SA vs WI: ವಿಂಡೀಸ್ ಮಣಿಸಿ ಸೆಮಿಫೈನಲ್ಗೇರಿದ ಆಫ್ರಿಕಾ; ನಿಟ್ಟುಸಿರು ಬಿಟ್ಟ ಟೀಂ ಇಂಡಿಯಾ
ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್ನ ಸೂಪರ್ 8 ಸುತ್ತಿನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಸುತ್ತಿನಲ್ಲಿ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿತ್ತು. ಮೊದಲ ಪಂದ್ಯದಲ್ಲಿ ಎರಡು ತಂಡಗಳು ಗೆಲುವು ಸಾಧಿಸಿದ್ದರಿಂದ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ನಲ್ಲಿ ಸ್ಥಾನ ಖಚಿತವಾಗುತ್ತಿತ್ತು. ಹೀಗಾಗಿ ಉಭಯ ತಂಡಗಳ ನಡುವೆ ನಡೆದ ಈ ಪಂದ್ಯವನ್ನು ದಕ್ಷಿಣ ಆಫ್ರಿಕಾ ತಂಡ ಏಕಪಕ್ಷೀಯವಾಗಿ ಗೆದ್ದುಕೊಳ್ಳುವ ಮೂಲಕ ಸೆಮಿಫೈನಲ್ ಟಿಕೆಟ್ ಪಡೆದುಕೊಂಡಿತು….