Headlines

ಆ ಚೀಟಿಗಳಲ್ಲಿದೆಯಾ ಸಾವಿನ ಸೀಕ್ರೆಟ್? ಯುವತಿಯ ನಗ್ನ ಮೃತದೇಹ ಪತ್ತೆ ಪ್ರಕರಣದ ಹಿಂದೆ ಹಲವು ಅನುಮಾನ – Kannada News | Bengaluru Adugodi Death Mystery: Secret Notes Found on Walls of Pooja Dutta’s House; Mental Depression Suspected

ಪೂಜಾ ದತ್ತಾ ರೂಮ್​ನ ಗೋಡೆಯಲ್ಲಿ ಹಲವು ಚೀಟಿಗಳು ಅಂಟಿಸಿರುವುದು ಹಾಗೂ ಪೂಜಾ ದತ್ತಾImage Credit source: tv9 ಬೆಂಗಳೂರು, ಏಪ್ರಿಲ್ 28: ಬೆಂಗಳೂರಿನ (Bengaluru) ಆಡುಗೋಡಿಯ ಬಾಡಿಗೆ ಮನೆಯಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾದ ಪೂಜಾ ದತ್ತಾ ಸಾವಿನ ಪ್ರಕರಣವು (Mystery Death Case) ದಿನಕ್ಕೊಂದು ತಿರುವು ಪಡೆಯುತ್ತಿದೆ. ಪ್ರಾಥಮಿಕ ತನಿಖೆಯ ವೇಳೆ, ಪೂಜಾ ವಾಸವಿದ್ದ ಮನೆಯ ಸ್ಥಿತಿಯನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ. ಇದರಿಂದಾಗಿ, ಪೂಜಾ ತೀವ್ರ ಮಾನಸಿಕ ಖಿನ್ನತೆಗೆ (Mental Depression) ಒಳಗಾಗಿದ್ದಳೇ ಎಂಬ ಅನುಮಾನ ಈಗ…

Read More

ಬಿಸಿಲ ಬೇಗೆಗೆ ಬೆಂದ ಬೆಂಗಳೂರು: ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್! – Kannada News | Bengaluru Heatwave: High Demand for ACs, Coolers, and Earthen Pots as Temperatures Soar

ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್! ಬೆಂಗಳೂರು, ಏಪ್ರಿಲ್ 28: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ (Weather) ಹೆಚ್ಚಾಗುತ್ತಿದ್ದು, ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಸುಡುವ ಬಿಸಿಲಿನಿಂದ ಹೈರಾಣಾಗಿರುವ ನಗರದ ಜನತೆ ಈಗ ‘ಕೂಲ್’ ಆಗಿರಲು ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಮಣ್ಣಿನ ಉತ್ಪನ್ನಗಳ ಮೊರೆ ಹೋಗುತ್ತಿದ್ದಾರೆ. ಏಪ್ರಿಲ್ ತಿಂಗಳ ಆರಂಭದಲ್ಲೇ ಸೆಕೆ ತಾಳಲಾರದೆ ಜನರು ಎಸಿ, ಕೂಲರ್ ಮತ್ತು ಮಣ್ಣಿನ ಮಡಿಕೆಗಳನ್ನು ಖರೀದಿಸಲು ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಶೋರೂಮ್‌ಗಳಲ್ಲಿ ಸ್ಟಾಕ್ ಖಾಲಿ…

Read More

Breaking Engagement: ಶಾಸ್ತ್ರೋಕ್ತವಾಗಿ ಎಂಗೇಜ್​ಮೆಂಟ್ ಆಗಿ ಮದುವೆಯಾಗದಿದ್ರೆ ದೋಷ ಕಾಡುತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Nischaya Tambula: The Spiritual Impact of Breaking an Engagement in Sanatana Dharma

“ಮ್ಯಾರೇಜಸ್ ಆರ್ ಮೇಡ್ ಇನ್ ಹೆವೆನ್” ಎಂಬ ನುಡಿಯಂತೆ, ವಿವಾಹ ಬಂಧವು ಕೇವಲ ಮಾನವ ಸಂಬಂಧವಲ್ಲ, ಅದೊಂದು ದೈವಿಕ ಸಂಪರ್ಕ. ಮನುಷ್ಯನ ಜೀವನದಲ್ಲಿ ವಿವಾಹವು ಒಂದು ಪ್ರಮುಖ ಪರಿವರ್ತನೆಯ ಕಾಲವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿವಾಹ ಮತ್ತು ಅದರ ಪೂರ್ವಭಾವಿ ಸಂಸ್ಕಾರಗಳಿಗೆ ನೀಡುವ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ. ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದಾಗಿ ವಾಗ್ದಾನಗಳ ಮಹತ್ವವನ್ನು ಮರೆಯಲಾಗುತ್ತಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು…

Read More

ಪಂಜಾಬ್‌ನಲ್ಲಿ ಸ್ಫೋಟ, ರೈಲ್ವೆ ಹಳಿಗೆ ಹಾನಿ, ಅಪರಿಚಿತ ಶವ ಪತ್ತೆ – Kannada News | Patiala Railway Track Explosion: Damaged Line, Dead Body Found, Probe On

ಪಟಿಯಾಲ, ಏಪ್ರಿಲ್ 28: ಪಂಜಾಬ್‌ನ ಪಟಿಯಾಲದಲ್ಲಿ ಸೋಮವಾರ ತಡರಾತ್ರಿ ಸ್ಫೋಟ(Blast) ಸಂಭವಿಸಿದ್ದು  ರೈಲ್ವೆ ಹಳಿ ಹಾನಿಗೊಳಗಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಂಭು-ಅಂಬಾಲ ರೈಲು ಹಳಿಯಲ್ಲಿ ಸ್ಫೋಟದ ಸ್ಥಳದ ಬಳಿ ಒಂದು ಮೃತದೇಹ ಪತ್ತೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ಆದರೆ, ಸ್ಫೋಟಕ್ಕೆ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಪೊಲೀಸರ ಪ್ರಕಾರ, ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸರಕು ರೈಲುಗಳಿಗೆ ಮೀಸಲಾಗಿರುವ ರೈಲ್ವೆ ಹಳಿಯ ಬಳಿ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ, ಪೊಲೀಸ್ ಉಪ ಮಹಾನಿರ್ದೇಶಕ (ಡಿಐಜಿಪಿ) ಮತ್ತು ಪಟಿಯಾಲ ಹಿರಿಯ…

Read More

ಉದ್ಯೋಗ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ! ಮಹಿಳೆಯರನ್ನ ದಂಧೆಗೆ ಇಳಿಸ್ತಿದ್ದ ಕಿಂಗ್ ಪಿನ್ ಸೇರಿ 11 ಜನ ಅರೆಸ್ಟ್ – Kannada News | Manvi Police Bust Prostitution Racket: 11 Arrested for Trapping Unemployed Women in Raichur

ರಾಯಚೂರು, ಏಪ್ರಿಲ್ 28: ಉದ್ಯೋಗ ನೀಡುವ ನೆಪದಲ್ಲಿ ನಿರುದ್ಯೋಗಿ ಮಹಿಳೆಯರನ್ನು ದಂಧೆಗೆ ಇಳಿಸುತ್ತಿದ್ದ ಜಾಲವನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೊಲೀಸರು ಭೇದಿಸಿದ್ದಾರೆ. ಹಿರೇಕೊಟ್ನೆಕಲ್ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಕಿಂಗ್‌ಪಿನ್ ತಾಯಪ್ಪ ಸೇರಿದಂತೆ ಒಟ್ಟು 11 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಸ್ಟರ್ ಮೈಂಡ್ ತಾಯಪ್ಪ! ಮಾನ್ವಿ ಪಟ್ಟಣದ ಇಂದಿರಾನಗರದ ನಿವಾಸಿಯಾದ ತಾಯಪ್ಪ ಈ ದಂಧೆಯ ಮಾಸ್ಟರ್ ಮೈಂಡ್ ಆಗಿದ್ದು, ಆಂಧ್ರಪ್ರದೇಶ, ತೆಲಂಗಾಣ,…

Read More

ಐಪಿಎಲ್ ಟಿಕೆಟ್ ಬ್ಲಾಕ್ ದಂಧೆಗೆ ಪೊಲೀಸರ ಬ್ರೇಕ್: 24 ಮಂದಿ ಅರೆಸ್ಟ್, 17 ಕೇಸ್ ದಾಖಲು! – Kannada News | IPL 2026: Bengaluru Police Crack Down on Ticket Black Marketing; 24 Arrested and 37 Tickets Seized

ಬೆಂಗಳೂರು, ಏಪ್ರಿಲ್ 28: ಐಪಿಎಲ್ ಪಂದ್ಯಾವಳಿಗಳ ಸಂದರ್ಭದಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಬ್ಲಾಕ್ ಮಾರ್ಕೆಟ್ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ, ಪೊಲೀಸರು 17 ಪ್ರಕರಣಗಳನ್ನು ದಾಖಲಿಸಿದ್ದು, ಈ ಸಂಬಂಧ 24 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 37 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಪ್ರಕರಣಗಳು ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಪ್ರೇಮಿಗಳ…

Read More

DC vs RCB: ಜಾಕೋಬ್ ಬೆಥೆಲ್‌ ಸಿಡಿಸಿದ 104 ಮೀಟರ್ ಸಿಕ್ಸ್ ಕಂಡು ಶಾಕ್ ಆದ ಕೊಹ್ಲಿ: ವಿಡಿಯೋ ನೋಡಿ – Kannada News | Virat Kohli shocked by Jacob Bethell’s 104 meter six in DC vs RCB Match Watch video

ಬೆಂಗಳೂರು (ಏ. 28): 2026 ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಆರ್‌ಸಿಬಿಯ ಸ್ಟಾರ್ ಮತ್ತು ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದರು. ಈ ಪಂದ್ಯದಲ್ಲಿ ಜಾಕೋಬ್ ಸಣ್ಣ ಇನ್ನಿಂಗ್ಸ್ ಆಡಿದರೂ, ಇವರು ಬಾರಿಸಿದ ಒಂದು ಶಾಟ್ ಎಲ್ಲರನ್ನೂ ದಂಗಾಗಿಸಿತು. ಜಾಕೋಬ್ ಬೆಥೆಲ್ ಡೆಲ್ಲಿ ಕ್ಯಾಪಿಟಲ್ಸ್​ನ ವೇಗಿ ಕೈಲ್ ಜೇಮಿಸನ್ ಬೌಲಿಂಗ್​ನಲ್ಲಿ ಅದ್ಭುತವಾದ…

Read More

‘ಕೆಡಿ’ ರಿಲೀಸ್ ಆದ ಒಂದೇ ವಾರಕ್ಕೆ ‘ಜನ ನಾಯಗನ್’ ತೆರೆಗೆ? ಯಾಕೀ ನಿರ್ಧಾರ? – Kannada News | Thalapathy Vijay’s ‘Jan Nayagan’: Why Release Just After K.D. Amidst Delays and Leaks?

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಈವರೆಗೆ ಸಿನಿಮಾದ ರಿಲೀಸ್ ಬಗ್ಗೆ ಅಪ್​​​ಡೇಟ್ ಸಿಕ್ಕಿಲ್ಲ. ಈಗ ‘ಜನ ನಾಯಗನ್’ಗೆ ನಾಲ್ಕು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ ಎಂದು ವರದಿ ಆಗಿದೆ. ಕೆಲವು ವರದಿಗಳ ಪ್ರಕಾರ ಸಿನಿಮಾ ಮೇ 8ರಂದು ತೆರೆಗೆ ಬರಲಿದೆಯಂತೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಲಿದೆ ಎಂದು ವರದಿ ಆಗಿದೆ. ಈ ವಿಷಯದಲ್ಲಿ ಸಾಕಷ್ಟು ಗೊಂದಲವೂ ಇದೆ. ‘ಕೆವಿಎನ್​’ ಸಂಸ್ಥೆ ‘ಜನ ನಾಯಗನ್’…

Read More

ಬೆಂಕಿ ಅವಘಡ: ಪ್ರಾಣ ಲೆಕ್ಕಿಸದೇ ಪಿಜಿಯಿಂದ ಹಾರಿ ಜೀವ ಉಳಿಸಿಕೊಂಡ ಯುವತಿಯರು, 50 ಮಂದಿ ಜಸ್ಟ್ ಮಿಸ್ – Kannada News | Bengaluru: 50 PG Girls Narrowly Escape After Banner Warehouse Catches Fire in Nandini Layout; Dramatic CCTV Footage Emerges

ಬೆಂಗಳೂರು, ಏಪ್ರಿಲ್ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಯಾನರ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 50 ಯುವತಿಯರು ಅಪಾಯದಿಂದ ಪಾರಾಗಿದ್ದು, ಭಾರಿ ದುರಂತ ತಪ್ಪಿದೆ. ಬೆಂಕಿ ಗೋದಾಮಿಗೆ ಹತ್ತಿಕೊಂಡು ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಪಿಜಿ ಕಟ್ಟಡಕ್ಕೂ ವ್ಯಾಪಿಸಲು ಶುರುವಾಗಿತ್ತು. ಬೆಂಕಿ ಹೊತ್ತಿಕೊಳ್ಳುವುದನ್ನು ಗಮನಿಸಿದ ತಕ್ಷಣ, ಪಿಜಿಯಲ್ಲಿ ವಾಸವಿದ್ದ ಯುವತಿಯರು ಪ್ರಾಣದ ಹಂಗು ತೊರೆದು ಕಟ್ಟಡದಿಂದ ಹೊರಗೆ ಜಿಗಿದು ಓಡಿದ್ದಾರೆ. ಕೆಲವರು ಜೀವ ಉಳಿಸಿಕೊಳ್ಳಲು ಜಿಗಿದು ಪಾರಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಯುವತಿಯರು ಚೀರಾಡುತ್ತಾ…

Read More

ಸಾಮೂಹಿಕ ವಿವಾಹದಲ್ಲಿ ಅನಿರೀಕ್ಷಿತ ಅತಿಥಿಯಾಗಿ ಬಂದ ಬಿರುಗಾಳಿ, ಸಪ್ತಪದಿ ತುಳಿಯುವುದ ಬಿಟ್ಟು ಓಡಿಹೋದ 36 ಜೋಡಿಗಳು – Kannada News | Rajasthan: Sudden Storm Disrupts Mass Wedding, Couples Rush to Safety

ಜೈಪುರ, ಏಪ್ರಿಲ್ 28: ಸಾಮೂಹಿಕ ವಿವಾಹ ಸಮಾರಂಭದ ವೇಳೆ ಬಿರುಗಾಳಿ ಬೀಸಿ ನವ ಜೋಡಿಗಳು ಹೆದರಿ ಓಡಿ ಹೋಗಿರುವ ವಿಡಿಯೋ ವೈರಲ್ ಆಗಿದೆ.  ಬೇಸಿಗೆಯ ಆರಂಭದ ಬಿಸಿಲಿಗೆ ತತ್ತರಿಸಿದ್ದ ರಾಜಸ್ಥಾನದ ಟೋಂಕ್‌ನಲ್ಲಿ ಗುಡುಗು ಸಹಿತ ಮಳೆ ಎಲ್ಲರಿಗೂ ಸಂತೋಷ ನೀಡಬೇಕಿತ್ತು. ಆದರೆ, ಧಾಕಡ್ ಸಮುದಾಯ ಆಯೋಜಿಸಿದ್ದ 36 ಜೋಡಿಗಳ ಸಾಮೂಹಿಕ ವಿವಾಹದ ಮಂಟಪದಲ್ಲಿ ಬಿರುಗಾಳಿ, ಮಳೆ ಭೀಕರ ಅನಾಹುತವನ್ನೇ ಸೃಷ್ಟಿಸಿತ್ತು. ಹೂವಿನ ಅಲಂಕಾರ, ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚುತ್ತಿದ್ದ ವಧು-ವರರು ಮತ್ತು ಅವರ ಸಂಬಂಧಿಕರಿಂದ ಮೈದಾನ ತುಂಬಿ ತುಳುಕುತ್ತಿತ್ತು….

Read More