Headlines

‘ಚೇತನ್ ನಿಜವಾಗಿಯೂ ಒಬ್ಬ ಅರೆಹುಚ್ಚ’: ಸಾರಾ ಗೋವಿಂದು ಖಡಕ್ ಪ್ರತಿಕ್ರಿಯೆ – Kannada News | Chetan Ahimsa is not mentally stable says Sa Ra Govind in Dr Rajkumar Samadhi row

ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಜಾಗಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣ ಆಗಿದೆ. ಸಮಾಧಿಗೆ ಎರಡೂವರೆ ಎಕರೆ ಜಾಗ ನೀಡಿದ್ದು ಸರಿಯಲ್ಲ ಎಂದು ಅನೇಕರು ವಿರೋಧಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ‘ಚೇತನ್ ಕ್ಷಮೆ ಕೇಳಿದ ಬಳಿಕ ಮತ್ತೆ ಮಾತು ಬದಲಿಸಿದ್ದಾನೆ. ನಿಜವಾಗಿಯೂ ಅವನು ಒಬ್ಬ ಅರೆಹುಚ್ಚ. ಅವನಿಗೆ ಯೋಚನಾ ಶಕ್ತಿ ಇಲ್ಲ. ಅಂಥವರನ್ನು ನಮ್ಮ…

Read More

ಬೇಸಿಗೆಯಲ್ಲಿ ಮಕ್ಕಳು ಡಿಹೈಡ್ರೇಟ್ ಆಗುವುದನ್ನು ತಡೆಯಲು ಡಾ. ಹರೀಶ್ ನೀಡಿರುವ ಸಲಹೆ ತಪ್ಪದೆ ಪಾಲಿಸಿ – Kannada News | Keep Kids Hydrated in Hot Weather: Expert Advice by Dr. Harish

Keep Kids Hydrated in Hot Weather: Expert Advice by Dr. Harish ಮಕ್ಕಳು ಹೊರಾಂಗಣದಲ್ಲಿ ಆಟವಾಡುವಾಗ ಸಹಜವಾಗಿಯೇ ಹೆಚ್ಚು ಬೆವರುತ್ತಾರೆ, ಇದರಿಂದ ದೇಹ ಬೇಗ ಡಿಹೈಡ್ರೇಟ್ ಆಗುತ್ತದೆ. ಸರಿಯಾದ ಪ್ರಮಾಣದಲ್ಲಿ ನೀರು ಮತ್ತು ಅನ್ಯ ದ್ರವ್ಯಗಳ ಸೇವನೆಯಿಂದ ನಷ್ಟವಾದ ದ್ರವಗಳನ್ನು ಸಮರ್ಪಕವಾಗಿ ಮರುಪೂರಣಗೊಳಿಸದಿದ್ದರೆ ಮಕ್ಕಳಲ್ಲಿ ನಿರ್ಜಲೀಕರಣ (Dehydration) ಉಂಟಾಗುವ ಸಾಧ್ಯತೆ ಇರುತ್ತದೆ. ಇದರ ಪರಿಣಾಮವಾಗಿ ಬಾಯಿ ಒಣಗುವುದು, ಮೂತ್ರ ಪ್ರಮಾಣ ಕಡಿಮೆಯಾಗುವುದು, ದೌರ್ಬಲ್ಯ, ಕಿರಿಕಿರಿ ಮುಂತಾದ ಲಕ್ಷಣಗಳು ಕಾಣಿಸಬಹುದು. ವಿಶೇಷವಾಗಿ ಶಿಶು ಮತ್ತು ಚಿಕ್ಕ…

Read More

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಕೋಕ್​​: ಇವಿಷ್ಟೇ ಸಾಂಗ್​​ಗಳಿಗೆ ಮಾತ್ರ ಇನ್ಮುಂದೆ ಅವಕಾಶ – Kannada News | Karnataka Schools Ban Obscene Songs: New Guidelines for Cultural Events

ಬೆಂಗಳೂರು, ಏಪ್ರಿಲ್​​ 28: ಶಾಲಾ ವಾರ್ಷಿಕೋತ್ಸವ ಸೇರಿದಂತೆ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ಶಾಲಾ ಶಿಕ್ಷಣ ಇಲಾಖೆ ನಿಷೇಧಿಸಿದೆ. ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಎಲ್ಲಾ ಶಾಲೆಗಳು (ಖಾಸಗಿ ಶಾಲೆಗಳೂ ಸೇರಿ) ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ. ಅಸಭ್ಯ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸಿದರೆ, ಸಂಬಂಧಿತ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಾಲೆ ನಿರ್ವಹಣೆ ಮಾಡುವವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ. ಯಾವೆಲ್ಲ ಹಾಡುಗಳಿಗೆ ಅವಕಾಶ?…

Read More

ಮನೆಯಲ್ಲಿ ಈ ಒಂದು ಸಸಿ ನೆಟ್ಟರೆ ಹಲ್ಲಿಗಳ ಕಾಟದಿಂದ ಶಾಶ್ವತವಾಗಿ ಮುಕ್ತಿ ಪಡೆಯಬಹುದು – Kannada News | Plant a basil plant at home to get rid of lizards

ಬೇಸಿಗೆಯ ಸಮಯದಲ್ಲಿ ಮನೆಯ ಹೊರಗಡೆ ಹಾವುಗಳ ಕಾಟ ತೀರಾ ಹೆಚ್ಚಾಗುವಂತೆ, ಮನೆಯೊಳಗಡೆ ಹಲ್ಲಿಗಳ (lizards) ಕಾಟ ಹೆಚ್ಚಾಗುತ್ತದೆ. ಈ ಹಲ್ಲಿಗಳು ಮನುಷ್ಯರಿಗೆ ತೊಂದರೆ ನೀಡುವುದಿಲ್ಲ ನಿಜ, ಆದರೆ ಅವುಗಳು ನಾವು ತಿನ್ನುವ ಆಹಾರಕ್ಕೆ ಬಿದ್ದರೆ ನಮಗೆ ಅಪಾಯ ಕಟ್ಟಿಟ್ಟ ಬುತ್ತಿ. ಹಾಗಾಗಿ ಮನೆಯಲ್ಲಿ ಹಲ್ಲಿಗಳಿದ್ದರೆ ಹೆಚ್ಚಿನವರು ಭಯ ಪಡುತ್ತಾರೆ. ಮತ್ತು ಅವುಗಳ ಹಾವಳಿಯಿಂದ ಮುಕ್ತಿ ಪಡೆಯಲು ಮಾರುಕಟ್ಟೆಯಲ್ಲಿ ಸಿಗುವಂತಹ ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಅವು ಹಲ್ಲಿಗಳ ಮೇಲೆ ಪರಿಣಾಮ ಬೀರುವುದಿಲ್ಲ. ಹೀಗಿರುವಾಗ ಮನೆಯೊಳಗಡೆ ಕಿಟಕಿ, ಬಾಗಿಲಿನ…

Read More

ಇದು ರಾಷ್ಟ್ರೀಯ ಹೆದ್ದಾರಿಯೋ ಅಥವಾ ಕೆಸರು ಗದ್ದೆಯೋ? ಶಿರಸಿ-ಹಾವೇರಿ ರಸ್ತೆಯಲ್ಲಿ ನರಕಯಾತನೆ – Kannada News | Karnataka’s Shame: Sirsi Haveri NH Turns Death Trap, Public Demands Action

ಶಿರಸಿ, ಏ.28: ಕರ್ನಾಟಕದ ಸರ್ಕಾರಿ ಸಾರಿಗೆ ವ್ಯವಸ್ಥೆ ಎಷ್ಟೊಂದು ಕೆಟ್ಟೋಗಿದೆ ಎಂದರೆ ಇದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ ನೋಡಿ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಸಾರ್ವಜನಿಕರಿಗೆ ಸಿಗುತ್ತಿರುವ ಪ್ರತಿಫಲ ಮಾತ್ರ ಶೂನ್ಯ ಎನ್ನುವುದಕ್ಕೆ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯೇ ಸಾಕ್ಷಿ. ಈ ರಸ್ತೆಯ ಸ್ಥಿತಿ ಎಷ್ಟು ಭೀಕರವಾಗಿದೆಯೆಂದರೆ, ಇದು ಹೆದ್ದಾರಿಯೋ ಅಥವಾ ಆಫ್-ರೋಡ್ ರ‍್ಯಾಲಿ ನಡೆಯುವ ಕೆಸರು ಗದ್ದೆಯೋ ಎಂಬ ಅನುಮಾನ ಮೂಡುತ್ತಿದೆ. ಇಲ್ಲಿ ವೈರಲ್ ಆಗಿರುವ ದೃಶ್ಯಗಳಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್‌ವೊಂದು ಕೆಸರಿನಲ್ಲಿ ಸಿಲುಕಿ ಮುಂದೆ ಸಾಗಲು ಹರಸಾಹಸ…

Read More

ನಿಲ್ಲದ ಹೈಡ್ರಾಮಾ; ನ್ಯಾ. ಸ್ವರಣ ಕಾಂತ ಶರ್ಮಾ – ಕೇಜ್ರಿವಾಲ್ ನಡುವೆ ಕೋರ್ಟ್​ನಲ್ಲಿ ಏನೇನಾಯ್ತು? – Kannada News | AAP leaders Arvind Kejriwal and Manish Sisodia refused to appear before the Delhi high court bench of Justice Swarana Kanta Sharma

ನವದೆಹಲಿ, ಏಪ್ರಿಲ್ 28: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ (Delhi excise policy case) ಆರೋಪಿಯಾಗಿರುವ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಮಾಜ ಸಚಿವ ಮನೀಶ್ ಸಿಸೋಡಿಯಾ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಅವರ ವಿರುದ್ಧ ಕಾನೂನು ಹೋರಾಟ ಮುಂದುವರೆಸಿದ್ದಾರೆ. ಅವರೆದುರು ವಿಚಾರಣೆಗೆ ಹಾಜರಾಗುವುದಿಲ್ಲ, ತಮ್ಮ ಕೇಸಿಗೆ ಯಾವುದೇ ವಕೀಲರನ್ನು ನೇಮಿಸುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಈ ಕಾನೂನು ಸಮರ ಹೊಸ ತಿರುವು ಪಡೆದುಕೊಂಡಿದೆ. ಆಮ್ ಆದ್ಮಿ ಪಕ್ಷದ ನಾಯಕರಾದ ಅರವಿಂದ್…

Read More

ಉದ್ಯೋಗ ಖಾತ್ರಿ ಕೆಲಸದ ವೇಳೆ ದುರ್ಘಟನೆ: ಬೆಂಕಿಯಂಥ ಬಿಸಿಲಿಗೆ ಬಲಿಯಾದ್ನಾ ಕಾರ್ಮಿಕ? – Kannada News | Raichur MGNREGA Worker Dies: Heat Stroke Suspected, Negligence Alleged

ರಾಯಚೂರು, ಏಪ್ರಿಲ್​​ 28: ಉದ್ಯೋಗ ಖಾತ್ರಿ ಯೋಜನೆಯ ಕೆಲಸಕ್ಕೆ ತೆರಳಿದ್ದ ಕಾರ್ಮಿಕನೋರ್ವ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ರಾಯಚೂರಿನ (Raichur) ಯಾಪಲದಿನ್ನಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ಹುಸೇನಪ್ಪ ಮಡಿವಾಳ (49) ಮೃತ ದುರ್ದೈವಿಯಾಗಿದ್ದು, ಕುಸಿದು ಬಿದ್ದ ಈತನನ್ನು ಕೂಡಲೇ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಹುಸೇನಪ್ಪ ಉಸಿರು ಚೆಲ್ಲಿದ್ದಾರೆ. ಘಟನೆ ಬೆನ್ನಲ್ಲೇ ಸುಡು ಬಿಸಿಲಿನಲ್ಲಿ ಕಾರ್ಮಿಕರನ್ನು ದುಡಿಸುತ್ತಿದ್ದ ಪಿಡಿಒ ವಿರುದ್ಧ ಆಕ್ರೋಶ ಕೇಳಿಬಂದಿದೆ. ಹೀಟ್​​ ಸ್ಟ್ರೋಕ್​​ಗೆ ಬಲಿ? ಇನ್ನು ಸುಮಾರು 40…

Read More

‘ಕೆರೆಬೇಟೆ’ ಬಳಿಕ ‘ಕಾಮನ್ ಮ್ಯಾನ್’: ಓಂ ಸಾಯಿ ಪ್ರಕಾಶ್ ಜೊತೆ ಗೌರಿ ಶಂಕರ್ ಸಿನಿಮಾ – Kannada News | Common Man Kannada movie ft Gowri Shankar directed by Om Sai Prakash

ನಟ ಗೌರಿ ಶಂಕರ್ (Gowri Shankar) ಅವರು ‘ಕೆರೆಬೇಟೆ’ ಸಿನಿಮಾ ಮೂಲಕ ಗಮನ ಸೆಳೆದಿದ್ದರು. ಆ ಬಳಿಕ ಸಣ್ಣ ಬ್ರೇಕ್ ತೆಗೆದುಕೊಂಡ ಅವರು ಈಗ ಹೊಸ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ (Om Sai Prakash) ಜೊತೆ ಗೌರಿ ಶಂಕರ್ ಸಿನಿಮಾ ಮಾಡುತ್ತಿದ್ದಾರೆ. ಇದು ಓಂ ಸಾಯಿ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 106ನೇ ಸಿನಿಮಾ. ಈ ಚಿತ್ರಕ್ಕೆ ‘ಕಾಮನ್ ಮ್ಯಾನ್’ (Common Man) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ…

Read More

‘ಸೋಫಾ ಅಳತೆ ಮಾಡಿಕೊಡು ಬಾ’ ಎಂದು ಕರೆದು ಬರ್ಬರವಾಗಿ ಹತ್ಯೆ; ಬಾರ್ ಎದುರೇ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿದ ಆಟೋ ಚಾಲಕ! – Kannada News | Kolar Crime News: Sofa Maker Murdered in Drug Fueled Brawl; Accused Arrested

ಕೋಲಾರ, ಏ.28: ಜಿಲ್ಲೆಯಲ್ಲಿ ಒಂದು ಆರ್ಡರ್​ ಇದೆ ಎಂದು ನಂಬಿಸಿ ಕರೆದೊಯ್ದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಹೊರವಲಯದಲ್ಲಿ ನಡೆದಿದೆ. ಬೀಡಿ ಕಾಲೋನಿಯ ನಿವಾಸಿ ಸಲ್ಮಾನ್ ಪಾಷಾ (26) ಕೊಲೆಯಾದ ದುರ್ದೈವಿ ಎಂದು ಹೇಳಲಾಗಿದ . ಸೋಫಾ ತಯಾರಿಕೆ ಮತ್ತು ರಿಪೇರಿ ಕೆಲಸ ಮಾಡಿಕೊಂಡಿದ್ದ ಸಲ್ಮಾನ್ ಪಾಷಾ ಮನೆಗೆ ನಿನ್ನೆ ರಾತ್ರಿ 11:30ರ ಸುಮಾರಿಗೆ ಪರಿಚಯಸ್ಥ ಹುಡುಗರು ಬಂದಿದ್ದರು. “ಹೊಸ ಸೋಫಾ ಆರ್ಡರ್ ಬಂದಿದೆ, ಅದರ ಅಳತೆ ತೆಗೆದುಕೊಳ್ಳಲು ಬಾ” ಎಂದು ಹೇಳಿ…

Read More

31 ವರ್ಷ ಜೈಲಿನಲ್ಲಿದ್ದ ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಈಗ ಹೈಕೋರ್ಟ್ ವಕೀಲ! – Kannada News | After 31 years in jail Rajiv Gandhi assassination convict becomes High Court advocate

ಚೆನ್ನೈ, ಏಪ್ರಿಲ್ 28: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಎ.ಜಿ. ಪೆರಾರಿವಾಲನ್ ಇದೀಗ ಹೈಕೋರ್ಟ್​ ವಕೀಲರಾಗಿದ್ದಾರೆ. 2022ರಲ್ಲಿ ಶಿಕ್ಷೆಯಿಂದ ವಿನಾಯಿತಿ ಪಡೆದು ಬಿಡುಗಡೆಯಾದ ಪೆರಾರಿವಾಲನ್ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಅಧ್ಯಯನ ಮಾಡಿದರು. 2025ರಲ್ಲಿ ಅಖಿಲ ಭಾರತ ವಕೀಲರ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಅವರು ಈಗ ವಕೀಲರಾಗಿದ್ದಾರೆ. ರಾಜೀವ್ ಗಾಂಧಿ ಹತ್ಯೆಯ ಆರೋಪಿಯಾಗಿದ್ದ ಪೆರಾರಿವಾಲನ್ ಅವರನ್ನು 2022ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬಿಡುಗಡೆ…

Read More