ ನೆನೆದ ಮೇಘನಾ – Kannada News | Meghana Raj remembers her late husband Chiru Sarja

ಚಿರಂಜೀವಿ ಸರ್ಜಾ (Chiranjeevi Sarja) ನಿಧನರಾಗಿ ಆರು ವರ್ಷಗಳಾಗುತ್ತಾ ಬಂತು. 2020ರ ಜೂನ್ ತಿಂಗಳಲ್ಲಿ ಹಠಾತ್ತನೆ ಕಣ್ಣು ಮುಚ್ಚಿದರು ಚಿರಂಜೀವಿ ಸರ್ಜಾ. ಪತ್ನಿ ಮೇಘನಾ ಅವರನ್ನು ಅಗಲಿ, ಹುಟ್ಟಲಿದ್ದ ಮಗುವನ್ನು ಸಹ ಕಾಣದೆ ಹೊರಟು ಹೋದರು. ಆದರೆ ಮೇಘನಾ ಅವರು ಮಗನಿಗಾಗಿ ಬದುಕುತ್ತಿದ್ದಾರೆ. ಈಗಲೂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇದೀಗ ಅವರು ರಜನೀಕಾಂತ್ ಜೊತೆ ಸಿನಿಮಾನಲ್ಲಿ ನಟಿಸಿದ್ದಾರೆ. ರಜನೀಕಾಂತ್ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡಿರುವ ಮೇಘನಾ, ಪತಿ ಚಿರು ಸರ್ಜಾ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

ಇಂದು (ಮೇ 2) ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮದುವೆಯಾದ ದಿನ. ಅವರಿಬ್ಬರ ವಿವಾಹ ವಾರ್ಷಿಕೋತ್ಸವ. ಪತಿಯೊಟ್ಟಿಗೆ ಕೆಲವು ಹಳೆಯ ಚಿತ್ರಗಳನ್ನು ಹಂಚಿಕೊಂಡಿರುವ ಮೇಘನಾ ರಾಜ್, ‘ನಾವು ಒಟ್ಟಿಗೆ ಕಂಡಿದ್ದ ಕನಸೊಂದು ನನಸಾಗಿದೆ’ ಎಂದಿದ್ದಾರೆ. ಮಾತ್ರವಲ್ಲದೆ, ‘ಆ ಕನಸನ್ನು ನನಸು ಮಾಡಿರುವ ಶಕ್ತಿ ನೀನೇ’ ಎಂದಿದ್ದಾರೆ ಸಹ.

ಚಿರಂಜೀವಿ ಸರ್ಜಾ, ರಜನೀಕಾಂತ್​​ರ ಮಹಾನ್ ಅಭಿಮಾನಿ ಆಗಿದ್ದರು. ರಜನೀಕಾಂತ್ ಅವರೊಟ್ಟಿಗೆ ಚಿರು ಸರ್ಜಾ ಅವರ ಚಿತ್ರವನ್ನು ಹಂಚಿಕೊಂಡಿರುವ ನಟಿ ಮೇಘನಾ, ರಜನೀಕಾಂತ್ ಅವರ ಸಹಿ ಮಾಡಿಕೊಟ್ಟ ಪುಟ್ಟ ರಜನೀ ಚಿತ್ರದೊಟ್ಟಿಗೆ ಚಿರು ತೆಗೆದುಕೊಂಡಿದ್ದ ಸೆಲ್ಫಿಯನ್ನು ಸಹ ಹಂಚಿಕೊಂಡಿದ್ದಾರೆ. ಜೊತೆಗೆ ಈಗ ತಾವು ರಜನೀ ಜೊತೆ ನಟಿಸುವಾಗ ಅವರೊಟ್ಟಿಗೆ ಕೆಲವು ಚಿತ್ರಗಳನ್ನು ತೆಗೆದುಕೊಂಡಿದ್ದು ಅವರನ್ನೂ ಸಹ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ರಜನೀಕಾಂತ್ ಅವರು ಚಿರು ಸರ್ಜಾ-ಮೇಘನಾರ ಪುತ್ರನನ್ನು ಮುದ್ದಿಸುತ್ತಿರುವ ಚಿತ್ರವನ್ನು ಸಹ ಮೇಘನಾ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಚಿರಂಜೀವಿ ಸರ್ಜಾ ಪುಣ್ಯತಿಥಿ: ಪತಿ ಅಗಲಿಕೆ ಬಳಿಕ ಮೇಘನಾ ರಾಜ್ ವೈಯಕ್ತಿಕ ಜೀವನದ ಬಗ್ಗೆ ಕೇಳಿ ಬಂದಿತ್ತು ದೊಡ್ಡ ವದಂತಿ

ಚಿರು ಮತ್ತು ಮೇಘನಾ ಅವರಿಗೆ ರಜನೀಕಾಂತ್ ಅವರೊಟ್ಟಿಗೆ ನಟಿಸುವ ಆಸೆ ಇತ್ತಂತೆ. ಇದೀಗ ಮೇಘನಾ ರಾಜ್ ಅವರು ರಜನೀಕಾಂತ್ ಅವರೊಟ್ಟಿಗೆ ನಟಿಸಿದ್ದಾರೆ. ರಜನೀಕಾಂತ್ ಅವರ ಹೊಸ ಸಿನಿಮಾ ‘ಜೈಲರ್ 2’ನಲ್ಲಿ ಮೇಘನಾ ರಾಜ್ ಅವರಿಗೆ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಅನ್ನು ನೆಲ್ಸನ್ ನಿರ್ದೇಶಿಸಿದ್ದು, ಇದೇ ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ನಟಿಸಿದ್ದಾರೆ.

ಮೇಘನಾ ರಾಜ್ ಅವರು ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವು ಸಿನಿಮಾಗಳಲ್ಲಿ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಬುದ್ಧಿವಂತ 2’ ಸಿನಿಮಾ ಮುಗಿಸಿದ್ದಾರೆ. ‘ಒಟ್ಟಕುಂಬನ್’ ಹೆಸರಿನ ಮಲಯಾಳಂ ಸಿನಿಮಾನಲ್ಲಿ ಮೇಘನಾ ನಟಿಸಿದ್ದು, ಆ ಸಿನಿಮಾ ಇನ್ನಷ್ಟೆ ಬಿಡುಗಡೆ ಆಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಬಲಿಷ್ಠ ಪಂಜಾಬ್ ತಂಡಕ್ಕೆ ಮತ್ತೊಬ್ಬ ಸ್ಟಾರ್ ಆಟಗಾರನ ಆಗಮನ

Source link

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಭದ್ರತಾ ಸಿಬ್ಬಂದಿ ಸಾವು – Kannada News | 4 DRG personnel killed in IED Blast during demining operation in Chhattisgarh

ನವದೆಹಲಿ, ಮೇ 2: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಇಂದು ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಂಡವು ಸ್ಫೋಟಕವನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿದೆ.

ಇದು ಮಾರ್ಚ್ 31ರಂದು ಭಾರತ ದೇಶವನ್ನು ಸಶಸ್ತ್ರ ಮಾವೋವಾದಿಗಳಿಂದ ಮುಕ್ತವೆಂದು ಘೋಷಿಸಿದ ನಂತರ ಛತ್ತೀಸ್​ಗಢ ರಾಜ್ಯದಲ್ಲಿ ನಕ್ಸಲೀಯರಿಗೆ ಸಂಬಂಧಿಸಿದ ಹಿಂಸಾಚಾರದ ಮೊದಲ ಘಟನೆಯಾಗಿದೆ. ಚೊಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಜಿಲ್ಲೆಯ ಗಡಿಗೆ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ನಕ್ಸಲೀಯರು ಈ ಹಿಂದೆ ಇಟ್ಟಿದ್ದ ಐಇಡಿಗಳನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಡಿಆರ್‌ಜಿ ಘಟಕವು ಬಾಂಬ್ ನಿರ್ಮೂಲನ ಕಾರ್ಯಾಚರಣೆಯನ್ನು ನಡೆಸುತ್ತಿದ್ದರು. ಅದನ್ನು ತಟಸ್ಥಗೊಳಿಸಲು ಪ್ರಯತ್ನಿಸುವಾಗ ಐಇಡಿ ಸ್ಫೋಟಗೊಂಡಿದೆ.

ಇದನ್ನೂ ಓದಿ: ಛತ್ತೀಸ್‌ಗಢದ ಸುಕ್ಮಾದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು, ಹಲವರಿಗೆ ಗಾಯ

ಬಸ್ಟರ್ ರೇಂಜ್‌ನ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಟ್ಟಿಲಿಂಗಂ ಈ ಬಗ್ಗೆ ಮಾತನಾಡಿದ್ದು, ಶರಣಾದ ಮಾವೋವಾದಿ ಕಾರ್ಯಕರ್ತರ ಮಾಹಿತಿ ಸೇರಿದಂತೆ ಇತ್ತೀಚಿನ ತಿಂಗಳುಗಳಲ್ಲಿ ಸಂಗ್ರಹಿಸಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಕಂಕೇರ್‌ನಂತಹ 7 ಜಿಲ್ಲೆಗಳಲ್ಲಿ ನೂರಾರು ಐಇಡಿಗಳನ್ನು ವಶಪಡಿಸಿಕೊಂಡು ನಿಷ್ಕ್ರಿಯಗೊಳಿಸಿವೆ. ಆದರೆ, ಇಂದಿನ ದುರದೃಷ್ಟಕರ ಘಟನೆಯಲ್ಲಿ, ಕಂಕೇರ್ ಜಿಲ್ಲಾ ಪೊಲೀಸ್ ತಂಡವು ಅದನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿರುವಾಗ ಐಇಡಿ ಆಕಸ್ಮಿಕವಾಗಿ ಸ್ಫೋಟಗೊಂಡಿದೆ ಎಂದು ಹೇಳಿದರು.

ಮಾರ್ಚ್ 2026ರಲ್ಲಿ ಭಾರತ ನಕ್ಸಲ್ ಮುಕ್ತ ಎಂದು ಘೋಷಿಸಿತ್ತು. ಮಾರ್ಚ್ 30ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತವನ್ನು ನಕ್ಸಲ್ ಮುಕ್ತ ಎಂದು ಘೋಷಿಸಿದ್ದರು.

ಇದನ್ನೂ ಓದಿ: Video: ಐಇಡಿ ನಿಷ್ಕ್ರಿಯ, ದೀಪಾವಳಿ ಸಮಯದಲ್ಲಿ ತಪ್ಪಿದ ದೊಡ್ಡ ಅನಾಹುತ, ಶೋಪಿಯಾನ್​ನಲ್ಲಿ ಭಯೋತ್ಪಾದಕ ದಾಳಿ ವಿಫಲ

ಇನ್ಸ್‌ಪೆಕ್ಟರ್ ಸುಖ್‌ರಾಮ್ ವಟ್ಟಿ, ಕಾನ್‌ಸ್ಟೆಬಲ್ ಕೃಷ್ಣ ಕೊಮ್ರಾ ಮತ್ತು ಕಾನ್‌ಸ್ಟೆಬಲ್ ಸಂಜಯ್ ಗಢ್‌ಪಾಲೆ ಎಂಬ ಮೂವರು ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾನ್‌ಸ್ಟೆಬಲ್ ಪರಮಾನಂದ ಕೊಮ್ರಾ ಅವರನ್ನು ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

World Press Freedom Day 2026: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸುವುದರ ಉದ್ದೇಶವೇನು ಗೊತ್ತಾ? – Kannada News | World Press Freedom Day 2026: For what purpose was Press Freedom Day started, know the history of this day

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನImage Credit source: Getty Images

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದಷ್ಟೇ ಪ್ರಬಲವಾದ ಶಕ್ತಿ ಪತ್ರಿಕಾ ರಂಗಕ್ಕಿದೆ. ಅದಕ್ಕಾಗಿಯೇ ಪತ್ರಿಕೋದ್ಯಮವನ್ನು ಸಂವಿಧಾನದ (constitution) ನಾಲ್ಕನೇ ಸ್ತಂಭವೆಂದು ಪರಿಗಣಿಸಲಾಗಿದೆ. ಇದು ಸರ್ಕಾರ ಮತ್ತು ಜನರನ್ನು ಸಂಪರ್ಕಿಸುವ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಪತ್ರಿಕೋದ್ಯಮವು ಜನರ ಅಭಿಪ್ರಾಯಗಳ ಮೇಲೆ ಪ್ರಭಾವ ಬೀರುವಲ್ಲಿ, ಸರ್ಕಾರದ ಕಾರ್ಯವೈಖರಿಗಳ ಜೊತೆಗೆ ಹುಳುಕುಗಳನ್ನು ಜನರಿಗೆ  ವಸ್ತುನಿಷ್ಠವಾಗಿ ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆದರೆ ಕೆಲವೊಮ್ಮೆ ಆದರೆ ಕೆಲವೊಮ್ಮೆ ಮಾಧ್ಯಮಗಳು ಬೆದರಿಕೆ, ಸೆನ್ಸಾರ್ಶಿಪ್‌, ಹಿಂಸೆಗಳಂತಹ ಸವಾಲುಗಳನ್ನು ಎದರಿಸುತ್ತವೆ. ಹೀಗಾಗಿ ಪತ್ರಕರ್ತರಿಗೆ ನ್ಯಾಯಮಾರ್ಗದಲ್ಲಿ ತಮ್ಮ ಕರ್ತವ್ಯವವನ್ನು ನಿರ್ವಹಿಸಲು ಪೂರಕ ವಾತಾವರಣವನ್ನು ಕಲ್ಪಿಸಲು, ಮಾಧ್ಯಮದ ಕೊಡುಗೆಗಳನ್ನು ಸ್ಮರಿಸಲು ಮಾಧ್ಯಮ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಜನರಿಗೆ ತಿಳಿಸಲು ಹಾಗೂ ಪತ್ರಕರ್ತರ ಸುರಕ್ಷತೆಗಾಗಿ ಧ್ವನಿ ಎತ್ತಲು ಪ್ರತಿವರ್ಷ ಮೇ 03 ರಂದು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನದ ಇತಿಹಾಸವೇನು?

1991 ರಲ್ಲಿ, ಆಫ್ರಿಕನ್ ಪತ್ರಕರ್ತರು ಮೊದಲ ಬಾರಿಗೆ ಪತ್ರಿಕಾ ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿದರು. ಮೇ 3 ರಂದು, ಈ ಪತ್ರಕರ್ತರು ಪತ್ರಿಕಾ ಸ್ವಾತಂತ್ರ್ಯದ ತತ್ವಗಳ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದರು, ಇದನ್ನು ವಿಂಡ್‌ಹೋಕ್ ಘೋಷಣೆ ಎಂದೂ ಕರೆಯುತ್ತಾರೆ. ಬಳಿಕ ಪತ್ರಿಕಾ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಮತ್ತು ಕರ್ತವ್ಯದ ಸಂದರ್ಭದಲ್ಲಿ ಪ್ರಾಣವನ್ನು ಕಳೆದುಕೊಂಡ ಪತ್ರಕರ್ತರನ್ನು ಸ್ಮರಿಸುವ ಮತ್ತು ಗೌರವಿಸುವ ಉದ್ದೇಶದಿಂದ 1991 ರಲ್ಲಿ ಯುನೆಸ್ಕೋದ ಸಾಮಾನ್ಯ ಸಭೆಯ ಶಿಫಾರಸ್ಸಿನ ನಂತರ 1993 ರಲ್ಲಿ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸುವ ನಿರ್ಣಯವನ್ನು ಮಾಡಲಾಗಿತು. ನಂತರ 1994 ರಲ್ಲಿ ಮೊದಲ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಏಕೆ ಆಚರಿಸಲಾಗುತ್ತದೆ? 

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವು ಪತ್ರಿಕಾ ಸ್ವಾತಂತ್ರ್ಯ ಅಥವಾ ಮಾಧ್ಯಮ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವ ಮತ್ತು ಗೌರವಿಸುವ ಬದ್ಧತೆಯನ್ನು ಒತ್ತಿಹೇಳುತ್ತದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವ ಮತ್ತು ಪುನಃಸ್ಥಾಪಿಸುವಲ್ಲಿ ಮಾಧ್ಯಮ ವಹಿಸುವ ನಿರ್ಣಾಯಕ ಪಾತ್ರವನ್ನು ಇದು ಎತ್ತಿ ತೋರಿಸುತ್ತದೆ.

ಇದನ್ನೂ ಓದಿ: ಕಾರ್ಮಿಕರು ದೇಶದ ಪ್ರಗತಿ, ಏಳಿಗೆಯ ನಿಜವಾದ ಬೆನ್ನೆಲುಬು

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನದ ಮಹತ್ವವೇನು?

  • ಬೆದರಿಕೆಗಳು, ಹಿಂಸೆ ಮತ್ತು ಸೆನ್ಸಾರ್‌ಶಿಪ್ ಸೇರಿದಂತೆ ಪ್ರಪಂಚದಾದ್ಯಂತ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಪತ್ರಿಕಾ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅಂತರರಾಷ್ಟ್ರೀಯ ಪತ್ರಿಕಾ ಸ್ವಾತಂತ್ರ್ಯ ದಿನದ ಮುಖ್ಯ ಉದ್ದೇಶವಾಗಿದೆ.
  • ಈ ದಿನವು ಪತ್ರಿಕಾ ಸ್ವಾತಂತ್ರ್ಯದ ಮಹತ್ವವನ್ನು ನಮಗೆ ನೆನಪಿಸುತ್ತದೆ ಮತ್ತು ಪತ್ರಕರ್ತರ ಸುರಕ್ಷತೆಗಾಗಿ ನಮ್ಮ ಧ್ವನಿಯನ್ನು ಎತ್ತಲು ನಮಗೆ ಸ್ಫೂರ್ತಿ ನೀಡುತ್ತದೆ.
  • ಈ ಸಂದರ್ಭದಲ್ಲಿ, ಪತ್ರಕರ್ತರು ಎದುರಿಸುತ್ತಿರುವ ಕಿರುಕುಳವನ್ನು ಎತ್ತಿ ತೋರಿಸಲು ಅವರ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಲವು ಕಾಂಗ್ರೆಸ್ ನಾಯಕರು, ಅಭ್ಯರ್ಥಿಗಳನ್ನು ಬಿಜೆಪಿ ಸಂಪರ್ಕಿಸಿದೆ; ಅಸ್ಸಾಂನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ – Kannada News | Karnataka DCM DK Shivakumar claims BJP offered several Assam Congress candidates

ಗುವಾಹಟಿ, ಮೇ 2: ಅಸ್ಸಾಂ ವಿಧಾನಸಭಾ ಚುನಾವಣೆಯ (Assam Assembly Elections) ಕಾಂಗ್ರೆಸ್ ಪಕ್ಷದ ಹಿರಿಯ ವೀಕ್ಷಕರಾದ ಕರ್ನಾಟಕದ ಡಿಸಿಎಂ ಡಿ.ಕೆ ಶಿವಕುಮಾರ್, ಭೂಪೇಶ್ ಬಘೇಲ್ ಮತ್ತು ಜಿತೇಂದ್ರ ಸಿಂಗ್ ಇಂದು ಅಸ್ಸಾಂನಲ್ಲಿ ಮೈತ್ರಿಕೂಟದ ಪಾಲುದಾರರೊಂದಿಗೆ ಸಭೆ ನಡೆಸಿದರು. ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಸ್ಸಾಂನ ಇತರ 5 ಪಕ್ಷಗಳಾದ ರೈಜೋರ್ ದಳ, ಅಸ್ಸಾಂ ರಾಷ್ಟ್ರೀಯ ಪರಿಷತ್ (AJP), ಸಿಪಿಐಎಂ (CPIM), ಎಪಿಎಚ್​ಎಲ್​ಸಿ (APHLC) ಮತ್ತು ಸಿಪಿಐಎಂಎಲ್ (CPIML) ಜೊತೆ ಮೈತ್ರಿ ಮಾಡಿಕೊಂಡಿದೆ.

ಈ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಕ್ಸಿಟ್ ಪೋಲ್ ಸಮೀಕ್ಷೆಗಳನ್ನು ತಳ್ಳಿಹಾಕಿದರು. “ಅಸ್ಸಾಂನಲ್ಲಿ ನಮ್ಮ ತಂಡ ಬಲಿಷ್ಠವಾಗಿದೆ, ಒಗ್ಗಟ್ಟಾಗಿದೆ ಮತ್ತು ಆತ್ಮವಿಶ್ವಾಸದಿಂದ ಕೂಡಿದೆ. ನಾವು ಚುನಾವಣೆಯಲ್ಲಿ ಚೆನ್ನಾಗಿ ಹೋರಾಡಿದ್ದೇವೆ. ಮಾಧ್ಯಮಗಳು ಎಕ್ಸಿಟ್ ಪೋಲ್ ಬಗ್ಗೆ ಏನೇ ವರದಿ ಮಾಡಿದರೂ ವೈಯಕ್ತಿಕವಾಗಿ ನಾನು ಅದನ್ನು ನಂಬುವುದಿಲ್ಲ. ಅಸ್ಸಾಂನ ಮತದಾರರಲ್ಲಿ ದೊಡ್ಡ ಭಯವಿದೆ. ಬಿಜೆಪಿಯೊಂದಿಗೆ ಗುರುತಿಸಿಕೊಳ್ಳದವರಿಗೆ ಉಚಿತ ಕೊಡುಗೆಗಳನ್ನು ಸಹ ನೀಡಿಲ್ಲ. ಪರಿಸ್ಥಿತಿ ಹೀಗಿರುವಾಗ, ಯಾರು ಯಾರಿಗೆ ಮತ ಹಾಕಿದ್ದಾರೆಂದು ಹೇಳಲು ಯಾರು ಮುಂದೆ ಬರುತ್ತಾರೆ? ಈ ಮತದಾನೋತ್ತರ ಸಮೀಕ್ಷೆಗಳೆಲ್ಲ ಬರೀ ಸುಳ್ಳು” ಎಂದಿದ್ದಾರೆ.

ಇದನ್ನೂ ಓದಿ: ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯ

“ನಮ್ಮದೇ ಆದ ಆಂತರಿಕ ಸಮೀಕ್ಷೆಯಲ್ಲಿ ನಮಗೆ ವಿಶ್ವಾಸವಿದೆ. ಈ ಮಧ್ಯೆ ಬಿಜೆಪಿ ಕಡೆಯಿಂದಲೂ ನಾವು ಸಾಕಷ್ಟು ಮಾಹಿತಿಯನ್ನು ಸಂಗ್ರಹಿಸಿದ್ದೇವೆ. ಶಾಸಕರು ಮತ್ತು ಸಚಿವರು ಸೇರಿದಂತೆ ಬಿಜೆಪಿ ಅಭ್ಯರ್ಥಿಗಳನ್ನು ನಾವು ಭೇಟಿ ಮಾಡಿದ್ದೇವೆ. ಅವರು ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ ಎಂಬ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಅವರಲ್ಲಿ ಕೆಲವರು ನಮ್ಮ ನಾಯಕರು, ಅಭ್ಯರ್ಥಿಗಳು ಮತ್ತು ಸಹಚರರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: 5 State Assembly Election Exit Poll Results 2026: ಅಸ್ಸಾಂ, ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಜಯ, ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಗೆ ಗೆಲುವು; ಎಕ್ಸಿಟ್ ಪೋಲ್ ಸಮೀಕ್ಷೆ ಇಲ್ಲಿದೆ

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮತದಾನೋತ್ತರ ಸಮೀಕ್ಷೆಗಳು ತಿಳಿಸಿವೆ. ಆಕ್ಸಿಸ್ ಮೈ ಇಂಡಿಯಾ 126 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 88ರಿಂದ 100 ಸ್ಥಾನಗಳನ್ನು ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 24ರಿಂದ 36 ಸ್ಥಾನಗಳನ್ನು ಪಡೆಯಲಿದೆ ಎಂದು ಅಂದಾಜಿಸಿದೆ. ಅಸ್ಸಾಂ ಚುನಾವಣೆಗೆ ಮತ ಎಣಿಕೆ ಮೇ 4ರಂದು ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:01 pm, Sat, 2 May 26

Source link

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ – Kannada News | MLA TD Rajegowda Clarifies Allegations of Tampering in Sringeri Postal Ballot Recount

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಇನ್ನು ಬಾಕಿ ಇದೆ. ಆದರೆ ಇಂದು ಬೆಳಿಗ್ಗೆ ಮತಗಳ ಮರು ಎಣಿಕೆ ವೇಳೆ ಮತಗಳಿರುವ ಬಾಕ್ಸ್​ ಸೀಲ್ ಓಪನ್ ಮಾಡಲಾಗಿತ್ತು. ಹೀಗಾಗಿ ಶಾಸಕ ಟಿಡಿ ರಾಜೇಗೌಡ ಟ್ಯಾಂಪರ್ ಅನುಮಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಮಾತನಾಡಿರುವ ಅವರು, ಬಿಜೆಪಿ ಅಭ್ಯರ್ಥಿ 40, 42 ಮತಗಳಿಂದ ಗೆಲುವು ನಮ್ಮದೆ ಎಂದು ಹೇಳಿದ್ದರು. ಹಾಗಾಗಿ ನನಗೆ ಅನುಮಾನ ಬಂದಿತ್ತು. ಸದ್ಯ ಚುನಾವಣಾ ಅಧಿಕಾರಿಗಳು ಈ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಎರಡೂ ಕಡೆಯಿಂದಲೂ ದೂರನ್ನು ನೀಡಲಾಗಿದೆ. ಯಾವುದೇ ಮತಪತ್ರ ಟ್ಯಾಂಪರ್ ಕಂಡುಬಂದರೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂಬ ಭರವಸೆ ಬಳಿಕ ಮತ ಎಣಿಕೆ ಮುಂದುವರೆಯಿತು ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

CSK vs MI IPL 2026 Live Score: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ – Kannada News | Chennai Super Kings vs Mumbai Indians IPL 2026 Live Cricket Score CSK vs MI Match on 2nd May latest news in Kannada

ಐಪಿಎಲ್ 2026 ರ 19 ನೇ ಸೀಸನ್ ಮೇ 2 ರ ಶನಿವಾರದಂದು ಎರಡು ಯಶಸ್ವಿ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಸಿಎಸ್​ಕೆ ಭರ್ಜರಿ ಜಯ ಸಾಧಿಸಿತ್ತು. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದರೆ, ರುತುರಾಜ್ ಗಾಯಕ್ವಾಡ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ.

Source link

Exit mobile version