ಚಾರ್ಮಿನಾರ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ, ತೆಲಂಗಾಣದ ನಾಮಪಲ್ಲಿ ರೈಲ್ವೆ ನಿಲ್ದಾಣದಲ್ಲಿ ಘಟನೆ – Kannada News | Blaze Erupts in Charminar Express Coach Near Telangana Station
ಭುವನಗಿರಿ, ಏಪ್ರಿಲ್ 26: ತೆಲಂಗಾಣದ ಅಲೆರ್ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ(Fire) ಕಾಣಿಸಿಕೊಂಡಿದೆ. ರೈಲು ನಿಲ್ದಾಣವನ್ನು ಪ್ರವೇಶಿಸುತ್ತಿದ್ದಂತೆಯೇ ಬೋಗಿಯೊಂದರಿಂದ ಹೊಗೆ ಹೊರಬಂದಿದ್ದು, ಪ್ರಯಾಣಿಕರು ಭೀತಿಯಿಂದ ಹೊರಗೆ ಓಡಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ರೈಲಿನ ಎಸ್5 (S5) ಬೋಗಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ರೈಲು ಅಲೆರ್ ನಿಲ್ದಾಣದ ವ್ಯಾಪ್ತಿಯಲ್ಲಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣವೇ ಎಚ್ಚೆತ್ತ ರೈಲ್ವೆ ಸಿಬ್ಬಂದಿ ರೈಲನ್ನು ನಿಲ್ಲಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಬೋಗಿಯಲ್ಲಿದ್ದ…