ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ: ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ? – Kannada News | Chikkaballapur Newlywed Roopa Found Dead: Husband Suspected in Suspicious Hanging Incident
ಚಿಕ್ಕಬಳ್ಳಾಪುರ, ಏಪ್ರಿಲ್ 28: ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ರೂಪಾ (30) ಮೃತ ಯುವತಿಯಾಗಿದ್ದು, ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜತೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿ ರೂಪಾ ಮದುವೆಯಾಗಿತ್ತು. ಪತಿಯ ಅನುಮಾನದ ಭೂತಕ್ಕೆ ರೂಪಾ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಪತಿ ವಿರುದ್ಧವೇ ಕೊಲೆ ಆರೋಪ ಇನ್ನು ಅನುಮಾನಾಸ್ಪದ ರೀತಿಯಲ್ಲಿ ಮನೆ ಮಗಳ…