Air Ambulance Crash: ಒಂದು ಜೀವ ಉಳಿಸಲು ಏರ್ ಆಂಬ್ಯುಲೆನ್ಸ್​ಗೆ 7 ಲಕ್ಷ ರೂ. ಕೊಟ್ಟಿದ್ರು, ಆದ್ರೆ 7 ಪ್ರಾಣ ಹೋಯ್ತು – Kannada News | Jharkhand Air Ambulance Tragedy: Rs7 Lakh Paid for One Life, 7 Died in Crash

ರಾಂಚಿ, ಫೆಬ್ರವರಿ 24: ಜಾರ್ಖಂಡ್​​ನ ರಾಂಚಿಯಲ್ಲಿ ಏರ್ ಆಂಬ್ಯುಲೆನ್ಸ್(Air Ambulance)​ ಅಪಘಾತಕ್ಕೀಡಾಗಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ಜೀವವನ್ನು ಉಳಿಸಲು ಕುಟುಂಬ ಈ ಆಂಬ್ಯುಲೆನ್ಸ್​ಗೆ 7 ಲಕ್ಷ ರೂ. ಪಾವತಿ ಮಾಡಿತ್ತು.  ಆದರೆ ಅಪಘಾತದಲ್ಲಿ ಏಳು ಜನರ ಪ್ರಾಣ ಹೋಗಿದೆ. ಅಷ್ಟೇ ಅಲ್ಲದೆ ದೆಹಲಿಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಲು ಲಕ್ಷಗಟ್ಟಲೆ ಸಾಲವನ್ನೂ ಕೂಡ ಮಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುವ ಬೀಚ್‌ಕ್ರಾಫ್ಟ್ ಸಿ90 ಏರ್ ಆಂಬ್ಯುಲೆನ್ಸ್ ರಾಂಚಿಯಿಂದ ಸಂಜೆ 7.11 ಕ್ಕೆ ಹೊರಟಿತ್ತು. ಸುಮಾರು 20 ನಿಮಿಷಗಳ ನಂತರ ವಾಯು ಸಂಚಾರ ನಿಯಂತ್ರಣದೊಂದಿಗೆ ಸಂಪರ್ಕ ಕಳೆದುಕೊಂಡಿತ್ತು.ಹವಾಮಾನ ವೈಪರೀತ್ಯದಿಂದಾಗಿ ವಿಮಾನವು ಚತ್ರಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪತನಗೊಂಡಿತ್ತು.
ಹೋಟೆಲ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಂಜಯ್ ಶಾ ಎಂಬುವವರು ದೇಹದ ಶೇ.65ರಷ್ಟು ಭಾಗ ಸುಟ್ಟು ಹೋಗಿತ್ತು.

ಮತ್ತಷ್ಟು ಓದಿ: ಜಾರ್ಖಂಡ್​ನಲ್ಲಿ ಏರ್ ಆಂಬ್ಯುಲೆನ್ಸ್​ ಅಪಘಾತ, ರೋಗಿ ಸೇರಿ 7 ಮಂದಿ ಪ್ರಯಾಣಿಕರ ದುರ್ಮರಣ

ದೆಹಲಿಗೆ ಹೊರಟವರಲ್ಲಿ ಸಂಜಯ್ ಕುಮಾರ್, ಪತ್ನಿಅರ್ಚನಾ ದೇವಿ, ಸಂಬಂಧಿ ಧ್ರುವ್ ಕುಮಾರ್, ವೈದ್ಯ ವಿಕಾಸ್ ಕುಮಾರ್ ಗುಪ್ತಾ, ನರ್ಸ್ ಸಚಿನ್ ಕುಮಾರ್ ಮಿಶ್ರಾ ಮತ್ತು ಪೈಲಟ್‌ಗಳಾದ ಕ್ಯಾಪ್ಟನ್ ವಿವೇಕ್ ವಿಕಾಸ್ ಭಗತ್ ಮತ್ತು ಕ್ಯಾಪ್ಟನ್ ಸವ್ರಜ್‌ದೀಪ್ ಸಿಂಗ್ ಸೇರಿದ್ದಾರೆ. ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯ ಚಂದ್ವಾದಲ್ಲಿ ಸಂಜಯ್ ಹೋಟೆಲ್ ನಡೆಸುತ್ತಿದ್ದರು.

ಕಳೆದ ಸೋಮವಾರ, ಅವರ ಹೋಟೆಲ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಸಂಜಯ್ ಬೆಂಕಿಯಲ್ಲಿ ಸಿಲುಕಿಕೊಂಡಿದ್ದರು.ರಾಂಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಸ್ಥಿತಿ ಸುಧಾರಿಸದಿದ್ದಾಗ, ವೈದ್ಯರು ಅವರನ್ನು ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದರು.

ಸಂಜಯ್ ಅವರ ಈ ಸ್ಥಿತಿಯಿಂದಾಗಿ ರಸ್ತೆ ಮೂಲಕ ಪ್ರಯಾಣಿಸಲು ಸಾಧ್ಯವಾಗುತ್ತಿರಲಿಲ್ಲ, ಆದ್ದರಿಂದ ಅವರ ಕುಟುಂಬವು ಸಂಬಂಧಿಕರನ್ನು ಸಂಪರ್ಕಿಸಿ ಏರ್ ಆಂಬ್ಯುಲೆನ್ಸ್‌ಗಾಗಿ 7.5 ಲಕ್ಷ ರೂ.ಗಳನ್ನು ಸಾಲವಾಗಿ ಪಡೆದುಕೊಂಡಿತು. ದೆಹಲಿಯಲ್ಲಿ ಅವರ ಚಿಕಿತ್ಸೆಗಾಗಿ ಸ್ವಲ್ಪ ಹಣವನ್ನು ಸಹ ಪಕ್ಕಕ್ಕೆ ಇಡಲಾಗಿತ್ತು. ಸಂಜಯ್ ಅವರ ಅಣ್ಣ ವಿಜಯ್ ಶಾ, ರಾಂಚಿ ವಿಮಾನ ನಿಲ್ದಾಣದಲ್ಲಿ ಅವರನ್ನು ಬೀಳ್ಕೊಡಲು ಹೋಗಿದ್ದರು.

ದಂಪತಿ ಇಬ್ಬರೂ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಅನಾಥವಾಗಿದ್ದಾರೆ. ರಾಂಚಿಯಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯಗಳಿದ್ದರೆ, ಸಂಜಯ್ ಅವರನ್ನು ಎಂದಿಗೂ ವಿಮಾನದಲ್ಲಿ ಕರೆದೊಯ್ಯುವ ಅಗತ್ಯವಿರಲಿಲ್ಲ ಎಂದು ಅವರು ದೂರಿದ್ದಾರೆ.

ಡಾ. ವಿಕಾಸ್ ಕುಮಾರ್ ಗುಪ್ತಾ ಅವರ ತಂದೆ ಬಜರಂಗಿ ಪ್ರಸಾದ್ ಅವರು ತಮ್ಮ ಮಗನನ್ನು ವೈದ್ಯನನ್ನಾಗಿ ಮಾಡಲು ತಮ್ಮ ಎಲ್ಲಾ ಭೂಮಿಯನ್ನು ಮಾರಿ ಡಾ. ಗುಪ್ತಾ ಅವರನ್ನು ರಾಂಚಿಯ ಸದರ್ ಆಸ್ಪತ್ರೆಯಲ್ಲಿ ನೇಮಿಸಲಾಗಿತ್ತು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Sepsis: ನಾಯಿ ನಿಮ್ಮನ್ನು ನೆಕ್ಕುವುದರಿಂದ ಅಂಗಾಂಗಗಳನ್ನೇ ನೀವು ಕಳೆದುಕೊಳ್ಳಬಹುದು, ಪ್ರಾಣವೂ ಹೋಗಬಹುದು ಎಚ್ಚರ! – Kannada News | Dog Lick Danger: Sepsis Risk, Organ Failure and Limb Loss Protect Your Health

ಸಾಮಾನ್ಯವಾಗಿ ಸಾಕು ನಾಯಿ(Dog)ಗಳನ್ನು ಮನೆ ಮಾಲೀಕರು ಮನೆಯ ಒಂದು ಸದಸ್ಯನಂತೆ ಕಾಣುತ್ತಾರೆ. ಮನೆಯ ಒಳಗೇ ನಾಯಿಯನ್ನು ಬಿಟ್ಟುಕೊಳ್ಳುತ್ತಾರೆ. ತಮ್ಮ ಜತೆ ಬೆಡ್​ರೂಮಿನಲ್ಲೇ ಮಲಗಿಸಿಕೊಳ್ಳುತ್ತಾರೆ. ಹಾಗೆಯೇ ಆ ನಾಯಿಗಳು ಕೂಡ ಮನೆ ಸದಸ್ಯರ ಕೈಕಾಲು, ಮುಖಗಳನ್ನು ನೆಕ್ಕುತ್ತಾ ತಮ್ಮ ಪ್ರೀತಿಯನ್ನು ಸಾಬೀತುಪಡಿಸುತ್ತವೆ. ಆದರೆ ಆ ಪ್ರೀತಿ ಜನರ ಜೀವಕ್ಕೆ ಕುತ್ತು ತರಬಹುದು ಎಂಬುದು ಯಾರಿಗಾದರೂ ತಿಳಿದಿದೆಯೇ?.

ನಾಯಿ ನಿಮ್ಮ ನೆಕ್ಕುವುದರಿಂದ ಅಂಗಾಂಗಗಳನ್ನೇ ನೀವು ಕಳೆದುಕೊಳ್ಳಬಹುದು, ಅಂಗಾಂಗ ವೈಫಲ್ಯ ಉಂಟಾಗಬಹುದು, ಟಿಶ್ಯೂ ಡ್ಯಾಮೇಜ್ ಆಗಬಹುದು, ನಿಮ್ಮ ಜೀವಕ್ಕೇ ಇದು ಕುತ್ತು ತರಬಹುದು.  ಆ ಅಪಾಯಕಾರಿ ಸೋಂಕನ್ನು ಸೆಪ್ಸಿಸ್(Sepsis)ಎಂದು ಕರೆಯುತ್ತಾರೆ. ಯುಕೆಯ 52 ವರ್ಷದ ಮಂಜೀತ್ ಸಂಘಾ ಅವರಿಗೂ ಇದೇ ರೀತಿಯ ಅಪಾಯ ಉಂಟಾಗಿದೆ. 2025ರ ಜುಲೈನಲ್ಲಿ ಒಂದು ದಿನ ಎಂದಿನಂತೆ ಅವರು ಕೆಲಸಕ್ಕೆ ಹೋಗಿದ್ದರು, ಆರೋಗ್ಯವಾಗಿಯೇ ಹಿಂದಿರುಗಿದ್ದರು.

ಮರುದಿನವೇ ಅವರ ಸ್ಥಿತಿ ತುಂಬಾ ಹದಗೆಟ್ಟಿತ್ತು ಮೂರ್ಛೆ ಕೂಡಾ ಹೋಗಿದ್ದರು. ಅವರ ಕೈಗಳು ಹಾಗೂ ಪಾದಗಳು ಮಂಜುಗಡ್ಡೆಯಂತೆ ತಣ್ಣಗಾಗಿದ್ದವು. ಅವರ ತುಟಿಗಳು ನೀಲಿ ಬಣ್ಣಕ್ಕೆ ತಿರುಗಿದ್ದವು ಮತ್ತು ಉಸಿರಾಟದ ತೊಂದರೆಯೂ ಎದುರಾಗಿತ್ತು.

ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ವೈದ್ಯರು ಅವರಿಗೆ ಸೆಪ್ಸಿಸ್(Sepsis) ಇದೆ ಎಂದು ಪತ್ತೆ ಹಚ್ಚಿದ್ದರು. ಸೆಪ್ಸಿಸ್ ಅಂದರೆ ರಕ್ತದಲ್ಲಿ ವಿಷಕಾರಕ ಅಂಶ ಸೇರುವುದು ಎಂದರ್ಥ. ಇದು ಸೋಂಕಿಗೆ ತಿರುಗಿ ದೇಹಕ್ಕೆ ಹಾನಿ ಮಾಡಲು ಶುರು ಮಾಡಿತ್ತು. ಈ ಸ್ಥಿತಿ ಎಷ್ಟು ತೀವ್ರವಾಗಿತ್ತೆಂದರೆ ವೈದ್ಯರು ಅವರ ಎರಡೂ ಕಾಲುಗಳನ್ನು ಮೊಣಕಾಲುಗಳ ಕೆಳಗೆ ಮತ್ತು ಎರಡೂ ತೋಳುಗಳನ್ನು ಕತ್ತರಿಸಬೇಕಾಯಿತು.

Manjit

ಸಮಸ್ಯೆ ಶುರುವಾಗಿದ್ದು ಹೇಗೆ?

ಚಿಕಿತ್ಸೆಯ ಸಮಯದಲ್ಲಿ, ಅವರಿಗೆ ಹೃದಯಾಘಾತವೂ ಆಗಿತ್ತು, ಸುಮಾರು ತೊಡಕುಗಳನ್ನು ಎದುರಿಸಬೇಕಾಯಿತು.
ಆಕೆಯ ದೇಹದಲ್ಲಿ ಸಣ್ಣ ಗಾಯವಾಗಿತ್ತು, ಆ ಗಾಯವನ್ನು ನೆಕ್ಕಿದಾಗ ಈ ಸಮಸ್ಯೆ ಶುರುವಾಗಿತ್ತು. ನಾಯಿಯ ಲಾಲಾರಸದಲ್ಲಿ ಕಂಡುಬರುವ

‘ಕ್ಯಾಪ್ಲೋಸೈಟೋಫಗಾ ಕ್ಯಾನಿಮೊರ್ಸಸ್’ ಎಂಬ ಬ್ಯಾಕ್ಟೋರಿಯಾವು ಸಾಮಾನ್ಯವಾಗಿ ನಾಯಿಗಳಿಗೆ ಹಾನಿಕಾರಕವಲ್ಲ, ಆದರೆ ಮಾನವರಲ್ಲಿ ಇದು ಗಂಭೀರ ಸೋಂಕು ಮತ್ತು ಸೆಪ್ಸಿಸ್​ಗೆ ಕಾರಣವಾಗಬಹುದು.

ಮತ್ತಷ್ಟು ಓದಿ:  ಪ್ರತಿದಿನ ವಾಕಿಂಗ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ಸೆಪ್ಸಿಸ್ ಎಂದರೇನು?

ಸೆಪ್ಸಿಸ್ ಒಂದು ಜೀವಕ್ಕೆ ಅಪಾಯ ತಂದೊಡ್ಡುವ ಸ್ಥಿತಿಯಾಗಿದ್ದು, ಇದರಲ್ಲಿ ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಸೋಂಕಿಗೆ ಅತಿಯಾಗಿ ಪ್ರತಿಕ್ರಿಯಿಸುತ್ತದೆ. ಈ ಪ್ರತಿಕ್ರಿಯೆಯು ದೇಹದಾದ್ಯಂತ ಉರಿಯೂತವನ್ನು ಉಂಟುಮಾಡುತ್ತದೆ ಮತ್ತು ಆರೋಗ್ಯಕರ ಅಂಗಾಂಶ ಮತ್ತು ಅಂಗಗಳನ್ನು ಹಾನಿಗೊಳಿಸುತ್ತದೆ.ರಕ್ತದೊತ್ತಡ ಇದ್ದಕ್ಕಿದ್ದಂತೆ ಕಡಿಮೆಯಾಗುತ್ತದೆ, ಅಂಗಗಳಿಗೆ ಸಾಕಷ್ಟು ಆಮ್ಲಜನಕದ ಪೂರೈಕೆಯನ್ನು ತಡೆಯುತ್ತದೆ ಮತ್ತು ಬಹು-ಅಂಗಾಂಗ ವೈಫಲ್ಯದ ಅಪಾಯವನ್ನು ಹೆಚ್ಚಿಸುತ್ತದೆ.

ಸೆಪ್ಸಿಸ್ ಕಾರಣಗಳು
ಯಾವುದೇ ಸೋಂಕಿನಿಂದ ಸೆಪ್ಸಿಸ್ ಪ್ರಚೋದಿಸಬಹುದು

  • ಶ್ವಾಸಕೋಶದ ಸೋಂಕು
  • ಮೂತ್ರನಾಳದ ಸೋಂಕು
  • ಹೊಟ್ಟೆ ಅಥವಾ ಕರುಳಿನ ಸೋಂಕು
  • ಚರ್ಮದ ಸೋಂಕು
  • ಮೆದುಳು ಅಥವಾ ಬೆನ್ನುಹುರಿ ಸೋಂಕು

ಸೆಪ್ಸಿಸ್ ಲಕ್ಷಣಗಳು

  • ಹೆಚ್ಚಿನ ಜ್ವರ ಅಥವಾ ತುಂಬಾ ಕಡಿಮೆ ದೇಹದ ಉಷ್ಣತೆ
  • ವೇಗದ ಹೃದಯಬಡಿತ
  • ಉಸಿರಾಟದ ತೊಂದರೆ
  • ತುಂಬಾ ಕಡಿಮೆ ಮೂತ್ರ ವಿಸರ್ಜನೆ
  • ತುಂಬಾ ಆಯಾಸ
  • ಚರ್ಮದ ಮೇಲೆ ಕೆಂಪು ಅಥವಾ ಕಪ್ಪು ಕಲೆಗಳು
  • ಕಡಿಮೆ ರಕ್ತದೊತ್ತಡ
  • ಚಳಿ ಅಥವಾ ನಡುಕ
  • ತೀವ್ರ ನೋವು ಅಥವಾ ಅಸ್ವಸ್ಥತೆ

ಮುನ್ನೆಚ್ಚರಿಕಾ ಕ್ರಮಗಳು

ಚರ್ಮದ ಮೇಲೆ ಗಾಯ ಆಗಿದ್ದರೆ, ಯಾವುದೇ ಸಾಕು ಪ್ರಾಣಿಯನ್ನು ನೆಕ್ಕಲು ಬಿಡಬೇಡಿ.
ಯಾವುದೇ ಸಣ್ಣ ಗಾಯಗಳಿದ್ದರೂ ಅದನ್ನು ಸ್ವಚ್ಛಗೊಳಿಸಿ ಅದಕ್ಕೆ ಬ್ಯಾಂಡೇಜ್ ಅಥವಾ ಬ್ಯಾಂಡೆಡ್ ಏನಾದರೂ ಹಾಕಿ
ಜ್ವರ, ಶೀತ ಅಥವಾ ಹಠಾತ್ ದೌರ್ಬಲ್ಯವನ್ನು ನಿರ್ಲಕ್ಷಿಸಬೇಡಿ

ಸೆಪ್ಸಿಸ್​​ನಿಂದ ಏನೇನಾಗಬಹುದು

  • ಸೆಪ್ಟಿಕ್ ಶಾಕ್-ರಕ್ತದೊತ್ತಡ ಅಪಾಯಕಾರಿ ಮಟ್ಟಕ್ಕೆ ಇಳಿಯುತ್ತದೆ
  • ತೀವ್ರ ಉಸಿರಾಟ ತೊಂದರೆಯ ಸಿಂಡ್ರೋಮ್- ಶ್ವಾಸಕೋಶದಲ್ಲಿ ದ್ರವ ಸಂಗ್ರಹವಾಗುತ್ತದೆ. ಉಸಿರಾಟವನ್ನು ಕಷ್ಟಕರವಾಗಿಸುತ್ತದೆ.
  • ಡಿಐಸಿ-ಅಸಹಜ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಅತಿಯಾದ ರಕ್ತಸ್ರಾವ
  • ಮೂತ್ರಪಿಂಡ ವೈಫಲ್ಯ-ಡಯಾಲಿಸಿಸ್ ಅಗತ್ಯವಿರಬಹುದು
  • ಸೆಪ್ಸಿಸ್ ನಂತರದ ಸಿಂಡ್ರೋಮ್-ದೀರ್ಘಕಾಲದ ಆಯಾಸ, ದೌರ್ಬಲ್ಯ, ಮಾನಸಿಕ ಒತ್ತಡ ಮತ್ತು ಶಾಶ್ವತ ಅಂಗಾಂಗ ವೈಫಲ್ಯ

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ – Kannada News | KSCA To Name Pavilion Block At Hubballi Stadium After Sunil Joshi

ಹುಬ್ಬಳ್ಳಿಯ ಕೆಎಸ್​ಸಿಎ ಕ್ರೀಡಾಂಗಣದ ಪೆವಿಲಿಯನ್​ಗೆ ಕರ್ನಾಟಕದ ಮಾಜಿ ಆಟಗಾರ ಸುನಿಲ್ ಜೋಶಿ ಅವರ ಹೆಸರಿಡಲಾಗಿದೆ.  ರಣಜಿ ಟ್ರೋಫಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ‘ಸುನಿಲ್ ಜೋಶಿ ಪೆವಿಲಿಯನ್’ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಸಿಸಿಐ (BCCI) ಗೌರವಾನ್ವಿತ ಅಧ್ಯಕ್ಷರಾದ  ಮಿಥುನ್ ಮನ್ಹಾಸ್, ಕೆಎಸ್‌ಸಿಎ (KSCA) ಅಧ್ಯಕ್ಷರಾದ ಶ್ರೀ ವೆಂಕಟೇಶ್ ಪ್ರಸಾದ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಾಗೂ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಸೇರಿದಂತೆ ಪ್ರಮುಖರು  ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಸುವರ್ಣ ಮಹೋತ್ಸವದ (50 ವರ್ಷಗಳು) ಸಂಭ್ರಮದ ಭಾಗವಾಗಿ ಮೂರು ಸ್ಟ್ಯಾಂಡ್​ಗಳಿಗೆ ಮಾಜಿ ಕ್ರಿಕೆಟರುಗಳಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಹಾಗೂ ಭಾರತ ಮಹಿಳಾ ತಂಡದ ಮಾಜಿ ನಾಯಕಿ ಶಾಂತಾ ರಂಗಸ್ವಾಮಿ ಅವರ ಹೆಸರಿಡಲಾಗಿತ್ತು.

ಇದೀಗ ಗದಗ ಮೂಲದವರಾದ ಭಾರತದ ಮಾಜಿ ಸ್ಪಿನ್ನರ್ ಸುನಿಲ್ ಜೋಶಿ ಅವರ ಗೌರವಾರ್ಥವಾಗಿ ಹುಬ್ಬಳ್ಳಿ ಕ್ರೀಡಾಂಗಣದ ಪೆವಿಲಿಯನ್ ಬ್ಲಾಕ್‌ಗೆ ಅವರ ಹೆಸರನ್ನು ಇಡಲಾಗಿದೆ.

ಸುನಿಲ್ ಜೋಶಿ ಟೀಮ್ ಇಂಡಿಯಾ ಪರ 15 ಟೆಸ್ಟ್ ಹಾಗೂ 69 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರು ಒಟ್ಟು 110 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ ಭಾರತ ಕಿರಿಯರ ತಂಡದ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಈ ಎಲ್ಲಾ ಸಾಧನೆಗಳನ್ನು ಗೌರವಿಸಿ ಇದೀಗ ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಅವರ ಹೆಸರನ್ನಿಡಲಾಗಿದೆ.

ಇನ್ನು ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಮ್ಮು-ಕಾಶ್ಮೀರ ತಂಡವು ಬ್ಯಾಟಿಂಗ್ ಆಯ್ದುಕೊಂಡಿದ್ದು, ಕರ್ನಾಟಕ ತಂಡ ಫೀಲ್ಡಿಂಗ್ ಮಾಡುತ್ತಿದೆ.

 

 

Source link

ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಭಾರತೀಯ ಸಿನಿಮಾ: ಪ್ರಧಾನಿ ಮೋದಿ ಅಭಿನಂದನೆ – Kannada News | Manipuri Language Indian movie Boong won prestigious BAFTA award

ಆಸ್ಕರ್ (Oscar) ಪ್ರಶಸ್ತಿಯಲ್ಲಿ ಭಾರತೀಯ ಸಿನಿಮಾ ‘ಹೋಮ್​​ಬೌಂಡ್’ ಅಂತಿಮ ಹದಿನೈದು ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು ದೊಡ್ಡ ಸುದ್ದಿಯಾಗಿತ್ತು. ಆದರೆ ಆ ಸಿನಿಮಾ ನಾಮಿನೇಷನ್ ಹಂತ ತಲುಪಲು ವಿಫಲವಾಗಿತ್ತು. ಆದರೆ ಇದೀಗ ಸದ್ದೇ ಇಲ್ಲದೆ ಭಾರತೀಯ ಸಿನಿಮಾ ಒಂದು ಆಸ್ಕರ್​​ನಷ್ಟೆ ಪ್ರಮುಖವಾದ ಅಂತರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಗೆದ್ದಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಿನಿಮಾಕ್ಕೆ ಸಿನಿಮಾದ ತಾಂತ್ರಿಕ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಮಣಿಪುರಿ ಸಿನಿಮಾ ‘ಬೂಂಗ್’ ಸಿನಿಮಾ ಪ್ರತಿಷ್ಠಿತ ಭಾಫ್ಟಾ ಪ್ರಶಸ್ತಿ ಗೆದ್ದುಕೊಂಡಿದೆ. ಇತ್ತೀಚೆಗೆ ಆಂತರಿಕ ಸಂಘರ್ಷ, ಮಾನವ ಹಕ್ಕುಗಳ ಉಲ್ಲಂಘನೆ, ಹಿಂಸೆ ಇತ್ಯಾದಿಗಳ ಕಾರಣಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಮಣಿಪುರದಿಂದ ಬಂದ ಸಿನಿಮಾ ಒಂದು ಅಂತರಾಷ್ಟ್ರೀಯ ಪ್ರಶಸ್ತಿ ಗೆದ್ದಿರುವುದನ್ನು ಹಲವಾರು ಮಂದಿ ಗಣ್ಯರು ಅಭಿನಂದಿಸಿದ್ದಾರೆ. ಲಂಡನ್‌ನಲ್ಲಿ ನಡೆದ ಪ್ರತಿಷ್ಠಿತ ಬಾಫ್ಟಾ (BAFTA) ಪ್ರಶಸ್ತಿ ಸಮಾರಂಭದಲ್ಲಿ ‘ಅತ್ಯುತ್ತಮ ಮಕ್ಕಳ ಮತ್ತು ಕೌಟುಂಬಿಕ ಚಿತ್ರ’ ವಿಭಾಗದಲ್ಲಿ ‘ಬೂಂಗ್’ ಸಿನಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಬೂಂಗ್ ಮಣಿಪುರಿ ಸಿನಿಮಾವನ್ನು ಲಕ್ಷ್ಮಿಪ್ರಿಯಾ ದೇವಿ ನಿರ್ದೇಶನ ಮಾಡಿದ್ದು, ವಿಶೇಷವೆಂದರೆ ಇದು ಅವರ ಮೊಟ್ಟ ಮೊದಲ ಸಿನಿಮಾ. ಸಿನಿಮಾ ನಿರ್ಮಾಣ ಮಾಡಿರುವುದು ಖ್ಯಾತ ಬಾಲಿವುಡ್ ನಟ ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಜೊತೆಗೆ ರಿತೇಶ್ ಸಿಧ್ವಾನಿ, ವಿಕೇಶ್ ಭುತಾನಿ, ಅಲನ್ ಮೆಕ್ ಅಲೆಕ್ಸ್ ಮತ್ತು ಶುಜಾತ್ ಸೌದಾಗರ್ ಅವರುಗಳ ಸಹ ನಿರ್ಮಾಣ ತಂಡದಲ್ಲಿದ್ದಾರೆ. ಈ ಚಿತ್ರವು ಮಣಿಪುರದ ಶಾಲಾ ಬಾಲಕ ಬೂಂಗ್​​ನ ಸುತ್ತ ಸುತ್ತುತ್ತದೆ. ಜನಾಂಗೀಯ ಸಂಘರ್ಷ ಮತ್ತು ಗಡಿಭಾಗದ ಸವಾಲುಗಳ ನಡುವೆ, ತನ್ನ ಒಡೆದು ಹೋದ ಕುಟುಂಬವನ್ನು ಮತ್ತೆ ಒಂದುಗೂಡಿಸಲು ಆತ ನಡೆಸುವ ಸಾಹಸಮಯ ಮತ್ತು ಭಾವನಾತ್ಮಕ ಪ್ರಯಾಣವನ್ನು ಈ ಸಿನಿಮಾ ಕಟ್ಟಿಕೊಡುತ್ತದೆ.

ಲಂಡನ್‌ನ ರಾಯಲ್ ಫೆಸ್ಟಿವಲ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಿರ್ದೇಶಕಿ ಲಕ್ಷ್ಮಿಪ್ರಿಯಾ ದೇವಿ ಮಣಿಪುರದಲ್ಲಿ ಪ್ರಸ್ತುತ ನಡೆಯುತ್ತಿರುವ ಸಂಘರ್ಷಗಳ ಬಗ್ಗೆ ಪ್ರಸ್ತಾಪಿಸಿದರು, ‘ಮಣಿಪುರದಲ್ಲಿ ಮತ್ತೆ ಶಾಂತಿ ನೆಲೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಸಂಘರ್ಷದಿಂದಾಗಿ ಮನೆ ಕಳೆದುಕೊಂಡ ಮಕ್ಕಳು ಮತ್ತು ಈ ಚಿತ್ರದಲ್ಲಿ ನಟಿಸಿದ ಬಾಲ ನಟರು ತಮ್ಮ ಬಾಲ್ಯದ ಸಂತೋಷ ಮತ್ತು ಕನಸುಗಳನ್ನು ಮತ್ತೆ ಕಂಡುಕೊಳ್ಳುವಂತಾಗಲಿ’ ಎಂದು ಶಾಂತಿಗಾಗಿ ಮನವಿ ಮಾಡಿದ ಅವರು, ‘ಕ್ಷಮೆ ಎಂಬುದು ಮನುಷ್ಯನಿಗಿರುವ ದೊಡ್ಡ ಶಕ್ತಿ, ಯಾವುದೇ ಸಂಘರ್ಷವೂ ಆ ಶಕ್ತಿಯನ್ನು ನಾಶಪಡಿಸಲು ಸಾಧ್ಯವಿಲ್ಲ’ ಎಂದರು.

ಇದನ್ನೂ ಓದಿ:ದಕ್ಷಿಣದ ಸಿನಿಮಾಗಳ ಬಗ್ಗೆ ಮೆಚ್ಚುಗೆ ಸೂಚಿಸಿದ ಪಾರ್ವತಿ ಮೆನನ್

‘ಬೂಂಗ್’ ಚಿತ್ರವು ಅಂತರಾಷ್ಟ್ರೀಯ ಮಟ್ಟದ ಜನಪ್ರಿಯ ಚಿತ್ರಗಳಾದ ‘ಝೂಟೋಪಿಯಾ 2’, ‘ಲಿಲೋ ಅಂಡ್ ಸ್ಟಿಚ್’ ಮತ್ತು ಫ್ರೆಂಚ್ ವೈಜ್ಞಾನಿಕ ಚಿತ್ರ ‘ಆರ್ಕೊ’ ಗಳೊಂದಿಗೆ ಪೈಪೋಟಿ ನಡೆಸಿ ಈ ಗೌರವಕ್ಕೆ ಪಾತ್ರವಾಗಿದೆ. ‘ಝೂಟೋಪಿಯಾ 2’ ಸಿನಿಮಾವು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 16 ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಸಿರುವ ಭಾರಿ ಬಜೆಟ್ ಸಿನಿಮಾ, ಅಷ್ಟಾದರೂ ಬಹಳ ಸಣ್ಣ ಬಜೆಟ್​​ನ ‘ಬೂಂಗ್’ ಸಿನಿಮಾ ಗೆದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.

‘ಬೂಂಗ್’ ಸಿನಿಮಾ ಮೊದಲು 2024ರ ಟೊರೊಂಟೊ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು. ನಂತರ ವಾರ್ಸಾ, ಮುಂಬೈ, ಗೋವಾ ಮತ್ತು ಮೆಲ್ಬೋರ್ನ್ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ವಿಮರ್ಶಕರ ಮೆಚ್ಚುಗೆ ಗಳಿಸಿತ್ತು. ಗುಗುನ್ ಕಿಪ್ಜೆನ್, ಬಾಲಾ ಹಿಜಾಮ್ ನಿಂಗ್ಥೌಜಮ್ ಮತ್ತು ಅಂಗೋಮ್ ಸನಾಮತಮ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮಣಿಪುರದ ಮುಖ್ಯಮಂತ್ರಿಗಳು ಈ ಗೆಲುವನ್ನು ಇಡೀ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಹ ‘ಬೂಂಗ್’ ಸಿನಿಮಾ ಬಗ್ಗೆ ಟ್ವೀಟ್ ಮಾಡಿದ್ದು, ‘ಈ ಸಿನಿಮಾದೊಂದಿಗೆ ಗುರುತಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅಭಿನಂದನೆಗಳು. ಇದು ನಿಜಕ್ಕೂ ಅಪಾರ ಸಂತೋಷದ ಕ್ಷಣ, ಅದರಲ್ಲೂ ವಿಶೇಷವಾಗಿ ಮಣಿಪುರಕ್ಕೆ ಹೆಮ್ಮೆಯ ವಿಷಯ. ಇದು ನಮ್ಮ ದೇಶದಲ್ಲಿರುವ ಅಗಾಧ ಸೃಜನಶೀಲ ಪ್ರತಿಭೆಯನ್ನು ಎತ್ತಿ ತೋರಿಸುತ್ತದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ, ನೇರಪ್ರಸಾರ – Kannada News | AKSSA and BJP Protest in Dharwad: Students Demand Filling of Vacant govt Posts, Live Updates

ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಇರುವ 2.75 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (AKSSA) ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸುತ್ತಿದೆ. ಶಿಕ್ಷಣ, ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವಂತೆ ಪಕ್ಷವು ಒತ್ತಾಯಿಸಲಾಗಿದೆ.

ಪ್ರತಿಭಟನೆಯು ಧಾರವಾಡದ ಶ್ರೀನಗರ ವೃತ್ತದಿಂದ ಆರಂಭವಾಗಿ ಮಿಚಿಗನ್ ಕಾಂಪೌಂಡ್‌ನಲ್ಲಿ ಸಭೆಯೊಂದಿಗೆ ಅಂತ್ಯಗೊಳ್ಳಲಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಉಪನಾಯಕ ಅರವಿಂದ ಬೆಲ್ಲದ್ ಮತ್ತು ಛಲುವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿಭಟನೆಯ ನೇರ ಪ್ರಸಾರ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್ ಪಾಲಕರು ರಶ್ಮಿಕಾ ಮಂದಣ್ಣಗೆ ಹಾಕಿದ ಷರತ್ತು ಏನು? – Kannada News | Vijay Deverakonda and Rashmika Mandanna Wedding: Parents Reveal Their Only Condition

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ವಿವಾಹ ಸಮೀಪಿಸುತ್ತಿದೆ. ಅವರ ವಿವಾಹವು ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ನಡೆಯಲಿದೆ. ಈ ಅದ್ದೂರಿ ವಿವಾಹದಲ್ಲಿ ಕುಟುಂಬ ಸದಸ್ಯರು, ಆಪ್ತರು ಮತ್ತು ಸಂಬಂಧಿಕರು ಮಾತ್ರ ಭಾಗವಹಿಸಲಿದ್ದಾರೆ ಎಂದು ತೋರುತ್ತದೆ. ಆದಾಗ್ಯೂ, ಮಾರ್ಚ್ 04 ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ಆಯೋಜಿಸಲಾಗಿದೆ ಎಂದು ವರದಿಯಾಗಿದೆ. ಈಗ ವಿಜಯ್ ಪಾಲಕರು ರಶ್ಮಿಕಾಗೆ ಹಾಕಿದ ಷರತ್ತಿನ ಬಗ್ಗೆ ಚರ್ಚೆ ನಡೆದಿದೆ.

ಇಲ್ಲಿಯವರೆಗೆ ತಮ್ಮ ಪ್ರೀತಿ ಮತ್ತು ಮದುವೆಯ ಬಗ್ಗೆ ಮೌನವಾಗಿದ್ದ ವಿಜಯ್ ಮತ್ತು ರಶ್ಮಿಕಾ, ತಮ್ಮ ಅದ್ದೂರಿ ವಿವಾಹದ ಬಗ್ಗೆ ಅಧಿಕೃತ ಘೋಷಣೆಯನ್ನು ಮಾಡಿದರು. ತಮ್ಮ ಅಭಿಮಾನಿಗಳ ಕೋರಿಕೆಯ ಮೇರೆಗೆ ತಮ್ಮ ವಿವಾಹ ಸಮಾರಂಭಕ್ಕೆ ‘ವಿರೋಷ್’ ಎಂದು ಹೆಸರಿಟ್ಟಿದ್ದಾರೆ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ್ದಾರೆ. ಈ ಸಂದರ್ಭದಲ್ಲಿ, ವಿಜಯ್ ದೇವರಕೊಂಡ ಅವರ ಪೋಷಕರು ತಮ್ಮ ಭಾವಿ ಸೊಸೆ ಹೊಂದಿರಬೇಕಾದ ಗುಣಗಳ ಬಗ್ಗೆ ಮಾತನಾಡುತ್ತಿರುವ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ವಿಜಯ್ ನಟಿಸಿದ ಚಿತ್ರ ಒಂದರ ಸಕ್ಸಸ್​ ಮೀಟ್​​ ಅಲ್ಲಿ ನಿರೂಪಕಿ ಸುಮಾ ವಿಜಯ್ ಅವರ ಪೋಷಕರೊಂದಿಗೆ ಮಾತನಾಡುವಾಗ ಅವರ ಮದುವೆಯ ವಿಷಯವನ್ನು ಪ್ರಸ್ತಾಪಿಸಿದರು. ಸುಮಾ ವಿಜಯ್ ಅವರ ತಾಯಿ ಮಾಧವಿ ಅವರನ್ನು ಯಾವ ರೀತಿಯ ಸೊಸೆ ಬೇಕು ಎಂದು ಕೇಳಿದಾಗ, ಅವರು ಒಂದೇ ಒಂದು ಷರತ್ತು ಹೊಂದಿದ್ದಾರೆಂದು ಹೇಳಿದರು.

ಇದನ್ನೂ ಓದಿ: 2017 To 2026: ಆ ಒಂದು ಘಟನೆಯಿಂದ ಗಟ್ಟಿ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ಬಂಧ

‘ನಮ್ಮ ಮಗನನ್ನು ಚೆನ್ನಾಗಿ ನೋಡಿಕೊಳ್ಳುವ ಸೊಸೆ ಸಾಕು. ಅವಳು ಅವನನ್ನು ಬೇಷರತ್ತಾಗಿ ಪ್ರೀತಿಸಬೇಕು, ಅಷ್ಟೇ. ನಮ್ಮ ಮಗ ಚಿತ್ರರಂಗದಲ್ಲಿ ಇರುವುದರಿಂದ, ಅವಳು ಅವನನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬೇಕು’ ಎಂದು ಮಾಧವಿ ಹೇಳಿದ್ದರು. ಅದರ ನಂತರ, ವಿಜಯ್ ಅವರ ತಂದೆ ಗೋವರ್ಧನ್ ರಾವ್ ಕೂಡ, ‘ಅವನು ಇಷ್ಟಪಡುವ ಹುಡುಗಿಯನ್ನು ಮದುವೆಯಾಗಬೇಕು. ನನಗೆ ಯಾವುದೇ ಆಕ್ಷೇಪಣೆ ಅಥವಾ ನಿರೀಕ್ಷೆಗಳಿಲ್ಲ. ಜಾತಿ ಅಥವಾ ಧರ್ಮದಂತಹ ಯಾವುದೇ ಕಾಳಜಿಯೂ ನನಗಿಲ್ಲ. ಅವನು ಭಾರತೀಯ ಹುಡುಗಿಯನ್ನು, ವಿಶೇಷವಾಗಿ ದಕ್ಷಿಣದ ಹುಡುಗಿಯನ್ನು ಮದುವೆಯಾದರೆ ನನಗೆ ತುಂಬಾ ಸಂತೋಷವಾಗುತ್ತದೆ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೆಹಲಿಯ ಉತ್ತಮ್ ನಗರದಲ್ಲಿ ಮೆಟ್ರೋ ಮುಂದೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ, ಐದು ದಿನಗಳಲ್ಲಿ ಎರಡನೇ ಘಟನೆ – Kannada News | Second Metro Track Tragedy in Five Days Reported at Uttam Nagar

ನವದೆಹಲಿ, ಫೆಬ್ರವರಿ 24: ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ(Metro) ನಿಲ್ದಾಣದಲ್ಲಿ ಹಳಿ ಮೇಲೆ ಹಾರಿ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. 45 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಜಸ್ಥಾನದ ಕರೋಲಿ ಜಿಲ್ಲೆಯ ಹಂಡು ರಾಮ್ ಅವರ ಪುತ್ರ ಮಹಾರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಅವರ ಶವವನ್ನು ಹಳಿಯಿಂದ ಹೊರತೆಗೆದು ಡಿಡಿಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮಹಾರಾಜ್ ಸಿಂಗ್ ಹಲವಾರು ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಮತ್ತು ಆರ್‌ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಘಟನೆಗೆ ಕೇವಲ ಒಂದು ದಿನ ಮೊದಲು ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಅವರು ತಮ್ಮ ಅಣ್ಣನ ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿದ್ದರು. ಅವರು ಪತ್ನಿ, 18 ವರ್ಷದ ಒಬ್ಬ ಮಗಳು ಮತ್ತು 17 ಮತ್ತು 20 ವರ್ಷದ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಪೊಲೀಸರು CrPC ಸೆಕ್ಷನ್ 174 ರ ಅಡಿಯಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಘಟನೆಯ ಸುತ್ತಲಿನ ಸಂದರ್ಭಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಐದು ದಿನಗಳಲ್ಲಿ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ನಡೆದ ಎರಡನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.

ಮತ್ತಷ್ಟು ಓದಿ: ದೆಹಲಿ ಮೆಟ್ರೋ ಎದುರು ಹಾರಿ ಬಾಲಕ ಆತ್ಮಹತ್ಯೆ

ಮತ್ತೊಂದು ಘಟನೆ 

ವೈಯಕ್ತಿಕ ಸಮಸ್ಯೆಗಳಿಂದ ಬೇಸತ್ತು ಬಾಲಕನೊಬ್ಬ ದೆಹಲಿ ಮೆಟ್ರೋ(Delhi Metro) ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಇಂದು ಬೆಳಗ್ಗೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 11.7ಕ್ಕೆ ನಿಲ್ದಾಣ ನಿಯಂತ್ರಕರಿಂದ ವ್ಯಕ್ತಿಯೊಬ್ಬ ಹಳಿಗಳ ಮೇಲೆ ಹಾರಿದ ಬಗ್ಗೆ ಮಾಹಿತಿ ಬಂದಿತ್ತು. ದ್ವಾರಕಾ ಕಡೆಯಿಂದ ಬರುತ್ತಿದ್ದ ಮೆಟ್ರೋ ರೈಲು ಆತನ ಮೇಲೆ ಹರಿದಿದೆ. ಪೊಲೀಸರು ಬರುವ ಮೊದಲೇ ಮೃತದೇಹವನ್ನು ಹಳಿಗಳಿಂದ ತೆಗೆಯಲಾಗಿತ್ತು.

ಮೃತ ವ್ಯಕ್ತಿಯನ್ನು ನಜಾಫ್‌ಗಢ ನಿವಾಸಿ ಎಂದು ಗುರುತಿಸಲಾಗಿದೆ. ಆತ 12ನೇ ತರಗತಿ ಪೂರ್ಣಗೊಳಿಸಿದ್ದು, ಉತ್ತಮ್ ನಗರದ ಖಾಸಗಿ ಸಂಸ್ಥೆಯಲ್ಲಿ ಕೋಚಿಂಗ್ ತರಗತಿಗಳಿಗೆ ಹಾಜರಾಗುತ್ತಾ ಹೆಚ್ಚಿನ ಅಧ್ಯಯನಕ್ಕೆ ತಯಾರಿ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಿಂದಾಗಿ ನೀಲಿ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಸಹ ಸ್ವಲ್ಪ ಸಮಯದವರೆಗೆ ಸ್ಥಗಿತಗೊಂಡಿದ್ದವು.

ಪ್ರಾಥಮಿಕ ತನಿಖೆಯಲ್ಲಿ ಆತ ವೈಯಕ್ತಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಆತನ ತಂದೆ ಡಿಟಿಸಿಯಲ್ಲಿ ಗುತ್ತಿಗೆ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ, ಪೋಷಕರಿಗೆ ಆತನೊಬ್ಬನೇ ಆ ಎಂದು ಡಿಸಿಪಿ ಮೆಟ್ರೋ ಕುಶಾಲ್ ಪಾಲ್ ಸಿಂಗ್ ಹೇಳಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ರವಾನಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 194 ರ ಅಡಿಯಲ್ಲಿ ತನಿಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಶಿವಮೊಗ್ಗ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಕೊಲೆ ಪ್ರಕರಣ: 15 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ – Kannada News | Karnataka Govt Announces Rs 15 Lakh Compensation in Shivamogga SSLC Student Sanketh Murder Case

ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದಲ್ಲಿ (Shivamogga) ಕೊಲೆಯಾದ ಬಾಲಕ ಸಂಕೇತ್ ಕುಟುಂಬದವರಿಗೆ ರಾಜ್ಯ ಸರ್ಕಾರ 15 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೂಲಕ ಈ ಘೋಷಣೆ ಮಾಡಿಸಿದ್ದಾರೆ. ಪರಿಹಾರ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ‘ಅಪ್ರಾಪ್ತ ಬಾಲಕನ ಸಾವಿಗೆ ಸರ್ಕಾರದಿಂದ ಒಟ್ಟು 15 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ. ಇದರಲ್ಲಿ 10 ಲಕ್ಷ ರೂ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಾಗೂ 5 ಲಕ್ಷ ರೂ. ಶಿಕ್ಷಣ ಇಲಾಖೆಯಿಂದ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಘಟನೆ ಬಳಿಕ ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಘಟನೆ ನಡೆದ ಬಡಾವಣೆಯಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜಾತ್ರೆ ಹಾಗೂ ಮುಂಬರುವ ಹಬ್ಬಗಳ ಹಿನ್ನೆಲೆ ಹೆಚ್ಚುವರಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಊರುಗಡೂರು ಭಾಗದಲ್ಲಿ ಔಟ್‌ಪೋಸ್ಟ್ ತೆರೆಯುವ ಮೂಲಕ ವಿಶೇಷ ಪೊಲೀಸ್ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲ್ಲೆ ಮಾಡಿದ ವಿದ್ಯಾರ್ಥಿಗಳು ಗಾಂಜಾ ಸೇವಿಸಿದ್ದರೇ?


ಬಾಲಕ ಸಂಕೇತ್ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಗಳು ಗಾಂಜಾ ಸೇವಿಸಿದ್ದರೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಶಿವಮೊಗ್ಗ ಎಸ್‌ಪಿ ನಿಖಿಲ್ ಭರವಸೆ ನೀಡಿದ್ದಾರೆ. ಏತನ್ಮಧ್ಯೆ, ಡ್ರಗ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದ್ದು, ಗಾಂಜಾ ಸೇವನೆ ಹಾಗೂ ಮಾರಾಟದ ವಿರುದ್ಧ ಸಮರ ಸಾರಲಾಗಿದೆ. ಈ ಪ್ರಕರಣದಲ್ಲೂ ಡ್ರಗ್ಸ್ ಸಂಪರ್ಕ ಕಂಡುಬಂದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಎಸ್‌ಪಿ ನಿಖಿಲ್ ಹೇಳಿದ್ದೇನು?

ಕೊಲೆ ಪ್ರಕರಣ ಕುರಿತು ಶಿವಮೊಗ್ಗ ಎಸ್‌ಪಿ ನಿಖಿಲ್ ಮಾಹಿತಿ ನೀಡಿದ್ದು, ಈಗಾಗಲೇ ಕೊಲೆ ಸಂಬಂಧ 7 ಅಪ್ರಾಪ್ತರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಕ್ರಿಕೆಟ್ ಆಟದ ವೇಳೆ ನಡೆದಿದ್ದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಗಿರೀಶ್ ಎಂಬಾತನ ಬಳಿ ಆರೋಪಿಗಳು ಕ್ರಿಕೆಟ್ ಆಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದಿನಿಂದಲೇ ಗಲಾಟೆ ನಡೆಯುತ್ತಿತ್ತು. ಸಂಕೇತ್ ಗಲಾಟೆ ಬಿಡಿಸಲು ತೆರಳಿದ್ದ ವೇಳೆ ಕೈಯಿಂದ ಗುದ್ದಿ ಹಲ್ಲೆ ನಡೆಸಿದ್ದು, ಅದರಿಂದ ಸಾವಾಗಿದೆ ಎಂದು ಎಸ್​ಪಿ ವಿವರಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ: ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ? ಆಘಾತಕಾರಿ ಮಾಹಿತಿ ಬಯಲು

ಬಂಧಿತ ಅಪ್ರಾಪ್ತರ ಗಾಂಜಾ ಸೇವನೆ ಬಗ್ಗೆ ಪರೀಕ್ಷೆ ನಡೆಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ. ಊರುಗಡೂರು ಭಾಗದಲ್ಲಿ ವಿಶೇಷ ಬೀಟ್ ವ್ಯವಸ್ಥೆ ಮಾಡಲಾಗಿದ್ದು, ಔಟ್‌ಪೋಸ್ಟ್ ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಈ ದುರ್ಘಟನೆ ಜಿಲ್ಲೆಯಲ್ಲಿ ಆತಂಕ ಉಂಟುಮಾಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅರೆಬೆತ್ತಲೆ ಪ್ರತಿಭಟನೆಗೆ ಖರ್ಗೆ ಸಮರ್ಥನೆ: ದೇಶದ ಹಿತಕ್ಕಾಗಿ ಪ್ರೊಟೆಸ್ಟ್​​​​ ಎಂದ AICC ಅಧ್ಯಕ್ಷ – Kannada News | Mallikarjun Kharge Defends Youth Congress Protest at AI Summit: Condemns Arrests

ಮಲ್ಲಿಕಾರ್ಜುನ ಖರ್ಗೆImage Credit source: Tv9 Kannada

ಬೆಂಗಳೂರು, ಫೆಬ್ರವರಿ 24: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಸಭಾಂಗಣದೊಳಗೆ ಶರ್ಟ್ ಬಿಚ್ಚಿ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಯೂತ್​ ಕಾಂಗ್ರೆಸ್​ ಮುಖಂಡರ ಬಂಧನವನ್ನು ಖಂಡಿಸುತ್ತೇನೆ ಎಂದಿರುವ ಖರ್ಗೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ. ದೇಶದ ಹಿತಕ್ಕಾಗಿ ಇಂತಹ ಪ್ರೊಟೆಸ್ಟ್​​ಗಳು ಆಗುತ್ತವೆ ಎಂದು ಹೇಳಿದ್ದಾರೆ. ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ನಡೆಯನ್ನು ಕೆಲ ಕಾಂಗ್ರೆಸ್​​ ನಾಯಕರೇ ಖಂಡಿಸಿರುವ ನಡುವೆ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ ಹುಬ್ಬೇರುವಂತೆ ಮಾಡಿದೆ.

ಖರ್ಗೆ ಕಿಡಿ


ಕಾಮನ್ ವೆಲ್ತ್ ಗೇಮ್​​ ವೇಳೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿರಲಿಲ್ವಾ? ಯೂತ್​​ ಕಾಂಗ್ರೆಸ್​​ನವರು ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರೊಟೆಸ್ಟ್​​ ನಡೆಸಿದ್ದಾರೆ. ಯೂತ್​ ಕಾಂಗ್ರೆಸ್​ ಪ್ರತಿಭಟನೆ ಬಗ್ಗೆ ಮೋದಿ ಮಾತನಾಡಿರುವು ಮತ್ತು ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಖಂಡಿಸೋದಾಗಿ ಖರ್ಗೆ ಹೇಳಿದ್ದಾರೆ. ಅಲ್ಲದೆ, ಅಮೆರಿಕ ಅಧ್ಯಕ್ಷ ಟ್ರಂಪ್​ ಹೇಳಿದ್ದನ್ನು ಪ್ರಧಾನಿ ಮೋದಿ ಕೇಳುತ್ತಿದ್ದು, ಅವರು ಸರೆಂಡರ್ ಆಗಿದ್ದಾರೆ ಅಂತಲೂ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಜಗತ್ತಿನ ಮುಂದೆ ಬೆತ್ತಲಾದ ಕಾಂಗ್ರೆಸ್; ಎಐ ಸಮಿಟ್​ನಲ್ಲಿ ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಹಲವರ ಅಸಮಾಧಾನ

ಶಿಸ್ತಿನ ಪಾಠ ಮಾಡಿದ್ದ ‘ಕೈ’ ನಾಯಕಿ

ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ವರ್ತನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿ ವಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದ ನಡುವೆ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಸ್ವಪಕ್ಷ ಕಾರ್ಯಕರ್ತರ ನಡೆಯನ್ನು ಖಂಡಿಸಿದ್ದರು. ಕಾರ್ಯಕರ್ತರಿಗೆ ಶಿಸ್ತಿನ ಪಾಠ ಮಾಡಿದ್ದ ಅವರು, ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಶಿಸ್ತು ಮತ್ತು ಸಭ್ಯತೆ ಅತ್ಯಂತ ಮುಖ್ಯ ಎಂದು ಹೇಳಿದ್ದಿದ್ದು ದೊಡ್ಡ ಸುದ್ದಿಯಾಗಿತ್ತು.

ಅಂದು ನಡೆದಿದ್ದೇನು?

ಭಾರತ್ ಮಂಟಪಂನಲ್ಲಿ ನಡೆದ ಎಐ ಶೃಂಗಸಭೆಯ ಸಂದರ್ಭ ಯುವ ಕಾಂಗ್ರೆಸ್ಸಿನ 10 ಮಂದಿ ನಾಯಕರು ಏಕಾಏಕಿ ತಾವು ತೊಟ್ಟಿದ್ದ ಶರ್ಟನ್ನು ಕಳಚಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.  ‘ಪ್ರಧಾನಿ ಮೋದಿ ರಾಜಿ ಮಾಡಿಕೊಂಡಿದ್ದಾರೆ’ ಎಂಬ ಸ್ಲೋಗನ್ ಹೊಂದಿರುವ ಟಿ-ಶರ್ಟ್‌ಗಳನ್ನು ಕೈಯಲ್ಲಿ ಹಿಡಿದು ಬೀಸುವ ಮೂಲಕ, ಜನರ ಗಮನ ಸೆಳೆಯುವ ಯತ್ನ ನಡೆದಿತ್ತು. ನೇಪಾಳದ ಜೆನ್‌ ಝಿ ಪ್ರತಿಭಟನೆಯಿಂದ ಪ್ರೇರಿತರಾದ ಕಾಂಗ್ರೆಸ್ ಕಾರ್ಯಕರ್ತರು ಎಐ ಶೃಂಗಸಭೆಯಲ್ಲಿ ಗಲಭೆ ಸೃಷ್ಟಿಸಲು ಪಿತೂರಿ ನಡೆಸಿದ್ದರು ಎಂಬ ವಿಚಾರ ಪೊಲೀಸ್ ತನಿಖೆ ವೇಳೆ ಬಯಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 12:40 pm, Tue, 24 February 26

Source link

ಯಶ್ ‘ಟಾಕ್ಸಿಕ್’ ಕಲೆಕ್ಷನ್ ಪ್ಲ್ಯಾನ್ ಹೇಗಿದೆ? ವಾರಕ್ಕೆ ಎಷ್ಟಾಗುತ್ತದೆ ಗಳಿಕೆ? – Kannada News | Yash starrer Toxic movie Box office prediction here is the calculation

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಮಾರ್ಚ್ 19ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಬಿಡುಗಡೆ ಹಕ್ಕು ಮಾರಾಟ, ಡಿಜಿಟಲ್ ಹಕ್ಕು ಮಾರಾಟ ಇನ್ನಿತರೆಗಳನ್ನು ಇತ್ತೀಚೆಗಷ್ಟೆ ಚಿತ್ರತಂಡ ಮುಗಿಸಿದೆ. ‘ಟಾಕ್ಸಿಕ್’ ಸಿನಿಮಾದ ಪ್ರಚಾರಕ್ಕಾಗಿ ಯಶ್ ಇನ್ನೂ ಹೊರಬಂದಿಲ್ಲ ಆದರೂ ಸಹ ಈಗಾಗಲೇ ‘ಟಾಕ್ಸಿಕ್’ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿದೆ. ಪ್ರಚಾರವನ್ನು ಇನ್ನೂ ಆರಂಭಿಸದಿದ್ದರೂ ಸಹ ಸಿನಿಮಾದ ಯಶಸ್ಸಿಗೆ ದೊಡ್ಡ ಯೋಜನೆಯನ್ನೇ ಯಶ್ ಹಾಕಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಕೇವಲ ಒಂದು ವಾರದಲ್ಲೆ ಅಷ್ಟೂ ಬಜೆಟ್ ರಿಕವರಿ ಮಾಡಿ ದೊಡ್ಡ ಲಾಭವನ್ನೂ ಸಹ ದುಡಿದುಕೊಳ್ಳುವಂತೆ ಪ್ಲ್ಯಾನ್ ಮಾಡಿದ್ದಾರೆ.

‘ಟಾಕ್ಸಿಕ್’ ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಅನ್ನು ಯಶ್ ಮತ್ತು ಕೆವಿಎನ್ ಅವರು ಅದ್ಧೂರಿಯಾಗಿ ಮಾಡಿದ್ದಾರೆ. ‘ಧುರಂಧರ್ 2’ ಸಿನಿಮಾ ಎದುರಾಳಿಯಾಗಿ ಬರುತ್ತಿದ್ದರೂ ಸಹ ‘ಟಾಕ್ಸಿಕ್’ ಸಿನಿಮಾವನ್ನು ಸುಮಾರು 5000 ದಿಂದ 6000 ಸ್ಕ್ರೀನ್​​ಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿರುವುದು ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಮೇಲೆ ಭಾರಿ ದೊಡ್ಡ ಪರಿಣಾಮ ಬೀರಲಿದೆ. ‘ಧುರಂಧರ್ 2’ ಸಿನಿಮಾ ಇನ್ನೂ ಪ್ರೀ ರಿಲೀಸ್ ಅಥವಾ ಇನ್ನಿತರೆ ಯೋಜನೆ ಪ್ರಾರಂಭಿಸುವ ಮುನ್ನವೇ ‘ಟಾಕ್ಸಿಕ್’ ಸಿನಿಮಾ ಚಿತ್ರಮಂದಿರಗಳ ಬುಕಿಂಗ್ ವರೆಗೂ ಕೆಲಸ ಮುಗಿಸಿರುವುದು ಸಿನಿಮಾಕ್ಕೆ ಭಾರಿ ದೊಡ್ಡ ಮುನ್ನಡೆಯನ್ನು ಧಕ್ಕಿಸಿಕೊಟ್ಟಂತಾಗಿದೆ.

ಕಲೆಕ್ಷನ್ ಪ್ರಿಡಿಕ್ಷನ್ ವಿಚಾರಕ್ಕೆ ಬರುವುದಾದರೆ ಲೆಕ್ಕ ಸುಲಭವಿದೆ. ಚಿತ್ರತಂಡ 6000 ಸ್ಕ್ರೀನ್​​ಗಳಲ್ಲಿ ಏಕಕಾಲಕ್ಕೆ ಸಿನಿಮಾ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದೆ. ಒಂದೊಮ್ಮೆ ಕನಿಷ್ಟ 5000 ಸ್ಕ್ರೀನ್​​ಗಳಲ್ಲಿ ಬಿಡುಗಡೆ ಆದರೂ ಸಹ ಭಾರಿ ದೊಡ್ಡ ಮೊತ್ತವನ್ನೇ ಸಿನಿಮಾ ಗಳಿಸಿಕೊಳ್ಳಲಿದೆ. ಅದರ ಲೆಕ್ಕಾಚಾರ ಇಲ್ಲಿದೆ, ಒಂದು ಸ್ಕ್ರೀನ್​​ನಲ್ಲಿ ಸರಾಸರಿ 250 ಮಂದಿ ಸಿನಿಮಾ ನೋಡುತ್ತಾರೆ. ಒಂದು ಟಿಕೆಟ್​ನ ಸರಾಸರಿ ಬೆಲೆ ಕೇವಲ 200 ರೂಪಾಯಿಗಳು (ಅಸಲು ಬೆಲೆ ಇನ್ನೂ ಹೆಚ್ಚೇ ಇರಲಿದೆ) ಎಂದು ಲೆಕ್ಕ ಹಾಕಿಕೊಂಡರೆ ಒಂದು ಸ್ಕ್ರೀನಿನ ಒಂದು ಶೋಗೆ ಒಟ್ಟಾಗುವ ಮೊತ್ತ 50,000 ರೂಪಾಯಿಗಳು. ಅಲ್ಲಿಗೆ 5000 ಸ್ಕ್ರೀನ್​​ಗಳಿಗೆ ಒಂದು ಶೋಗೆ ಕಲೆಕ್ಟ್ ಆಗುವ ಮೊತ್ತ 25 ಕೋಟಿ ರೂಪಾಯಿಗಳು. ಅಲ್ಲಿಗೆ 5000 ಸ್ಕ್ರೀನ್​​ಗಳಲ್ಲಿ ದಿನಕ್ಕೆ ನಾಲ್ಕು ಶೋ ಮಾತ್ರವೇ ನಡೆದರೂ ಸಹ ದಿನದ ಗಳಿಕೆ 100 ಕೋಟಿ ರೂಪಾಯಿಗಳಾಗುತ್ತವೆ. ನೆನಪಿರಲಿ ಯಶ್ ಅವರ ‘ಕೆಜಿಎಫ್ 2’ ಸಿನಿಮಾ ಮೊದಲ ದಿನ 132 ಕೋಟಿಗೂ ಹೆಚ್ಚು ಗಳಿಕೆ ಮಾಡಿತ್ತು. ‘ಟಾಕ್ಸಿಕ್’ ಸಿನಿಮಾ ಅದಕ್ಕಿಂತಲೂ ಹೆಚ್ಚಿನ ಗಳಿಕೆಯನ್ನೇ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ:ಯಶ್ ‘ಟಿಕೆಟ್’ ಲುಕ್ ಎಐ ಎಂದವರಿಗೆ ಸಿಕ್ತು ಉತ್ತರ; ಯಶ್ ಮೇಕೋವರ್ ನೋಡಿ

‘ಟಾಕ್ಸಿಕ್’ ಸಿನಿಮಾಕ್ಕೆ ಸುಮಾರು 500 ಕೋಟಿ ರೂಪಾಯಿ ಬಜೆಟ್ ಹಾಕಲಾಗಿದೆ ಎನ್ನಲಾಗುತ್ತಿದೆ. ಆದರೆ ಈ ಹಣ ಕೇವಲ ಮೂರು-ನಾಲ್ಕು ದಿನಗಳಲ್ಲೇ ಮರಳಿ ಬರಲಿದೆ. ಯಶ್​​ ಅವರ ಕ್ರೇಜ್ ಅದ್ಯಾವ ಮಟ್ಟಿಗಿದೆಯೆಂದರೆ ಮೊದಲ ಮೂರು ದಿನ ಸಿನಿಮಾ ಚೆನ್ನಾಗಿಲ್ಲವೆಂದರೂ ಹೌಸ್​​ಫುಲ್ ಆಗುವುದು ಪಕ್ಕಾ. ಅದು ಮಾತ್ರವೇ ಅಲ್ಲದೆ, ಸಿನಿಮಾದ ಆಡಿಯೋ ಹಕ್ಕುಗಳು, ಡಿಜಿಟಲ್ ಹಕ್ಕುಗಳು ಹಿಂದೆಂದೂ ಕೇಳಿರದ ಭಾರಿ ಮೊತ್ತಕ್ಕೆ ಮಾರಾಟ ಆಗುತ್ತಿವೆ. ಅಲ್ಲಿಗೆ ಸಿನಿಮಾದ ಒಟ್ಟು ಗಳಿಕೆ ಸುಲಭವಾಗಿ 1500 ಕೋಟಿ ದಾಟುವುದು ಖಾತ್ರಿ. ಒಂದೊಮ್ಮೆ ಸಿನಿಮಾ ಆವರೇಜ್​​ಗಿಂತಲೂ ತುಸುವೇ ಚೆನ್ನಾಗಿದ್ದರೂ ಸಾಕು ‘ದಂಗಲ್’, ‘ಬಾಹುಬಲಿ 2’ ದಾಖಲೆಗಳು ಸಹ ಮುರಿದು ಬೀಳುವುದು ಖಾತ್ರಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version