ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ನಿಂದ ಸೈಕಲ್ ಜಾಥಾ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ – Kannada News | Youth Congress Cycle Rally in Bengaluru Protests NEET UG Paper Leak, Demands Education Ministers Resignation
ಬೆಂಗಳೂರು, ಜುಲೈ 12: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬೆಂಗಳೂರಿನಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದಿಂದ ಬೃಹತ್ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಕೆಪಿಸಿಸಿ ಕಚೇರಿಯಿಂದ ಕೆ.ಆರ್. ಸರ್ಕಲ್, ಆನಂದರಾವ್ ವೃತ್ತದವರೆಗೆ ಈ ಜಾಥಾ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರು ಸೈಕಲ್ ತುಳಿಯುವ ಮೂಲಕ ಜಾಥಾಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಪ್ರತಿಭಟನೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಹಲವು ಪ್ರಮುಖರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ…