ನೋಟು ಹಾಳಾಗುವ ಭಯ ಬೇಡ; ಕಾಗದದ ಬದಲು ಪಾಲಿಮರ್ ನೋಟು ಮುದ್ರಿಸಲು ಸರ್ಕಾರದ ಆಲೋಚನೆ
ನವದೆಹಲಿ, ಮೇ 29: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂಪ್ರದಾಯಿಕ ಕಾಗದದ ನೋಟುಗಳ ಬದಲಿಗೆ ಪ್ಲಾಸ್ಟಿಕ್ ಅಥವಾ ಪಾಲಿಮರ್ ಬ್ಯಾಂಕ್‌ನೋಟುಗಳನ್ನು (Polymer Banknotes) ಪರಿಚಯಿಸಲು ಗಂಭೀರ ಚಿಂತನೆ ನಡೆಸಿದೆ. ನೋಟು ಮುದ್ರಣದ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ನಕಲಿ ನೋಟುಗಳ ಹಾವಳಿಗೆ ಬ್ರೇಕ್ ಹಾಕುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಆರಂಭದಲ್ಲಿ ದೇಶದ ಐದು ಆಯ್ದ ನಗರಗಳಲ್ಲಿ (ವಿವಿಧ ಹವಾಮಾನ ವಲಯಗಳನ್ನು ಆಧರಿಸಿ) ₹10 ಮುಖಬೆಲೆಯ ಪಾಲಿಮರ್ ನೋಟುಗಳನ್ನು ಪ್ರಾಯೋಗಿಕವಾಗಿ (Pilot Project) ಚಲಾವಣೆಗೆ…