ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಶಾಸಕ ಟಿಡಿ ರಾಜೇಗೌಡಗೆ ಗೆಲುವು – Kannada News | Sringeri Postal Ballot Recount: Congress MLA TD Rajegowda Declared Winner
ಚಿಕ್ಕಮಗಳೂರು, ಮೇ 02: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಆ ಮೂಲಕ ಎದುರಾಗಿದ್ದ ದೊಡ್ಡ ಅಗ್ನಿಪರೀಕ್ಷೆಯಲ್ಲೂ ಜಯಗಳಿಸಿದ್ದಾರೆ. ಸದ್ಯ ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜು ಮುಂಭಾಗದಲ್ಲಿ ಸಂಭ್ರಮಾಚರಣೆ ಜೋರಾಗಿದ್ದು, ಶಾಸಕ ಟಿ.ಡಿ.ರಾಜೇಗೌಡ ಪರ ಕಾರ್ಯಕರ್ತರು ಘೋಷಣೆ ಕೂಗಿ, ಹೂವಿನ ಮಳೆ ಸುರಿಸಿದು ಹರ್ಷ ವ್ಯಕ್ತಪಡಿಸಿದರು. ಹೈಕೋರ್ಟ್ ಆದೇಶದ ಮೇರೆಗೆ ಇಂದು ಚಿಕ್ಕಮಗಳೂರು…