ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ: ಧಾರವಾಡ ಕ್ಷೇತ್ರ ಖಾಲಿ, ಮುಂದಿರುವ ಆಯ್ಕೆಗಳೇನು? – Kannada News | Yogesh Gowda Murder Case: Vinay Kulkarni MLA Post Suspended for life imprisonment, what next options

ಬೆಂಗಳೂರು, (ಏಪ್ರಿಲ್ 17): 2016ರಲ್ಲಿ ನಡೆದಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (vinay kulkarni)  ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇಂದು (ಏಪ್ರಿಲ್ 17) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು. ಕಾನೂನು ಪ್ರಕಾರ, ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣವೇ ಶಾಸಕ ಸ್ಥಾನ ರದ್ದಾಗುತ್ತದೆ. ಅದರಂತೆ ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ

ಯಾವುದೇ ಜನಪ್ರತಿನಿಧಿಗಳ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣ ಅವರ ಶಾಸಕ ಸ್ಥಾನ ರದ್ದಾಗುತ್ತದೆ. ಸದ್ಯ ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಹಿನ್ನೆಲೆ ವಿನಯ್​ ಕುಲಕರ್ಣಿ ಅವರ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತವಾಗಿದೆ.   ಕೋರ್ಟ್ ತನ್ನ ತೀರ್ಪಿನ ಪ್ರತಿಯನ್ನು ಸ್ಪೀಕರ್ ಗೆ ಕಳುಹಿಸಲಿದ್ದು, ಆ ಬಳಿಕ ಸ್ಫೀಕರ್ ಅಧಿಕೃತವಾಗಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಿದ್ದಾರೆ.

ಇದನ್ನೂ ಓದಿ: ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಕಾನೂನು ಏನು ಹೇಳುತ್ತೆ?

ಕಾನೂನು ಪ್ರಕಾರ ಶಿಕ್ಷೆ ಪ್ರಕಟವಾದ ದಿನದಿಂದಲೇ ಶಾಸಕ ಸ್ಥಾನದಿಂದ ತಕ್ಷಣವೇ ಅನರ್ಹವಾಗುತ್ತೆ. ‘ಜನಪ್ರತಿನಿಧಿ ಕಾಯ್ದೆ 1951’ರ ಸೆಕ್ಷನ್ 8(3) ರ ಪ್ರಕಾರ, ಯಾವುದೇ ಶಾಸಕರು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಶಿಕ್ಷೆಗೆ ಗುರಿಯಾದರೆ ಅವರು ತಕ್ಷಣವೇ ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. 2013ರ ‘ಲಿಲಿ ಥಾಮಸ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪಿನ ಪ್ರಕಾರ ಮೇಲ್ಮನವಿ ಸಲ್ಲಿಸಲು ನೀಡಲಾಗುತ್ತಿದ್ದ 3 ತಿಂಗಳ ಕಾಲಾವಕಾಶವನ್ನು ರದ್ದುಪಡಿಸಲಾಗಿದೆ. ಹಾಗಾಗಿ, ಶಿಕ್ಷೆಯಾದ ತಕ್ಷಣ ಅನರ್ಹತೆ ಅನ್ವಯವಾಗುತ್ತದೆ.

ಚುನಾವಣೆಗೆ ಸ್ಪರ್ಧಿಸಲು ನಿಷೇಧ

ಇನ್ನು ಜೈಲು ಶಿಕ್ಷೆಯ ಅವಧಿಯನ್ನು ಪೂರೈಸಿದ ನಂತರವೂ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶವಿರುವುದಿಲ್ಲ. ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ಕಾರಣ, ಉನ್ನತ ನ್ಯಾಯಾಲಯವು ಶಿಕ್ಷೆಯನ್ನು ರದ್ದುಗೊಳಿಸದ ಹೊರತು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದು ಅಸಾಧ್ಯ. ಇನ್ನು ಶಾಸಕತ್ವ ಅಧಿಕೃತವಾಗಿ ಅನರ್ಹಗೊಂಡ ತಕ್ಷಣ ಕ್ಷೇತ್ರ ಖಾಲಿಯಾಗಲಿದೆ. ವಿಧಾನಸಭಾ ಸಚಿವಾಲಯದಿಂದ ಕ್ಷೇತ್ರ ‘ಖಾಲಿ’ ಇದೆ ಎಂದು ಘೋಷಣೆಯಾಗಲಿದ್ದು, ಬಳಿಕ ಚುನಾವಣಾ ಆಯೋಗ 6 ತಿಂಗಳ ಒಳಗೆ ಉಪಚುನಾವಣೆಯನ್ನು ನಡೆಸುವ ಸಾಧ್ಯತೆ ಇದೆ.

ಶಿಕ್ಷೆಗೆ ತಡೆ ನೀಡಿದರೆ ಮಾತ್ರ ವಿನಾಯಿತಿ

ಇನ್ನು ಶಿಕ್ಷೆಗೆ ತಡೆ ನೀಡಿದರೆ ಮಾತ್ರ ಇದೆಲ್ಲದರಿಂದ ವಿನಾಯಿತಿ ಸಿಗಲಿದೆ. ಕೇವಲ ಜೈಲು ಶಿಕ್ಷೆಗೆ ತಡೆ ನೀಡಿದರೆ (Stay on sentence) ಸಾಲದು, ಬದಲಿಗೆ ಉನ್ನತ ನ್ಯಾಯಾಲಯವು ಅವರ ಮೇಲಿನ ಅಪರಾಧ ನಿರ್ಣಯಕ್ಕೆ ತಡೆ (Stay on conviction) ನೀಡಿದರೆ ಮಾತ್ರ ಶಾಸಕ ಸ್ಥಾನ ಮತ್ತು ಚುನಾವಣೆಗೆ ಸ್ಪರ್ಧಿಸುವ ಹಕ್ಕು ಪುನಃ ದೊರೆಯುತ್ತದೆ.  ಇನ್ನು ಜೀವಾವಧಿ ಅಂದರೆ 14 ವರ್ಷ ಸೆರೆವಾಸದ ಬಳಿಕ ಸರ್ಕಾರ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ – Kannada News | Such a headache to listen to Rahul Gandhi speech BJP MP Kangana Ranaut says

ನವದೆಹಲಿ, ಏಪ್ರಿಲ್ 17: ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿ (Rahul Gandhi) ಮಾಡಿದ ಭಾಷಣದ ಬಗ್ಗೆ ಬಿಜೆಪಿ ಸಂಸದೆ ಕಂಗನಾ ರಣಾವತ್ ಟೀಕಾಪ್ರಹಾರ ನಡೆಸಿದ್ದಾರೆ. “ಅವರ ಮಾತು ಕೇಳುವುದು ತುಂಬಾ ತಲೆನೋವು. ಅವರು ಬಾಲ್ಯದ ಆಘಾತಗಳನ್ನು ಅನುಭವಿಸುತ್ತಿದ್ದಾರೆ. ಅವರಿಗೆ ಅದೊಂದು ತೊಂದರೆಯಿದೆ. ಸಭಾಪತಿಯೂ ಅವರಿಗೆ ಭಾಷಣವನ್ನು ನಿಲ್ಲಿಸುವಂತೆ ಸೂಚಿಸಿದರೂ ಅವರು ಸಂಸತ್ತಿನ ಅಣಕ ಮಾಡುತ್ತಲೇ ಇದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಬಾಲ್ಯದಲ್ಲಿ ಕಂಡ ಮ್ಯಾಜಿಕ್ ಪ್ರದರ್ಶನದಿಂದಾಗಿ ಬಾಲ್ಯದ ಆಘಾತವನ್ನು ಅನುಭವಿಸುತ್ತಿದ್ದಾರೆ. ಅದೇ ಕಾರಣಕ್ಕೆ ಇನ್ನೂ ಮ್ಯಾಜಿಕ್ ಹಿಂದೆ ಬಿದ್ದಿದ್ದಾರೆ” ಎಂದು ಕಂಗನಾ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

LIC Recruitment 2026: ಎಲ್‌ಐಸಿ ಹೌಸಿಂಗ್ ಫೈನಾನ್ಸ್‌ನಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | LIC HFL Junior Assistant Recruitment 2026: 180 Vacancies for Graduates

ದೇಶಾದ್ಯಂತ ಇರುವ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 180 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 16, 2026 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಸಂಬಂಧಿತ ವಿಭಾಗದಲ್ಲಿ ಪದವಿ (Degree) ಪಾಸಾಗಿರಬೇಕು. ಇದರೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಅತ್ಯಗತ್ಯ. ವಯೋಮಿತಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳು ಏಪ್ರಿಲ್ 1, 2026ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷಗಳ ನಡುವೆ ಇರಬೇಕು (ಅಂದರೆ ಏಪ್ರಿಲ್ 2, 1996 ಕ್ಕಿಂತ ಮೊದಲು ಮತ್ತು ಏಪ್ರಿಲ್ 1, 2005 ರ ನಂತರ ಜನಿಸಿರಬಾರದು). ಅರ್ಹ ಅಭ್ಯರ್ಥಿಗಳು ಏಪ್ರಿಲ್ 30 ರೊಳಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳು ತಮಗೆ ಇಷ್ಟವಾದ ಯಾವುದಾದರೂ ಒಂದು ನಗರದ ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಅರ್ಜಿ ಶುಲ್ಕವಾಗಿ ರೂ. 800 ಜೊತೆಗೆ ಜಿಎಸ್‌ಟಿ (GST) ಪಾವತಿಸಬೇಕಾಗುತ್ತದೆ. ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆನ್‌ಲೈನ್ ಪರೀಕ್ಷೆಯು ಕೇವಲ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಇರಲಿದ್ದು, ಜೂನ್ 2026ರ ಮೊದಲ ವಾರದಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆಯಿದೆ. ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 38,709 ರಿಂದ ರೂ. 41,509 ವರೆಗೆ ಆಕರ್ಷಕ ವೇತನ ನೀಡಲಾಗುತ್ತದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಲಿಖಿತ ಪರೀಕ್ಷಾ ವಿಧಾನ ಮತ್ತು ನೆಗೆಟಿವ್ ಮಾರ್ಕಿಂಗ್:

ಲಿಖಿತ ಪರೀಕ್ಷೆಯು ಒಟ್ಟು 200 ಅಂಕಗಳಿಗೆ 200 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯಲ್ಲಿ ಐದು ವಿಭಾಗಗಳಿದ್ದು, ತಲಾ 40 ಅಂಕಗಳಂತೆ ಇಂಗ್ಲಿಷ್ ಭಾಷೆ, ಲಾಜಿಕಲ್ ರೀಸನಿಂಗ್, ಸಾಮಾನ್ಯ ಜಾಗೃತಿ, ಸಂಖ್ಯಾತ್ಮಕ ಸಾಮರ್ಥ್ಯ (Numerical Ability) ಮತ್ತು ಕಂಪ್ಯೂಟರ್ ಕೌಶಲ್ಯದ ಮೇಲೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈ ಪರೀಕ್ಷೆಯಲ್ಲಿ ನಕಾರಾತ್ಮಕ ಅಂಕಗಳ (Negative Marking) ವ್ಯವಸ್ಥೆ ಇರಲಿದ್ದು, ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಒಟ್ಟು 120 ನಿಮಿಷಗಳ ಕಾಲಾವಧಿಯಲ್ಲಿ ಅಭ್ಯರ್ಥಿಗಳು ಪರೀಕ್ಷೆಯನ್ನು ಪೂರ್ಣಗೊಳಿಸಬೇಕಿರುತ್ತದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ – Kannada News | Yogesh Gowda murder case: MLA Vinay Kulkarni and 16 others sentenced to life

ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ.  ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ  ಜೀವಾವಧಿ ಶಿಕ್ಷೆ ನೀಡಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್​​ಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ ಹಾಗೂ ಇನ್ನು ಎ 1 ಬಸವರಾಜ ಮುತ್ತಗಿ ಮಾಫಿ ಸಾಕ್ಷಿ ಸ್ಥಾನ ಕೋರ್ಟ್ ಖಚಿತಪಡಿಸಿದೆ. ಇದರ ಜತೆಗೆ ಯೋಗೀಶ್ ಗೌಡರ್ ಮಕ್ಕಳಿಗೆ 16 ಲಕ್ಷ ರೂ ಹಣವನ್ನು ಪರಿಹಾರವಾಗಿ ನೀಡಲು ಸೂಚನೆ ನೀಡಿದೆ.

ಇದೊಂದು ಕರ್ನಾಟಕ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲವನ್ನು ಮೂಡಿಸಿದೆ. ಇದೀಗ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಕೇಂದ್ರ ಸರ್ಕಾರ ತಂದಿರುವ ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರು ಶಾಸಕ ಸ್ಥಾನದಿಂದ ವಜಾ ಕೂಡ ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿತ್ತು.

ಇನ್ನು ಉಳಿದಂತೆ ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್​​ ಅವರನ್ನು ದೋಷಿಗಳು ಎಂದು ಹೇಳಿ, ಶಿಕ್ಷೆಯನ್ನು ನೀಡಿದೆ.

ಬಟ್ಟೆ ಬದಲಿಸಲು ಅನುಮತಿ ನೀಡುವಂತೆ ಮನವಿ

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್​ಷೆಯನ್ನು ಘೋಷಣೆ ಮಾಡಿದೆ. ಇದೀಗ ಅವರು 3 ದಿನದಿಂದ ಒಂದೇ ಬಟ್ಟೆಯಲ್ಲಿದ್ದಾರೆ, ಬಟ್ಟೆ ಬದಲಿಸಲು ಅನುಮತಿ ನೀಡುವಂತೆ ಶಾಸಕ ವಿನಯ್ ಕುಲಕರ್ಣಿ ಪರ ವಕೀಲ ಸುನಿಲ್ ಮನವಿ ಮಾಡಿದ್ದಾರೆ. ಅಪರಾಧಿಗಳಿಗೆ ಬಟ್ಟೆ ಒದಗಿಸಲು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೈಲು ಕೈಪಿಡಿಯಲ್ಲಿರುವಂತೆ ಬಟ್ಟೆ ಒದಗಿಸಲು ಜಡ್ಜ್‌ ಸೂಚನೆ ನೀಡಿದ್ದಾರೆ. ಇದರ ಜತೆಗೆ ಪ್ರತಿ ಸೆಕ್ಷನ್‌ಗೂ ಪ್ರತ್ಯೇಕವಾಗಿ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಕೊಲೆ ಅಪರಾಧಿಯ ಶಾಸಕ ಸ್ಥಾನಕ್ಕೂ ಕುತ್ತು: ವಿನಯ್ ಕುಲಕರ್ಣಿ ಮುಂದಿರುವ ಕಾನೂನು ಆಯ್ಕೆಗಳೇನು?

ಇನ್ನು ಪ್ರಕರಣದ ಹಿನ್ನಲೆಗಳೇನು?

2016ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್​​ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದ ಉಪನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಈ ಕೊಲೆ ಆಸ್ತಿ ವಿವಾದದ ವಿಚಾರಕ್ಕಾಗಿ ನಡೆದಿದೆ ಎಂದು ಹೇಳಲಾಗಿದೆ.ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದ್ರೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. ಅಲ್ಲಿಂದ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು. ಈ ಕೊಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕೈವಾಡವಿರುವ ಅನುಮಾನ ವ್ಯಕ್ತವಾಗಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇದರ ನಂತರ ವಿನಯ್‌ ಕುಲಕರ್ಣಿ ಜಾಮೀನು ಪಡೆದು ಹೊರಗೆ ಬಂದಿದ್ದರು. ನಂತರದಲ್ಲಿ ಈ ಪ್ರಕರಣವನ್ನು ಜನಪ್ರತಿನಿಧಿ ಕೋರ್ಟ್​​ಗೆ ನೀಡಲಾಗಿತ್ತು, ಇದೀಗ ಈ ಅವರಿಗೆ ಶಿಕ್ಷೆಯನ್ನು ಘೋಷಣೆ ಮಾಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:12 pm, Fri, 17 April 26

Source link

ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಶಾಕ್; ಆರು ವರ್ಷದಲ್ಲೇ ಹೆಚ್ಚು ಕುಸಿತ – Kannada News | Q1 2026 india smartphone market sees 6 year low shipments amid price increases

ನವದೆಹಲಿ, ಏಪ್ರಿಲ್ 17: ಕೌಂಟರ್‌ಪಾಯಿಂಟ್ ರಿಸರ್ಚ್ (Counterpoint Research) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ (smartphone shipments) ಗಣನೀಯ ಕುಸಿತ ಕಂಡುಬಂದಿದೆ. 2026ರ ಮೊದಲ ಕ್ವಾರ್ಟರ್ ಆದ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ಸ್ಮಾರ್ಟ್​ಫೋನ್ ತಯಾರಿಕೆ ಮತ್ತು ವಿತರಣೆಯಲ್ಲಿ ಶೇ. 3ರಷ್ಟು ಇಳಿಕೆ ಆಗಿದೆ. ಕಳೆದ ಆರು ವರ್ಷದಲ್ಲಿ ಯಾವುದೇ ತ್ರೈಮಾಸಿಕದಲ್ಲಿ ಸ್ಮಾರ್ಟ್​ಫೋನ್ ಮಾರುಕಟ್ಟೆ ಇಷ್ಟು ಕುಸಿದಿರಲಿಲ್ಲ.

ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಕುಸಿತ

2026ರ ಮೊದಲ ತ್ರೈಮಾಸಿಕದಲ್ಲಿ (Q1) ಭಾರತದ ಸ್ಮಾರ್ಟ್‌ಫೋನ್ ಪೂರೈಕೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 3 ರಷ್ಟು ಕುಸಿದಿದೆ. ಇದು ಕಳೆದ ಆರು ವರ್ಷಗಳಲ್ಲೇ ಅತ್ಯಂತ ಕಡಿಮೆ ಮಾರಾಟದ ಪ್ರಮಾಣವಾಗಿದೆ ಎಂದು ವರದಿ ತಿಳಿಸಿದೆ.

ಸುಮಾರು 80ಕ್ಕೂ ಹೆಚ್ಚು ಸ್ಮಾರ್ಟ್‌ಫೋನ್ ಮಾಡಲ್​ಗಳ ಸರಾಸರಿ ಬೆಲೆಯಲ್ಲಿ ಶೇ. 15 ರಷ್ಟು ಏರಿಕೆಯಾಗಿದೆ. ಎರಡನೇ ತ್ರೈಮಾಸಿಕದಲ್ಲಿ (Q2) ಬೆಲೆಗಳು ಇನ್ನೂ ಶೇ. 15 ರಿಂದ ಶೇ. 20 ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಹೆಚ್ಚುತ್ತಿರುವ ಬೆಲೆಗಳು ಮತ್ತು ಜನರ ಕೊಳ್ಳುವ ಶಕ್ತಿ ಕಡಿಮೆಯಾಗಿರುವುದು ಈ ಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ.

ಇದನ್ನೂ ಓದಿ: ಚಿನ್ನ ಮತ್ತು ಬೆಳ್ಳಿ ಆಮದಿಗೆ 15 ಬ್ಯಾಂಕುಗಳಿಗೆ ಸರ್ಕಾರದಿಂದ 3 ವರ್ಷ ಅನುಮತಿ

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವವರು

  • Vivo (ವಿವೋ): ಶೇ. 21 ರಷ್ಟು ಮಾರುಕಟ್ಟೆ ಪಾಲನ್ನು ಹೊಂದುವ ಮೂಲಕ ಅಗ್ರಸ್ಥಾನದಲ್ಲಿದೆ.
  • Samsung ಮತ್ತು Oppo: ಇವು ವಿವೋ ನಂತರದ ಸ್ಥಾನಗಳನ್ನು ಪಡೆದುಕೊಂಡಿವೆ.
  • Apple (ಆಪಲ್): ಐಫೋನ್ 17 ಸರಣಿಯ ಬೇಡಿಕೆಯಿಂದಾಗಿ ಆಪಲ್‌ನ ಮಾರುಕಟ್ಟೆ ಪಾಲು ಶೇ. 9 ಕ್ಕೆ ತಲುಪಿದೆ.
  • Google (ಗೂಗಲ್): ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ವೈಶಿಷ್ಟ್ಯಗಳಿಂದಾಗಿ ಗೂಗಲ್ ಪ್ರೀಮಿಯಂ ವಿಭಾಗದಲ್ಲಿ ಶೇ. 39 ರಷ್ಟು ಪ್ರಗತಿ ಸಾಧಿಸಿ, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬ್ರ್ಯಾಂಡ್ ಆಗಿ ಹೊರಹೊಮ್ಮಿದೆ.

ಕೌಂಟರ್​ಪಾಯಿಂಟ್ ರಿಸರ್ಚ್​ನ ಸಂಶೋಧನಾ ನಿರ್ದೇಶಕ ತರುಣ್ ಪಾಠಕ್ ಅವರ ಪ್ರಕಾರ, ಮುಂದಿನ ದಿನಗಳಲ್ಲಿಯೂ ಮಾರುಕಟ್ಟೆ ಒತ್ತಡಕ್ಕೆ ಒಳಗಾಗಲಿದೆ. 2026ರ ಎರಡನೇ ತ್ರೈಮಾಸಿಕದಲ್ಲಿ ಸ್ಮಾರ್ಟ್‌ಫೋನ್ ಮಾರಾಟವು ಎರಡಂಕಿ (double-digit) ಕುಸಿತವನ್ನು ಕಾಣುವ ಸಾಧ್ಯತೆಯಿದೆ.

80ಕ್ಕೂ ಹೆಚ್ಚು ಸ್ಮಾರ್ಟ್​ಫೋನ್ ಮಾಡಲ್​ಗಳು ಸರಾಸರಿಯಾಗಿ ಶೇ. 15ರಷ್ಟು ಬೆಲೆ ಏರಿಕೆ ಪಡೆದಿವೆ. ಎರಡನೇ ಕ್ವಾರ್ಟರ್​ನಲ್ಲೂ ಶೇ. 15-20ರಷ್ಟು ಬೆಲೆ ಏರಿಸಬಹುದು.

ಇದನ್ನೂ ಓದಿ: ಏಷ್ಯಾದ ನಂ. 1 ಶ್ರೀಮಂತ ಅಂಬಾನಿಯಲ್ಲ, ಅದಾನಿ; ಟಾಪ್-20ಯಲ್ಲಿ ಅಮೆರಿಕನ್ನರನ್ನು ಬಿಟ್ಟರೆ ಭಾರತೀಯರೇ ಹೆಚ್ಚು

‘ಮೆಮೊರಿ ಚಿಪ್ ದುಬಾರಿಯಾಗಿದ್ದರಿಂದ ಮತ್ತು ಕರೆನ್ಸಿ ಒತ್ತಡದಿಂದಾಗಿ ಒಇಎಂಗಳು (ಸ್ಮಾರ್ಟ್​ಫೋನ್ ತಯಾರಕರು) ಪ್ರಮುಖ ಫೋನ್ ಮಾಡಲ್​ಗಳ ಬೆಲೆ ಏರಿಸುವುದು ಅನಿವಾರ್ಯವಾಯಿತು. ಮಾರುಕಟ್ಟೆಗೂ ಇದು ಒತ್ತಡ ತಂದಿದೆ’ ಎಂದು ಕೌಂಟರ್​ಪಾಯಿಂಟ್ ರಿಸರ್ಚ್​ನ ಸೀನಿಯರ್ ಅನಾಲಿಸ್ಟ್ ಪ್ರಚಿರ್ ಸಿಂಗ್ ಹೇಳುತ್ತಾರೆ.

ಬೆಲೆ ಏರಿಕೆ ಮತ್ತು ಜನರ ಅಗತ್ಯತೆಗಳು ಬದಲಾಗುತ್ತಿರುವುದು ಸ್ಮಾರ್ಟ್‌ಫೋನ್ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರುತ್ತಿರುವುದೂ ಹೌದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ – Kannada News | Jacqueline Fernandez wants to turn Approver in Sukesh Chandrashekhar Money Laundering Case

ಬಹುಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈಗ ಈ ಪ್ರಕರಣದಲ್ಲಿ ಅಪ್ರೂವರ್ (Approver) ಆಗಲು ಇಚ್ಛಿಸಿದ್ದಾರೆ. ದೆಹಲಿ ನ್ಯಾಯಾಲಯದ ಮುಂದೆ ಅವರು ಈ ವಿಷಯ ತಿಳಿಸಿದ್ದಾರೆ. ಇದರಿಂದ ಪ್ರಕರಣದ ಗತಿಯೇ ಬದಲಾಗುವ ಸಾಧ್ಯತೆ ಇದೆ. ಜಾಕ್ವೆಲಿನ್ (Jacqueline Fernandez) ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ, ಮೊದಲು ಜಾರಿ ನಿರ್ದೇಶನಾಲಯಕ್ಕೆ (ED) ಈ ಬಗ್ಗೆ ಅಧಿಕೃತವಾಗಿ ವಿನಂತಿ ಸಲ್ಲಿಸುವಂತೆ ಸೂಚಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಈಗ ಜೈಲಿನಲ್ಲಿದ್ದಾನೆ.

ನಿಯಮದ ಪ್ರಕಾರ, ತನಿಖಾ ಸಂಸ್ಥೆಯು ಮೊದಲು ಜಾಕ್ವೆಲಿನ್ ಫರ್ನಾಂಡಿಸ್ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು. ನಂತರ ಅವರನ್ನು ಅಪ್ರೂವರ್ ಆಗಿ ಪರಿಗಣಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದೆ. ಸುಕೇಶ್ ಚಂದ್ರಶೇಖರ್ ಕಡೆಯಿಂದ ಜಾಕ್ವೆಲಿನ್ ಸುಮಾರು 7 ಕೋಟಿ ರೂಪಾಯಿ ಮೌಲ್ಯದ ದುಬಾರಿ ಆಭರಣಗಳು, ಬಟ್ಟೆ ಮತ್ತು ವಾಹನಗಳನ್ನು ಉಡುಗೊರೆಯಾಗಿ ಪಡೆದಿದ್ದಾರೆ ಎಂಬ ಆರೋಪ ಇದೆ.

ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಬಂಧನವಾದ ನಂತರ ಜಾಕ್ವೆಲಿನ್ ಅವರು ತಮ್ಮ ಮೊಬೈಲ್‌ನಲ್ಲಿದ್ದ ಡೇಟಾವನ್ನು ಡಿಲೀಟ್ ಮಾಡಿದ್ದಾರೆ ಮತ್ತು ಹಣಕಾಸಿನ ವಹಿವಾಟಿನ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದರು ಎಂದು ತನಿಖಾ ಸಂಸ್ಥೆ ಹೇಳಿದೆ. ಹೈ ಪ್ರೊಫೈಲ್ ವ್ಯಕ್ತಿಗಳಿಗೆ ವಂಚಿಸಿ ಸುಕೇಶ್ ಒಟ್ಟು 215 ಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ್ದ ಎನ್ನಲಾಗಿದೆ.

‘ಸುಕೇಶ್ ಚಂದ್ರಶೇಖರ್ ಒಬ್ಬ ಉದ್ಯಮಿ ಎಂದು ನಂಬಿಸಿ ನನಗೆ ಮೋಸ ಮಾಡಿದ್ದಾನೆ. ಆತನ ಅಪರಾಧ ಹಿನ್ನೆಲೆಯ ಬಗ್ಗೆ ನನಗೆ ಯಾವುದೇ ಅರಿವಿರಲಿಲ್ಲ’ ಎಂದು ಜಾಕ್ವೆಲಿನ್ ಆರಂಭದಿಂದಲೂ ವಾದಿಸುತ್ತಿದ್ದಾರೆ. ಆದರೆ, ಇಡಿ ಮಾತ್ರ ಅವರನ್ನು ಈ ಪ್ರಕರಣದಲ್ಲಿ ಸಹ-ಆರೋಪಿ ಎಂದು ಹೆಸರಿಸಿದೆ. ಈಗ ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧರಿಸಿದ್ದಾರೆ.

ಉದನ್ನೂ ಓದಿ: ರಕ್ಕಮ್ಮನ ಖಾಸಗಿ ವಿಡಿಯೋ ಲೀಕ್​ ಮಾಡ್ತೀನಿ ಅಂತ ಬೆದರಿಕೆ ಹಾಕಿದ ಸುಕೇಶ್​ ಚಂದ್ರಶೇಖರ್​

ಜೈಲಿನಲ್ಲಿದ್ದರೂ ಸುಕೇಶ್ ಪದೇ ಪದೇ ಜಾಕ್ವೆಲಿನ್‌ಗೆ ಪ್ರೇಮ ಪತ್ರಗಳನ್ನು ಬರೆಯುವ ಮೂಲಕ ತಾನು ಆಕೆಯ ಬಾಯ್‌ಫ್ರೆಂಡ್ ಎಂದು ಹೇಳಿಕೊಳ್ಳುತ್ತಿದ್ದಾನೆ. ಕಳೆದ ವರ್ಷ ಜಾಕ್ವೆಲಿನ್ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಈಗ ಜಾಕ್ವೆಲಿನ್ ಅವರೇ ಸಾಕ್ಷಿಯಾಗಲು ಮುಂದೆ ಬಂದಿರುವುದರಿಂದ ಸುಕೇಶ್‌ಗೆ ಸಂಕಷ್ಟ ತಂದೊಡ್ಡುವ ಲಕ್ಷಣಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಉಚ್ಛಾಟಿತ ವಚನಾನಂದ ಶ್ರೀಗೆ ಮತ್ತೊಂದು ಸಂಕಷ್ಟ, ಧ್ಯಾನದ ಮೊರೆ ಹೋದ ಸ್ವಾಮೀಜಿ – Kannada News | Harihar Panchamasa­li Petha Row: hostel students complaints to child welfare committee against vachananda swamiji

ದಾವಣಗೆರೆ, (ಏಪ್ರಿಲ್ 17):  ಹರಿಹರ ಪಂಚಮಸಾಲಿ ಗುರುಪೀಠದಿಂದ (Harihar Panchamasa­li Petha) ವಚನಾನಂದ ಶ್ರೀಗಳನ್ನು (vachananda swamiji) ಉಚ್ಛಾಟನೆ ಮಾಡಲಾಗಿದೆ. ಆದರೂ ಸಹ ಯಾವುದೇ ಕಾರಣಕ್ಕೂ ಮಠ ಬಿಟ್ಟು ಹೋಗಲು ಎಂದು ಪಟ್ಟು ಹಿಡಿದಿರುವ ವಚನಾನಂದ ಶ್ರೀಗಳ ವಿರುದ್ಧ ಹಾಸ್ಟೆಲ್ ವಿದ್ಯಾರ್ಥಿಗಳು ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ. ಇದರಿಂದ ಸ್ವಾಮೀಜಿಗೆ ಸಂಕಷ್ಟ ಎದುರಾಗಿದೆ. ಇನ್ನು ವಿದ್ಯಾರ್ಥಿಗಳ ದೂರು ಬೆನ್ನಲ್ಲೇ ಮಕ್ಕಳ ಕಲ್ಯಾಣ ಸಮಿತಿಯವರು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಮಠಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ.

ಸ್ವಾಮೀಜಿ ಮಕ್ಕಳಿಂದ ಮಸಾಜ್ ಮಾಡಿಕೊಳ್ಳುತ್ತಿದ್ದ.‌ಮಕ್ಕಳಿಗೆ ಹಿಂಸೆ ನೀಡಿದ್ದಾರೆ ಎಂಬ ಆರೋಪಿಸಲಾಗಿದ್ದು, ಈ ಸಂಬಂಧ ಮಠಕ್ಕೆ ಬಂದ ಮಕ್ಕಳ ಕಲ್ಯಾಣ ಸಮತಿ ಸದಸ್ಯರಿಗೆ ಸ್ವಾಮೀಜಿ ಪರ ಹಿರಿಯ ನ್ಯಾಯವಾದಿ ಪ್ರಕಾಶ ಪಾಟೀಲ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಉಚ್ಛಾಟನೆಯಾದರೂ ಮಠದಲ್ಲೇ ಉಳಿದ ವಚನಾನಂದ ಶ್ರೀಗೆ ಭಕ್ತರೇ ಕಾವಲು: ಸಿರಿಗೆರೆ ಪರಮೇಶ್ವರ ಗೌಡ ನೇತೃತ್ವದಲ್ಲಿ ಭದ್ರತೆ

ಈ ಸಂಬಂಧ ಪ್ರತಿಕ್ರಿಯಿಸಿರುವ ಪಂಚಮಸಾಲಿ ಗುರುಪೀಠದ ದಸೋಹ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ನ್ಯಾಯಾಲಯವಾದಿ ಪ್ರಕಾಶ ಪಾಟೀಲ್, ಇದೊಂದು ಸ್ವಾಮೀಜಿಗಳ ವಿರುದ್ಧ ಷಡ್ಯಂತ್ರ. ಅವರ ವ್ಯಕ್ತಿತ್ವದ ಕಳಂಕ ತರಲು ಮಾಡಿದ ತಂತ್ರ. ಪಂಚಮಸಾಲಿ ಗುರುಪೀಠದಲ್ಲಿ ಲೆಕ್ಕಾ ಕೊಡಿ ಚಳವಳಿ ನಡೆದಿತ್ತು. ಇದೇ ಕಾರಣಕ್ಕೆ ಸ್ವಾಮೀಜಿ ವಿರುದ್ಧ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ಕೆಲವರು ಮಕ್ಕಳ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಜೊತೆಗೆ ಸ್ವಾಮೀಜಿ ಗಳ ವಿರುದ್ದ ದೂರು ನೀಡುವಂತೆ ಮಾಡಿರುವ ಸಾದ್ಯತೆ ಸಹ ಇದೆ. ಇದರಲ್ಲಿ ಸ್ವಾಮೀಜಿ ತಪ್ಪು ಇದ್ರು ನಾವು ಒಪ್ಪುತ್ತೇವೆ. ಆದ್ರೆ ಲೆಕ್ಕಾ ಕೊಡಿ ಎಂದು ಕೇಳಿದ್ರೆ ಈ ರೀತಿ ಸಾಮೀಜಿ ವಿರುದ್ಧ ಷಡ್ಯಂತ್ರ ಸರಿಯಲ್ಲ ಎಂದು ಹೇಳಿದ್ದಾರೆ.

ಧ್ಯಾನದ ಮೊರೆ ಹೋದ ವಚನಾನಂದ ಸ್ವಾಮೀಜಿ

ಟ್ರಿಸ್ಟಿಗಳು ಸೇರಿ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಾಡಿದ್ದಾರೆ. ಆದ್ರೆ, ವಚನಾನಂದ ಸ್ವಾಮೀಜಿ ಮಾತ್ರ ಮಠ ಬಿಟ್ಟು ಹೋಗಲ್ಲ ಎಂದು ಪಟ್ಟು ಹಿಡಿದುಕೊಂಡು ಕುಳಿತ್ತಿದ್ದಾರೆ. ಇದರಿಂದ ಪಂಚಮಸಾಲಿ ಯುವ ಘಟಕ ಸಹ ಸುದ್ದಿಗೋಷ್ಠಿ ನಡೆಸಿ, ಮಠ ಬಿಟ್ಟು ಹೋಗಬೇಕು. ಇಲ್ಲವಾದಲ್ಲಿ ಎಳೆದು ಹೊರಗೆ ಹಾಕಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದೆ. ಇದರ ಮಧ್ಯೆ ಇದೀಗ ಮಕ್ಕಳ ಕಲ್ಯಾಣ ಸಮಿತಿ ಸಹ ಮಠಕ್ಕೆ ಭೇಟಿ ನೀಡಿ ತನಿಖೆ ನಡೆಸಿದೆ. ಈ ಎಲ್ಲಾ ಬೆಳವಣಿಗಳ ನಡುವೆ ವಚನಾನಂದ ಸ್ವಾಮೀಜಿ ಮಾತ್ರ ಧ್ಯಾನದ ಮೊರೆ ಹೋಗಿದ್ದಾರೆ.

ವಚನಾನಂದ ಸ್ವಾಮೀಜಿ ಹೇಳಿದ್ದೇನು?

ಆಗಿರುವುದು ಒಳ್ಳೆಯದೇ ಆಗುತ್ತಿರುವುದು ಒಳ್ಳೆಯದೇ. ನಾವು ಸಾಧಕರು. ನಾವು ದೇವರಲ್ಲ ದೇವರ ದಾರಿಯಲ್ಲಿ ನಡೆಯುವವರು. ಸಮಯ ಬಂದಾಗ ಎಲ್ಲ ಉತ್ತರಿಸುವೆ. ಈಗ ಮಕ್ಕಳ ಕಲ್ಯಾಣ ಸಮಿತಿ ಬಂದಿತ್ತು. ಅದು ಸೂಕ್ಷ್ಮ ವಿಚಾರ. ಅದರ ಬಗ್ಗೆ ವಿವರ ನೀಡಲ್ಲ ಎಂದಿದ್ದಾರೆ.

ಇನ್ನು ಜಯಮೃತ್ಯುಂಜಯ ಸ್ವಾಮೀಜಿ ಅವರನ್ನ ಹರಿಹರ ಗುರುಪೀಠಕ್ಕೆ ತರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ವಚನಾನಂದಶ್ರೀ, ನಾವೆಲ್ಲಾ ಸ್ವಾಮೀಜಿಗಳು ಒಂದೇ. ನಾನು ಸನ್ಯಾಸ ಸ್ವೀಕರಿಸಿದ ಬಳಿಕ ಅವರು ಸ್ವೀಕರಿಸಿದ್ದಾರೆ. ಅವರು 18 ವರ್ಷ ದಿಂದ ಪಂಚಮಸಾಲಿ ಕೂಡಲ ಸಂಗಮ ಗುರುಪೀಠದಲ್ಲಿ ಇದ್ದಾರೆ.‌ ನಾವು ಸ್ವಾಮೀಜಿಗಳೆಲ್ಲ ಎಂದು ಹೇಳಿದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರಲ್ಲಿ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಶೋಗೆ ವಿರೋಧ: ಕಾರ್ಯಕ್ರಮ ರದ್ದುಗೊಳಿಸುವಂತೆ ಪೊಲೀಸ್​​ ಆಯುಕ್ತರಿಗೆ ಮನವಿ – Kannada News | Munawar Faruqui Bengaluru Show Faces Opposition: Hindu Groups Demand Cancellation

ಬೆಂಗಳೂರು, ಏಪ್ರಿಲ್​​ 17: ನಗರದಲ್ಲಿ ಶನಿವಾರ (ನಾಳೆ) ನಡೆಯಲಿರುವ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳಿಂದ ಆಕ್ಷೇಪ ಕೇಳಿಬಂದಿದೆ. ಶೋ ರದ್ದು ಪಡಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​​ ಅವರಿಗೆ ಹಿಂದೂ ಜನಜಾಗೃತಿ ಸಮಿತಿ ಮನವಿ ಸಲ್ಲಿಸಿದೆ. ಮುನಾವರ್ ಫಾರುಕಿ ಹಳೆಯ ವಿವಾದಗಳು ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ಆತಂಕವನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

2021ರಲ್ಲಿ ಇಂದೋರ್‌ನಲ್ಲಿ ಫಾರುಕಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನೂ ಹಿಂದೂ ಜನಜಾಗೃತಿ ಸಮಿತಿ ಉಲ್ಲೇಖಿಸಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳಡಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದೆ. ಆ ಪ್ರಕರಣ ಸಂಬಂಧ ಫಾರುಕಿ ಬಂಧನಕ್ಕೊಳಗಾಗಿ ಒಂದು ತಿಂಗಳಿಗಿಂತ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆಯಾದರೂ, ಆ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಬಾಕಿಯಿದೆ ಎಂದು ಸಮಿತಿ  ಹೇಳಿದೆ.

ಇದನ್ನೂ ಓದಿ: ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂ, ಓರ್ವನ ಕಾಲು ಮುರಿತ!

ಪ್ರಯಾಗರಾಜ್ ಮತ್ತು ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ ಅವರ ಕಾರ್ಯಕ್ರಮಗಳ ವಿಷಯಕ್ಕೆ ಸಂಬಂಧಿಸಿದಂತೆ ವಿವಾದಗಳು ಮತ್ತು ಆಕ್ಷೇಪಣೆಗಳು ಬಂದಿದ್ದವು. ಮುಂಬೈ, ದೆಹಲಿ, ಪುಣೆ, ಹೈದರಾಬಾದ್, ಗೋವಾ, ರಾಯ್ಪುರ್ ಮತ್ತು ಗುರುಗ್ರಾಂ ಸೇರಿದಂತೆ ಬೆಂಗಳೂರಲ್ಲೂ ಅವರ ಶೋಗಳು ಈ ಹಿಂದೆ ಕಾನೂನು ಸುವ್ಯವಸ್ಥೆ ಆತಂಕದಿಂದ ರದ್ದಾಗಿದ್ದವು ಅಥವಾ ಅನುಮತಿ ನಿರಾಕರಿಸಲಾಗಿತ್ತು. ಹೀಗಾಗಿ ಬೆಂಗಳೂರಿನಲ್ಲಿ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿದರೆ ಸಾರ್ವಜನಿಕ ಭಾವನೆಗಳಿಗೆ ಧಕ್ಕೆ ಉಂಟಾಗಿ, ಪ್ರತಿಭಟನೆಗಳು, ಅಶಾಂತಿ ಮತ್ತು ಶಾಂತಿ ಭಂಗ ಸಂಭವಿಸುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಮಾಜದಲ್ಲಿ ಸೌಹಾರ್ದತೆ ಉಳಿಸಿಕೊಳ್ಳುವ ದೃಷ್ಟಿಯಿಂದ ಮಾತ್ರ ಈ ಮನವಿ ಮಾಡಿರೋದಾಗಿ ಸಮಿತಿ ಸ್ಪಷ್ಟಪಡಿಸಿರುವ ಬಗ್ಗೆ ವರದಿಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:43 pm, Fri, 17 April 26

Source link

ಒಗ್ಗಟ್ಟಾಗಿ ಇತಿಹಾಸ ಸೃಷ್ಟಿಸೋಣ; ಮಹಿಳಾ ಮೀಸಲಾತಿ ಮಸೂದೆ ಪರ ಮತ ಚಲಾಯಿಸಲು ಸಂಸದರಿಗೆ ಮೋದಿ ಮನವಿ – Kannada News | Let us together create history PM Modi urges MPs to vote in favour of women’s quota bill

ನವದೆಹಲಿ, ಏಪ್ರಿಲ್ 17: ಲಕ್ಷಾಂತರ ಭಾರತೀಯ ಮಹಿಳೆಯರ ನಿರೀಕ್ಷೆಗಳು ಲೋಕಸಭೆಯ ಮೇಲಿವೆ. ಎಲ್ಲ ಪಕ್ಷಗಳೂ ಸೇರಿ ಇತಿಹಾಸ ನಿರ್ಮಿಸೋಣ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi), ಕೇಂದ್ರ ಸರ್ಕಾರವು ಮೇಲ್ಮನೆಯಲ್ಲಿ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಯ ಪರವಾಗಿ ಇಂದು ಮತ ಚಲಾಯಿಸುವಂತೆ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ್ದಾರೆ.

ಲೋಕಸಭೆಯ ಸ್ಥಾನಗಳನ್ನು ಮರುವಿಂಗಡಿಸಲು ಮತ್ತು ಹೆಚ್ಚಿಸಲು ಪ್ರಸ್ತಾವಿತ ಸೀಮಾ ನಿರ್ಣಯ ಪ್ರಕ್ರಿಯೆಗೆ ಮೀಸಲಾತಿಯನ್ನು ಲಿಂಕ್ ಮಾಡಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತಿದ್ದುಪಡಿಯನ್ನು ಸ್ವಂತವಾಗಿ ಅಂಗೀಕರಿಸಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಹೊಂದಿಲ್ಲ. ನಿನ್ನೆ ಪ್ರಾರಂಭವಾದ ಲೋಕಸಭಾ ಅಧಿವೇಶನದ ಚರ್ಚೆಯ ನಂತರ ಲೋಕಸಭೆ ಇಂದು ಸಂಜೆ ಈ ಮಸೂದೆಯ ಮೇಲೆ ಮತ ಚಲಾಯಿಸಲಿದೆ. ಈ ಹಿನ್ನೆಲೆಯಲ್ಲಿ ಇದಕ್ಕೂ ಮುನ್ನ ಪ್ರಧಾನಿ ಮೋದಿ ಎಲ್ಲ ಪಕ್ಷಗಳ ಸಂಸದರಿಗೆ ಈ ಮಸೂದೆಗಳ ಪರವಾಗಿ ಮತ ಚಲಾಯಿಸಲು ಮನವಿ ಮಾಡಿದ್ದಾರೆ.

ಇದನ್ನೂ ಓದಿ: PM Modi Speech: ರಾಜ್ಯಸಭೆಯಲ್ಲಿ ಹರಿವಂಶ್ ಹ್ಯಾಟ್ರಿಕ್ ಸಾಧನೆ: ಸದನಕ್ಕೆ ಹೊಸ ಕಳೆ ತಂದ ಉಪ ಸಭಾಪತಿ, ವಿಶ್ವಾಸದ ಪ್ರತೀಕ ಎಂದ ಪ್ರಧಾನಿ ಮೋದಿ

ಈ ಬಗ್ಗೆ ಎಕ್ಸ್​ನಲ್ಲಿನ ಪೋಸ್ಟ್‌ನಲ್ಲಿ, ಮಸೂದೆಯ ಸುತ್ತಲಿನ ತಪ್ಪು ಕಲ್ಪನೆಗಳನ್ನು ಪರಿಹರಿಸಲಾಗಿದೆ ಮತ್ತು ಸದಸ್ಯರು ಎತ್ತಿರುವ ಎಲ್ಲಾ ಕಳವಳಗಳನ್ನು ಸ್ಪಷ್ಟಪಡಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ತಪ್ಪು ಪರಿಕಲ್ಪನೆಗಳನ್ನು ಹೋಗಲಾಡಿಸಲು ತಾರ್ಕಿಕ ಪ್ರತಿಕ್ರಿಯೆಗಳನ್ನು ಒದಗಿಸಲಾಗಿದೆ. ಎಲ್ಲಾ ಆತಂಕಗಳನ್ನು ಪರಿಹರಿಸಲಾಗಿದೆ. ಅಗತ್ಯವಿದ್ದ ಮಾಹಿತಿಯನ್ನು ಪ್ರತಿಯೊಬ್ಬ ಸದಸ್ಯರಿಗೂ ಒದಗಿಸಲಾಗಿದೆ. ದಯವಿಟ್ಟು ಸರಿಯಾದ ಯೋಚನೆ ಮಾಡಿ ಮಹಿಳಾ ಮೀಸಲಾತಿಯ ಪರವಾಗಿ ನಿರ್ಧಾರ ತೆಗೆದುಕೊಂಡು ಮತ ಚಲಾಯಿಸಿ ಎಂದು ನಾನು ಎಲ್ಲಾ ರಾಜಕೀಯ ಪಕ್ಷಗಳನ್ನು ಒತ್ತಾಯಿಸುತ್ತೇನೆ ಮತ್ತು ಮನವಿ ಮಾಡುತ್ತೇನೆ. ದೇಶದ ನಾರಿ ಶಕ್ತಿಯ ಪರವಾಗಿ, ನಾನು ಎಲ್ಲಾ ಸದಸ್ಯರನ್ನು ಪ್ರಾರ್ಥಿಸುತ್ತೇನೆ. ದಯವಿಟ್ಟು ನಾರಿ ಶಕ್ತಿಯ ಭಾವನೆಗಳಿಗೆ ನೋವುಂಟುಮಾಡುವ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ” ಎಂದು ಅವರು ಹೇಳಿದ್ದಾರೆ.

ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಒದಗಿಸಲು ಪ್ರಯತ್ನಿಸುವ ಸಂವಿಧಾನ (ನೂರ ಮೂವತ್ತೊಂದನೇ ತಿದ್ದುಪಡಿ) ಮಸೂದೆ, 2026ರ ಕುರಿತು ಲೋಕಸಭೆ ತನ್ನ ಚರ್ಚೆ ಮತ್ತು ಮತದಾನವನ್ನು ಮುಂದುವರಿಸುತ್ತಿದೆ. ಸುದೀರ್ಘ ಚರ್ಚೆಯ ನಂತರ, ಕೆಳಮನೆ ಇಂದು ಸಂಜೆ ಈ ಮಸೂದೆಯ ಮೇಲೆ ಮತ ಚಲಾಯಿಸಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:38 pm, Fri, 17 April 26

Source link

Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಎಷ್ಟು ಘೇಂಡಾಮೃಗಗಳಿವೆ ಗುರುತಿಸಿ ನೋಡೋಣ – Kannada News | Optical illusion: Can you identify the rhinos in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ನೀವು ಬುದ್ಧಿವಂತರೇ, ಹಾಗಾದ್ರೆ ಮೆದುಳು ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಸಮಯ. ವೀಕ್ಷಣಾ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯ ಮಟ್ಟವನ್ನು ಪರೀಕ್ಷಿಸಲು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳತ್ತ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಕೆಲವೊಂದು ಟ್ರಿಕ್ಕಿ ಒಗಟುಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಈ ಚಿತ್ರದಲ್ಲಿ ಎಷ್ಟು ಘೇಂಡಾಮೃಗಗಳಿವೆ ಎಂದು ಹೇಳಬೇಕು. 10 ಸೆಕೆಂಡುಗಳಲ್ಲಿ ಈ ಪ್ರಾಣಿಗಳನ್ನು ಗುರುತಿಸಲು

ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ

ಮೆದುಳಿಗೆ ಕೆಲಸ ನೀಡುವ ಈ ಒಗಟಿನ ಚಿತ್ರ ಟ್ರಿಕ್ಕಿಯಾಗಿದೆ. ಈ ಮೂರು ಸಾಲುಗಳಲ್ಲಿ ಘೇಂಡಾಮೃಗಗಳಿವೆ. ಆದರೆ ಇಲ್ಲಿ ನಿಮ್ಮ ಕಣ್ಣಿಗೆ ಒಂಭತ್ತು ಘೇಂಡಾಮೃಗ ಕಾಣಿಸುತ್ತದೆ. ಆದರೆ ಈ ಫೋಟೋದಲ್ಲಿ 9 ಕ್ಕೂ ಹೆಚ್ಚು ಘೇಂಡಾಮೃಗಗಳಿವೆ. ನೀವೀಗ ಈ ಚಿತ್ರದಲ್ಲಿರುವ ಒಟ್ಟು ಪ್ರಾಣಿಗಳೆಷ್ಟು ಎಂದು 10 ಸೆಕೆಂಡುಗಳಲ್ಲಿ ಹೇಳಬೇಕು. ನಿಮ್ಮ ಸಮಯ ಈಗ ಆರಂಭವಾಗುತ್ತದೆ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿ ಅಡಗಿರುವ ಪಕ್ಷಿಯನ್ನು ಕಂಡುಹಿಡಿಯಬಲ್ಲಿರಾ

ಘೇಂಡಾಮೃಗಗಳನ್ನು ಗುರುತಿಸಲು ಸಾಧ್ಯವಾಯಿತೇ?

ಈ ಒಗಟಿನ ಚಿತ್ರ ಬಿಡಿಸಲು ನಿಮಗೆ ಇಂತಿಷ್ಟು ಸಮಯ ನೀಡಲಾಗಿದೆ. ನೀವು ಕೊಟ್ಟಿರುವ ಸಮಯದಲ್ಲಿ ಎಷ್ಟು ಘೇಂಡಾಮೃಗಗಳಿವೆ ಎಂದು ಗುರುತಿಸಲು ಸಾಧ್ಯವಾಗಿದೆಯೇ. ಇಲ್ಯೂಷನ್ ಚಿತ್ರ ಬಿಡಿಸಿದ್ದೀರಿ ಎಂದಾದರೆ ನಿಮ್ಮ ಕಣ್ಣುಗಳು ಚುರುಕಾಗಿವೆ ಎಂದರ್ಥ. ಒಂದು ವೇಳೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವಾಗಿಲ್ಲ ಎಂದಾದರೆ ಹೆಚ್ಚು ಚಿಂತಿಸಬೇಡಿ. ಎಷ್ಟು ಪ್ರಾಣಿಗಳಿವೆ ಎಂದು ಗುರುತಿಸಿದ್ದೇವೆ. ನೀವು ಎಚ್ಚರಿಕೆಯಿಂದ ನೋಡಿದರೆ, ನಿಮ್ಮ ಕಣ್ಣಿಗೆ 16 ಘೇಂಡಾಮೃಗಗಳು ಕಾಣುತ್ತವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version