ಕೋರ್ಟ್ನಲ್ಲೇ ವಾಮಾಚಾರ ನಡೆಸಿದ ಆರೋಪ: 65 ವರ್ಷದ ಮಹಿಳೆ ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು – Kannada News | 65 Year Old Woman Arrested for Performing Black Magic on Judge’s Chair Inside Court Hall
ಕೋರ್ಟ್ನಲ್ಲೇ ವಾಮಾಚಾರ ನಡೆಸಿದ ಆರೋಪ: ಮಹಿಳೆ ಅರೆಸ್ಟ್Image Credit source: ANI ಚಿಕ್ಕಬಳ್ಳಾಪುರ, ಜುಲೈ 14: ನ್ಯಾಯಾಧೀಶರ ಕುರ್ಚಿಯ ಮೇಲೆ ವಾಮಾಚಾರ ನಡೆಸಿದ ಆರೋಪದಡಿ 65 ವರ್ಷದ ಮಹಿಳೆಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಕೋರ್ಟ್ ಹಾಲ್‌ಗೆ ಪ್ರವೇಶಿಸಿದ್ದ ಈಕೆ, ನ್ಯಾಯಾಧೀಶರ ಕುರ್ಚಿಯ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಕಾಳುಗಳನ್ನು ಎರಚಿದ್ದಾಳೆ ಎನ್ನಲಾಗಿದೆ. ಆರೋಪಿ ಮಹಿಳೆಗೆ 14 ದಿನ ನ್ಯಾಯಾಂಗ…