ಕೋರ್ಟ್‌ಗೆ ಅಲೆಯಬೇಕಿಲ್ಲ! ಕಳವಾಗಿದ್ದ ಬೈಕ್‌ಗಳನ್ನು ಠಾಣೆಯಲ್ಲೇ ಮಾಲೀಕರಿಗೆ ಒಪ್ಪಿಸಿ ವಿಜಯಪುರ ಪೊಲೀಸರ ವಿನೂತನ ಕಾರ್ಯ – Kannada News | Devanahalli Vijayapura Police Launch First of its Kind Initiative to Release Stolen Bikes Directly at Station
ಬಾಂಡ್ ಪೇಪರ್ ಸಹಿ ಪಡೆದು ಮೂಲ ಮಾಲೀಕರಿಗೆ ಬೈಕ್ ಹಸ್ತಾಂತರಿಸಿದ ಪೊಲೀಸರುImage Credit source: tv9 ದೇವನಹಳ್ಳಿ, ಜೂನ್ 25: ಕಳೆದುಹೋದ ಅಥವಾ ಕಳವಾಗಿದ್ದ ಬೈಕ್‌ಗಳು ಪತ್ತೆಯಾದರೂ, ಅವುಗಳನ್ನು ಮರಳಿ ಪಡೆಯಲು ಕೋರ್ಟ್ ಆವರಣದಲ್ಲಿ ತಿಂಗಳುಗಟ್ಟಲೆ ಅಲೆಯಬೇಕಾಗಿದ್ದ ಸಾರ್ವಜನಿಕರ ಪರದಾಟಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಯು ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ಇಂತಹದೊಂದು ವಿನೂತನ ಮತ್ತು ಜನಸ್ನೇಹಿ ಕಾರ್ಯಕ್ಕೆ ಮುನ್ನುಡಿ ಬರೆದಿದೆ. ಕಳ್ಳತನವಾಗಿದ್ದ ದ್ವಿಚಕ್ರ…