Headlines

ಯಾರೋ ಸಿಂಪಲ್ ಸುಧಾ ಗಂಡ ಅಂತೆ:ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ – Kannada News | Labour Day 2026: Congress MLC BK Hariprasad Opposes Infosys Founder Narayana Murthy’s 75 Hour Work Statement

ಬೆಂಗಳೂರು, (ಮೇ,1): ವಾರಕ್ಕೆ 75 ಗಂಟೆಗಗಳ ಕಾಲ ಕೆಲಸ ಮಾಡಬೇಕು ಎಂದಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ (Infosys Founder Narayana Murthy) ಅವರ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (Congress MLC BK Hariprasad) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಮಿಕ ದಿನಾಚರಣೆ (Labour Day 2026) ಕಾರ್ಯಕ್ರಮದ ವೇಳೆ ಕೆಲಸ ಅವಧಿ ಪ್ರಸ್ತಾಪಿಸಿದ್ದು, ಡಾ.ಬಿ.ಆರ್.ಅಂಬೇಡ್ಕರ್ ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಅಂದ್ರು. ಆದ್ರೆ, ಆಯಮ್ಮ ಯಾರೋ ಸಿಂಪಲ್ ಸುಧಾ ಅಂತೆ…

Read More

ಪೊಲೀಸ್ ಠಾಣೆ ಮೆಟ್ಟಿಲೇರಿದ ‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ನಿರ್ಮಾಪಕರ ವಿರುದ್ಧ ಕಲಾವಿದರಿಂದ ದೂರು – Kannada News | Vasudeva Kutumba TV Serial Dispute: Actors File Police Complaint Over Unpaid Dues

ನಿರ್ಮಾಪಕರ ವಿರುದ್ಧ ದೂರುImage Credit source: Tv9 Kannada ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಕಾಣುತ್ತಿರುವ ‘ವಸುದೇವ ಕುಟುಂಬ’ ಧಾರಾವಾಹಿಯ ಕಲಾವಿದರು, ತಂತ್ರಜ್ಞರು ಮತ್ತು ನಿರ್ಮಾಪಕರ ನಡುವಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೆಲವು ತಿಂಗಳುಗಳಿಂದಲೂ ಧಾರಾವಾಹಿಯ ನಿರ್ಮಾಪಕರು ಕಲಾವಿದರಿಗೆ ಸಂಭಾವನೆ ನೀಡಿಲ್ಲ. ಮಾತ್ರವಲ್ಲದೆ, ಆಹಾರ, ಇನ್ನಿತರೆಗಳನ್ನು ಸರಿಯಾಗಿ ನೀಡಿಲ್ಲ ಎಂಬ ಆರೋಪ ಕೇಳಿಬಂದಿದ್ದ ಬೆನ್ನಲ್ಲೇ ಈ ಬಗ್ಗೆ ಬ್ಯಾಟರಾಯನಪುರ ಪೊಲೀಸರಿಗೆ ಧಾರವಾಹಿಯ ಕಲಾವಿದರು ದೂರು ಸಲ್ಲಿಕೆ ಮಾಡಿದ್ದಾರೆ. ದೂರಿನಲ್ಲಿ ತಮಗಾದ ಅನ್ಯಾಯದ ಬಗ್ಗೆ ನಟಿ ಚೈತ್ರಾ…

Read More

ಬೆಂಗಳೂರಿನ ಜನರೇ ಈ ವೀಕೆಂಡ್​​ ಮಿಸ್​ ಮಾಡಿಕೊಳ್ಳಬೇಡಿ: ಈ ನಗರದಲ್ಲಿ ನಡೆಯಲಿದೆ ರೆಸ್ಟೋರೆಂಟ್ ವೀಕ್ – Kannada News | Bengaluru’s Food Culture Shines at Restaurant Week India 2026: A Deep Dive

ಬೆಂಗಳೂರು, ಮೇ.1: ಬೆಂಗಳೂರಿನ ರೆಸ್ಟೋರೆಂಟ್ ವೀಕ್ ಇಂಡಿಯಾ 2026 ಸಮ್ಮೇಳನದಲ್ಲಿ ನಗರ ಆಹಾರಗಳಿಗೆ ಹೆಚ್ಚಿನ ಆದ್ಯತೆ ಸಿಕ್ಕಿದೆ. ಇಲ್ಲಿ ಆಹಾರಕ್ಕೆ ಬೇರೆ ರಾಜ್ಯದ ಜನ ಫಿದಾ ಆಗಿದ್ದಾರೆ. ಈ ಬಗ್ಗೆ ಗುಜರಾತಿನ ದಂಪತಿಗಳು ಈ ವಿಶೇಷ ಕೂಟದಲ್ಲಿ ಬಗ್ಗೆ ಅದ್ಬುತವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ದೇಶದ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈಗೆ ಹೋಲಿಸಿದರೆ ಬೆಂಗಳೂರಿನ ಆಹಾರ ಸಂಸ್ಕೃತಿಯು ಅತ್ಯಂತ ವಿಭಿನ್ನ ಮತ್ತು ಆಳವಾದದ್ದು. ಇಲ್ಲಿನ ಜನರು ಕೇವಲ ಫ್ಯಾಷನ್ ಅಥವಾ ಟ್ರೆಂಡ್‌ಗಾಗಿ ಹೋಟೆಲ್‌ಗಳಿಗೆ ಹೋಗುವುದಿಲ್ಲ, ಬದಲಿಗೆ…

Read More

ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ – Kannada News | KSRTC Bus Overturns Near Male Mahadeshwara Hills: More Than30 Injured at Ponnachi Turn, Traffic Hit for Kilometers

ಚಾಮರಾಜನಗರ, ಮೇ 01: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಳ ಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ಕಳೆದುಕೊಂಡು ಬಸ್​​ ಪಲ್ಟಿಯಾಗಿದ್ದು, ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ಲಾಂಗ್ ವೀಕೆಂಡ್ ಎಫೆಕ್ಸ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್! – Kannada News | Long Weekend Rush: Massive Traffic Jam on Bengaluru Nelamangala Highway as Residents Head to Hometowns

ನೆಲಮಂಗಲ, ಮೇ 1: ಇಂದಿನಿಂದ (ಮೇ 1) ಸತತ ಮೂರು ದಿನಗಳ ರಜೆ ಇರುವುದರಿಂದ ಬೆಂಗಳೂರಿಗರು ತಮ್ಮ ಊರುಗಳತ್ತ ಮತ್ತು ಪ್ರವಾಸಿ ತಾಣಗಳತ್ತ ತೆರಳುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಹೊರಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಕ್ರವಾರ ಬೆಳಗ್ಗೆ ವಾಹನಗಳ ದಟ್ಟಣೆ ವಿಪರೀತವಾಗಿ ಹೆಚ್ಚಾಗಿದ್ದು, ಪ್ರಯಾಣಿಕರು ಗಂಟೆಗಟ್ಟಲೆ ರಸ್ತೆಯಲ್ಲೇ ಕಳೆಯುವಂತಾಗಿದೆ. ಅದರಲ್ಲೂ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಿಲೋಮೀಟರ್‌ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಅತ್ಯಂತ ನಿಧಾನಗತಿಯಲ್ಲಿ ಚಲಿಸುತ್ತಿವೆ. ನೆಲಮಂಗಲ ಟೋಲ್ ಬಳಿ ವಾಹನಗಳು ಸಾಲುಗಟ್ಟಿರುವ ಚಾಚಿಕೊಂಡಿದ್ದು, ಸಂಚಾರ…

Read More

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್, ನಿರ್ಮಾಪಕರ ನಡು ರಸ್ತೆಯಲ್ಲಿ ಅಡ್ಡ ಹಾಕಿದ ಹಂಸ – Kannada News | Producer not giving remuneration actress confronted producer

‘ವಸುದೇವ ಕುಟುಂಬ’ ಧಾರಾವಾಹಿಯ (Serial) ನಟ, ನಟಿಯರು ಮತ್ತು ತಂತ್ರಜ್ಞರು ಧಾರಾವಾಹಿಯ ನಿರ್ಮಾಪಕರ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿ ಹಂಸ, ನಟಿ ಚೈತ್ರಾ, ಹಿರಿಯ ನಟ ಅವಿನಾಶ್ ಸೇರಿದಂತೆ ಕೆಲವು ಪ್ರಮುಖ ಕಲಾವಿದರು ನಟಿಸುತ್ತಿರುವ ಧಾರಾವಾಹಿ ಇದಾಗಿದ್ದು, ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಕಾಣುತ್ತಿದೆ. ಕೆಲವು ತಿಂಗಳುಗಳಿಂದಲೂ ಧಾರಾವಾಹಿಯ ನಿರ್ಮಾಪಕರು ಕಲಾವಿದರಿಗೆ ಸಂಭಾವನೆ ನೀಡಿಲ್ಲ ಮಾತ್ರವಲ್ಲದೆ, ಆಹಾರ, ಇನ್ನಿತರೆಗಳನ್ನು ಸರಿಯಾಗಿ ನೀಡಿಲ್ಲ ಎಂದು ಕಲಾವಿದರು ಆರೋಪಿಸಿದ್ದು, ಇಂದು (ಏಪ್ರಿಲ್ 01) ನಿರ್ಮಾಪಕರನ್ನು ನಡು…

Read More

ಮಳೆ ಮಧ್ಯೆ ಜೆಪಿ ನಗರ ಟು ಕೋರಮಂಗಲ ಜರ್ನಿ: ಆಟೋ ಚಾಲಕನ ಈ ಒಂದು ಮಾತು ಪ್ರಿಯಾಂಕಾ ಕಣ್ಣಾಲಿ ಒದ್ದೆ ಮಾಡಿದ್ದು ಯಾಕೆ ಗೊತ್ತಾ? – Kannada News | Heartwarming: Bengaluru Auto Driver’s Kindness Amidst Rain Wins Hearts

ಬೆಂಗಳೂರು, ಮೇ.1: ರಾಜ್ಯ ರಾಜಧಾನಿಯಲ್ಲಿ ಎರಡು ದಿನಗಳಿಂದ ಸುರಿದ ಮಳೆಗೆ ಭಾರೀ ಅನಾಹುತಗಳು ಆಗಿವೆ. ಇದರ ನಡುವೆ ಕೆಲವೊಂದು ಮಾನವೀಯತೆಯ ಘಟನೆಗಳು ಕೂಡ ನಡೆದಿದೆ. ಅದರಲ್ಲೂ ಆಟೋ ಚಾಲಕರು ಕೆಲವೊಂದು ಕಡೆ ಮಾನವೀಯತೆಯನ್ನು ಮೆರೆದಿದ್ದಾರೆ. ಇದೀಗ ಇಲ್ಲೊಂದು ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರಿಗೆ ಆಟೋ ಚಾಲಕ ಮಾಡಿದ ಸಹಾಯದ ಬಗ್ಗೆ ಇಲ್ಲಿ ನೆನಪಿಸಿಕೊಂಡಿದ್ದಾರೆ. ಪ್ರಿಯಾಂಕಾ ಎಂಬ ಮಹಿಳೆ ಜೆಪಿ ನಗರದಿಂದ ಕೋರಮಂಗಲಕ್ಕೆ ದಿನನಿತ್ಯದ ಪ್ರಯಾಣದಲ್ಲಿ ಹೇಗೆ ದಯೆ ಮತ್ತು ಸಹಾನುಭೂತಿಯ ಭಾವನಾತ್ಮಕ ವಿಚಾರಗಳು ಇರುತ್ತದೆ ಎಂಬ ಬಗ್ಗೆ…

Read More

ವಿದ್ಯಾಭ್ಯಾಸ ಮುಗಿದರೂ ಸಿಗದ ಕೆಲಸ, ಸಾಲಬಾಧೆ, ಅಮೆರಿಕದಲ್ಲಿ ಭಾರತೀಯ ಯುವಕ ಆತ್ಮಹತ್ಯೆ – Kannada News | Indian Student Suicide in US: Unemployment and Debt Burden Drive Tragedy

ಕರ್ನೂಲ್, ಮೇ 1: ದೊಡ್ಡ ದೊಡ್ಡ ಕನಸ್ಸುಗಳನ್ನು ಹೊತ್ತು ಅಮೆರಿಕ(America)ಕ್ಕೆ ಓದಲು ಹೋಗಿದ್ದ ಭಾರತೀಯ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ 26 ವರ್ಷದ  ಚಂದು ಮೃತ ಯುವಕ. ವಿದ್ಯಾಭ್ಯಾಸ ಮುಗಿಸಿ ಉದ್ಯೋಗಕ್ಕಾಗಿ  ಅರಸುತ್ತಿದ್ದ ಯುವಕನ ಅಕಾಲಿಕ ಸಾವು ಆತನ ಕುಟುಂಬವನ್ನು ಅಕ್ಷರಶಃ ಬೀದಿಗೆ ತಳ್ಳಿದೆ. ಚಂದು ಚಿಕಾಗೋದ ಡಿಪಾಲ್ ವಿಶ್ವವಿದ್ಯಾಲಯದಿಂದ ಇತ್ತೀಚೆಗಷ್ಟೇ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು. ಕಳೆದ ಹಲವು ವಾರಗಳಿಂದ ಉದ್ಯೋಗ ಹುಡುಕುತ್ತಿದ್ದರೂ ಸಿಕ್ಕಿರಲಿಲ್ಲ. ಕರ್ನೂಲ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ…

Read More

ರಣಮಳೆಗೆ ಬೆಂಗಳೂರಿನ ಜನ ಹೈರಾಣು: ಒಂದೇ ದಿನ ಮೆಟ್ರೋ ಮೊರೆ ಹೋದ 12 ಲಕ್ಷ ಜನ! – Kannada News | Namma Metro Record: Over 12.85 Lakh Passengers Travel in a Single Day Due to Bengaluru Rains

ಒಂದೇ ದಿನ ಮೆಟ್ರೋ ಮೊರೆ ಹೋದ 12 ಲಕ್ಷ ಜನ! Image Credit source: google Gemini ಬೆಂಗಳೂರು, ಮೇ 01: ಸಿಲಿಕಾನ್ ಸಿಟಿಯಲ್ಲಿ ಕಳೆದ ಬುಧವಾರ ಸುರಿದ ಭಾರೀ ಮಳೆ ಮತ್ತು ರಸ್ತೆಗಳಲ್ಲಾದ ಟ್ರಾಫಿಕ್ ಜಾಮ್‌ನಿಂದಾಗಿ ಹೈರಾಣಾದ ಜನರು ಅಕ್ಷರಶಃ ಮೆಟ್ರೋ (Namma Metro) ಮೊರೆ ಹೋಗಿದ್ದಾರೆ. ರಸ್ತೆಗಳೆಲ್ಲಾ ತುಂಬಿ ಮೊಣಕಾಲು ತನಕ ನೀರು ಬಂದಿತ್ತು. ಏಕಾಏಕಿ ಸುರಿದ ಮಳೆಗೆ ಅದೆಷ್ಟೋ ವಾಹನಗಳು ಕೈ ಕೊಟ್ಟ ಕಾರಣಕ್ಕೆ ಜನ ಓಲಾ, ಊಬರ್ ಕಡೆ ಮುಖ ಮಾಡಿದರೆ,…

Read More

ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವತಿ ನೇಣಿಗೆ ಶರಣು! ಪ್ರಿಯಕರನ ಮೇಲಿನ ಅನುಮಾನವೇ ಮುಳುವಾಯ್ತಾ? – Kannada News | Bengaluru Crime: Meghalaya Woman in Live in Relationship ends life Over Suspicion

ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವತಿ ನೇಣಿಗೆ ಶರಣು! ಬೆಂಗಳೂರು, ಮೇ 01: ನಗರದಲ್ಲಿ ಲಿವಿನ್ ರಿಲೇಷನ್‌ಶಿಪ್​ನಲ್ಲಿದ್ದ (Live-in Relationship) ಜೋಡಿಗಳ ಜಗಳ ದುರಂತ ಅಂತ್ಯ ಕಂಡಿದೆ. ಪ್ರಿಯಕರ ಬೇರೆ ಯುವತಿಯ ಜೊತೆ ಮಾತನಾಡುತ್ತಿದ್ದಾನೆ ಎಂದು ಅನುಮಾನದಿಂದ ಮೇಘಾಲಯ ಮೂಲದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವಿನಿ ನಗರದಲ್ಲಿ ಸಂಭವಿಸಿದೆ. ಪ್ರೇಮಿಗಳ ನಡುವೆ 8 ವರ್ಷಗಳ ಅಂತರ ಮೃತ ಯುವತಿಯನ್ನು ಮೇಘಾಲಯ ಮೂಲದ ಅಗತ ಬೈತಿಯಂಗುಂ (34) ಎಂದು ಗುರುತಿಸಲಾಗಿದೆ. ಈಕೆ…

Read More