ಪಂಜಾಬ್‌ನಲ್ಲಿ ಸ್ಫೋಟ, ರೈಲ್ವೆ ಹಳಿಗೆ ಹಾನಿ, ಅಪರಿಚಿತ ಶವ ಪತ್ತೆ – Kannada News | Patiala Railway Track Explosion: Damaged Line, Dead Body Found, Probe On
ಪಟಿಯಾಲ, ಏಪ್ರಿಲ್ 28: ಪಂಜಾಬ್‌ನ ಪಟಿಯಾಲದಲ್ಲಿ ಸೋಮವಾರ ತಡರಾತ್ರಿ ಸ್ಫೋಟ(Blast) ಸಂಭವಿಸಿದ್ದು ರೈಲ್ವೆ ಹಳಿ ಹಾನಿಗೊಳಗಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಂಭು-ಅಂಬಾಲ ರೈಲು ಹಳಿಯಲ್ಲಿ ಸ್ಫೋಟದ ಸ್ಥಳದ ಬಳಿ ಒಂದು ಮೃತದೇಹ ಪತ್ತೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ಆದರೆ, ಸ್ಫೋಟಕ್ಕೆ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಪೊಲೀಸರ ಪ್ರಕಾರ, ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸರಕು ರೈಲುಗಳಿಗೆ ಮೀಸಲಾಗಿರುವ ರೈಲ್ವೆ ಹಳಿಯ ಬಳಿ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ, ಪೊಲೀಸ್ ಉಪ ಮಹಾನಿರ್ದೇಶಕ (ಡಿಐಜಿಪಿ) ಮತ್ತು ಪಟಿಯಾಲ ಹಿರಿಯ…