ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ: 10ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ – Kannada News | Mini Bus Carrying Garment Workers Overturns in Gauribidanur, Eight Seriously Injured
ಚಿಕ್ಕಬಳ್ಳಾಪುರ, ಏಪ್ರಿಲ್ 28: ಗೌರಿಬಿದನೂರು ತಾಲೂಕಿನ ವೇದಲವೇಣಿ ಸಮೀಪ ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದು, ಅವರಲ್ಲಿ ಎಂಟು ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ದೊಡ್ಡಬಳ್ಳಾಪುರದ ಗಾರ್ಮೆಂಟ್ಸ್ ಒಂದಕ್ಕೆ ತೆರಳುತ್ತಿದ್ದ ಈ ಮಿನಿಬಸ್ ಚಾಲಕನ ಅಜಾಗರೂಕತೆಯಿಂದಾಗಿ ಏಕಾಏಕಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಿನಿಬಸ್ನ ಗಾಜುಗಳು ಒಡೆದುಹೋಗಿದ್ದು, ಬಸ್ನಲ್ಲಿ ಸುಮಾರು 20…