ಹಿರಿಯೂರು ಬೈಎಲೆಕ್ಷನ್ ಅಖಾಡ ರಂಗು: ಜೆಡಿಎಸ್‌ನಿಂದ ಅಭ್ಯರ್ಥಿ ಕಣಕ್ಕಿಳಿಸಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್; ದಿವಂಗತ ಸುಧಾಕರ್ ಪುತ್ರನಿಗೆ ಟಿಕೆಟ್ಗೆ ಒತ್ತಡ – Kannada News | JDS Strategy for Hiriyur By poll; Sudhakar Son’s Congress Ticket Demand Gains Momentum
ಹಿರಿಯೂರು ಜು. 2: ಮಾಜಿ ಸಚಿವ ಡಿ. ಸುಧಾಕರ್ ಅವರ ಹಠಾತ್ ನಿಧನದಿಂದ ತೆರವಾಗಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡ ಅಧಿಕೃತ ಘೋಷಣೆಗೂ ಮುನ್ನವೇ ಭರ್ಜರಿ ರಾಜಕೀಯ ಚಟುವಟಿಕೆಗಳನ್ನು ಶುರುವಾಗಿದೆ. ಒಂದೆಡೆ ಮೈತ್ರಿಕೂಟದ ಪರವಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೆರೆಮರೆಯ ಕೊನೆಹಂತದ ಕಸರತ್ತು ನಡೆಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ದಿವಂಗತ ಸುಧಾಕರ್ ಅವರ ಪುತ್ರನಿಗೆ ಟಿಕೆಟ್ ನೀಡಬೇಕೆಂಬ ಒತ್ತಡ ತೀವ್ರಗೊಂಡಿದೆ. ಸಚಿವ ಸುಧಾಕರ್ ನಿಧನದಿಂದ ತೆರವಾದ ಹಿರಿಯೂರು ಕ್ಷೇತ್ರವನ್ನು…