PBKS vs RR IPL 2026 Live Score: ಕಿಂಗ್ಸ್ ಪಡೆಗೆ ರಾಯಲ್ಸ್ ಸವಾಲು
ಇಂಡಿಯನ್ ಪ್ರೀಮಿಯರ್ ಲೀಗ್ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಲ್ಲನ್ಪುರ್ನ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಏಕೆಂದರೆ ಉಭಯ ತಂಡಗಳಲ್ಲಿ ಸ್ಫೋಟಕ ದಾಂಡಿಗರ ದಂಡೇ ಇದ್ದು, ಹೀಗಾಗಿ ಪವರ್ಪ್ಲೇನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಎದುರು ನೋಡಬಹುದಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಉಭಯ ತಂಡಗಳು ಈವರೆಗೆ 30 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ 17 ಮ್ಯಾಚ್ಗಳಲ್ಲಿ ಜಯ…