ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಿಸಿ ಸರ್ಕಾರ ಆದೇಶ, ಎಷ್ಟು ಹೆಚ್ಚಳ? ಯಾವಾಗಿನಿಂದ ಜಾರಿಗೆ? – Kannada News | Karnataka Government Hikes transport employees Salary, Effect From July 2026
ಬೆಂಗಳೂರು,ಜುಲೈ 02): ರಾಜ್ಯ ಸರ್ಕಾರ (Karnataka Government) ಸಾರಿಗೆ ನೌಕರರಿಗೆ (Transport Employees) ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ತಿಂಗಳಿನಿಂದಲೇ KSRTC, BMTC, NWKRTC, KKRTC ಸಿಬ್ಬಂದಿಯ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದ್ದು, 2025ರ ಮಾರ್ಚ್ 31ರ ಮೂಲ ವೇತನದ ಮೇಲೆ ಅನ್ವಯವಾಗಲಿದೆ. ಇನ್ನು 2026ರ ಜುಲೈ 1ರ ವೇತನದಲ್ಲಿ ಜಾರಿಗೆ ಬರುವಂತೆ ಆದೇಶಿಸಿದೆ. ಇದು 1.05 ಲಕ್ಷ ಸಿಬ್ಬಂದಿಗೆ ಅನುಕೂಲವಾಗಲಿದ್ದು, ಇದರಿಂದ ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80…