ರಾಯಚೂರು, ಚಿತ್ರದುರ್ಗದಲ್ಲಿ ಮತ್ತೆ ಬೀದಿನಾಯಿಗಳ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ, ನಾಲ್ವರು ಮಕ್ಕಳಿಗೆ ಗಾಯ – Kannada News | Stray Dog Attacks Spark Panic in Karnataka: 4 Year Old Critical in Raichur, Four Children Injured in Chitradurga
ಬೀದಿ ನಾಯಿಗಳು ಹಾಗೂ ಬಲಚಿತ್ರದಲ್ಲಿ ಗಾಯಾಳು ಬಾಲಕ ಗೋಪಾಲ್Image Credit source: tv9 ರಾಯಚೂರು, ಚಿತ್ರದುರ್ಗ, ಜುಲೈ 21: ರಾಯಚೂರು (Raichur) ಜಿಲ್ಲೆಯಲ್ಲಿ ಬೀದಿನಾಯಿಗಳ ಹಾವಳಿ ಮತ್ತೆ ಆತಂಕ ಮೂಡಿಸಿದೆ. ಕೆಲ ದಿನ ಹಿಂದಷ್ಟೇ ಬೀದಿನಾಯಿಗಳ ದಾಳಿಯಿಂದ ಒಂದೂವರೆ ವರ್ಷದ ಬಾಲಕಿ ಮೃತಪಟ್ಟಿದ್ದ ಬೆನ್ನಲ್ಲೇ, ಇದೀಗ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆದಿದೆ. ರಾಯಚೂರು ಹೊರವಲಯದ ಮಲಿಯಾಬಾರ್ ಪ್ರದೇಶದಲ್ಲಿ ಸೋಮವಾರ ಮನೆ ಸಮೀಪ ಆಟವಾಡುತ್ತಿದ್ದ ಗೋಪಾಲ್ ಎಂಬ ಬಾಲಕನ ಮೇಲೆ ಬೀದಿನಾಯಿಗಳು ಏಕಾಏಕಿ…