Headlines

IND vs ENG: ಲಾರ್ಡ್ಸ್ ಏಕದಿನ ಪಂದ್ಯಕ್ಕೂ ಮುನ್ನ ಭಾರತ ತಂಡದಲ್ಲಿ ಬದಲಾವಣೆ – Kannada News | Washington Sundar OUT! Harsha Dubey Replaces for Final India vs England ODI

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯಕ್ಕೂ ಮೊದಲು, ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಗಾಯದಿಂದ ಬಳಲುತ್ತಿರುವ ತಂಡದ ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ (Washington Sundar) ಕೊನೆಯ ಏಕದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಬದಲಿಗೆ ಯುವ ಸ್ಪಿನ್ ಆಲ್‌ರೌಂಡರ್ ಹರ್ಷ್ ದುಬೆ (Harsha Dubey) ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಉಭಯ ತಂಡಗಳ ನಡುವೆ ನಡೆದಿದ್ದ ಮೂರನೇ ಏಕದಿನ ಪಂದ್ಯದ ವೇಳೆ ಸುಂದರ್ ಗಾಯಕ್ಕೆ ತುತ್ತಾಗಿದ್ದರು. ಇದರಿಂದಾಗಿ ಅವರು…

Read More

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಆಟಗಾರನ ಜೊತೆ ಕಾಲ್ಕೆರೆದು ಜಗಳಕ್ಕಿಳಿದ ಜೆಕೆ ನಾಯಕ – Kannada News | Ranji Final Shocker: Paras Dogra and Aneesh KV’s On Field Fight. Karnataka vs J&K Drama

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2025- 26ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಎರಡನೇ ದಿನದಾಟದಂದು ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಮತ್ತು ಕರ್ನಾಟಕದ ಫೀಲ್ಡರ್ ಅನೀಶ್ ಕೆವಿ ಮೈದಾನದಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ, ಜೆಕೆ ನಾಯಕ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಚ್ಚಿ ಹೊಡೆದಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್,…

Read More

ಅಮೆರಿಕ ಅಧ್ಯಕ್ಷರ ಮೇಲೆ ಭೀಕರ ದಾಳಿಗೆ ಸ್ಕೆಚ್: ‘ಪ್ರಣಾಳಿಕೆ’ ಮೂಲಕ ಹೊರಬಿತ್ತು ಭಯಾನಕ ಸಂಚು – Kannada News | Trump Assassination Plot Foiled: White House Attack Plan Revealed in Manifesto

ವಾಷಿಂಗ್ಟನ್,ಏಪ್ರಿಲ್ 27: ಶ್ವೇತಭವನದ ವರದಿಗಾರರ ಭೋಜನಕೂಟ ನಡೆಯುತ್ತಿದ್ದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಸೇರಿದಂತೆ 2,500ಕ್ಕೂ ಹೆಚ್ಚು ಗಣ್ಯರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿಯನ್ನು ಭದ್ರತಾ ಪಡೆಗಳು ಬಂಧಿಸಿವೆ. ಕ್ಯಾಲಿಫೋರ್ನಿಯಾ ಮೂಲದ 31 ವರ್ಷದ ಕೋಲ್ ಥಾಮಸ್ ಅಲೆನ್ ಎಂಬಾತನೇ ಈ ಸಂಚಿನ ರೂವಾರಿ. ದಾಳಿ ನಡೆಸುವ ಕೇವಲ 10 ನಿಮಿಷಗಳ ಮೊದಲು ಆರೋಪಿ ಅಲೆನ್ ತನ್ನ ಕುಟುಂಬದವರಿಗೆ ಟ್ರಂಪ್ ವಿರೋಧಿ ಪ್ರಣಾಳಿಕೆ ಎಂಬ ದಾಖಲೆಯನ್ನು ಕಳುಹಿಸಿದ್ದ. ಇದರಲ್ಲಿ ಆತ ಅಧ್ಯಕ್ಷ…

Read More

ಸಿಎಸ್​​ಕೆಗೆ ದುಸ್ವಪ್ನವಾದ ಜಡೇಜಾ; ವಿಕೆಟ್ ತೆಗೆದು ಗನ್ ಶಾಟ್ ಸೆಲೆಬ್ರೇಷನ್

ರವೀಂದ್ರ ಜಡೇಜಾ ಅವರಿಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ಅವಿನಾಭಾವ ಸಂಬಂಧ ಇತ್ತು. ಜಡೇಜಾ ಎಂದರೆ ನೆನಪಾಗುತ್ತಿದ್ದುದು ಸಿಎಸ್​​ಕೆ. ಆದರೆ, ಸಿಎಸ್​​ಕೆ ತಂಡ ಸಂಜು ಸ್ಯಾಮ್​​ಸನ್ ಅವರನ್ನು ಖರೀದಿ ಮಾಡಲು ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬಿಟ್ಟುಕೊಟ್ಟಿತು. ಈ ವಿಷಯ ಜಡೇಜಾಗೆ ನೋವು ತರಿಸಿದ್ದಿರಬಹುದು. ಹೀಗಾಗಿ, ಸಿಎಸ್​​ಕೆ ವಿರುದ್ಧ ಮಾರಕ ಬೌಲಿಂಗ್ ದಾಳಿ ಮಾಡಿ, ಎರಡು ವಿಕೆಟ್ ಪಡೆದು ಅವರು ಭರ್ಜರಿ ಸೆಲೆಬ್ರೇಷನ್ ಮಾಡಿದರು. ಮೂರು ಓವರ್ ಎಸೆದ ಜಡೇಜಾ, ಎರಡು ವಿಕೆಟ್ ಕಿತ್ತು…

Read More

ನೀನೆಂಥಾ ಕಳ್ಳ ಮಾರಾಯಾ: ಕದಿಯಲು ಹೋಗಿ ಶೆಟರ್​ನಲ್ಲಿ ತಲೆ ಸಿಕ್ಕಿಸಿಕೊಂಡ ಕಳ್ಳ – Kannada News | Theft Gone Wrong: Burglar Gets Trapped in Shop Shutter Mid Break In

ಲಕ್ನೋ, ಏಪ್ರಿಲ್ 14: ಕಳ್ಳನೊಬ್ಬ ಕಳ್ಳತನ ಮಾಡಿ ಓಡಿ ಹೋಗುವಾಗ ಶೆಟರ್ ಹಾಗೂ ಗೋಡೆಯ ಮಧ್ಯದಲ್ಲಿ ತಲೆ ಸಿಕ್ಕಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಇಂದಿರಾಪುರಂ ಪ್ರದೇಶದ ಅಭಯ್ ಖಾಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಳ್ಲನೊಬ್ಬ ಹೃದ್ರೋಗ ತಜ್ಞರ ಚಿಕಿತ್ಸಾಲಯದ ಮೇಲ್ಛಾವಣಿಯ ಮೂಲಕ ಪ್ರವೇಶಿಸಲು ಪ್ರಯತ್ನಿಸಿದ್ದಾನೆ. ಹಿಂದೆ ಬರಲೂ ಆಗದೆ ಮುಂದೆ ಹೋಗಲೂ ಆಗದೆ ಫಜೀತಿ ಅನುಭವಿಸಿದ್ದಾನೆ.ಆತ ಕೂಗಿಕೊಂಡಾಗ ನಿಕ್ ಸಿಬ್ಬಂದಿ ವಿಷಯ ಗೊತ್ತಾಗಿತ್ತು. ಪೊಲೀಸರಿಗೆ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸುವುದು ಕೂಡ ಕಷ್ಟದ ಕೆಲಸವಾಗಿತ್ತು….

Read More

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್ – Kannada News | CM DK Shivakumar Meets Nirmalanandanatha Swamiji in Bengalurus Vijayanagara, Adichunchanagiri Math Branch

ಬೆಂಗಳೂರು, ಜೂನ್ 23: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಸೋಮವಾರ ರಾತ್ರಿ ಭೇಟಿಯಾದರು. ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ರವಿ ಗಣಿಗ ಸಹ ಸಿಎಂ ಅವರೊಂದಿಗೆ ಸ್ವಾಮೀಜಿಗಳ ಭೇಟಿಯಾದರು. ಈ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಸಿಎಂ ಜೊತೆ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇವೆ ಅಷ್ಟೆ ಎಂದು ರವಿ ಗಣಿಗ ಹೇಳಿದ್ದಾರೆ. ಸ್ವಾಮೀಜಿಗಳನ್ನು ಭೇಟಿ ಮಾಡಿ ಬಹಳ ದಿನಗಳಾಗಿತ್ತು. ಅದಕ್ಕಾಗಿ ಸಿಎಂ ಜೊತೆ ಬಂದು ಶ್ರೀಗಳನ್ನು…

Read More

ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ! – Kannada News | Drought vs Determination: Elderly Bidar Couple Inspires by Re sowing Crop Despite Failure

ಬೀದರ್, ಜುಲೈ 18: ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹಳ್ಳಿಕೇಡ್ ಗ್ರಾಮದಲ್ಲಿ ವೃದ್ಧ ದಂಪತಿಗಳಾದ ತಿಪ್ಪಣ್ಣ ಮತ್ತು ಗಂಗಮ್ಮ ಅವರು ತೀವ್ರ ಬರಗಾಲದ ನಡುವೆಯೂ ತಮ್ಮ ಹೊಲದಲ್ಲಿ ಮರುಬಿತ್ತನೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ದಂಪತಿಗಳು ತಮ್ಮ ಹೊಟ್ಟೆಪಾಡಿಗಾಗಿ ಸಣ್ಣ ತುಂಡುಭೂಮಿಯನ್ನೇ ನಂಬಿಕೊಂಡಿದ್ದಾರೆ. ದೊಡ್ಡ ಜಮೀನು ಇಲ್ಲದ ಇವರು, ಪ್ರಸ್ತುತ ಮಳೆ ಕೊರತೆ ಮತ್ತು ಬೆಳೆ ವೈಫಲ್ಯದ ಹೊರತಾಗಿಯೂ ಮತ್ತೆ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಗಂಗಮ್ಮ ಅವರು ತಮ್ಮ ಪತಿ ತಿಪ್ಪಣ್ಣ ಅವರಿಗೆ ಹೆಗಲು ಕೊಟ್ಟು ಜಮೀನಿನಲ್ಲಿ…

Read More

ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ? ಬೀದಿಗೆ ಬೀಳುವ ಭಯದಲ್ಲಿ ಕುಟುಂಬ

ಗದಗ, ಜ.11: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆಯಾದ ಘಟನೆ ಇದೀಗ ಹೊಸದೊಂದು ಸಮಸ್ಯೆಗೆ ಕಾರಣವಾಗಿದೆ. ಪ್ರಾಮಾಣಿಕತೆ ಮೆರೆದ ಕುಟುಂಬ ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರೂ, ಈಗ ಆ ಕುಟುಂಬಕ್ಕೆ ಭಯ ಮತ್ತು ಆತಂಕ ಶುರುವಾಗಿದೆ. ನಿಧಿ ಸಿಕ್ಕಿದ ಸ್ಥಳವನ್ನು ನಿಷಿದ್ಧ ಪ್ರದೇಶವೆಂದು ಘೋಷಿಸಿರುವ ಕಾರಣ, ಅವರು ಕಟ್ಟುತ್ತಿದ್ದ ಮನೆ ಅರ್ಧಕ್ಕೆ ನಿಂತಿದೆ. ಹೀಗಾಗಿ, ವಾಸಕ್ಕೆ ಮನೆಯಿಲ್ಲದೆ ಕುಟುಂಬ ಬೀದಿಗೆ ಬಂದಂತಾಗಿದ್ದು, ಎಲ್ಲಿ ಬದುಕು ಸಾಗಿಸಬೇಕು ಎಂಬ ಚಿಂತೆಯಲ್ಲಿದೆ. ಮನೆಯ ಯಜಮಾನ…

Read More

IND vs ENG: ವೈಭವ್​ಗೆ ಅವಕಾಶ ಸಿಗುತ್ತಾ? 2ನೇ ಟಿ20 ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? – Kannada News | India vs England 2nd T20: Probable XI, Key Changes and Match Preview

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಶನಿವಾರ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಈಗಾಗಲೇ ಆತಿಥೇಯ ಇಂಗ್ಲೆಂಡ್‌ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಅದರಂತೆ ಎರಡನೇ ಪಂದ್ಯಕ್ಕೆ ಇಂಗ್ಲೆಂಡ್‌ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ಆದರೆ ಟೀಂ ಇಂಡಿಯಾದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಏಕೆಂದರೆ ಮಳೆಯಿಂದಾಗಿ ಮೊದಲ ಟಿ20 ಪಂದ್ಯ ಪೂರ್ಣಗೊಳ್ಳಲಿಲ್ಲ. ಅದಾಗ್ಯೂ ಭಾರತ ತಂಡಕ್ಕೆ ಬ್ಯಾಟಿಂಗ್‌ ಮಾಡುವ…

Read More

ನಿತ್ಯ ಭವಿಷ್ಯ: ಯಾರಿಗೆ ಹೊಸ ಉದ್ಯೋಗದ ಶುಭ ಯೋಗ? ಸಾಲದ ಹಣ ವಾಪಸ್ ಬರದೇ ಆತಂಕಪಡುವವರಿಗೆ ಶುಭ ಸುದ್ದಿ – Kannada News

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ನವಮೀ ತಿಥಿಯ ಮಂಗಳವಾರದಂದು ಬಂಧನದ ಅನುಭವ, ಹೊಸ ಉದ್ಯೋಗ, ಶಿಕ್ಷೆಯ ಭಯ, ಪ್ರೀತಿಯಲ್ಲಿ ವಿವಾದ, ಹಿಂಪಡೆವ ಹೂಡಿಕೆ ಇವೆಲ್ಲ ಈ‌ ದಿನದ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ…

Read More