Vaibhav Sooryavanshi: 400 ರನ್ ಗಳಿಸಿ ಆರೆಂಜ್ ಕ್ಯಾಪ್ ವಶಪಡಿಸಿಕೊಂಡ ವೈಭವ್ ಸೂರ್ಯವಂಶಿ – Kannada News | Vaibhav Sooryavanshi scores 400 runs to win Orange Cap in IPL 2026 Check purple cap list

ಬೆಂಗಳೂರು (ಏ. 29): ಐಪಿಎಲ್ 2026 ರ 40 ನೇ ಪಂದ್ಯದ ನಂತರ, ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಮತ್ತೊಮ್ಮೆ ದೊಡ್ಡ ಬದಲಾವಣೆಯಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ (Vaibhav Sooryavamshi) ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನ ತಲುಪಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮತ್ತು ಅಭಿಷೇಕ್ ಶರ್ಮಾ ಅವರನ್ನು ಹಿಂದಿಕ್ಕುವ ಮೂಲಕ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ವೈಭವ್ ಸೂರ್ಯವಂಶಿ 9 ಪಂದ್ಯಗಳಲ್ಲಿ 400 ರನ್ ಗಳಿಸಿದ್ದು ಅವರ ಸರಾಸರಿ 44.44. ಈ ಆಟಗಾರನ ಸ್ಟ್ರೈಕ್ ರೇಟ್ 238.09 ಮತ್ತು ಅವರು ಇಲ್ಲಿಯವರೆಗೆ ಒಂದು ಶತಕ ಮತ್ತು ಎರಡು ಅರ್ಧಶತಕಗಳನ್ನು ಗಳಿಸಿದ್ದಾರೆ. ವೈಭವ್ ಸೂರ್ಯವಂಶಿ ಈ ಋತುವಿನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು (37) ಬಾರಿಸಿದ ಆಟಗಾರ ಕೂಡ ಆಗಿದ್ದಾರೆ.

ಇಷ್ಟೇ ಅಲ್ಲದೆ ವೈಭವ್ ಈಗ ಒಂದೇ ಐಪಿಎಲ್ ಸೀಸನ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 400 ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ಅವರು ಈ ಸಾಧನೆ ಮಾಡುವ ಮೂಲಕ ಆಂಡ್ರೆ ರಸೆಲ್ ಅವರ ದಾಖಲೆಯನ್ನೂ ಮುರಿದಿದ್ದಾರೆ. ಈ ಮೂಲಕ ವೈಭವ್ ಈ ಋತುವಿನಲ್ಲಿ ರನ್ ಮೆಷಿನ್ ಆಗಿ ಹೊರಹೊಮ್ಮಿದ್ದಾರೆ.

ಐಪಿಎಲ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 400 ರನ್ ಗಳಿಸಿದ ಆಟಗಾರರು

  • 167 – ವೈಭವ್ ಸೂರ್ಯವಂಶಿ (2026)
  • 188 – ಆಂಡ್ರೆ ರಸೆಲ್ (2019)
  • 195 – ಅಭಿಷೇಕ್ ಶರ್ಮಾ (2024)
  • 197 – ನಿಕೋಲಸ್ ಪೂರನ್ (2025)
  • 200 – ಗ್ಲೆನ್ ಮ್ಯಾಕ್ಸ್‌ವೆಲ್ (2014)

Priyansh Arya: ಪಂಜಾಬ್ ಕಿಂಗ್ಸ್-ರಾಜಸ್ಥಾನ್ ಪಂದ್ಯದ ನಡುವೆ ಹರಿಯಿತು ನೆತ್ತರು: ಇದಕ್ಕೆ ಕಾರಣ ಪ್ರಿಯಾಂಶ್ ಆರ್ಯ

ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

ಅಭಿಷೇಕ್ ಶರ್ಮಾ ಎಂಟು ಪಂದ್ಯಗಳಲ್ಲಿ 380 ರನ್ ಗಳಿಸಿ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಕೆಎಲ್ ರಾಹುಲ್ ಎಂಟು ಪಂದ್ಯಗಳಲ್ಲಿ 358 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಎಂಟು ಪಂದ್ಯಗಳಲ್ಲಿ 351 ರನ್ ಗಳಿಸಿದ್ದಾರೆ. ಹೆನ್ರಿಕ್ ಕ್ಲಾಸೆನ್ 349 ರನ್ ಗಳಿಸಿ ಐದನೇ ಸ್ಥಾನದಲ್ಲಿದ್ದಾರೆ. ಪ್ರಭ್ಸಿಮ್ರಾನ್ ಸಿಂಗ್, ಶುಭ್ಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಕೂಡ ಆರೆಂಜ್ ಕ್ಯಾಪ್ ರೇಸ್‌ನಲ್ಲಿದ್ದಾರೆ.

ಪರ್ಪಲ್ ಕ್ಯಾಪ್ ನಲ್ಲಿ ಭುವನೇಶ್ವರ್ ಕುಮಾರ್​ಗೆ ಅಗ್ರಸ್ಥಾನ

ಆರ್‌ಸಿಬಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಐಪಿಎಲ್ 2026 ರಲ್ಲಿ ಪ್ರಮುಖ ವಿಕೆಟ್ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು ಎಂಟು ಪಂದ್ಯಗಳಲ್ಲಿ 14 ವಿಕೆಟ್‌ಗಳನ್ನು ಕಬಳಿಸಿದ್ದಾರೆ ಮತ್ತು ಪ್ರತಿ ಓವರ್‌ಗೆ ಕೇವಲ 7.6 ರನ್‌ಗಳ ಎಕಾನಮಿ ದರವನ್ನು ಹೊಂದಿದ್ದಾರೆ. ಅವರು ಪ್ರಸ್ತುತ ಪರ್ಪಲ್ ಕ್ಯಾಪ್ ಹೊಂದಿದ್ದಾರೆ. ರಾಜಸ್ಥಾನ್ ರಾಯಲ್ಸ್ ವೇಗದ ಬೌಲರ್ ಜೋಫ್ರಾ ಆರ್ಚರ್ ಕೂಡ 14 ವಿಕೆಟ್‌ಗಳನ್ನು ಹೊಂದಿದ್ದಾರೆ, ಇವರು ಒಂಬತ್ತು ಪಂದ್ಯಗಳನ್ನು ಆಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವೇಗದ ಬೌಲರ್ ಅನ್ಶುಲ್ ಕಾಂಬೋಜ್ ಕೂಡ 14 ವಿಕೆಟ್‌ಗಳನ್ನು ಹೊಂದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವೇಗದ ಬೌಲರ್ ಎಹ್ಸಾನ್ ಮಾಲಿಂಗ ಕೂಡ 14 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Riyan Parag: ಯಾರು ಏನು ಬೇಕಾದ್ರೂ ಹೇಳಲಿ, ಕ್ಯಾರೇ ಮಾಡಲ್ಲ..! – Kannada News | IPL 2026: RR Captain Riyan Parag Hits Back At Critics

ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 222 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 19.2 ಓವರ್​ಗಳಲ್ಲಿ 228 ರನ್​ ಗಳಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ಈ ಟೂರ್ನಿಯ ಆರಂಭದಲ್ಲೇ ನಾವು ಪ್ರತಿ ಪಂದ್ಯವನ್ನು ಕೇವಲ ಒಂದು ‘ಆಟ’ವಾಗಿ ಪರಿಗಣಿಸಲು ನಿರ್ಧರಿಸಿದ್ದೆವು. ಹಿಂದಿನ ಪಂದ್ಯದಲ್ಲಿ ನಾವು ಸೋತಾಗ, ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ ಮುಂದೆ ಸಾಗಿದ್ದೆವು. ಇಂದಿನ ಪಂದ್ಯದಲ್ಲೂ ಅದೇ ಮಾಡಿದ್ದೇವೆ. ಬೌಲಿಂಗ್‌ನಲ್ಲಿ ಪಂಜಾಬ್ ತಂಡವನ್ನು ಇನ್ನೂ ಕಡಿಮೆ ರನ್‌ಗಳಿಗೆ ನಿಯಂತ್ರಿಸಬಹುದಿತ್ತು, ಆದರೆ ಬ್ಯಾಟರ್‌ಗಳು ಆ ಕೊರತೆಯನ್ನು ನೀಗಿಸಿದರು.

ಇದಾಗ್ಯೂ ನಮ್ಮ ತಂಡದ ಸೋತಾಗ ಕೆಲವರು ಕಟುವಾಗಿ ಟೀಕಿಸಿದ್ದಾರೆ. ಆದರೆ ಇಂತಹ ಟೀಕೆಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಹೊರಗಿನ ಟೀಕೆಗಳ ಬಗ್ಗೆ ಯಾವುದೇ ನಮಗೆ ಚಿಂತೆಯಿಲ್ಲ, ಯಾರು ಏನೇ ಹೇಳಿದರೂ ನಮ್ಮ ಪ್ರದರ್ಶನ ನಾವು ನೀಡುತ್ತೇವೆ. ಟೀಕೆಗಳನ್ನು ನಾವು ಗಣನೆಗೆ ತೆಗೆದುಕೊಳ್ಳುವುದಿಲ್ಲ, ಅಂತಹ ಟೀಕೆಗಳಿಗೆ ಕ್ಯಾರೇ ಮಾಡಲ್ಲ ಎಂದು ರಿಯಾನ್ ಪರಾಗ್ ಹೇಳಿದ್ದಾರೆ.

ಈ ಸೀಸನ್​ನಲ್ಲಿ ರಾಜಸ್ಥಾನ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬಗ್ಗೆ ಕೇಳಿಬರುತ್ತಿದ್ದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಪರಾಗ್, ಮಧ್ಯಮ ಕ್ರಮಾಂಕದ ಬಗ್ಗೆ ನಮಗೆ ಯಾವುದೇ ಆತಂಕವಿರಲಿಲ್ಲ. ಆ ಚಿಂತೆಗಳೆಲ್ಲವೂ ಕೇವಲ ಹೊರಗಿನವರಿಗೆ, ಕಾಮೆಂಟೇಟರ್‌ಗಳಿಗೆ ಮತ್ತು ವೀಕ್ಷಕರಿಗೆ ಮಾತ್ರ ಇತ್ತು. ನಮ್ಮ ಆಟಗಾರರ ಸಾಮರ್ಥ್ಯದ ಮೇಲೆ ನಮಗೆ ಅಪಾರ ನಂಬಿಕೆಯಿದೆ. ಅಗ್ರ ಕ್ರಮಾಂಕ ವಿಫಲವಾದಾಗ ಮಧ್ಯಮ ಕ್ರಮಾಂಕ ಅಥವಾ ಕೆಳ ಕ್ರಮಾಂಕದ ಆಟಗಾರರು ಜವಾಬ್ದಾರಿ ತೆಗೆದುಕೊಳ್ಳುತ್ತಾರೆ, ಅದು ಇಂದು ಸಾಬೀತಾಗಿದೆ ಎಂದು ಪರಾಗ್ ಟೀಕಾಗಾರರಿಗೆ ಪ್ರತ್ಯುತ್ತರ ನೀಡಿದ್ದಾರೆ.

ಇನ್ನು ಪಂಜಾಬ್ ಕಿಂಗ್ಸ್​ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವಾಗ ವಿಕೆಟ್ ಉಳಿಸಿಕೊಳ್ಳುವುದು ಮತ್ತು ರನ್-ರೇಟ್ ಕುಸಿಯದಂತೆ ನೋಡಿಕೊಳ್ಳುವುದು ನಮ್ಮ ಯೋಜನೆಯಾಗಿತ್ತು. ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಆರಂಭವು ಕೆಲಸವನ್ನು ಸುಲಭಗೊಳಿಸಿತು. ಪವರ್‌ಪ್ಲೇ ನಂತರ ರನ್ ವೇಗ ಸ್ವಲ್ಪ ತಗ್ಗಿದರೂ, ತಂಡವು ಮತ್ತೆ ಲಯ ಕಂಡುಕೊಂಡಿತು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಡೊನೊವನ್ ಫೆರೇರಾ ಮತ್ತು ಶುಭಂ ದುಬೆ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ಅವರಿಬ್ಬರ ಆಟ ಅದ್ಭುತವಾಗಿತ್ತು. ಪಂಜಾಬ್ ಬೌಲರ್‌ಗಳು ಸ್ಲೋ ಬಾಲ್‌ಗಳ ಮೂಲಕ ನಮಗೆ ಒತ್ತಡ ಹೇರಬಹುದು ಎಂದು ನಾನು ಭಾವಿಸಿದ್ದೆ, ಆದರೆ ಫೆರೇರಾ ಮತ್ತು ದುಬೆ ಅಪ್ರತಿಮ ಪ್ರದರ್ಶನ ನೀಡಿದರು. ಅವರ ಈ ಜವಾಬ್ದಾರಿಯುತ ಬ್ಯಾಟಿಂಗ್ ಪರಿಣಾಮ ನಾವು ಸುಲಭವಾಗಿ ಗೆಲ್ಲುವಂತಾಯಿತು ಎಂದು ರಿಯಾನ್ ಪರಾಗ್ ಹೇಳಿದ್ದಾರೆ.

ಇದನ್ನೂ ಓದಿ: ಬಾಬರ್ ಶತಕಕ್ಕೆ ವಿಶ್ವ ದಾಖಲೆಯೇ ಧೂಳೀಪಟ

ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಇನ್ನುಳಿದ 5 ಮ್ಯಾಚ್​ಗಳಲ್ಲಿ  2 ಗೆಲುವು ದಾಖಲಿಸಿದರೆ ರಾಜಸ್ಥಾನ್ ರಾಯಲ್ಸ್ ತಂಡವು ಪ್ಲೇಆಫ್​ಗೇರುವುದು ಖಚಿತವಾಗಲಿದೆ.

Source link

Video: ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ: ಹಲವೆಡೆ ಇವಿಎಂ ದೋಷ, ಮತಗಟ್ಟೆಗಳ ಬಳಿ ಹಿಂಸಾಚಾರ – Kannada News | Early Voting in West Bengal Phase 2 Marked by EVM Issues and Tension

ಕೋಲ್ಕತ್ತಾ, ಏಪ್ರಿಲ್ 29: ಬಂಗಾಳದ ಅಂತಿಮ ಸಮರದಲ್ಲಿ ಮತದಾನದ ಮೊದಲ ಗಂಟೆಗಳಲ್ಲೇ ರಕ್ತಪಾತ ನಡೆದಿದೆ. ನಾಡಿಯಾ ಜಿಲ್ಲೆಯ ಛಪ್ರಾದಲ್ಲಿ ಬಿಜೆಪಿ ಏಜೆಂಟ್ ಮೊಶರೆಫ್ ಮಿರ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಂದೂಕು ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಸೈಕತ್ ಸರ್ಕಾರ್ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಇತ್ತ ಎಂಟಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲ್ ಅವರು ತಮ್ಮ ಏಜೆಂಟ್‌ನನ್ನು ಮತಗಟ್ಟೆಯಿಂದ ಹೊರಹಾಕಿದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದರು. ಮತಗಟ್ಟೆಯೊಳಗೆ ಅಕ್ರಮವಾಗಿ ಜನರು ನುಗ್ಗುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಹಲವೆಡೆ ಇವಿಎಂ ದೋಷಗಳಿಂದ ಮತದಾನ ವಿಳಂಬವಾಗಿದ್ದು, ಮತದಾರರು ಪರದಾಡುವಂತಾಗಿದೆ. ಬಿಗಿ ಭದ್ರತೆಯ ನಡುವೆಯೂ ಘರ್ಷಣೆಗಳು ಮುಂದುವರೆದಿದ್ದು, ಬಂಗಾಳದ ಅಂತಿಮ ಹಂತದ ಮತದಾನವು ಪ್ರಕ್ಷುಬ್ಧ ವಾತಾವರಣದಲ್ಲಿ ಸಾಗುತ್ತಿದೆ. ತೃಣಮೂಲ ಕಾಂಗ್ರೆಸ್ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ತಾಳ್ಮೆಯಿಂದ ಇರಿ’; ‘ಟಾಕ್ಸಿಕ್’ ರಿಲೀಸ್ ಮತ್ತೆ ಮುಂದಕ್ಕೆ; ಕಾರಣ ಬಿಚ್ಚಿಟ್ಟ ಯಶ್ – Kannada News | Yash’s Toxic Movie Release Postponed: Global Shows Plan Delays Screening Date, Fans Upset

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಮತ್ತೆ ಬ್ಯಾಡ್​​ ನ್ಯೂಸ್ ಸಿಕ್ಕಿದೆ. ‘ಟಾಕ್ಸಿಕ್’ ಸಿನಿಮಾ ರಿಲೀಸ್​ ಮತ್ತೆ ಮುಂದಕ್ಕೆ ಹೋಗಲಿದೆ ಎಂಬ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈಗ ಅದು ನಿಜವಾಗಿದೆ. ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ. ಇದು ಫ್ತಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ.

ದಿನಾಂಕ ಬದಲಾವಣೆಗೆ ಕಾರಣವೇನು?

ಇತ್ತೀಚೆಗೆ ನಡೆದ ‘ಸಿನಿಮಾ ಕಾನ್’ (CinemaCon) ಅಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ ಜಾಗತಿಕ ಮಟ್ಟದ ವಿತರಕರಿಂದ ಸಿನಿಮಾಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆಯಂತೆ. ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡಲು ಭರ್ಜರಿ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ, ಚಿತ್ರತಂಡ ತನ್ನ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿಕೊಳ್ಳಲು ನಿರ್ಧರಿಸಿದೆ. ಸಿನಿಮಾವನ್ನು ಕೇವಲ ಭಾರತಕ್ಕೆ ಸೀಮಿತಗೊಳಿಸದೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಅತಿ ದೊಡ್ಡ ಮಟ್ಟಕ್ಕೆ ತಲುಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಯಶ್ ತಿಳಿಸಿದ್ದಾರೆ.

‘ಟಾಕ್ಸಿಕ್ ನನ್ನ ಪಾಲಿಗೆ ಒಂದು ವಿಶೇಷ ಪ್ರಯಾಣ. ಸಿನಿಮಾ ಕಾನ್‌ನಲ್ಲಿ ವ್ಯಕ್ತವಾದ ಜಾಗತಿಕ ಮಟ್ಟದ ಪ್ರತಿಕ್ರಿಯೆ ಈ ಚಿತ್ರಕ್ಕೆ ವಿಶ್ವಮಟ್ಟದಲ್ಲಿ ಸಿನಿಮಾಗೆ ದೊಡ್ಡ ವೇದಿಕೆ ಬೇಕು ಎಂಬ ನಮ್ಮ ನಂಬಿಕೆಯನ್ನು ಹೆಚ್ಚಿಸಿದೆ. ಭಾರತೀಯ ಸಿನಿಮಾ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ಈ ಸಮಯದಲ್ಲಿ, ಚಿತ್ರವನ್ನು ಅತ್ಯಂತ ಪ್ರಭಾವಶಾಲಿಯಾಗಿ ಪ್ರೇಕ್ಷಕರ ಮುಂದೆ ತರುವುದು ನಮ್ಮ ಜವಾಬ್ದಾರಿ. ಹೀಗಾಗಿ ಬಿಡುಗಡೆಯ ದಿನಾಂಕವನ್ನು ಬದಲಿಸಿದ್ದೇವೆ. ತಾಳ್ಮೆಯಿಂದ ಕಾಯುತ್ತಿರುವ ಅಭಿಮಾನಿಗಳಿಗೆ ನಾವು ಹೆಮ್ಮೆ ಪಡುವಂತಹ ಚಿತ್ರವನ್ನು ನೀಡುತ್ತೇವೆ’ ಎಂದು ಯಶ್ ತಿಳಿಸಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್ ರಿಲೀಸ್ ಆಗುವ ಮುನ್ನ ಈ ಕೆಲಸ ಮಾಡಿ’; KVNಗೆ ಬೇಡಿಕೆ ಇಟ್ಟ ಫ್ಯಾನ್ಸ್

ಗೀತು ಮೋಹನ್ ದಾಸ್ ಅವರು ‘ಟಾಕ್ಸಿಕ್’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಮೊದಲಾದವರು ನಟಿಸಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕ ಕಾಲಕ್ಕೆ ಸಿನಿಮಾ ಚಿತ್ರೀಕರಣಗೊಂಡಿದ್ದು, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಿಗೆ ಡಬ್ ಆಗಲಿದೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ, ಜಾಗತಿಕ ಮಟ್ಟದ ವಿತರಣೆ ಮತ್ತು ಅಂತರಾಷ್ಟ್ರೀಯ ಸಹಭಾಗಿತ್ವದ ಮೇಲೆ ಗಮನ ಹರಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ ಹಾಗೂ ಜೀವ ಬೆದರಿಕೆ ಆರೋಪ!ಇಬ್ಬರ ವಿರುದ್ಧ ಕೇಸ್ ದಾಖಲು – Kannada News | Harassment at Bengaluru Diagnostic Lab: FIR Filed Against Staff for Threatening Woman

ಲ್ಯಾಬ್ ಮ್ಯಾನೇಜರ್ ಮತ್ತು ಸಿಬ್ಬಂದಿ ಮೇಲೆ ಎಫ್​ಐಆರ್

ಬೆಂಗಳೂರು, ಏಪ್ರಿಲ್ 29: ನಗರದ ಬ್ಯಾಡರಹಳ್ಳಿ ವ್ಯಾಪ್ತಿಯ ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್‌ವೊಂದರಲ್ಲಿ ತಪಾಸಣೆಗೆ ಬಂದಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿ, ಬಳಿಕ ಜೀವಬೆದರಿಕೆ ಹಾಕಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಲ್ಯಾಬ್ (Lab) ಮ್ಯಾನೇಜರ್ ಪ್ರಭಾಕರ್ ಹಾಗೂ ಸಿಬ್ಬಂದಿ ಪ್ರದೀಪ್ ಎಂಬುವವರ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಇತ್ತೀಚೆಗೆ ಮಹಿಳೆಯೊಬ್ಬರು ಥೈರಾಯ್ಡ್ ತಪಾಸಣೆಗಾಗಿ ಬ್ಯಾಡರಹಳ್ಳಿಯ ಪ್ರಕಾಶ್ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗೆ ತೆರಳಿದ್ದರು. ಈ ವೇಳೆ ರಕ್ತದ ಮಾದರಿ ಸಂಗ್ರಹಿಸುವ ಸಂದರ್ಭದಲ್ಲಿ ಲ್ಯಾಬ್ ತಂತ್ರಜ್ಞ ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆ. ರಕ್ತ ತೆಗೆಯುವಾಗ ನೋವಾಗುತ್ತಿದೆ ಎಂದು ಮಹಿಳೆ ಕಿರುಚಿಕೊಂಡರೂ ನಿರ್ಲಕ್ಷ್ಯ ವಹಿಸಿ ಬಲವಂತವಾಗಿ ರಕ್ತ ತೆಗೆಯಲಾಗಿದೆ. ಇದರ ಪರಿಣಾಮವಾಗಿ ಮಹಿಳೆಯ ಕೈನಲ್ಲಿ ರಕ್ತ ಹೆಪ್ಪುಗಟ್ಟಿ, ತೀವ್ರ ಸ್ವರೂಪದ ಊತ ಕಾಣಿಸಿಕೊಂಡಿದೆ. ಈ ಬಗ್ಗೆ ಅದೇ ಲ್ಯಾಬ್ ತಂತ್ರಜ್ಞರ ಬಳಿ ಕೇಳಿದಾಗ ಐಸ್ ಪ್ಯಾಕ್ ಇಟ್ಟುಕೊಳ್ಳುವಂತೆ ತಿಳಿಸಿದ್ದರು. ಇದು ಹೆಮಟೋಮಾ ಆದ್ದರಿಂದ ಬೇರೆ ವೈದ್ಯರ ಬಳಿ ಟೆಸ್ಟ್ ಮಾಡಿಸಿಕೊಳ್ಳಿ ಎಂದೂ ಹೇಳಿದ್ದರು ಎಂದು ಮಹಿಳೆ ಎಫ್​ಐಆರ್​ನಲ್ಲಿ ತಿಳಿಸಿದ್ದಾರೆ.

ಮಹಿಳೆಗೆ ಜಿವ ಬೆದರಿಕೆ

ಇದಾದ 2-3 ದಿನಗಳ ನಂತರ ನೋವು ಮತ್ತು ಊತ ಹೆಚ್ಚಾಗಿದ್ದು, ಲ್ಯಾಬ್​ನವರಿಗೆ ತಿಳಿಸಿದಾಗ ಅವರು ಆಕೆಯ ಮನೆಗೆ ಬಂದು, ಮಾತನಾಡಿ ಬಗೆಹರಿಸಿಕೊಳ್ಳೋಣವೆಂದು ಹೇಳಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ಆದರೆ ಆಕೆಯ ಮನೆಯಿಂದ ಹೊರಡುವ ಸಮಯದಲ್ಲಿ ಈ ವಿಷಯವನ್ನು ಹೊರಗೆ ತಿಳಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ ಪೂಜಾ ದತ್ತಾ ಬೆತ್ತಲೆ ಶವ ಪತ್ತೆ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಸಿಕ್ತು ಹಲವು ಆಘಾತಕಾರಿ ಮಾಹಿತಿ!

ಸದ್ಯ ಮಹಿಳೆ ನೀಡಿದ ದೂರಿನನ್ವಯ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದು, ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ವೈದ್ಯಕೀಯ ಸೇವೆ ನೀಡುವ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಸಿಬ್ಬಂದಿಗಳ ನಡವಳಿಕೆಯ ಬಗ್ಗೆ ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರನ್ನ ಭೇಟಿಯಾದ ಸಚಿವ ಮಹದೇವಪ್ಪ: ಸಂಸದ ಸುನಿಲ್ ಬೋಸ್ ಮನೆಯಲ್ಲಿ ಡಿನ್ನರ್ ಮೀಟಿಂಗ್ – Kannada News | Minister HC Mahadevappa Meets NCSC Chairman in Delhi; High Level Dinner Meeting Sparks Political Rumors

ಬೆಂಗಳೂರು/ದೆಹಲಿ, ಏಪ್ರಿಲ್ 29: ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ದೆಹಲಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಜಾರಿಗೆ ತರಲಾದ ‘ಒಳ ಮೀಸಲಾತಿ’ ಕುರಿತು ಅವರು ಆಯೋಗಕ್ಕೆ ಮಾಹಿತಿ ನೀಡಿದ್ದು, ಈ ನಿರ್ಧಾರಕ್ಕೆ ಕಿಶೋರ್ ಮಕ್ವಾನ ಸಂತಸ ವ್ಯಕ್ತಪಡಿಸಿದ್ದಾರೆ. ಇತರೆ ರಾಜ್ಯಗಳೂ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ಕುತೂಹಲ ಮೂಡಿಸಿದ ಡಿನ್ನರ್ ಮೀಟಿಂಗ್

ಆಯೋಗದ ಅಧ್ಯಕ್ಷರ ಭೇಟಿಯ ನಂತರ ಸಚಿವ ಮಹದೇವಪ್ಪ ಅವರು ಸಂಸದ ಸುನಿಲ್ ಬೋಸ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಡಿನ್ನರ್ ಮೀಟಿಂಗ್​​ನಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಸಲೀಂ ಅಹ್ಮದ್ ಹಾಗೂ ಮುಖಂಡ ಹಂಪನಗೌಡ ಬಾದರ್ಲಿ ಉಪಸ್ಥಿತರಿದ್ದರು. ರಾಜ್ಯದಲ್ಲಿ ಕೇಳಿಬರುತ್ತಿರುವ ಸಿಎಂ ಬದಲಾವಣೆ ಚರ್ಚೆ, ಸಚಿವ ಸಂಪುಟ ಪುನಾರಚನೆ ಮತ್ತು ಅಹಿಂದ ವರ್ಗದ ನಾಯಕರ ಸ್ಥಾನಮಾನಗಳ ಕುರಿತು ಇಲ್ಲಿ ಸುದೀರ್ಘ ಚರ್ಚೆ ನಡೆದಿದೆ ಎನ್ನಲಾಗಿದೆ. ಮುಂಬರುವ ರಾಜಕೀಯ ಬೆಳವಣಿಗೆಗಳ ದೃಷ್ಟಿಯಿಂದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಕುರಿತೂ ಈ ನಾಯಕರು ಸಮಾಲೋಚನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಬರ್ ಶತಕಕ್ಕೆ ವಿಶ್ವ ದಾಖಲೆಯೇ ಧೂಳೀಪಟ – Kannada News | Babar Azam Creates New World Record In T20 Cricket

ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶ್ವ ದಾಖಲೆಯೊಂದಿಗೆ ಬಾಬರ್ ಸೌತ್ ಆಫ್ರಿಕಾದ ಫಾಫ್ ಡುಪ್ಲೆಸಿಸ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

Source link

Priyansh Arya: ಪಂಜಾಬ್ ಕಿಂಗ್ಸ್-ರಾಜಸ್ಥಾನ್ ಪಂದ್ಯದ ನಡುವೆ ಹರಿಯಿತು ನೆತ್ತರು: ಇದಕ್ಕೆ ಕಾರಣ ಪ್ರಿಯಾಂಶ್ ಆರ್ಯ – Kannada News | PBKS vs RR Blood flowed between Punjab Kings vs Rajasthan match Priyansh Arya is the reason

ಬೆಂಗಳೂರು (ಏ. 29): ಐಪಿಎಲ್ 2026 ರಲ್ಲಿ ಏಪ್ರಿಲ್ 28 ರಂದು ನಡೆದ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಭರ್ಜರಿ ಗೆಲುವು ಸಾಧಿಸಿತು. ಈ ಟೂರ್ನಿಯಲ್ಲಿ ಪಂಜಾಬ್ ಪಡೆ ಮೊದಲ ಸೋಲು ಕಂಡಿತು. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಈ ಹೈ-ಸ್ಕೋರ್ ಪಂದ್ಯದಲ್ಲಿ ಕೆಲ ಅಚ್ಚರಿಯ ಘಟನೆ ಕೂಡ ನಡೆಯಿತು. ಮುಖ್ಯವಾಗಿ ಈ ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ನೆತ್ತರು ಹರಿಯಿತು. ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಇದಕ್ಕೆ ಕಾರಣವಾಗಿದ್ದು ಪ್ರಿಯಾಂಶ್ ಆರ್ಯ. ಪ್ರಿಯಾಂಶ್ ಆರ್ಯ ಸಿಡಿಸಿದ ಒಂದು ಸಿಕ್ಸ್ ಕ್ರೀಡಾಂಗಣದಲ್ಲಿ ಕುಳಿತಿದ್ದ ವೃದ್ಧರೊಬ್ಬರಿಗೆ ತಾಗಿ ತೀವ್ರವಾಗಿ ಗಾಯಗೊಂಡು ರಕ್ತಸ್ರಾವ ಸಂಭವಿಸಿತು.

ಪ್ರಿಯಾಂಶ್ ಆರ್ಯ ಸಿಕ್ಸರ್​ನಿಂದ ಪಂಜಾಬ್ ಅಭಿಮಾನಿಗೆ ಗಾಯ

ಪ್ರಿಯಾಂಶ್ ಆರ್ಯ ರಾಜಸ್ಥಾನ್ ರಾಯಲ್ಸ್ ವಿರುದ್ಧ 11 ಎಸೆತಗಳಲ್ಲಿ 29 ರನ್ ಗಳಿಸಿದರು, ಐದು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದರು. ಅವರು ಹೊಡೆದ ಏಕೈಕ ಸಿಕ್ಸರ್ ಕ್ರೀಡಾಂಗಣದಲ್ಲಿ ಕುಳಿತಿದ್ದ ಹಿರಿಯ ಪಂಜಾಬ್ ಕಿಂಗ್ಸ್ ಅಭಿಮಾನಿಗೆ ಮಾರಕವಾಯಿತು. ಚೆಂಡು ಹಿರಿಯ ಕ್ರಿಕೆಟ್ ಅಭಿಮಾನಿಯ ಮುಖಕ್ಕೆ ನೇರವಾಗಿ ಬಂದು, ಅವರ ಕಣ್ಣು ಮತ್ತು ಮೂಗಿನ ನಡುವಿನ ಪ್ರದೇಶಕ್ಕೆ ತಾಗಿತು. ಪರಿಣಾಮ, ಚೆಂಡು ತಗುಲಿದ ಪ್ರದೇಶದಿಂದ ರಕ್ತಸ್ರಾವ ಆಗಿದೆ.

ಗಾಯಗೊಂಡ ಅಭಿಮಾನಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ

ಪ್ರಿಯಾಂಶ್ ಆರ್ಯ ಅವರ ಸಿಕ್ಸರ್​ನಿಂದ ಗಂಭೀರವಾಗಿ ಗಾಯಗೊಂಡ ನಂತರ, ಕ್ರೀಡಾಂಗಣದ ವೈದ್ಯಕೀಯ ತಂಡವು ತಕ್ಷಣವೇ ಆ ವ್ಯಕ್ತಿಯನ್ನು ಪರೀಕ್ಷಿಸಿ ಬ್ಯಾಂಡೇಜ್ ಹಾಕಿ ಚಿಕಿತ್ಸೆ ನೀಡಿತು. ಸಾಮಾನ್ಯವಾಗಿ, ಕ್ರೀಡಾಂಗಣದೊಳಗೆ ಉಂಟಾಗುವ ಯಾವುದೇ ಗಾಯಗಳು ಅಥವಾ ಹಾನಿಗೆ ಐಪಿಎಲ್ ಸಂಘಟಕರು ನೇರವಾಗಿ ಜವಾಬ್ದಾರರಾಗಿರುವುದಿಲ್ಲ. ಇದನ್ನು ಟಿಕೆಟ್ ನಿಯಮಗಳಲ್ಲಿಯೂ ಹೇಳಲಾಗಿದೆ. ಆದಾಗ್ಯೂ, ಸಂಘಟಕರು ಯಾವುದೇ ಅಪಾಯಗಳ ಬಗ್ಗೆ ಪ್ರೇಕ್ಷಕರಿಗೆ ಎಚ್ಚರಿಕೆ ನೀಡುತ್ತಾರೆ. ವೈದ್ಯಕೀಯ ಪ್ರೋಟೋಕಾಲ್‌ಗಳ ಅಡಿಯಲ್ಲಿ, ಅವರು ಪ್ರಾಥಮಿಕ ಪರೀಕ್ಷೆಯನ್ನು ಮತ್ತು ಅಗತ್ಯವಿದ್ದರೆ, ಅವರನ್ನು ಆಸ್ಪತ್ರೆಗೆ ಸಾಗಿಸಲು ಸಹಾಯವನ್ನು ಮಾಡುತ್ತಾರೆ.

DC vs RCB: ಜಾಕೋಬ್ ಬೆಥೆಲ್‌ ಸಿಡಿಸಿದ 104 ಮೀಟರ್ ಸಿಕ್ಸ್ ಕಂಡು ಶಾಕ್ ಆದ ಕೊಹ್ಲಿ: ವಿಡಿಯೋ ನೋಡಿ

ಕೆಲವು ಸಂದರ್ಭಗಳಲ್ಲಿ, ಆಟಗಾರರು ಗಾಯಗೊಂಡ ಫ್ಯಾನ್​ಗೆ ಸಹಾಯ ಮಾಡುವುದನ್ನು ನಾವು ನೋಡಿದ್ದೇವೆ. ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇದಕ್ಕೆ ಉದಾಹರಣೆಗಳಾಗಿದ್ದು, ತಮ್ಮ ಹೊಡೆತಗಳಿಂದ ಗಾಯಗೊಂಡ ಕ್ರಿಕೆಟ್ ಅಭಿಮಾನಿಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡಿದ್ದಾರೆ ಅಥವಾ ಪಂದ್ಯಗಳ ನಂತರ ಅವರ ಯೋಗಕ್ಷೇಮವನ್ನು ವಿಚಾರಿಸಲು ಸಂಪರ್ಕಿಸಿದ್ದೂ ಇದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ – Kannada News | Narendra Modi Offers Prayers at Kashi Vishwanath Temple

ವಾರಣಾಸಿ,ಏಪ್ರಿಲ್ 29: ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಶಿಯ ಜನತೆ ಅಭೂತಪೂರ್ವ ಸ್ವಾಗತ ಕೋರಿದ್ದಾರೆ. ವಿಶ್ವನಾಥನ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ಬುಧವಾರ ಪವಿತ್ರ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿಯವರನ್ನು ಶಂಖನಾದ ಮತ್ತು ಸಾಂಪ್ರದಾಯಿಕ ಡ್ರಮ್‌ಗಳ ಮೊಳಗಿನೊಂದಿಗೆ ಬರಮಾಡಿಕೊಳ್ಳಲಾಯಿತು. ಲಾಹುರಾಬಿರ್ ಕ್ರಾಸಿಂಗ್ ಸೇರಿದಂತೆ ನಗರದಾದ್ಯಂತ ಕಿಕ್ಕಿರಿದು ಸೇರಿದ್ದ ಭಕ್ತರು ‘ಹರ ಹರ ಮಹಾದೇವ್’ ಘೋಷಣೆಗಳೊಂದಿಗೆ ಪುಷ್ಪವೃಷ್ಟಿ ಮಾಡಿದರು.

ಈ ಭೇಟಿಯ ವೇಳೆ ಪ್ರಧಾನಿಯವರು ಕಾಶಿಯ ಸಮಗ್ರ ಅಭಿವೃದ್ಧಿಗಾಗಿ ಸುಮಾರು 6,350 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ, ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ 1,050 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 48 ಪೂರ್ಣಗೊಂಡ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಾಯಿತು.

ಇದಕ್ಕೂ ಮುನ್ನ ಮಂಗಳವಾರ ನಡೆದ ಬನಾರಸ್ ಲೋಕೋಮೋಟಿವ್ ವರ್ಕ್ಸ್ ಮೈದಾನದ ‘ಮಹಿಳಾ ಸಮ್ಮೇಳನ’ದಲ್ಲಿ ಭಾಗವಹಿಸಿದ್ದ ಪ್ರಧಾನಿ, ಸ್ತ್ರೀ ಶಕ್ತಿಯ ಮಹತ್ವವನ್ನು ಸಾರಿದರು. ಈ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ನಾಯಕ ನಿತಿನ್ ನಬಿನ್ ಉಪಸ್ಥಿತರಿದ್ದರು. ಒಟ್ಟಾರೆಯಾಗಿ ಪ್ರಧಾನಿಯವರ ಈ ಭೇಟಿಯು ಕಾಶಿಯ ಧಾರ್ಮಿಕ ಮತ್ತು ಆರ್ಥಿಕ ಚಿತ್ರಣವನ್ನು ಬದಲಿಸುವ ಸಂಕಲ್ಪವನ್ನು ಪುನರುಚ್ಚರಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪೂಜಾ ದತ್ತಾ ಬೆತ್ತಲೆ ಶವ ಪತ್ತೆ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಸಿಕ್ತು ಹಲವು ಆಘಾತಕಾರಿ ಮಾಹಿತಿ! – Kannada News | Bengaluru Adugodi Death Mystery: Techie Pooja Dutta Was Living in Isolation; Secret Notes Found on Walls

ಆಡುಗೋಡಿಯ ನಿವಾಸ ಹಾಗೂ ಪೂಜಾ ದತ್ತಾImage Credit source: tv9

ಬೆಂಗಳೂರು, ಏಪ್ರಿಲ್ 29: ಬೆಂಗಳೂರಿನ (Bengaluru) ಆಡುಗೋಡಿಯ ಮನೆಯಲ್ಲಿ ಜಾರ್ಖಂಡ್ ಮೂಲದ ಟೆಕ್ಕಿ ಪೂಜಾ ದತ್ತಾ (Pooja Dutta)(34) ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಪೂಜಾ ಅವರ ಮೃತದೇಹ ನಗ್ನ ಹಾಗೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರಿಗೆ ಹಲವು ಆಘಾತಕಾರಿ ಮತ್ತು ಆಸಕ್ತಿದಾಯಕ ಮಾಹಿತಿಗಳು ಲಭ್ಯವಾಗುತ್ತಿವೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಪೂಜಾ ದತ್ತಾ, ಸುಮಾರು ಒಂದು ವರ್ಷದ ಹಿಂದೆಯೇ ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಅಂದಿನಿಂದ ಅವರು ಮೊಬೈಲ್ ಆಫ್ ಮಾಡಿಕೊಂಡಿದ್ದು, ಹಳೆಯ ಸಿಮ್ ಕಾರ್ಡ್ ಬದಲಿಸಿ ಹೊಸ ಸಿಮ್ ಬಳಸುತ್ತಿದ್ದರು.

ಒಂದು ವರ್ಷದಿಂದ ಕುಟುಂಬದವರು, ಸ್ನೇಹಿತರ ಸಂಪರ್ಕದಲ್ಲೇ ಇರದಿದ್ದ ಪೂಜಾ!

ವಿಶೇಷವೆಂದರೆ, ಪೂಜಾ ದತ್ತಾ ಕಳೆದ ಒಂದು ವರ್ಷದಿಂದ ಕುಟುಂಬದವರು ಅಥವಾ ಸ್ನೇಹಿತರೊಂದಿಗೆ ಯಾವುದೇ ಸಂಪರ್ಕ ಹೊಂದಿರಲಿಲ್ಲ. ಮೂರು ತಿಂಗಳ ಹಿಂದೆ ಅವರ ಹೊಸ ಸಿಮ್‌ನ ವ್ಯಾಲಿಡಿಟಿ ಕೂಡ ಮುಗಿದಿದ್ದು, ಫೋನ್ ಸಂಪೂರ್ಣ ಸ್ಥಗಿತಗೊಂಡಿತ್ತು. ಅಕ್ಕಪಕ್ಕದ ನಿವಾಸಿಗಳೂ ಕೂಡ ಪೂಜಾ ಅವರನ್ನು ಕಳೆದ ಮೂರು ತಿಂಗಳಿನಿಂದ ನೋಡಿರಲಿಲ್ಲ ಎಂಬ ಮಾಹಿತಿ ಪ್ರಾಥಮಿಕ ತನಿಖೆ ವೇಳೆ ಪೊಲೀಸರಿಗೆ ಲಭ್ಯವಾಗಿದೆ.

ಗೋಡೆಯ ಮೇಲಿನ ರಹಸ್ಯ ಬರಹಗಳು ಮತ್ತು ಖಿನ್ನತೆ

ಪೊಲೀಸರು ಮನೆ ತಪಾಸಣೆ ನಡೆಸಿದಾಗ ಗೋಡೆಗಳ ಮೇಲೆ ಕೆಲವು ರಹಸ್ಯ ಬರಹಗಳು (Secret Notes) ಪತ್ತೆಯಾಗಿವೆ. ಇದು ಪೂಜಾ ಅವರು ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಿರಬಹುದು ಎಂಬ ಅನುಮಾನವನ್ನು ಬಲಪಡಿಸಿದೆ. ‘ಪೂಜಾ ದತ್ತಾ ಹೆಚ್ಚಾಗಿ ಒಬ್ಬ ಸ್ನೇಹಿತನ ಜೊತೆ ಗಲಾಟೆ ಮಾಡುತ್ತಿದ್ದರು’ ಎಂದು ಮನೆ ಮಾಲೀಕರು ಹೇಳಿಕೆ ನೀಡಿದ್ದು, ಸಾವಿನ ಸುತ್ತಲಿನ ನಿಗೂಢತೆ ಹೆಚ್ಚಿಸಿದೆ. ಸದ್ಯದ ಮಾಹಿತಿ ಪ್ರಕಾರ ಪೂಜಾ ದತ್ತಾ ಕೊಲೆಯಾಗಿದ್ದಾರೆ ಎನ್ನಲು ಸಾಕ್ಷ್ಯಗಳು ಸಿಕ್ಕಿಲ್ಲ. ಸಾವಿಗೆ ಪ್ರೇಮ ವೈಫಲ್ಯ ಅಥವಾ ಕೌಟುಂಬಿಕ ಕಾರಣಗಳಿವೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಆ ಚೀಟಿಗಳಲ್ಲಿದೆಯಾ ಸಾವಿನ ಸೀಕ್ರೆಟ್? ಯುವತಿಯ ನಗ್ನ ಮೃತದೇಹ ಪತ್ತೆ ಪ್ರಕರಣದ ಹಿಂದೆ ಹಲವು ಅನುಮಾನ

ಪೂಜಾ ದತ್ತಾ ಅನುಮಾನಾಸ್ಪದ ಸಾವು ಪ್ರಕರಣದ ಹಿನ್ನೆಲೆ

ಆಡುಗೋಡಿಯ ಮನೆಯಲ್ಲಿ ಸೋಮವಾರ ಸಂಜೆ ಪೂಜಾ ದತ್ತಾ ಮೃತದೇಹ ನಗ್ನ ಹಾಗೂ ಅರೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಇದು ಕೊಲೆ ಇರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿದ್ದ ಕಾರಣ ರಹಸ್ಯ ಮತ್ತಷ್ಟು ಗಾಢವಾಗಿತ್ತು. ಸದ್ಯ ಆಡುಗೋಡಿ ಪೊಲೀಸರು ಕಳೆದ ಒಂದು ವರ್ಷದ ಸಿಡಿಆರ್ (CDR) ವರದಿಯನ್ನು ಕಲೆಹಾಕುತ್ತಿದ್ದು, ಸಾವಿನ ಹಿಂದಿನ ಅಸಲಿ ಸತ್ಯ ಶೀಘ್ರವೇ ಹೊರಬೀಳುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version