ಆಪರೇಷನ್ ಸಿಂಧೂರ್​​ ಕಾರ್ಯಾಚರಣೆ ವೇಳೆ ಹುತಾತ್ಮರಾದ ವೀರ ಯೋಧರ ಹೆಸರು ಪ್ರಕಟ – Kannada News | Operation Sindhoor Martyrs: India Reveals 6 Heroes’ Names at National War Memorial

ನವದೆಹಲಿ, ಜೂನ್ 26: ಶತ್ರು ರಾಷ್ಟ್ರದ ನೆಲದಲ್ಲಿದ್ದ ಭಯೋತ್ಪಾದಕ ಶಿಬಿರಗಳನ್ನು ಧ್ವಂಸಗೊಳಿಸಲು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ್ದ ರಹಸ್ಯ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಸಿಂಧೂರ್’ನಲ್ಲಿ (Operation Sindhoor) ದೇಶಕ್ಕಾಗಿ ತ್ಯಾಗ ಮಾಡಿದ ಆರು ವೀರ ಸೈನಿಕರ ಹೆಸರುಗಳನ್ನು ಭಾರತ ಸರ್ಕಾರ ಮೊದಲ ಬಾರಿಗೆ ಅಧಿಕೃತವಾಗಿ ಸಾರ್ವಜನಿಕಗೊಳಿಸಿದೆ. ಈ ಧೈರ್ಯಶಾಲಿ ಯೋಧರ ಹೆಸರುಗಳನ್ನು ನವದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ರಾಷ್ಟ್ರೀಯ ಯುದ್ಧ ಸ್ಮಾರಕದ (National War Memorial) ಗೌರವ ಪಟ್ಟಿಯಲ್ಲಿ ಶಾಶ್ವತವಾಗಿ ಕೆತ್ತಲಾಗಿದೆ. ಏನಿದು ‘ಆಪರೇಷನ್ ಸಿಂಧೂರ್’?…

Read More

ಪರೀಕ್ಷೆ ಭಯ ಬೇಡ, ಧೈರ್ಯದಿಂದ ಮುನ್ನುಗ್ಗಿ: ವಿದ್ಯಾರ್ಥಿಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಶೇಷ ಪತ್ರ

ಮಾರ್ಚ್ ತಿಂಗಳಿನಿಂದ ಆರಂಭವಾಗಲಿರುವ ಪಿಯುಸಿ ಮತ್ತು ಎಸ್ಎಸ್ಎಲ್‍ಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಲ್ಲಿ ಮನೆಮಾಡಿರುವ ಪರೀಕ್ಷಾ ಭಯವನ್ನು ಹೋಗಲಾಡಿಸಲು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿಶೇಷ ಪತ್ರ ಬರೆದು ಧೈರ್ಯ ತುಂಬಿದ್ದಾರೆ. “ಸಮಾನತೆ ಹಾಗೂ ಸ್ವಾಭಿಮಾನಕ್ಕೆ ಶಿಕ್ಷಣವೇ ಅಸ್ತ್ರ” ಎಂಬ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತುಗಳನ್ನು ನೆನಪಿಸಿರುವ ಸಚಿವರು, ಶಿಕ್ಷಣದ ಮೂಲಕ ಬದುಕು ರೂಪಿಸಿಕೊಳ್ಳಲು ಕರೆ ನೀಡಿದ್ದಾರೆ. “ಸೋಲು ಅಂತ್ಯವಲ್ಲ, ಯಶಸ್ಸು ಅಂತಿಮವಲ್ಲ, ವಿಫಲತೆ…

Read More

ಕಾಮಕಾಂಡ ಪ್ರಕರಣ: ಮೂಡುಬಿದಿರೆ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್​​ಗೆ ಬಿಗ್ ಶಾಕ್

ಮಂಗಳೂರು, (ಮಾರ್ಚ್ 17): ಕೌಟುಂಬಿಕ ಕಲಹದ ವಿಚಾರಕ್ಕೆ ದೂರು ನೀಡಲು ಬಂದ ಮಹಿಳೆಯರನ್ನು ಅಸಭ್ಯವಾಗಿ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ (moodbidri inspector Sandesh) ವಿರುದ್ಧ ಈಗ ರಾಜ್ಯ ಮಹಿಳಾ ಆಯೋಗವು ಸಿಡಿದೆದ್ದಿದ್ದು, ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣ ಸಂಬಂಧ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್​ಗೆ ಪತ್ರ ಬರೆದಿದೆ. ಇದರ ಬೆನ್ನಲ್ಲೇ ಇನ್ಸ್​ಪೆಕ್ಟರ್​​ ಸಂದೇಶನನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಆದೇಶ…

Read More

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ – Kannada News | 56400 Jobs Fill under New SC internal reservation Announced By CM Siddaramaiah

ಬೆಂಗಳೂರು, (ಏಪ್ರಿಲ್ 24): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಅನ್ವಯ, ದಲಿತ ಎಡಗೈ, ಬಲಗೈ ಮತ್ತು ಇತರ ಸ್ಪೃಶ್ಯ ಸಮುದಾಯಗಳಿಗೆ ನಿರ್ದಿಷ್ಟ ಶೇಕಡಾ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಎಡ, ಬಲಕ್ಕೆ ತಲಾ 5.25ರಷ್ಟು ಮೀಸಲಾತಿ ನೀಡಲಾಗಿದ್ದರೆ, ಇನ್ನುಳಿದಂತೆ ಇತರೆ ಸಮುದಾಯಕ್ಕೆ ಶೇ.4.5ರಷ್ಟು ಹಂಚಿಕೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್‌ನಲ್ಲಿ…

Read More

ಬಾಹ್ಯಾಕಾಶಕ್ಕೆ ಹಾರಿದ ಭಾರತೀಯ ಮೂಲದ ಗಗನಯಾತ್ರಿ ಅನಿಲ್ ಮೆನನ್; 8 ತಿಂಗಳ ಮಹತ್ವದ ಮಿಷನ್ ಆರಂಭ – Kannada News | Indian origin NASA astronaut Anil Menon launched into space today

ವಾಷಿಂಗ್ಟನ್, ಜುಲೈ 14: ಭಾರತೀಯ ಮೂಲದ ಗಗನಯಾತ್ರಿ ಹಾಗೂ ಯುಎಸ್‌ ಏರ್‌ಫೋರ್ಸ್‌ನ ಲೆಫ್ಟಿನೆಂಟ್ ಕರ್ನಲ್ ಆಗಿರುವ ಅನಿಲ್ ಮೆನನ್ (Anil Menon) ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಪ್ರಯಾಣಕ್ಕಾಗಿ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಜಿಗಿದಿದ್ದಾರೆ. ಈ ಮೂಲಕ ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್ ಹಾಗೂ ಶುಭಾಂಶು ಶುಕ್ಲಾ ಅವರ ನಂತರ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿದ ಭಾರತೀಯ ಮೂಲದ ಹೆಮ್ಮೆಯ ಗಗನಯಾತ್ರಿಗಳ ಸಾಲಿಗೆ ಅನಿಲ್ ಮೆನನ್ ಸೇರ್ಪಡೆಯಾಗಿದ್ದಾರೆ. ಅನಿಲ್ ಮೆನನ್ ಮತ್ತು ಇತರೆ ಗಗನಯಾತ್ರಿಗಳನ್ನೊಳಗೊಂಡ ತಂಡವನ್ನು ಹೊತ್ತ…

Read More

ಕೆರೂರು ಠಾಣೆ ಪಿಎಸ್‌ಐ, ಪಿಸಿ ಲೋಕಾಯುಕ್ತ ಬಲೆಗೆ:ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಯುವಕರು – Kannada News | Youths Celebrations For Kerur PSI Bheemappa Caught in Lokayukta Trap Bagalkot

ಬಾಗಲಕೋಟೆ, (ಏಪ್ರಿಲ್ 22): ಇಸ್ಪೀಟ್ ಆಡುವವರ ಬಳಿ ಲಂಚ ಸ್ವೀಕರಿಸುವಾಗ ಪೊಲೀಸ್​ ಸಬ್ ಇನ್ಸ್​ಪೆಕ್ಟರ್ ( Kerur PSI Bheemappa) ಹಾಗೂ ಕಾನ್ಸ್​​​ಟೇಬಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಎನ್ನುವರು ಮುತ್ತಪ್ಪ ನಾಯ್ಕರ್​ ಎಂಬುವರಿಂದ ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರಿಂದ ಯುವಕ ಗುಂಪು ಕೆರೂರು ಪೊಲೀಸ್ ಠಾಣೆ ಮುಂದೆಯೇ ಪಟಾಕಿ…

Read More

ವ್ಯಕ್ತಿಗೆ ಬಲವಂತವಾಗಿ ಮೂತ್ರ ಕುಡಿಸಿದ ಹಳ್ಳಿ ಜನ

ಲಾತೇಹಾರ್, ಮಾರ್ಚ್​ 20: ವ್ಯಕ್ತಿಯೊಬ್ಬರಿಗೆ ಹಳ್ಳಿಯ ಜನರು ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಜಾರ್ಖಂಡ್​​ನ ಲಾತೇಹಾರ್​​ ಜಿಲ್ಲೆಯಲ್ಲಿ ನಡೆದಿದೆ. ವೃದ್ಧರೊಬ್ಬರು ಮಾಟಮಂತ್ರ(Witchcraft) ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರಿಗೆ ಮೂತ್ರ ಕುಡಿಸಿದ್ದಾರೆ. ಗ್ರಾಮದಲ್ಲಿ ಇತ್ತೀಚೆಗೆ ನಡೆದ ರಸ್ತೆ ಅಪಘಾತಕ್ಕೂ ಹಾಗೂ ಅವರಿಗೂ ಸಂಬಂಧ ಕಲ್ಪಿಸಿ ಈ ಕೃತ್ಯವೆಸಗಿದ್ದಾರೆ. ಮಗ ಬ್ರಜೇಶ್ ಮುಂಡಾ ಅವರ ಪ್ರಕಾರ, ಈ ಘಟನೆ ಮಂಗಳವಾರ ನಡೆದಿದೆ. ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರ ಸಾವಿಗೆ ವೀರೇಂದ್ರ ಸಿಂಗ್ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅವರು ಮಾಟಮಂತ್ರದ ಮೂಲಕ…

Read More

ಒಟ್ಟಿಗೆ ಎರಡೆರಡು ದುಬಾರಿ ಕಾರು ಖರೀದಿಸಿದ ಗೌತಮಿ ಜಾಧವ್

‘ಸತ್ಯ’ ಧಾರಾವಾಹಿ ಮಾಡಿ ಗಮನ ಸೆಳೆದವರು ಗೌತಮಿ ಜಾಧವ್. ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಅವರು ಸ್ಪರ್ಧೆ ಮಾಡಿದರು. ಆ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ಈಗ ಅವರು ಖುಷಿ ಸುದ್ದಿ ಶೇರ್ ಮಾಡಿಕೊಂಡಿದ್ದಾರೆ. ಗೌತಮಿ ಜಾಧವ್ ಅವರು ಎರಡು ಕಾರು ಖರೀದಿ ಮಾಡಿದ್ದಾರೆ. ಎರಡೂ ಕಾರುಗಳು ಟಾಟಾ ಸಫಾರಿ ಎಂಬುದು ವಿಶೇಷ. ಒಂದೇ ರೀತಿಯ ಎರಡು ಕಾರುಗಳು ಅವರ ಮನೆ ಸೇರಿವೆ. ಈ ಫೋಟೋಗಳು ಗಮನ ಸೆಳೆದಿವೆ. ಗೌತಮಿ ಜಾಧವ್ ಅವರಿಗೆ ಎಲ್ಲರೂ ಅಭಿನಂದನೆ…

Read More

ಭಾರಿ ಸಂಭಾವನೆ ಕಾರಣಕ್ಕೆ ಅಜಿತ್‌ಗೆ ಸಿಗುತ್ತಿಲ್ಲ ನಿರ್ಮಾಪಕರು; ಅಸಲಿ ವಿಷಯ ರಿವೀಲ್ – Kannada News | Ajith Kumar’s Salary Standoff: Why His Next Film Announcement is Delayed in Kollywood

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಮುಂದಿನ ಸಿನಿಮಾ ಘೋಷಣೆ ತಡವಾಗುತ್ತಿರುವುದಕ್ಕೆ ಅವರ ಭಾರಿ ಸಂಭಾವನೆಯ ಬೇಡಿಕೆಯೇ ಕಾರಣ ಎಂಬ ವದಂತಿ ಇತ್ತೀಚೆಗೆ ಹರಿದಾಡಿತ್ತು. ಅಜಿತ್ ತಮ್ಮ ಸಂಭಾವನೆಯನ್ನು 150 ಕೋಟಿ ರೂಪಾಯಿ ಇಂದ 125 ಕೋಟಿ ರೂಪಾಯಿಗೆ ಇಳಿಕೆ ಮಾಡಿಕೊಂಡಿದ್ದರು. ಆದರೆ, ನಿರ್ಮಾಪಕರು ಇಷ್ಟು ಹಣ ನೀಡಲು ರೆಡಿ ಇಲ್ಲ ಎಂದು ವರದಿ ಆಗಿದೆ. ಈ ಬಗ್ಗೆ ತಮಿಳು ಸಿನಿಮಾಗಳ ಪ್ರಮುಖ ವಿತರಕ ಹಾಗೂ ಫೈನಾನ್ಶಿಯರ್ ತಿರುಪ್ಪೂರ್ ಸುಬ್ರಮಣಿಯನ್ ಮಾತನಾಡಿದ್ದಾರೆ. ‘ಅಜಿತ್…

Read More

ಬೆಳಗಿವಿ ವಂಚನೆ ಪ್ರಕರಣ: ಸನ್ನಿ ಲಿಯೋನಿಗೆ ನೊಟೀಸ್ ನೀಡಿದ ಕರ್ನಾಟಕ ಸಿಐಡಿ ಪೊಲೀಸರು – Kannada News

ಕರ್ನಾಟಕ ಸಿಐಡಿ ಪೊಲೀಸರು ನಟಿ ಸನ್ನಿ ಲಿಯೋನಿಗೆ (Sunny Leone) ನೊಟೀಸ್ ನೀಡಿದ್ದಾರೆ. ಹೆಚ್ಚಿನ ಬಡ್ಡಿ ಕೊಡುವುದಾಗಿ ಆಮಿಷವೊಡ್ಡಿ ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಬೆಳಗಾವಿಯ ‘ಶಿವಂ ಅಸೋಸಿಯೇಟ್ಸ್’ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರಿಗೆ ಕರ್ನಾಟಕ ಅಪರಾಧ ತನಿಖಾ ಇಲಾಖೆ (CID) ನೋಟಿಸ್ ಜಾರಿ ಮಾಡಿದೆ. ಕಂಪನಿಯ ಮಾಲೀಕ ಶಿವಾನಂದ ನೀಲಣ್ಣವರ, ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಸಂಗ್ರಹಿಸಿದ ಹಣದ ಒಂದು ದೊಡ್ಡ ಭಾಗವನ್ನು ಸನ್ನಿ ಲಿಯೋನ್ ಸೇರಿದಂತೆ ಹಲವು ಚಿತ್ರರಂಗದ ಪ್ರಮುಖ…

Read More