ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಅಬ್ದುಲ್ ರೆಹಮಾನ್ ಜೈಲಿನಲ್ಲಿ ಹತ್ಯೆ – Kannada News | Abdul Rahman Dies in Custody as Fellow Prisoner Faces Murder Charge in Haryana
ಹರಿಯಾಣ, ಫೆಬ್ರವರಿ 10: ಅಯೋಧ್ಯೆಯ ರಾಮ ಮಂದಿರ(Ram Mandir)ದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿ ಜೈಲು ಪಾಲಾಗಿದ್ದ ಅಬ್ದುಲ್ ರೆಹಮಾನ್ನನ್ನು ಜೈಲಿನಲ್ಲಿ ಸಹ ಕೈದಿಗಳು ಕೊಲೆ ಮಾಡಿರುವ ಘಟನೆ ಹರಿಯಾಣದ ಫರೀದಾಬಾದ್ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಯೋಧ್ಯೆಯ ನಿವಾಸಿ ಅಬ್ದುಲ್ ರೆಹಮಾನ್(20)ನನ್ನು ಹರಿಯಾಣದ ಫರೀದಾಬಾದ್ ಜಿಲ್ಲೆಯ ಬಲ್ಲಭಗಢದಲ್ಲಿರುವ ನೀಮ್ಕಾ ಜಿಲ್ಲಾ ಜೈಲಿನಲ್ಲಿ ಬಿಗಿ ಭದ್ರತೆ ಇದ್ದರೂ ಹತ್ಯೆ ಮಾಡಲಾಗಿದೆ. ವರದಿಗಳ ಪ್ರಕಾರ, ಅಬ್ದುಲ್ ರೆಹಮಾನ್ನನ್ನು ಮಾರ್ಚ್ 2025ರಲ್ಲಿ ಫರೀದಾಬಾದ್ನ ಪಾಲಿ ಪ್ರದೇಶದಿಂದ ಗುಜರಾತ್ ಭಯೋತ್ಪಾದಕ ನಿಗ್ರಹ…