ಅಲರ್ಟ್: ಈ ಭಾನುವಾರ ನಂದಿಬೆಟ್ಟಕ್ಕೆ ಹೋಗುವ ಪ್ಲ್ಯಾನ್ ಇದ್ರೆ ಮುಂದೂಡಿ – Kannada News | Chikkaballapur administration Bans vehicle nandi hills road On August 9th for monsoon marathon
ಚಿಕ್ಕಬಳ್ಳಾಪುರ, (ಆಗಸ್ಟ್ 07): ನಂದಿಬೆಟ್ಟದಲ್ಲಿ ಮಾನ್ಸೂನ್ ಮ್ಯಾರಥಾನ್ ಹಿನ್ನೆಲೆಯಲ್ಲಿ, ನಂದಿಬೆಟ್ಟಕ್ಕೆ (nandi hills) ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಹೌದು…ಇದೇ ಆಗಸ್ಟ್ 9ರಂದು ನಂದಿಹಿಲ್ಸ್ ಮಾನ್ಸೂನ್ ಮ್ಯಾರಥಾನ್ (monsoon marathon) ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಆಗಸ್ಟ್ 8ರ ರಾತ್ರಿ 11 ಗಂಟೆಯಿಂದ ಆಗಸ್ಟ್ 9ರ ಮಧ್ಯಾಹ್ನ 12 ಗಂಟೆಯವರೆಗೆ ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಿ ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾಧಿಕಾರಿ ಜಿ. ಪ್ರಭು ಅವರು ಆದೇಶ ಹೊರಡಿಸಿದ್ದಾರೆ. ಹೀಗಾಗಿ…