ಕುಸಿದು ಬಿದ್ದು ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾವು; ಕೊನೆಗೂ ಹೆತ್ತವರ ಕನಸೂ ನನಸಾಗಲಿಲ್ಲ! – Kannada News | Sudden Demise: Hassan Software Engineer Shwetha, 25, Succumbs to Brain Hemorrhage
ಹಾಸನ, ಏ.27: ಜಿಲ್ಲೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ 25 ವರ್ಷದ ಯುವತಿ ಶ್ವೇತಾ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದೀಗ ಈ ಘಟನೆ ಇಡೀ ಗ್ರಾಮದಲ್ಲಿ ಹಾಗೂ ಕುಟುಂಬಸ್ಥರಲ್ಲಿ ಸೂತಕ ಛಾಯೆ ಆವರಿಸಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ(25), ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಸಾಫ್ಟ್‌ವೇರ್ ಇಂಜಿನಿಯರ್ ಆಗಿ…