ಐಟಿ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ನಾಸಿಕ್ನ ಟಿಸಿಎಸ್ ಕಚೇರಿಗೆ ಬೀಗ – Kannada News | TCS Nashik Closure: ATS,NIA Probe into Organized Physical Harassment and Conversion Plot
ನಾಸಿಕ್, ಏಪ್ರಿಲ್ 16: ಭಾರತದ ಐಟಿ ದೈತ್ಯ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ತನ್ನ ನಾಸಿಕ್ ಕಚೇರಿಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೇವಲ ಕೆಲಸದ ಕಿರುಕುಳ ಎಂದು ಆರಂಭವಾದ ದೂರುಗಳು ಈಗ ಅತ್ಯಾಚಾರ, ಮತಾಂತರದ ಸಂಚು ಮತ್ತು ಅಂತರರಾಷ್ಟ್ರೀಯ ಸಂಪರ್ಕಗಳಂತಹ ಭಯಾನಕ ಸ್ವರೂಪ ಪಡೆದುಕೊಂಡಿವೆ. ನಾಸಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ಅವರು ಈ ಪ್ರಕರಣದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ. “ಇದು ಕೇವಲ ವೈಯಕ್ತಿಕ ಘರ್ಷಣೆಯಲ್ಲ, ಬದಲಿಗೆ ಇದೊಂದು ಸಂಘಟಿತ ಜಾಲದಂತೆ ಕಂಡುಬರುತ್ತಿದೆ. ಹಿರಿಯ ಅಧಿಕಾರಿಗಳೇ…