ರಾಜಸ್ಥಾನದಲ್ಲಿ ಗಲಾಟೆ, ಬೆಂಗಳೂರಲ್ಲಿ ಬೆದರಿಕೆ: ಪಾರ್ಕ್ನಲ್ಲೇ ವ್ಯಕ್ತಿ ಆತ್ಮಹತ್ಯೆ ಕೇಸ್ಗೆ ಸ್ಫೋಟಕ ಟ್ವಿಸ್ಟ್ – Kannada News | Bengaluru Cubbon Park Case: Harassment by Rajasthan Gang Linked to Man’s Death
ಬೆಂಗಳೂರು, ಏಪ್ರಿಲ್ 27: ನಗರದ ಕಬ್ಬನ್ ಪಾರ್ಕ್ನಲ್ಲಿ ಕಳೆದ 20 ದಿನಗಳ ಹಿಂದೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸ್ತಿದ್ದ ಕಬ್ಬನ್ ಪಾರ್ಕ್ ಪೊಲೀಸರು ಕೊನೆಗೂ ಸಾವಿನ ಹಿಂದಿನ ಸತ್ಯವನ್ನು ಬಯಲಿಗೆಳೆದಿದ್ದಾರೆ. ಮೃತ ವ್ಯಕ್ತಿಯನ್ನು ರಾಜಸ್ಥಾನದ ಸುರೇಶ್ ಕುಮಾರ್ ಪುರೋಹಿತ್ ಎಂದು ಗುರುತಿಸಲಾಗಿದ್ದು, ಈತನದ್ದು ಮಾಮೂಲಿ ಆತ್ಮಹತ್ಯೆ ಅಲ್ಲ. ಬದಲಾಗಿ ಹೊಡೆದು, ಬಡಿದಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ್ದ ಕಾರಣ ಮನನೊಂದು ಸುರೇಶ್ ಕುಮಾರ್ ಇಂತಹ ದುಡುಕಿನ ನಿರ್ಧಾರ ತೆಗೆದುಕೊಂಡಿರೋದು ತನಿಖೆ…