ಬೆಸ್ಕಾಂ ಗ್ರಾಹಕರಿಗೆ ಬಂಪರ್ ಆಫರ್! ಇನ್ನು ‘ಇ-ಖಾತಾ’ ಇದ್ದರೆ ಸಾಕು, ಕೆಲವೇ ನಿಮಿಷಗಳಲ್ಲಿ ವಿದ್ಯುತ್ ಸಂಪರ್ಕ ನಿಮ್ಮ ಹೆಸರಿಗೆ – Kannada News | Bescom Name Transfer Online: Change Electricity Connection via e Khata in 10 Minutes

, ಮನೆಯಲ್ಲೇ ಕುಳಿತು ಬದಲಾಯಿಸಿ ವಿದ್ಯುತ್ ಬಿಲ್ ಹೆಸರು!
Image Credit source: MediaForge AI

ಬೆಂಗಳೂರು, ಏಪ್ರಿಲ್ 27:  ತನ್ನ ಗ್ರಾಹಕರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಭರ್ಜರಿ ಸಿಹಿಸುದ್ದಿ ನೀಡಿದೆ. ಬೃಹತ್ ಬೆಂಗಳೂರು ಪ್ರಾಧಿಕಾರದ (GBA) ಇ-ಖಾತಾ ಅಭಿಯಾನದ ಯಶಸ್ಸಿನ ಬೆನ್ನಲ್ಲೇ, ಬೆಸ್ಕಾಂ ತನ್ನ ಪೋರ್ಟಲ್ ಅನ್ನು ಇ-ಖಾತಾ ಡೇಟಾಬೇಸ್‌ನೊಂದಿಗೆ ಸಂಯೋಜಿಸಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಗ್ರಾಹಕರು ಇನ್ನು ಮುಂದೆ ಬೆಸ್ಕಾಂ ಕಚೇರಿಗಳಿಗೆ ಅಲೆಯದೇ, ಕೇವಲ ಕೆಲವೇ ನಿಮಿಷಗಳಲ್ಲಿ ಆನ್‌ಲೈನ್ ಮೂಲಕ ವಿದ್ಯುತ್ ಸಂಪರ್ಕವನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳಬಹುದು.

ಮಧ್ಯವರ್ತಿಗಳ ಕಾಟಕ್ಕೆ ಬ್ರೇಕ್

ಈ ಮೊದಲು ವಿದ್ಯುತ್ ಸಂಪರ್ಕದ ಹೆಸರು ಬದಲಾಯಿಸುವುದು ಸಾಹಸದ ಕೆಲಸವಾಗಿತ್ತು. ಗ್ರಾಹಕರು ಹಲವಾರು ದಾಖಲೆಗಳನ್ನು ಹಿಡಿದು ವಾರಗಟ್ಟಲೆ ಕಚೇರಿಗಳಿಗೆ ಅಲೆಯಬೇಕಿತ್ತು. ಇದರ ಲಾಭ ಪಡೆಯುತ್ತಿದ್ದ ಮಧ್ಯವರ್ತಿಗಳು 10,000 ರೂಪಾಯಿಗೂ ಅಧಿಕ ಹಣ ವಸೂಲಿ ಮಾಡುತ್ತಿದ್ದರು. ಆದರೆ ಹೊಸ ವ್ಯವಸ್ಥೆಯು ಸಂಪೂರ್ಣವಾಗಿ ಡಿಜಿಟಲ್ ಆಗಿದ್ದು, ಕೇವಲ 1,300 ರೂ. ಶುಲ್ಕದಲ್ಲಿ (ಸ್ಟ್ಯಾಂಪ್ ಪೇಪರ್, ಬಾಂಡ್ ಮತ್ತು ಸೇವಾ ಶುಲ್ಕ ಸೇರಿ) ಪ್ರಕ್ರಿಯೆ ಮುಗಿಯಲಿದೆ. ಇದುವರೆಗೆ ಸುಮಾರು 5,000ಕ್ಕೂ ಹೆಚ್ಚು ಮಂದಿ ಈ ಸೌಲಭ್ಯದ ಲಾಭ ಪಡೆದಿದ್ದಾರೆ.

ಹೆಸರು ಬದಲಾವಣೆ ಮಾಡುವುದು ಹೇಗೆ?

  •  ಎಸ್‌ಎಮ್‌ಎಸ್ ಮೂಲಕ ಲಿಂಕ್: ನಿಮ್ಮ ಆಸ್ತಿಯ ಇ-ಖಾತಾ ನೋಂದಣಿಯಾದ ತಕ್ಷಣ, ಬೆಸ್ಕಾಂ ಸರ್ವರ್‌ನಿಂದ ನಿಮ್ಮ ಮೊಬೈಲ್‌ಗೆ ಲಿಂಕ್ ಇರುವ ಎಸ್‌ಎಮ್‌ಎಸ್ ಬರಲಿದೆ.
  • ಲಾಗಿನ್ ಮತ್ತು ಪರಿಶೀಲನೆ: ಲಿಂಕ್ ಕ್ಲಿಕ್ ಮಾಡಿ ಬೆಸ್ಕಾಂ ಪೋರ್ಟಲ್‌ಗೆ ಲಾಗಿನ್ ಆಗಿ. ಇ-ಖಾತಾದಲ್ಲಿರುವ ನಿಮ್ಮ ಆಸ್ತಿಯ ವಿವರಗಳು ಮತ್ತು ಈ ಹಿಂದಿನ ಮಾಲೀಕರ ಹೆಸರು ಪರದೆಯ ಮೇಲೆ ಕಾಣಿಸಿಕೊಳ್ಳುತ್ತವೆ.
  •  ಡಿಜಿಟಲ್ ಸಹಿ (e-Sign): ಆಧಾರ್ ಆಧಾರಿತ ಇ-ಕೆವೈಸಿ (e-KYC) ಬಳಸಿ ಡಿಜಿಟಲ್ ಒಪ್ಪಂದ ಮತ್ತು ಬಾಂಡ್‌ಗಳಿಗೆ ಇ-ಸೈನ್ ಮಾಡಬೇಕು.
  •  ಶುಲ್ಕ ಪಾವತಿ: ಯುಪಿಐ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ನಿಗದಿತ ಶುಲ್ಕ ಪಾವತಿಸಿದರೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ GBA Election: ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ! ಸೆಪ್ಟೆಂಬರ್​ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ!

ವಿಸ್ತರಣೆಯ ಗುರಿ

ಈ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ಸದ್ಯಕ್ಕೆ ಈ ಸೌಲಭ್ಯವು ಜಿಬಿಎ (GBA) ವ್ಯಾಪ್ತಿಯ ಐದು ನಗರ ಸಭೆಗಳ ಮಿತಿಯಲ್ಲಿ ಲಭ್ಯವಿದೆ. ಐಟಿ ತಂತ್ರಜ್ಞಾನ ಬಳಸಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವುದು ನಮ್ಮ ಗುರಿ. ಮುಂದಿನ ದಿನಗಳಲ್ಲಿ ಈ ಸೌಲಭ್ಯವನ್ನು ರಾಜ್ಯದ ಇತರ ನಗರಸಭೆ, ಪುರಸಭೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ವ್ಯವಸ್ಥೆಯಿಂದಾಗಿ ಗ್ರಾಹಕರು ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ, ಪಾರದರ್ಶಕವಾಗಿ ಮತ್ತು ವೇಗವಾಗಿ ತಮ್ಮ ಕೆಲಸಗಳನ್ನು ಮುಗಿಸಿಕೊಳ್ಳಬಹುದಾಗಿದೆ. ಮುಂದಿನ ಬಿಲ್ಲಿಂಗ್ ಅವಧಿಯಿಂದಲೇ ಗ್ರಾಹಕರ ಹೆಸರು ವಿದ್ಯುತ್ ಬಿಲ್‌ನಲ್ಲಿ ಪ್ರತಿಫಲಿಸಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಾಯಿ ಪಲ್ಲವಿ ಹೆಗಲಮೇಲೆ ಕೈ ಹಾಕಲು ಮುಂದಾದ ಆಮಿರ್ ಮಗ; ಮುಂದಾಯ್ತು ಯಾರು ಊಹಿಸದ ಘಟನೆ – Kannada News | Sai Pallavi and Junaid Khan: Viral ‘Ek Din’ Incident Sparks Debate on Respect

ನಟಿ ಸಾಯಿ ಪಲ್ಲವಿ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ಈಗ ಹಿಂದಿಯಿಂದಲೂ ಆಫರ್​​ಗಳು ಬರೋಕೆ ಆರಂಭ ಆಗಿವೆ. ಹಿಂದಿಯಲ್ಲಿ ಅವರು ನಟಿಸಿರುವ ‘ಏಕ್ ದಿನ್’ ಸಿನಿಮಾ ರಿಲೀಸ್​​ಗೆ ರೆಡಿ ಆಗಿದೆ. ಈ ಚಿತ್ರದ ವಿಶೇಷ ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಈ ವೇಳೆ ನಡೆದ ಘಟನೆ ಒಂದು ಚರ್ಚೆಗೆ ಕಾರಣ ಆಗಿದೆ. ಸಾಯಿ ಪಲ್ಲವಿ ಹೆಗಲಮೇಲೆ ಕೈ ಹಾಕಲು ಆಮಿರ್ ಖಾನ್ (Aamir Khan) ಮಗ ಜುನೈದ್ ಖಾನ್ ಮುಂದಾಗಿದ್ದರು. ಆ ಬಳಿಕ ಅವರು ನಡೆದುಕೊಂಡ ರೀತಿ ಎಲ್ಲರ ಗಮನ ಸೆಳೆದಿದೆ.

ಸಾಯಿ ಪಲ್ಲವಿ ಹಾಗೂ ಜುನೈದ್ ಖಾನ್ ಅವರ ‘ಏಕ್ ದಿನ್’ ಸಿನಿಮಾಗೆ ಸುನೀಲ್ ಪಾಂಡೆ ನಿರ್​ದೇಶನ ಮಾಡಿದ್ದಾರೆ. ಇದು ಥಾಯಿ ಭಾಷೆಯ ‘ಒನ್ ಡೇ’ ಸಿನಿಮಾದ ರಿಮೇಕ್ ಆಗಿದೆ. ಮನ್ಸೂರ್ ಖಾನ್, ಆಮಿರ್ ಖಾನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮೇ 1ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಚರ್ಚೆ ನಡೆಯುತ್ತಿದೆ. ವಿಶೇಷ ಶೋ ನೋಡಿದ ಬಳಿಕ ಆಮಿರ್ ಖಾನ್ ಅತ್ತಿದ್ದಾರೆ.

ವಿಶೇಷ ಶೋ ಬಳಿಕ ಸುದ್ದಿಗೋಷ್ಠಿ ಒಂದನ್ನು ಆಯೋಜನೆ ಮಾಡಲಾಯಿತು. ಆಗ ಜುನೈದ್ ಖಾನ್ ಅವರು ಸಾಯಿ ಪಲ್ಲವಿ ಹೆಗಲಮೇಲೆ ಕೈ ಹಾಕಲು ಮುಂದಾಗಿದ್ದಾರೆ. ಆ ಬಳಿಕ ಅವರಿಗೆ ಏನನ್ನಿಸಿತೋ ಏನೋ, ಹೆಗಲಮೇಲೆ ಕೈ ಹಾಕದೆ ಹಿಂದಕ್ಕೆ ತೆಗೆದುಕೊಂಡಿದ್ದಾರೆ.ಈ ವಿಡಿಯೋ ವೈರಲ್ ಆಗಿದೆ. ಅನೇಕರು ಇದಕ್ಕೆ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಹುಶಃ ಜುನೈದ್​​ಗೆ ಇವರು ಉಳಿದ ಹೀರೋಯಿನ್​ಗಳಂತೆ ಅಲ್ಲ ಎಂಬುದು ಆ ಬಳಿಕ ಅರಿವಾಗಿರಬಹುದು’ ಹೀಗಾಗಿ, ಕೈ ಹಿಂದಕ್ಕೆ ತೆಗೆದುಕೊಂಡಿದ್ದಾರೆ’ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ನನ್ನ ತಂದೆ ಅಂತ ಹೇಳಿಕೊಳ್ಳಲಿಲ್ಲ ಪುತ್ರ ಜುನೈದ್ ಖಾನ್; ಕಾರಣ ಏನು?

ಇನ್ನು ಕೆಲವರು ಜುನೈದ್ ಪರ ಬ್ಯಾಟ್ ಬೀಸಿದ್ದಾರೆ. ‘ಜುನೈದ್​ ಅವರಿಗೆ ಸಾರ್ವಜನಿಕವಾಗಿ ಹೇಗಿರಬೇಕು, ಯಾವುದು ನಟಿಯರಿಗೆ ಹಿತ ನೀಡುತ್ತದೆ, ಯಾವುದು ಅಹಿತ ಎನಿಸುತ್ತದೆ ಎಂಬುದು ಗೊತ್ತಿದೆ’ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಜೆಪಿ ಜೊತೆ ರಾಘವ್ ಚಡ್ಡಾ ಸೇರಿ 7 ಆಪ್ ಸಂಸದರ ವಿಲೀನವನ್ನು ಅಂಗೀಕರಿಸಿದ ರಾಜ್ಯಸಭೆ – Kannada News | Rajya Sabha Accepts Raghav Chadha and Other Rebel AAP MPs BJP Merger

ನವದೆಹಲಿ, ಏಪ್ರಿಲ್ 27: ರಾಘವ್ ಚಡ್ಡಾ (Raghav Chadha) ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಇತರ 6 ಸಂಸದರು ಭಾರತೀಯ ಜನತಾ ಪಕ್ಷ (ಬಿಜೆಪಿ)ದೊಂದಿಗೆ ವಿಲೀನಗೊಳ್ಳಲು ಮಾಡಿದ ಮನವಿಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಈ ಮೂಲಕ ಮೇಲ್ಮನೆಯ ಸದಸ್ಯರ ಪಟ್ಟಿಯನ್ನು ನವೀಕರಿಸಲಾಗಿದೆ. ಈ ವಿಲೀನದೊಂದಿಗೆ, ಬಿಜೆಪಿಯ ಬಲ 113ಕ್ಕೆ ಏರಿತು. ಹಾಗೇ, ಎನ್‌ಡಿಎ ರಾಜ್ಯಸಭೆಯಲ್ಲಿ 140 ಸ್ಥಾನಗಳನ್ನು ದಾಟಿದೆ. ಈ ವಿಲೀನದ ಬಳಿಕ ಆಮ್ ಆದ್ಮಿ ಪಕ್ಷದ ಬಲ 3ಕ್ಕೆ ಇಳಿದಿದೆ.

ರಾಘವ್ ಚಡ್ಡಾ ಜೊತೆಗೆ, ಹರ್ಭಜನ್ ಸಿಂಗ್, ರಾಜೇಂದ್ರ ಗುಪ್ತಾ, ವಿಕ್ರಮಜಿತ್ ಸಿಂಗ್ ಸಾಹ್ನಿ, ಸ್ವಾತಿ ಮಲಿವಾಲ್, ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. ಈ ವಿಲೀನದ ನಂತರ 7 ಸಂಸದರು ರಾಜ್ಯಸಭಾ ಅಧ್ಯಕ್ಷರನ್ನು ತಮ್ಮನ್ನು ಬಿಜೆಪಿ ಸಂಸದರೆಂದು ಪರಿಗಣಿಸುವಂತೆ ಮನವಿ ಮಾಡಿದ್ದರು. ಅದನ್ನು ಈಗ ಅಂಗೀಕರಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕುಸಿದು ಬಿದ್ದು ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾವು; ಕೊನೆಗೂ ಹೆತ್ತವರ ಕನಸೂ ನನಸಾಗಲಿಲ್ಲ! – Kannada News | Sudden Demise: Hassan Software Engineer Shwetha, 25, Succumbs to Brain Hemorrhage

ಹಾಸನ, ಏ.27: ಜಿಲ್ಲೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ 25 ವರ್ಷದ ಯುವತಿ ಶ್ವೇತಾ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದೀಗ ಈ ಘಟನೆ ಇಡೀ ಗ್ರಾಮದಲ್ಲಿ ಹಾಗೂ ಕುಟುಂಬಸ್ಥರಲ್ಲಿ ಸೂತಕ ಛಾಯೆ ಆವರಿಸಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ(25), ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಏಪ್ರಿಲ್ 25ರ ಶುಕ್ರವಾರ ಸಂಜೆ ಮನೆಯಲ್ಲಿದ್ದಾಗ ಶ್ವೇತಾ ಹಠಾತ್ತಾಗಿ ಕುಸಿದು ಬಿದ್ದಿದ್ದರು.

ಕುಸಿದು ಬಿದ್ದ ತಕ್ಷಣವೇ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ವೇಳೆಗೆ ಶ್ವೇತಾ ಕೋಮಾಗೆ ಜಾರಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿರುವ (Brain Hemorrhage) ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಚಿಕಿತ್ಸೆ ಮಾಡುತ್ತಿರುವಾಗಲೇ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಶ್ವೇತಾ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪತ್ನಿಯ ಕೊಂದು ಶವದ ಮೇಲೆ ಸಿಮೆಂಟ್ ಸುರಿದು, ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟ ಪತಿ

ಮಗಳ ಸಾವಿನ ನೋವಿನ ನಡುವೆಯೂ ಪೋಷಕರು ಶ್ವೇತಾ ಅವರ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದ್ದರು. ಆ ಮೂಲಕ ಮತ್ತೊಬ್ಬರ ಬಾಳಿಗೆ ಬೆಳಕಾಗಲು ಮುಂದಾಗಿದ್ದರು. ಆದರೆ ಆಕೆಯ ದೇಹದ ಆರೋಗ್ಯದ ಸ್ಥಿತಿಗತಿಯಿಂದಾಗಿ ಅಂಗಾಂಗ ದಾನ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ. ಇಂದು ಬಂಡಿಲಕ್ಕನಕೊಪ್ಪಲು ಗ್ರಾಮದಲ್ಲಿ ಯುವತಿಯ ಅಂತ್ಯಕ್ರಿಯೆ ನಡೆಯಲಿದೆ. ತುಂಬು ವಯಸ್ಸಿನ ಮಗಳ ಹಠಾತ್ ಸಾವಿನಿಂದ ಗಂಗಾಧರ್ ಕುಟುಂಬ ಕಂಗಾಲಾಗಿದ್ದು, ಹಸನ್ಮುಖಿ ಯುವತಿಯ ಸಾವಿಗೆ ಮ್ಯಾಗ್ನಾ ಸಾಫ್ಟ್ ಕಂಪನಿಯ ಸಹೋದ್ಯೋಗಿಗಳು ಮತ್ತು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:46 pm, Mon, 27 April 26

Source link

ಉಮರ್ ಖಾಲಿದ್ ಪುಸ್ತಕ ಸಂಬಂಧಿತ ಕಾರ್ಯಕ್ರಮಕ್ಕೆ ಬಿಜೆಪಿ ವಿರೋಧ: ಅನುಮತಿ ಕೊಟ್ಟರೆ ಉಗ್ರ ಹೋರಾಟದ ಎಚ್ಚರಿಕೆ – Kannada News | BJP Opposes Bengaluru Umar Khalid Book Event, Warns of Massive Protests

ನಗರ ಪೊಲೀಸ್ ಆಯುಕ್ತರಿಗೆ BJP ಮನವಿ Image Credit source: Tv9 Kannada

ಬೆಂಗಳೂರು, ಏಪ್ರಿಲ್​​ 27: ದೊಮ್ಮಲೂರಿನ ಬಿಐಸಿಯಲ್ಲಿ ನಾಳೆ ನಿಗದಿಯಾಗಿರುವ ‘ಉಮರ್ ಖಾಲಿದ್ ಆ್ಯಂಡ್​ ಹಿಸ್ ವರ್ಲ್ಡ್’ ಪುಸ್ತಕದ ಕುರಿತ ಕಾರ್ಯಕ್ರಮಕ್ಕೆ ಅನುಮತಿ ಸಂಬಂಧ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಟ ಪ್ರಕಾಶ್ ರಾಜ್, ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವು ಮುಖಂಡರು ನಾಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ. ಜೆಎನ್​ಯು ಮಾಜಿ ವಿದ್ಯಾರ್ಥಿ ನಾಯಕನಾಗಿದ್ದ ಉಮರ್ ಖಾಲಿದ್, 2020ರ ದೆಹಲಿ ದಂಗೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ತಿಹಾರ್ ಜೈಲಿನಲ್ಲಿದ್ದಾನೆ ಎಂದು ಬಿಜೆಪಿ ದೂರಿದೆ.

ಬಿಜೆಪಿ ಮನವಿಯಲ್ಲಿ ಏನಿದೆ?

ಉಮರ್​​ ಖಾಲಿದ್ ಪ್ರಪಂಚ ಎಂಬ ವೇದಿಕೆಯು ಭಯೋತ್ಪಾದನೆ ಕಾಯಿದೆ ಅಡಿ ಬಂಧಿತನಾದ ವ್ಯಕ್ತಿಗೆ ಬೆಂಬಲ ಸೂಚಿಸಲು ಬೆಂಗಳೂರಿನಲ್ಲಿ ವಿಚಾರ ಸಂಕೀರ್ಣ ಏರ್ಪಡಿಸಿದೆ. ದೇಶದಲ್ಲೆಡೆ ಕೇಂದ್ರ ಸರ್ಕಾರ ನಕ್ಸಲರನ್ನು ಬಗ್ಗು ಬಡಿದಿದೆ. ಆದರೆ ನಗರ ನಕ್ಸಲರು ಮಾತ್ರ ಇನ್ನೂ ಸಕ್ರಿಯವಾಗಿದ್ದು ದೇಶದ್ರೋಹಿಗಳಿಗೆ ಪರೋಕ್ಷವಾಗಿ ಬೆಂಬಲಿಸುವ ಚಟುವಟಿಕೆಯನ್ನು ಮಾಡುತ್ತಿದ್ದಾರೆ. ಉಮರ್ ಖಾಲೀದ್ ಅತ್ಯಂತ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾನೆ. ಕಳೆದ ಮೂರು ವರ್ಷದಿಂದ ಇವನಿಗೆ ನ್ಯಾಯಲಯಗಳು ಜಾಮೀನು ನೀಡಲು ನಿರಾಕರಿಸಿರುವುದು ಇವನ ಅಪರಾಧಿ ಚಟುವಟಿಕೆಗೆ ಸಾಕ್ಷಿ. ಇವನನ್ನು ವೈಭವೀಕರಿಸುವುದು ಅಪರಾಧಿಗಳಿಗೆ ಉತ್ತೇಜನ ಕೊಡುವ ದುಷ್ಕೃತ್ಯವಾಗುತ್ತದೆ. ಇಂತಹ ಕಾರ್ಯಕ್ರಮವನ್ನು ನಮ್ಮ ನಗರದಲ್ಲಿ ನಡೆಯುತ್ತಿರುವುದು ಆಘಾತಕಾರಿ ಸಂಗತಿ. ಈಗಾಗಲೇ ನಗರದ ಗೋಡೆಗಳ ಮೇಲೆ ಉಮರ್ ಖಾಲಿದ್ ಬೆಂಬಲಿಸಿ ಗೋಡೆ ಬರಹಗಳನ್ನು ಬರೆಯುತ್ತಿರುವುದು ಇವರ ಜಾಲ ಹರಡುತ್ತಿದ್ದಾರೆ. ನಗರದ ಶಾಂತಿಯನ್ನು ಕಾಪಾಡುವ ಹಿತದೃಷ್ಟಿಯಿಂದ ಇವರ ವಿಚಾರ ಸಂಕಿರಣ ನಡೆಸಲು ನೀಡಿರುವ ಅನುಮತಿಯನ್ನು ಹಿಂದಕ್ಕೆ ಪಡೆಯಬೇಕು. ಈ ಕಾರ್ಯಕ್ರಮ ನಡೆದರೆ ಅಲ್ಲಿ ಉಂಟಾಗುವ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗವಾದರೆ ಬಿಜೆಪಿಯು ಹೊಣೆಯಾಗುವುದಿಲ್ಲ. ನಗರದ ಹಿತದೃಷ್ಟಿಯಿಂದ ನಮ್ಮ ಮನವಿಯನ್ನು ಪರಿಗಣಿಸಿ ಕಾರ್ಯಕ್ರಮವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸುತ್ತಿರೋದಾಗಿ ನಗರ ಪೊಲೀಸ್ ಆಯುಕ್ತರಿಗೆ ನೀಡಿದ ಮನವಿಯಲ್ಲಿ ಬಿಜೆಪಿ ತಿಳಿಸಿದೆ.

ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ವೈರ್ ಕಟ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಚ್ಚರಿಯ ಕಾರಣ ಬಹಿರಂಗ

ಪ್ರತಿಭಟನೆಯ ಎಚ್ಚರಿಕೆ

ಉಮರ್ ಖಾಲಿದ್ ಆ್ಯಂಡ್ ಹಿಸ್ ವರ್ಲ್ಡ್ ಪುಸ್ತಕದ ಕುರಿತ ಕಾರ್ಯಕ್ರಮಕ್ಕೆ ಅನುಮತಿ ಕೊಟ್ಟರೆ ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದು ಟಿವಿ9ಗೆ ಬೆಂಗಳೂರು ಕೇಂದ್ರ ಬಿಜೆಪಿ ಸಂಸದ ಪಿ.ಸಿ.ಮೋಹನ್ ತಿಳಿಸಿದ್ದಾರೆ. ಉಮರ್ ಖಾಲೀದ್ 2020ರ ದೆಹಲಿ ದಂಗೆಯ ಪ್ರಮುಖ ಆರೋಪಿ. ಇಂದಿನವರೆಗೂ ಉಮರ್ ಖಾಲೀದ್​ಗೆ ಕೋರ್ಟ್ ಜಾಮೀನು ಕೊಟ್ಟಿಲ್ಲ. ಆತ ದೇಶದ್ರೋಹಿ ಆಗಿದ್ದು ಅವನ ಕುರಿತಾದ ಪುಸ್ತಕ ಬಿಡುಗಡೆ ಮಾಡ್ತಿದ್ದಾರೆ. ಶಾಂತಿಯುತ ಸ್ಥಳವಾಗಿರುವ ಬೆಂಗಳೂರಿನಲ್ಲಿ ಇದಕ್ಕೆ ಅವಕಾಶ ಕೊಡಬಾರದು. ಬೇರೆ ಯಾವ ರಾಜ್ಯದಲ್ಲೂ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಲ್ಲ. ಇಲ್ಲಿ ಕಾಂಗ್ರೆಸ್​​ ಸರ್ಕಾರ ಇರುವುದರಿಂದ ಅನುಮತಿ ಸಿಕ್ಕಿದೆ. ಪರೋಕ್ಷವಾಗಿ ಕಾಂಗ್ರೆಸ್ ಬೆಂಬಲದಿಂದಲೇ ಈ ಕಾರ್ಯಕ್ರಮ ನಡೀತಿದೆ. ಹೀಗಾಗಿ ಅನುಮತಿ ಕೊಟ್ಟರೆ ನಾವು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಪಿ.ಸಿ.ಮೋಹನ್ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಇದು ನನ್ನ ಕೊನೆಯ ರ‍್ಯಾಲಿ, ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದ ಮಣ್ಣಿನಲ್ಲಿ ಪ್ರಧಾನಿ ಮೋದಿ ವಿಜಯಘೋಷ – Kannada News | West Bengal: Narendra Modi Signals Final Campaign Rally, Eyes Return for Swearing In

ಕೋಲ್ಕತ್ತಾ, ಏಪ್ರಿಲ್ 27: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಬರಾಕ್‌ಪೋರ್‌ನಲ್ಲಿ ಬಿಜೆಪಿಯ ಬಲ ಪ್ರದರ್ಶನ ಮಾಡಿದರು. ತಮ್ಮ ಭಾಷಣದ ಉದ್ದಕ್ಕೂ ವಿಜಯದ ಆತ್ಮವಿಶ್ವಾಸವನ್ನು ಪ್ರದರ್ಶಿಸಿದ ಅವರು, ಮುಂದಿನ ಬಾರಿ ಬರುವುದು ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಎಂದು ಘೋಷಿಸುವ ಮೂಲಕ ರಾಜಕೀಯ ಸಂಚಲನ ಮೂಡಿಸಿದರು.

ಈ ಚುನಾವಣೆಯಲ್ಲಿ ಇದು ನನ್ನ ಕೊನೆಯ ರ್ಯಾಲಿ, ಮೇ 4ರ ಫಲಿತಾಂಶದ ನಂತರ ಖಂಡಿತವಾಗಿಯೂ ಬಿಜೆಪಿಯ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ನಾನು ಹಿಂತಿರುಗುತ್ತಿದ್ದೇನೆ ಎಂಬ ವಿಶ್ವಾಸ ನನಗಿದೆ, ಎಂದು ಮೋದಿ ಹೇಳಿದರು. ಬೆಳಗ್ಗೆಯಿಂದಲೇ ಕಿಲೋಮೀಟರ್‌ಗಳಷ್ಟು ಉದ್ದಕ್ಕೂ ಸಾಲುಗಟ್ಟಿ ನಿಂತಿದ್ದ ಜನಸ್ತೋಮವನ್ನು ಕಂಡು ಅವರು ಭಾವುಕರಾದರು ಮತ್ತು ಜನರ ಈ ಆಶೀರ್ವಾದವೇ ನನ್ನ ಉತ್ಸಾಹಕ್ಕೆ ಕಾರಣ ಎಂದರು.

ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಪ್ರಧಾನಿ ಕಿಡಿಕಾರಿದರು. ಬಂಗಾಳದ ಅಭಿವೃದ್ಧಿಗೆ ಟಿಎಂಸಿ ಬಳಿ ಯಾವುದೇ ಮಾರ್ಗಸೂಚಿ ಇಲ್ಲ. ರಾಜ್ಯಕ್ಕೆ ಈಗ ಡಬಲ್-ಎಂಜಿನ್ ಸರ್ಕಾರದ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಪತ್ನಿಯ ಕೊಂದು ಶವದ ಮೇಲೆ ಸಿಮೆಂಟ್ ಸುರಿದು, ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟ ಪತಿ – Kannada News | Surat Murder Case: Woman Found Dead, Husband Held

ಸೂರತ್, ಏಪ್ರಿಲ್ 27: ಪತ್ನಿಯ ಕೊಲೆ(Murder) ಮಾಡಿ ಶವದ ಮೇಲೆ ಸಿಮೆಂಟ್ ಸುರಿದು ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟು, ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಹಾರ ತಜ್ಞೆ ಶಿಲ್ಪಾ ಸಾಲ್ವಿ (39) ಅವರ ಕೊಳೆತ ಶವವು ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿ ವಿಶಾಲ್ ಸಾಲ್ವಿ (40), ನಾಲ್ಕು ದಿನಗಳ ಹಿಂದೆ ತನ್ನ ಪತ್ನಿ ಶಿಲ್ಪಾ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಮೊದಲಿಗೆ ಇದನ್ನು ಸಾಮಾನ್ಯ ನಾಪತ್ತೆ ಪ್ರಕರಣವೆಂದು ಭಾವಿಸಿ ತನಿಖೆ ಆರಂಭಿಸಿದ್ದರು. ಆದರೆ, ಮನೆಯೊಳಗೆ ಸಿಕ್ಕ ಒಂದು ಸಣ್ಣ ಸುಳಿವು ಇಡೀ ಪ್ರಕರಣದ ದಿಕ್ಕನ್ನೇ ಬದಲಿಸಿತು.

ವಿಶಾಲ್ ಮತ್ತು ಶಿಲ್ಪಾ ಅವರ ಮಗನಿಗೆ ಮನೆಯಲ್ಲಿ ತನ್ನ ತಂದೆ ಬರೆದಿದ್ದ ಕೈಬರಹದ ಟಿಪ್ಪಣಿಯೊಂದು ಸಿಕ್ಕಿತ್ತು. ಅದರಲ್ಲಿ ವಿಶಾಲ್, ನಾನು ದೊಡ್ಡ ತಪ್ಪು ಮಾಡಿದ್ದೇನೆ, ಶಿಲ್ಪಾ ಇನ್ನು ಬದುಕಿಲ್ಲ ಎಂದು ಬರೆದುಕೊಂಡಿದ್ದ. ಮಗ ಈ ಪತ್ರವನ್ನು ಪೊಲೀಸರಿಗೆ ಹಸ್ತಾಂತರಿಸಿದ ತಕ್ಷಣವೇ ವಿಶಾಲ್ ಮೇಲಿನ ಅನುಮಾನ ಬಲವಾಯಿತು.

ಪೊಲೀಸರು ತನಿಖೆ ನಡೆಸಿದಾಗ ಸೂರತ್‌ನ ಸಲಬತ್‌ಪುರದಲ್ಲಿರುವ ವಿಶಾಲ್‌ನ ಹಳೆಯ ಪಾಳುಬಿದ್ದ ಮನೆಯ ಬಗ್ಗೆ ಮಾಹಿತಿ ಸಿಕ್ಕಿತು. ಆ ಮನೆಯ ಬೀಗ ಮುರಿದು ಒಳಹೋದಾಗ ಕೊಳೆಯುತ್ತಿರುವ ವಾಸನೆ ಬಂದಿದೆ. ಅಲ್ಲಿನ ಮೂಲೆಯಲ್ಲಿದ್ದ ಮರದ ಪೆಟ್ಟಿಗೆಯನ್ನು ತಪಾಸಣೆ ಮಾಡಿದಾಗ, ಶಿಲ್ಪಾ ಅವರ ಶವ ಪತ್ತೆಯಾಯಿತು. ಸಾಕ್ಷ್ಯ ನಾಶಪಡಿಸಲು ವಿಶಾಲ್ ಶವದ ಮೇಲೆ ಕಚ್ಚಾ ಸಿಮೆಂಟ್ ಸುರಿದು ಅದನ್ನು ಪೆಟ್ಟಿಗೆಯೊಳಗೆ ಭದ್ರಪಡಿಸಿದ್ದ.

ಮತ್ತಷ್ಟು ಓದಿ: ಸಿನಿಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ: ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​!

ಪ್ರಾಥಮಿಕ ತನಿಖೆಯ ಪ್ರಕಾರ, ದಂಪತಿಗಳ ನಡುವೆ ದೀರ್ಘಕಾಲದ ವೈವಾಹಿಕ ಕಲಹವಿತ್ತು. ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ವಿಶಾಲ್ ಅನುಮಾನಿಸುತ್ತಿದ್ದ. ಇದೇ ದ್ವೇಷದಿಂದ ಆಕೆಯನ್ನು ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಸ್ತುತ ವಿಶಾಲ್ ತಲೆಮರೆಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಪೊಲೀಸರು ಆತನ ಬೆನ್ನು ಬಿದ್ದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹರಿಹರ ಪಂಚಮಸಾಲಿ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ V/s ಟ್ರಸ್ಟಿಗಳ ನಡುವೆ ಮಠದ ಆವರಣದಲ್ಲಿ ಹೈಡ್ರಾಮಾ! – Kannada News | Harihara Panchamasali Peetha Crisis: Vachanananda Swamy vs Trustees Over 10 Crore Fund Scam Allegations

ವಚನಾನಂದ ಶ್ರೀ V/s ಟ್ರಸ್ಟಿಗಳ ನಡುವೆ ಮಠದ ಆವರಣದಲ್ಲಿ ಹೈಡ್ರಾಮಾ!Image Credit source: tv9

ದಾವಣಗೆರೆ, ಏಪ್ರಿಲ್ 27: ಹರಿಹರದ ಪಂಚಮಸಾಲಿ ಪೀಠದಲ್ಲಿ (Harihara Panchamasali Peeth) ದಶಕಗಳಿಂದ ನಡೆಯುತ್ತಿದ್ದ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಮಠದ ಅನುದಾನ ಮತ್ತು ಭಕ್ತರ ದೇಣಿಗೆಯ ಲೆಕ್ಕಾಚಾರದ ವಿಚಾರದಲ್ಲಿ ವಚನಾನಂದ ಸ್ವಾಮೀಜಿ (Vachanananda Swamiji) ಮತ್ತು ಟ್ರಸ್ಟಿಗಳ ನಡುವೆ ತೀವ್ರ ಗುದ್ದಾಟ ಆರಂಭವಾಗಿದೆ. ಮಠದ ಆವರಣ ಸೋಮವಾರ (ಏಪ್ರಿಲ್ 37) ಹೈಡ್ರಾಮಾ ನಡೆಯಿತು. ಮಠದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಸಹ ಮಾಡಲಾಗಿದೆ.

ಏನಿದು ಲೆಕ್ಕದ ಲಡಾಯಿ?

ಮಠದ ಆಡಳಿತ ಮಂಡಳಿಯು ಭಕ್ತರ ದೇಣಿಗೆ ಮತ್ತು ಸರ್ಕಾರದ ಅನುದಾನದಲ್ಲಿ ಭಾರಿ ಅವ್ಯವಹಾರ ನಡೆಸಿದೆ ಎಂದು ವಚನಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯವಾಗಿ, ರಾಜ್ಯ ಸರ್ಕಾರದಿಂದ ವಸತಿಗೃಹ, ಹಾಸ್ಟೆಲ್ ಮತ್ತು ಸಮುದಾಯ ಭವನ ನಿರ್ಮಾಣಕ್ಕಾಗಿ ಬಂದಿದ್ದ 10 ಕೋಟಿ ರೂಪಾಯಿ ಅನುದಾನದಲ್ಲಿ ಗೋಲ್‌ಮಾಲ್ ನಡೆದಿದೆ ಎಂಬುದು ಶ್ರೀಗಳ ವಾದ. 2021ರಲ್ಲಿ ಟ್ರಸ್ಟಿಗಳು ಮತ್ತು ಆಡಳಿತಾಧಿಕಾರಿಗಳು ನಕಲಿ ಸಹಿ ಮಾಡಿ ಅನುದಾನ ಬಿಡುಗಡೆ ಮಾಡಿಸಿಕೊಂಡಿದ್ದಾರೆ, ಆದರೆ ಕಟ್ಟಡಗಳೇ ನಿರ್ಮಾಣವಾಗಿಲ್ಲ ಎಂದು ಭಕ್ತರು ದೂರಿದ್ದಾರೆ.

ಟ್ರಸ್ಟಿಗಳು ಹೇಳೋದೇನು?

ಶ್ರೀಗಳ ಆರೋಪಕ್ಕೆ ಪ್ರತಿಯಾಗಿ ಟ್ರಸ್ಟ್‌ನ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಅವರು 2008ರಿಂದ 2026ರವರೆಗಿನ ಸಂಪೂರ್ಣ ಲೆಕ್ಕಪತ್ರಗಳ ಬ್ಯಾಗ್ ಹಿಡಿದು ಮಠಕ್ಕೆ ಆಗಮಿಸಿದರು. ‘ನಾವು ಪಾರದರ್ಶಕವಾಗಿದ್ದೇವೆ, ಶ್ರೀಗಳು ತಮ್ಮ ಉಚ್ಚಾಟನೆಯ ವಿಷಯವನ್ನು ದಾರಿ ತಪ್ಪಿಸಲು ಲೆಕ್ಕದ ನಾಟಕವಾಡುತ್ತಿದ್ದಾರೆ. ಈಗ ಲೆಕ್ಕ ನೀಡಿದ್ದೇವೆ, ಶ್ರೀಗಳು ಕೂಡಲೇ ಮಠವನ್ನು ಬಿಟ್ಟು ಹೋಗಲಿ’ ಎಂದು ಗುಡುಗಿದ್ದಾರೆ.

ಮಠದ ಆವರಣದಲ್ಲಿ ಹೈಡ್ರಾಮಾ

ಟ್ರಸ್ಟ್ ಸದಸ್ಯರು ಲೆಕ್ಕ ನೀಡಲು ಆಗಮಿಸುತ್ತಿದ್ದಂತೆಯೇ ವಚನಾನಂದ ಶ್ರೀಗಳ ಬೆಂಬಲಿಗರು ಮತ್ತು ಟ್ರಸ್ಟಿಗಳ ಬೆಂಬಲಿಗರ ನಡುವೆ ಘೋಷಣೆಗಳ ಯುದ್ಧ ನಡೆಯಿತು. ಉಭಯ ಗುಂಪುಗಳು ಮುಖಾಮುಖಿಯಾಗಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ‘ನಾನು ಮಠವನ್ನು ಬಿಟ್ಟು ಹೋಗುವುದಿಲ್ಲ, ಇಲ್ಲಿ ನಡೆದಿರುವ ಲೂಟಿಯ ತನಿಖೆಯಾಗಲಿ’ ಎಂದು ವಚನಾನಂದ ಶ್ರೀಗಳು ಪಟ್ಟು ಹಿಡಿದು ಕುಳಿತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – Kannada News | Bengaluru–Mumbai Vande Bharat Sleeper to Launch on August 1: Route and Timings Revealed

ವಂದೇ ಭಾರತ್​​ ಸ್ಲೀಪರ್​​ ರೈಲುImage Credit source: alamy.com

ಬೆಂಗಳೂರು, ಏಪ್ರಿಲ್​​ 27: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು ಬಹು ಬೇಡಿಕೆಯ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 1ರಿಂದ ಈ ರೈಲಿನ ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಯೋಜನೆಗೆ ಏಪ್ರಿಲ್ 16ರಂದು ಅನುಮೋದನೆ ದೊರಕಿತ್ತು. ಆ ಮೂಲಕ ಬೆಂಗಳೂರು-ಮುಂಬೈ ನಡುವಿನ ರೈಲು ಪ್ರಯಾಣ ಇನ್ನಷ್ಟು ಆರಾಮದಾಯಕವಾಗಲಿದೆ.

ಈ ಸ್ಲೀಪರ್ ರೈಲು ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ (CSMT)ವರೆಗೆ ಸಂಚರಿಸಲಿದ್ದು, ಸೊಲ್ಲಾಪುರ ಮತ್ತು ಕಲಬುರಗಿ ಮಾರ್ಗವಾಗಿ ತೆರಳಲಿದೆ. ಸಂಜೆ ವೇಳೆಗೆ ಹೊರಡುವ ರೈಲು ಮರುದಿನ ಬೆಳಗ್ಗೆ ಗಮ್ಯಸ್ಥಾನ ತಲುಪುವಂತೆ ವೇಳಾಪಟ್ಟಿ ಇರಲಿದೆ ಎಂದು ಮೂಲಗಳು ತಿಳಿಸಿವೆ. ಇದೇ ದೂರವನ್ನು ಕ್ರಮಿಸಲು ಉದ್ಯಾನ್ ಎಕ್ಸ್‌ಪ್ರೆಸ್ ಪ್ರಸ್ತುತ 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಎನ್ನುವುದಿಲ್ಲಿ ಗಮನಾರ್ಹ.

ಇದನ್ನೂ ಓದಿ: ಬೆಂಗಳೂರು-ಪುಣೆಗೆ ಬರುತ್ತಿದೆ ‘ವಂದೇ ಭಾರತ್ ಸ್ಲೀಪರ್’; 18 ಗಂಟೆಯ ಪ್ರಯಾಣ ಇನ್ಮುಂದೆ ಕೇವಲ 13 ಗಂಟೆ!

ವಂದೇ ಭಾರತ್ ಸ್ಲೀಪರ್ ಸೇವೆಯಿಂದ ಪ್ರಯಾಣದ ಈ ಸಮಯ ಸುಮಾರು 15 ಗಂಟೆಗೆ ಇಳಿಕೆಯಾಗುವ ನಿರೀಕ್ಷೆಯಿದೆ. ಈ ರೈಲು 16 ಬೋಗಿಗಳನ್ನು ಹೊಂದಿದ್ದು, ದೀರ್ಘ ದೂರ ಪ್ರಯಾಣಕ್ಕೆಂದೇ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಗರಿಷ್ಠ 180 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ವಂದೇ ಭಾರತ್ ಸ್ಲೀಪರ್ ರೈಲಿಗಿದೆ. ಪ್ರಯಾಣಿಕರಿಗೆ ಮಲಗಲು ಉತ್ತಮ ವ್ಯವಸ್ಥೆ, ಸ್ವಚ್ಛ ಬೋಗಿಗಳು ಹಾಗೂ ಸುಧಾರಿತ ಸೌಲಭ್ಯಗಳು ಲಭ್ಯವಾಗಲಿವೆ. ಈ ರೈಲನ್ನು ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯ ತಂತ್ರಜ್ಞಾನ ಬಳಸಿ BEML ಸಂಸ್ಥೆ ಅಭಿವೃದ್ಧಿಪಡಿಸಿದೆ. ಕಿತ್ತಳೆ ಮತ್ತು ಬೂದು ಬಣ್ಣದ ವಿನ್ಯಾಸ ಹೊಂದಿರುವ ಈ ಸ್ಲೀಪರ್ ರೈಲು ರಾತ್ರಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇದು ದೇಶದ ಎರಡನೇ ವಂದೇ ಭಾರತ್ ಸ್ಲೀಪರ್ ರೈಲು ಆಗಿದ್ದು, ಮೊದಲ ರೈಲು 2026ರ ಜನವರಿಯಲ್ಲಿ ಹೌರಾ (ಕೋಲ್ಕತ್ತಾ) ಮತ್ತು ಕಾಮಾಖ್ಯ ಮಾರ್ಗದಲ್ಲಿ ಆರಂಭಗೊಂಡಿತ್ತು ಎಂದು ಬೆಂಗಳೂರು ನೌ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:57 pm, Mon, 27 April 26

Source link

ಐಪಿಎಲ್​ನಲ್ಲಿ ಫೀಲ್ಡಿಂಗ್​ಗೆ ಅಡ್ಡಿ ಪಡಿಸಿ ಔಟಾದ ನಾಲ್ವರು ಬ್ಯಾಟರ್​ಗಳು ಇವರೇ..! – Kannada News | Batters Dismissed for Obstructing the Field in IPL

ಕ್ರಿಕೆಟ್ ಜಗತ್ತಿನಲ್ಲಿ ಬ್ಯಾಟರ್ ಒಬ್ಬರು ಔಟ್ ಆಗಲು ಹಲವಾರು ದಾರಿಗಳಿವೆ. ಆದರೆ, ಅತಿ ಹೆಚ್ಚು ಚರ್ಚೆಗೆ ಮತ್ತು ವಿವಾದಕ್ಕೆ ಕಾರಣವಾಗುವ ಒಂದು ಔಟ್ ಎಂದರೆ ಅದು ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’. ಅಂದರೆ, ಫೀಲ್ಡರ್ ಚೆಂಡನ್ನು ಎಸೆಯುವಾಗ ಅಥವಾ ಹಿಡಿಯುವಾಗ ಬ್ಯಾಟರ್ ಬೇಕೆಂದೇ ಅಡ್ಡ ಬರುವುದು ಅಥವಾ ಅಡ್ಡಿಪಡಿಸುವುದು. ಹೀಗೆ ಫೀಲ್ಡಿಂಗ್​ಗೆ ಅಡ್ಡಿಪಡಿಸಿ ಐಪಿಎಲ್​ನಲ್ಲಿ ಔಟಾದ ನಾಲ್ವರು ಬ್ಯಾಟರ್​ಗಳ ಪಟ್ಟಿ ಇಲ್ಲಿದೆ…

ಯೂಸುಫ್ ಪಠಾಣ್ (2013): ಐಪಿಎಲ್ ಇತಿಹಾಸದಲ್ಲಿ ಈ ರೀತಿ ಔಟ್ ಆದ ಮೊದಲ ಆಟಗಾರ ಕೋಲ್ಕತ್ತಾ ನೈಟ್ ರೈಡರ್ಸ್‌ನ ಯೂಸುಫ್ ಪಠಾಣ್. ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ಬೌಲರ್ ವೇಯ್ನ್ ಪಾರ್ನೆಲ್ ಚೆಂಡನ್ನು ಎತ್ತಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಪಠಾಣ್ ಕಾಲಿನಿಂದ ಚೆಂಡನ್ನು ಒದ್ದಿದ್ದರು. ಇದನ್ನು ಉದ್ದೇಶಪೂರ್ವಕ ಫೀಲ್ಡಿಂಗ್ ಅಡ್ಡಿ ಎಂದು ಪರಿಗಣಿಸಿ ಔಟ್ ನೀಡಲಾಗಿತ್ತು.

ಅಮಿತ್ ಮಿಶ್ರಾ (2019): ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದ ಅಮಿತ್ ಮಿಶ್ರಾ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ತಮ್ಮ ಹಾದಿಯನ್ನು ಬದಲಿಸಿದ್ದರು. ಫೀಲ್ಡರ್ ಎಸೆದ ಚೆಂಡು ಸ್ಟಂಪ್‌ಗೆ ತಗುಲದಂತೆ ತಡೆಯಲು ಅವರು ಪಿಚ್‌ನ ಮಧ್ಯದಲ್ಲಿ ಓಡಿದ್ದರಿಂದ ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’ ನಿಯಮದಡಿಯಲ್ಲಿ ಔಟ್ ನೀಡಲಾಗಿತ್ತು.

ರವೀಂದ್ರ ಜಡೇಜಾ (2024): ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ರವೀಂದ್ರ ಜಡೇಜಾ ಎರಡನೇ ರನ್‌ಗಾಗಿ ಓಡುವಾಗ ಸಂಜು ಸ್ಯಾಮ್ಸನ್ ಅವರ ಎಸೆತಕ್ಕೆ ಅಡ್ಡ ಬಂದಿದ್ದರು. ರಿಪ್ಲೇನಲ್ಲಿ ಜಡೇಜಾ ಚೆಂಡು ಬರುತ್ತಿರುವುದನ್ನು ನೋಡಿ ಓಟದ ಹಾದಿ ಬದಲಿಸಿದ್ದು ಸಾಬೀತಾದ ಕಾರಣ ಅಂಪೈರ್ ಔಟ್ ನೀಡಿದ್ದರು.

ಅಂಗ್​​ಕ್ರಿಶ್ ರಘುವಂಶಿ (2026): ಕೊಲ್ಕತ್ತಾ ನೈಟ್ ರೈಡರ್ಸ್​ ತಂಡದ ಯುವ ಆಟಗಾರ ಅಂಗ್​ಕ್ರಿಶ್ ರಘುವಂಶಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರ ಥ್ರೋಗೆ ಅಡ್ಡ ಬಂದಿದ್ದರು. ಇದನ್ನು ಪರಿಶೀಲಿಸಿದ ಮೂರನೇ ಅಂಪೈರ್ ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’ ನಿಯಮದಡಿಯಲ್ಲಿ ಔಟ್ ನೀಡಿದ್ದರು.

Published On – 1:31 pm, Mon, 27 April 26

Source link

Exit mobile version