ಸುಪ್ರೀಂ ಕೋರ್ಟ್‌ನಲ್ಲಿ ಹೈಡ್ರಾಮಾ; ನ್ಯಾಯಮೂರ್ತಿಗಳನ್ನು ನಿಂದಿಸಿ, ಪೇಪರ್ ಎಸೆದ ಅರ್ಜಿದಾರ – Kannada News | Judicial Servant I Order You Petitioner Abuses Supreme Court Justice Throws Papers
ನವದೆಹಲಿ, ಜುಲೈ 10: ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಇಂದು ಅತ್ಯಂತ ಆಘಾತಕಾರಿಯಾದ ಹೈಡ್ರಾಮಾ ನಡೆದಿದೆ. ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರರೊಬ್ಬರು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ತನ್ನ ಕೈಯಲ್ಲಿದ್ದ ಕಾಗದಗಳನ್ನು ನ್ಯಾಯಪೀಠದತ್ತ ಗಾಳಿಯಲ್ಲಿ ತೂರಿದ್ದಾರೆ. ಇದರಿಂದ ಕೋರ್ಟ್‌ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಆತನನ್ನು ಕೋರ್ಟ್ ಹಾಲ್‌ನಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ನ್ಯಾಯಮೂರ್ತಿಗಳಾದ ಕೆ.ವಿ. ವಿಶ್ವನಾಥನ್ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠದ…