ಅಯೋಡಿನ್ ಕೊರತೆಯನ್ನು ನಿರ್ಲಕ್ಷಿಸಬೇಡಿ! ದೇಹದಲ್ಲಿ ಕಾಣಿಸಿಕೊಳ್ಳುವ ಪ್ರಮುಖ ಎಚ್ಚರಿಕೆ ಲಕ್ಷಣಗಳು – Kannada News | How Iodine Deficiency Affects Your Thyroid and Overall Health

ದೇಹದ ಆರೋಗ್ಯವನ್ನು ಕಾಪಾಡಲು ವಿಟಮಿನ್‌ಗಳಷ್ಟೇ ಅಲ್ಲ, ಖನಿಜಾಂಶಗಳೂ (Minerals) ಅತ್ಯಗತ್ಯ. ಅವುಗಳಲ್ಲಿ ಅಯೋಡಿನ್ (Iodine) ಪ್ರಮುಖವಾದ ಖನಿಜವಾಗಿದೆ. ಇದು ಥೈರಾಯ್ಡ್ ಹಾರ್ಮೋನ್ ಉತ್ಪಾದನೆಗೆ ಅಗತ್ಯವಾಗಿದ್ದು, ದೇಹದ ಚಯಾಪಚಯ (Metabolism), ಶಕ್ತಿ ಉತ್ಪಾದನೆ, ಮೆದುಳಿನ ಬೆಳವಣಿಗೆ ಹಾಗೂ ಬೆಳವಣಿಗೆಯ ಹಂತದಲ್ಲಿರುವ ಮಕ್ಕಳ ದೈಹಿಕ-ಮಾನಸಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಅಯೋಡಿನ್ ಕೊರತೆಯನ್ನು ಆರಂಭದಲ್ಲಿ ಹಲವರು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ ದೀರ್ಘಕಾಲ ಇದರ ಕೊರತೆ ಇದ್ದರೆ ಗೋಯಿಟರ್ (Goiter), ಹೈಪೋಥೈರಾಯ್ಡಿಸಂ (Hypothyroidism) ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಮತ್ತು ಮಕ್ಕಳು ಅಯೋಡಿನ್ ಕೊರತೆಯಿಂದ ಹೆಚ್ಚು ಪರಿಣಾಮಕ್ಕೊಳಗಾಗುವ ಸಾಧ್ಯತೆ ಇದೆ. ಹಾಗಾದರೆ ಅಯೋಡಿನ್ ಕೊರತೆಯ ಲಕ್ಷಣಗಳೇನು, ಯಾವ ಆಹಾರಗಳಲ್ಲಿ ಇದು ಸಿಗುತ್ತದೆ? ಯಾರಿಗೆ ಹೆಚ್ಚು ಅಪಾಯ? ಇಲ್ಲಿದೆ ಸಂಪೂರ್ಣ ಮಾಹಿತಿ.

ಅಯೋಡಿನ್ ಕೊರತೆಯಿಂದ ದೇಹದ ಮೇಲಾಗುವ ಪರಿಣಾಮ:

ಅಮೆರಿಕದ MedlinePlus ಮಾಹಿತಿಯ ಪ್ರಕಾರ, ಅಯೋಡಿನ್ ಕೊರತೆಯಾದರೆ ದೇಹವು ಸಾಕಷ್ಟು ಪ್ರಮಾಣದಲ್ಲಿ ಥೈರಾಯ್ಡ್ ಹಾರ್ಮೋನ್ ಉತ್ಪಾದಿಸಲು ಸಾಧ್ಯವಾಗುವುದಿಲ್ಲ.

ಇದರ ಪರಿಣಾಮವಾಗಿ:

  • ಗೋಯಿಟರ್ (Goiter) ಥೈರಾಯ್ಡ್ ಗ್ರಂಥಿ ದೊಡ್ಡದಾಗುವುದು
  • ಹೈಪೋಥೈರಾಯ್ಡಿಸಂ ಉಂಟಾಗುವ ಸಾಧ್ಯತೆ
  • ದೇಹದ ಚಯಾಪಚಯ ನಿಧಾನಗೊಳ್ಳುವುದು
  • ಶಕ್ತಿ ಕುಸಿತ ಮತ್ತು ದಣಿವು
  • ತೂಕ ಹೆಚ್ಚಾಗುವುದು
  • ಚಳಿಯ ಅನುಭವ

ಅಯೋಡಿನ್ ಕೊರತೆಯ ಪ್ರಮುಖ ಲಕ್ಷಣಗಳು

  • ಕುತ್ತಿಗೆಯ ಮುಂಭಾಗದಲ್ಲಿ ಊತ
  • ನಿರಂತರ ದಣಿವು
  • ದೇಹದಲ್ಲಿ ದುರ್ಬಲತೆ
  • ತೂಕ ಹೆಚ್ಚಾಗುವುದು
  • ಚಳಿ ಹೆಚ್ಚು ಅನುಭವಿಸುವುದು
  • ಒಣ ಚರ್ಮ
  • ಕೂದಲು ಉದುರುವುದು
  • ಮಲಬದ್ಧತೆ
  • ಏಕಾಗ್ರತೆಯ ಕೊರತೆ
  • ಮಕ್ಕಳಲ್ಲಿ ಬೆಳವಣಿಗೆ ನಿಧಾನವಾಗುವುದು

ಇದನ್ನೂ ಓದಿ: 70% ಕೋಕೋ ಇರುವ ಡಾರ್ಕ್ ಚಾಕೊಲೇಟ್ ಏಕೆ ಒಳ್ಳೆಯದು? ವೈದ್ಯರು ಹೇಳಿರುವ ಮಾಹಿತಿ ಇಲ್ಲಿದೆ

ಅಯೋಡಿನ್ ಏಕೆ ಮುಖ್ಯ?

  • ದೇಹದ ಚಯಾಪಚಯ ನಿಯಂತ್ರಿಸುತ್ತವೆ
  • ಹೃದಯದ ಬಡಿತದ ಮೇಲೆ ಪರಿಣಾಮ ಬೀರುತ್ತವೆ
  • ದೇಹದ ತಾಪಮಾನವನ್ನು ನಿಯಂತ್ರಿಸುತ್ತವೆ
  • ಮೆದುಳಿನ ಬೆಳವಣಿಗೆಗೆ ನೆರವಾಗುತ್ತವೆ
  • ಮಕ್ಕಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ

ಅಯೋಡಿನ್ ಸಮೃದ್ಧ ಆಹಾರಗಳು ಯಾವುವು?

  • ಅಯೋಡಿನ್ ಯುಕ್ತ ಉಪ್ಪು
  • ಹಾಲು
  • ಮೊಸರು
  • ಪನ್ನೀರ್
  • ಮೊಟ್ಟೆ
  • ಸಮುದ್ರ ಮೀನು
  • ಸಮುದ್ರ ಆಹಾರ (Seafood)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೇವಲ 25ನೇ ವಯಸ್ಸಿಗೆ ಕ್ರಿಕೆಟ್​ಗೆ ವಿದಾಯ ಹೇಳಿದ ಇಂಗ್ಲೆಂಡ್‌ ಕ್ರಿಕೆಟಿಗ

Source link

Video: ದುಡಿಮೆಯಲ್ಲಿ ಆಟೋ ಡ್ರೈವರ್‌ಗೆ ಜತೆಯಾಗುವ ಶ್ವಾನ, ವೈರಲ್‌ ಆಯ್ತು ದೃಶ್ಯ

ನಿಯತ್ತು ಎಂದರೆ ಮೊದಲು ನೆನಪಾಗುವುದೇ ಈ ಶ್ವಾನ (dog). ಮನುಷ್ಯರಿಗೆ ಈ ಶ್ವಾನಕ್ಕಿಂತ ಹೆಚ್ಚು ಆಪ್ತರು ಬೇರಾರೂ ಇರಲಿಕ್ಕೆ ಸಾಧ್ಯವಿಲ್ಲ. ಮನೆಯ ಸದಸ್ಯರಂತೆ ಇರುವ ಶ್ವಾನಗಳು ಒಂದು ತುತ್ತು ಹಾಕಿದ್ರೆ ಸಾಕು ಜೀವನ ಪರ್ಯಂತ ಮಾಲೀಕ ಜತೆಯಾಗುತ್ತದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ದಿನನಿತ್ಯದ ಕಾಯಕದಲ್ಲಿ ಆಟೋ ಡ್ರೈವರ್‌ಗೆ ಶ್ವಾನವೊಂದು ಜತೆಯಾಗಿದೆ. ಹೌದು, ಡ್ರೈವರ್ ಸೀಟಿನ ಪಕ್ಕ ಮಾಲೀಕ ಜತೆಗೆ ಕುಳಿತಿರುವ ಶ್ವಾನದ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಈ ನಿಸ್ವಾರ್ಥ ಪ್ರೀತಿಗೆ ಬೆಲೆ ಕಟ್ಟಲಾಗದು ಎಂದು ಕಾಮೆಂಟ್‌ ಮಾಡಿದ್ದಾರೆ.

ಪಿಹೆಚ್ ಮೂಮೆಂಟ್ (phd moment) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಆಟೋ ಡ್ರೈವರ್‌ರೊಬ್ಬರು ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಂತುಕೊಂಡಿರುವುದನ್ನು ನೋಡಬಹುದು. ಶ್ವಾನವೊಂದು ಅವರ ದಿನನಿತ್ಯದ ಕಾಯಕದಲ್ಲಿ ಜತೆಯಾಗಿದೆ. ಶ್ವಾನದ ತಲೆ ಸವರಿ ಈ ವ್ಯಕ್ತಿ ಮುದ್ದು ಮಾಡುತ್ತಿದ್ದರೆ, ಶ್ವಾನವು ಈ ಕಾವಲಾಗಿರುವಂತಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಹಾಯಾಗಿ ಮಲಗಿರುವ ಶ್ವಾನಕ್ಕೆ ಬೀಸಣಿಗೆಯಲ್ಲಿ ಗಾಳಿ ಬೀಸುತ್ತಿರುವ ವೃದ್ಧ

ಈ ವಿಡಿಯೋ ಹದಿನೇಳು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ದೇವರನ್ನು ಜತೆಗೆ ಕರ್ಕೊಂಡು ಹೋಗೋಕೆ ಅದೃಷ್ಟ ಬೇಕು ಎಂದಿದ್ದಾರೆ. ಇನ್ನೊಬ್ಬರು, ಝೆಡ್ ಪ್ಲಸ್ ಸೆಕ್ಯೂರಿಟಿ ಅಂದ್ರೆ ಇದೇ ಇರ್ಬೇಕು ಎಂದು ಹೇಳಿದ್ದಾರೆ. ಮತ್ತೊಬ್ಬರು, ವಿವರಿಸಲಾಗದ ನಿಸ್ವಾರ್ಥ ಪ್ರೀತಿ ಅಂದ್ರೆ ಇದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ತಮಿಳುನಾಡು ಸಿಎಂ ವಿಜಯ್ ವಿರುದ್ಧದ ವಿಚ್ಛೇದನ ಅರ್ಜಿ ವಾಪಾಸ್ ಪಡೆದ ಪತ್ನಿ ಸಂಗೀತಾ; ಕೇಸ್ ಮುಕ್ತಾಯ – Kannada News | Tamil Nadu CM Joseph Vijays wife Sangeetha withdraws divorce Case e

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಪತ್ನಿ ಸಂಗೀತಾ ಅವರು ನಟ ಹಾಗೂ ರಾಜಕಾರಣಿಯಾಗಿರುವ ವಿಜಯ್ ವಿರುದ್ಧ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಇಂದು ಹಿಂಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ವಿಜಯ್ ಅವರ ಮಗ ತನ್ನ ತಂದೆಯನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಸಂಗೀತಾ ಅವರ ಈ ನಿರ್ಧಾರ ಹೊರಬಿದ್ದಿದೆ.

1 / 8

ಪ್ರಸ್ತುತ ಲಂಡನ್‌ನಲ್ಲಿರುವ ಸಂಗೀತಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ತಮಿಳುನಾಡು ವಿಧಾನಸಭೆಯ ಅಧಿವೇಶನ ನಡೆಯುತ್ತಿದ್ದುದರಿಂದ ಮುಖ್ಯಮಂತ್ರಿ ವಿಜಯ್ ಅವರು ಖುದ್ದಾಗಿ ಹಾಜರಾಗಿರಲಿಲ್ಲ.

2 / 8

ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ಅವರ ನಡುವಿನ ವಿಚ್ಛೇದನ ಪ್ರಕರಣವನ್ನು ಸಂಗೀತಾ ಅವರು ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಕೋರ್ಟ್ ಮುಕ್ತಾಯಗೊಳಿಸಿದೆ. ಇಂದು ನಡೆದ ವಿಚಾರಣೆ ವೇಳೆ ಲಂಡನ್‌ನಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾದ ಸಂಗೀತಾ, ಅರ್ಜಿಯನ್ನು ಹಿಂಪಡೆಯಲು ಕಾರಣಗಳನ್ನು ನ್ಯಾಯಾಲಯಕ್ಕೆ ತಿಳಿಸಿದರು.

3 / 8

ಈ ವರ್ಷದ ಫೆಬ್ರವರಿಯಲ್ಲಿ ಸಂಗೀತಾ ಅವರು ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ದಾಂಪತ್ಯವನ್ನು ರದ್ದುಗೊಳಿಸುವಂತೆ ಕೋರಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ವಿಜಯ್ ಮತ್ತು ಸಂಗೀತಾ ದಂಪತಿಯ ವೈವಾಹಿಕ ವಿವಾದವು ಈ ವರ್ಷ ಹಲವು ಬಾರಿ ಮುಂದೂಡಿಕೆಗೆ ಒಳಗಾಗಿತ್ತು. ಜೂನ್ 15ರಂದು ನಡೆದ ವಿಚಾರಣೆಯಲ್ಲೇ ಸಂಗೀತಾ ಅವರು ಅರ್ಜಿಯನ್ನು ಹಿಂಪಡೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ನಂತರ ಈ ಪ್ರಕರಣವನ್ನು ಆಗಸ್ಟ್ 7ಕ್ಕೆ ಕಾಯ್ದಿರಿಸಲಾಗಿತ್ತು.

4 / 8

ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯಲ್ಲಿ ಸಂಗೀತಾ ಅವರು ಸರಿಪಡಿಸಲಾಗದ ಭಿನ್ನಾಭಿಪ್ರಾಯಗಳನ್ನು ಉಲ್ಲೇಖಿಸಿದ್ದರು. ಜೊತೆಗೆ ಶಾಶ್ವತ ಜೀವನಾಂಶ ಮತ್ತು ಚೆನ್ನೈನ ನೀಲಂಗರೈನಲ್ಲಿರುವ ನಿವಾಸದಲ್ಲಿಯೇ ವಾಸಿಸಲು ಅನುಮತಿ ಕೋರಿದ್ದರು. ವಿಜಯ್ ಮತ್ತು ಸಂಗೀತಾ ಆಗಸ್ಟ್ 25, 1999ರಂದು ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಅಂತರ್ ಧರ್ಮೀಯ ವಿವಾಹವಾಗಿದ್ದರು. ಈ ದಂಪತಿಗೆ 2000ರಲ್ಲಿ ಒಬ್ಬ ಮಗ ಹಾಗೂ 2005ರಲ್ಲಿ ಒಬ್ಬಳು ಮಗಳು ಜನಿಸಿದ್ದರು.

5 / 8

2023ರಲ್ಲಿ ವಿಜಯ್ ಭಾಗವಹಿಸಿದ ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಂಗೀತಾ ಕಾಣಿಸಿಕೊಳ್ಳದಿದ್ದಾಗ ದಂಪತಿಯ ನಡುವಿನ ಭಿನ್ನಾಭಿಪ್ರಾಯಗಳ ಬಗ್ಗೆ ವದಂತಿಗಳು ಆರಂಭವಾಗಿದ್ದವು. ನಂತರ 2025ರಲ್ಲಿ ಟಿವಿಕೆ (TVK) ಪಕ್ಷದ ಎರಡನೇ ರಾಜ್ಯ ಸಮಾವೇಶದಲ್ಲೂ ಅವರು ಗೈರುಹಾಜರಾಗಿದ್ದರು. ಅದಾದ ಬಳಿಕ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ನೇತೃತ್ವದ TVK ಪಕ್ಷವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ವಿಜಯ್ ಸರ್ಕಾರ ರಚಿಸಿ ತಮಿಳುನಾಡಿನ ಮುಖ್ಯಮಂತ್ರಿಯಾದರು. ಆ ಕಾರ್ಯಕ್ರಮದಲ್ಲೂ ಸಂಗೀತಾ ಭಾಗಿಯಾಗಿರಲಿಲ್ಲ.

6 / 8

ವಿಜಯ್ ಅವರೊಂದಿಗಿನ ಸರಿಪಡಿಸಲಾಗದ ಭಿನ್ನಾಭಿಪ್ರಾಯಗಳನ್ನು ಉಲ್ಲೇಖಿಸಿ ಸಂಗೀತಾ ಅವರು ಫೆಬ್ರವರಿಯಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಅವರು ಜೀವನಾಂಶ ಹಾಗೂ ನೀಲಂಗರೈನಲ್ಲಿರುವ ದಂಪತಿಯ ನಿವಾಸದಲ್ಲಿ ವಾಸಿಸುವ ಹಕ್ಕನ್ನು ಕೋರಿದ್ದರು. ಅರ್ಜಿಯ ಪ್ರಕಾರ, ವಿಜಯ್ ಅವರು ನಟಿಯೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದರು.

7 / 8

ಈ ವಿಷಯ ತಮಗೆ 2021ರಲ್ಲಿ ತಿಳಿಯಿತು ಎಂದು ಹೇಳಿದ್ದರು. ಆಗ ವಿಜಯ್ ಅವರು ಈ ಸಂಬಂಧವನ್ನು ಕೊನೆಗೊಳಿಸುವುದಾಗಿ ತಮಗೆ ಭರವಸೆ ನೀಡಿದ್ದರು. ಆದರೆ ಆ ಭರವಸೆಯ ಹೊರತಾಗಿಯೂ ಅಕೆಯ ಜೊತೆಗಿನ ಸಂಬಂಧವನ್ನು ಮುಂದುವರಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಪ್ರಸಿದ್ಧ ವ್ಯಕ್ತಿಗಳಾಗಿರುವ ಕಾರಣ ಮತ್ತು ಭದ್ರತಾ ಸಮಸ್ಯೆಯ ಹಿನ್ನೆಲೆಯಲ್ಲಿ ವಿಜಯ್ ಮತ್ತು ಸಂಗೀತಾ ಇಬ್ಬರೂ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಲು ಸಾಧ್ಯವಾಗಿರಲಿಲ್ಲ. ಅವರ ಪರ ವಕೀಲರು ಹಾಜರಾಗಿ ಪ್ರಕ್ರಿಯೆಗಳನ್ನು ನಡೆಸಿದ್ದರು.

8 / 8

Published On – 5:14 pm, Fri, 7 August 26

Source link

Karnataka Weather Forecast: ಆ.13ರ ವರೆಗೆ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ – Kannada News | Karnataka Weather Forecast: IMD Predicts Rainfall Till Aug 13; Yellow Alert Issued for Coastal and Malnad Districts

ಬೆಂಗಳೂರು, ಆಗಸ್ಟ್​​ 07: ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆಗಸ್ಟ್ 13ರ ವರೆಗೆ ವರ್ಷಧಾರೆಯಾಗಲಿದೆ. ಬೆಂಗಳೂರಿನಲ್ಲಿ 4 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ. ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆ, ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿರೋದಾಗಿ ಅವರು ಹೇಳಿದ್ದಾರೆ.

ಆಗಸ್ಟ್ 8ರಂದು ಉತ್ತರ ಒಳನಾಡಿನ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ ಇದ್ದು, ಆಗಸ್ಟ್ 13ರ ವರೆಗೆ ಉತ್ತಮ ಮಳೆಯಾಗಲಿದೆ. ರಾಜ್ಯದಲ್ಲಿ ಮಳೆಯ ವಿಂಗಡಣೆ ಹಾಗೂ ತೀವ್ರತೆ ಆಗಸ್ಟ್ 9ರಿಂದ 13ರ ವರೆಗೆ ತಾತ್ಕಾಲಿಕವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿಗೆ ಯಾವುದೇ ಅಲರ್ಟ್ ಇಲ್ಲ. ಹೀಗಿದ್ದರೂ ಹಗುರದಿಂದ ಸಾಧಾರಣ ಮಳೆ ಬೀಳಲಿದೆ ಎಂದು ಸಿಎಸ್​​ ಪಾಟೀಲ್​​ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಗ್ರಾಮಸ್ಥರು!

ನಾಳೆ ಎಲ್ಲೆಲ್ಲಿ ಮಳೆ?

ಕೊಡಗು ಜಿಲ್ಲೆಯ ಒಂದು ಅಥವಾ ಎರಡು ಪ್ರದೇಶಗಳಲ್ಲಿ ನಾಳೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯ ಜೊತೆಗೆ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರಮ ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 5:26 pm, Fri, 7 August 26

Source link

ನಿರಂತರ ಮಳೆಗೆ ಕುಸಿದ ರಸ್ತೆ: ರಸ್ತೆ ಮಧ್ಯೆ ದೊಡ್ಡ ಕಂದಕ; ಇದು ‘ನರಕದ ಹಾದಿ’ ಎಂದು ನೆಟ್ಟಿಗರ ಆಕ್ರೋಶ – Kannada News | Agra Rain Causes Giant Sinkhole, Road Collapses Days After Construction; Public Outcry

ಆಗ್ರಾ, ಆ.07: ಉತ್ತರ ಪ್ರದೇಶದ ಆಗ್ರಾದಲ್ಲಿ ಸುರಿದ ನಿರಂತರ ಭಾರೀ ಮಳೆಯಿಂದಾಗಿ ಪ್ರಮುಖ ರಸ್ತೆಯೊಂದು ಹಠಾತ್ತನೆ ಕುಸಿದು, ರಸ್ತೆಯ ಮಧ್ಯೆ ಬೃಹತ್ ಆಕಾರದ ಕಂದಕ (ಸಿಂಕ್‌ಹೋಲ್) ನಿರ್ಮಾಣವಾಗಿದೆ. ದಿಢೀರ್ ರಸ್ತೆ ಕುಸಿತದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಆತಂಕಗೊಂಡಿದ್ದು, “ಇದು ನರಕಕ್ಕೆ ಹೋಗುವ ಹಾದಿಯಂತೆ ಕಾಣುತ್ತಿದೆ” ಎಂದು ಸಾರ್ವಜನಿಕರು ಸ್ಥಳೀಯ ಆಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ರಸ್ತೆಯ ತಳಭಾಗದ ಮಣ್ಣು ಕೊಚ್ಚಿಹೋದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ರಸ್ತೆಯ ಮಧ್ಯಭಾಗದಲ್ಲಿ ದೊಡ್ಡ ಮಟ್ಟದ ಗುಂಡಿ ಬಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದರ ವೀಡಿಯೊಗಳು ಮತ್ತು ಫೋಟೋಗಳು ವೈರಲ್ ಆಗುತ್ತಿವೆ. ಅಪಾಯವನ್ನು ತಪ್ಪಿಸಲು ಸ್ಥಳೀಯ ಪುರಸಭೆ ಹಾಗೂ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ರಸ್ತೆಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಕೋಟಿಗಟ್ಟಲೆ ವೆಚ್ಚದಲ್ಲಿ ಇತ್ತೀಚೆಗಷ್ಟೇ ನಿರ್ಮಿಸಲಾಗಿದ್ದ ರಸ್ತೆ ಒಂದೇ ಮಳೆಗೆ ಹೀಗೆ ಕುಸಿದುಬಿದ್ದಿರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಸಾರ್ವಜನಿಕರು ಮತ್ತು ವಿಪಕ್ಷ ನಾಯಕರು ಆರೋಪಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರೀಲ್ಸ್ ನೋಡಿ ಐತಿಹಾಸಿಕ ದೇವಸ್ಥಾನದಲ್ಲಿ ಕಳ್ಳತನ: ಗುಜರಾತ್ ಮೂಲದ ಗ್ಯಾಂಗ್ ಅರೆಸ್ಟ್ – Kannada News | Theft at historic temple after watching Reels: Gujarat based gang arrested

ವಿಜಯಪುರ, ಆಗಸ್ಟ್​​ 07: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನ ಐತಿಹಾಸಿಕ ಐತಿಹ್ಯ ಹೊಂದಿರುವ ದೇವಸ್ಥಾನ. ಇದೇ ದೇವಸ್ಥಾನದಲ್ಲಿನ ಇತ್ತೀಚೆಗೆ ಬೆಳ್ಳಿ ಮೂರ್ತಿಯ ಕಳ್ಳತನವಾಗಿತ್ತು (temple theft). ಘಟನೆ ನಡೆದು ಒಂದು ತಿಂಗಳ ಬಳಿಕ ಕೃತ್ಯವೆಸಗಿದ್ದ ಗುಜರಾತ್​ ಮೂಲದ ಖದೀಮರನ್ನು ಜಿಲ್ಲಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ರೀಲ್ಸ್ ನೋಡಿ ಕಳ್ಳತನ ಮಾಡಿದವರು ಇದೀಗ ಕಂಬಿ ಎಣಿಸುವಂತಾಗಿದೆ.

ನಡೆದಿದ್ದೇನು?

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಹಾಗೂ ಪವಾಡ ದೇವಸ್ಥಾನವೆಂದೇ ಖ್ಯಾತಿ ಪಡೆದ ಪವಾಡ ಬಸವೇಶ್ವರ ದೇವಸ್ಥಾನದ ಬಸವಣ್ಣನವರ ಬೆಳ್ಳಿ ಮೂರ್ತಿಯನ್ನು ಕಳ್ಳತನವಾಗಿತ್ತು. ಕಳೆದ ಜುಲೈ 6ರಂದು ಘಟನೆ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ದೇಗುಲದಲ್ಲಿದ್ದ ಅರ್ಧ ಕೋಟಿ ರೂ ಮೌಲ್ಯದ, 32 ಕೆಜಿ ತೂಕದ ಬೆಳ್ಳಿ ಮೂರ್ತಿಯನ್ನು ಎಗರಿಸಿಕೊಂಡು ಹೋಗಿದ್ದರು. ಘಟನೆ ನಡೆದಾಗ ಸ್ಥಳೀಯ ಕಳ್ಳರೇ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಆದರೆ, ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ತನಿಖೆ ನಡೆಸಿದಾಗ ಖದೀಮರು ಸಿಕ್ಕಿಬಿದ್ದಿದ್ದಾರೆ.

ರೀಲ್ಸ್ ನೋಡಿ ಸ್ಕೆಚ್ ಹಾಕಿದ್ದ ಖದೀಮರು

ಕಳ್ಳತನ ಮಾಡುವ ಉದ್ದೇಶದಿಂದಲೇ ಖದೀಮರು ಗೂಗಲ್‌ನಲ್ಲಿ ದೇಗುಲಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಹೀಗೆ ಖದೀಮರು ಸರ್ಚ್ ಮಾಡುತ್ತಿದ್ದಾಗ, ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದ ಬಗ್ಗೆ ಮಾಹಿತಿ ಸಿಕ್ಕಿದೆ. ಆಗ ದೇಗುಲದ ಬೆಳ್ಳಿ ಮೂರ್ತಿ ಕಣ್ಣಿಗೆ ಬಿದ್ದಿದೆ. ಕೂಡಲೇ ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ಗಳಲ್ಲಿ ಮೂರ್ತಿ ಬಗ್ಗೆ ಮಾಹಿತಿ ಸಂಗ್ರಹಿಸಿ, ಗುಜರಾತ್‌ನಿಂದ ಕಾರಿನಲ್ಲಿ ಬಂದು ಕಳ್ಳತನ ನಡೆಸಿ ಪರಾರಿಯಾಗಿದ್ದರು. ಸತತ ಒಂದು ತಿಂಗಳ ಕಾಲ ತನಿಖೆ ನಡೆಸಿದ ಪೊಲೀಸರು, ಗುಜರಾತ್ ಮೂಲದ ಸುರೇಶಕುಮಾರ್ ಸೋನಿ (51), ಬ್ರಹ್ಮಾರ್ ನೇಟ್ (35) ಮತ್ತು ಇಂದ್ರಜೀತ್ ನೇಟ್ (33) ಬಂಧಿತರು.

ಪವಾಡ ಬಸವೇಶ್ವರರ ದೇವಸ್ಥಾನ ಕಳ್ಳತನದಲ್ಲಿ ಸ್ಥಳಿಯ ಕಳ್ಳರ ಕೈವಾಡ ಇರಬಹುದು ಎಂದು ಮೊದಲು ಪೊಲೀಸರು ಶಂಕಿಸಿದ್ದರು. ನಂತರ ಸುತ್ತಮುತ್ತಲ ಭಾಗದ ಸಿಸಿ ಕ್ಯಾಮೆರಾದಲ್ಲಿ ವಿಡಿಯೋ ಪರಿಶೀಲನೆ ಮಾಡಿದಾಗ ಗುಜರಾತ್ ಮೂಲದ GJ-01-KS 4317 ಸಂಖ್ಯೆಯ ನೋಂದಣಿ ವಾಹನ ಸಂಚಾರ ಮಾಡಿದ್ದು, ಕಂಡುಬಂದಿತ್ತು. ಈ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರ ಬಲೆಗೆ ಆರೋಪಿಗಳು ಬಿದ್ದಿದ್ದಾರೆ.

52.70 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ 

ಬಂಧಿತ ಆರೋಪಿಗಳು ಕದ್ದ ಮೂರ್ತಿಯನ್ನು ಕರಗಿಸಿ ಗಟ್ಟಿಗಳನ್ನಾಗಿ ಪರಿವರ್ತಿಸಿದ್ದರು. ಸದ್ಯ ಖದೀಮರಿಂದ 23 ಕೆಜಿ ಗಟ್ಟಿ ಬೆಳ್ಳಿ, 4 ಕೆಜಿ ಮೂರ್ತಿ ಕತ್ತರಿಸಿದ ತುಂಡುಗಳು, 67 ಸಾವಿರ ರೂ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಸೇರಿದಂತೆ ಒಟ್ಟು 52.70 ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಯುವತಿ ಕುಟುಂಬಸ್ಥರಿಂದ ಹಲ್ಲೆ ಆರೋಪ: ದೂರು-ಪ್ರತಿದೂರು ದಾಖಲು

ದೂರದ ಗುಜರಾತಿನಿಂದ ಬಂದು ರಾಜ್ಯದ ಗಡಿ ದಾಟಿ ಬಂದು ಕಳ್ಳತನ ಮಾಡಿದ್ದ ಅಂತಾರಾಜ್ಯ ಖದೀಮರನ್ನು ಕೊನೆಗೂ ವಿಜಯಪುರ ಪೊಲೀಸರು ಕಂಬಿ ಎಣಿಸುವಂತೆ ಮಾಡಿದ್ದಾರೆ. ಪೊಲೀಸರ ಈ ಚಾಣಾಕ್ಷ ತನಿಖೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ತಮಿಳುನಾಡು ಸಿಎಂ ವಿಜಯ್ ವಿರುದ್ಧದ ವಿಚ್ಛೇದನ ಅರ್ಜಿ ವಾಪಾಸ್ ಪಡೆದ ಪತ್ನಿ ಸಂಗೀತಾ; ಕೇಸ್ ಮುಕ್ತಾಯ – Kannada News | Tamil Nadu CM Joseph Vijays wife Sangeetha withdraws divorce Case e

ಚೆನ್ನೈ, ಆಗಸ್ಟ್ 7: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Joseph Joseph) ಅವರ ಪತ್ನಿ ಸಂಗೀತಾ ಅವರು ನಟ ಹಾಗೂ ರಾಜಕಾರಣಿಯಾಗಿರುವ ವಿಜಯ್ ವಿರುದ್ಧ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಇಂದು ಹಿಂಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ವಿಜಯ್ ಅವರ ಮಗ ತನ್ನ ತಂದೆಯನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಸಂಗೀತಾ ಅವರ ಈ ನಿರ್ಧಾರ ಹೊರಬಿದ್ದಿದೆ. ಪ್ರಸ್ತುತ ಲಂಡನ್‌ನಲ್ಲಿರುವ ಸಂಗೀತಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ತಮಿಳುನಾಡು ವಿಧಾನಸಭೆಯ ಅಧಿವೇಶನ ನಡೆಯುತ್ತಿದ್ದುದರಿಂದ ಮುಖ್ಯಮಂತ್ರಿ ವಿಜಯ್ ಅವರು ಖುದ್ದಾಗಿ ಹಾಜರಾಗಿರಲಿಲ್ಲ.

ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ಅವರ ನಡುವಿನ ವಿಚ್ಛೇದನ ಪ್ರಕರಣವನ್ನು ಸಂಗೀತಾ ಅವರು ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಕೋರ್ಟ್ ಮುಕ್ತಾಯಗೊಳಿಸಿದೆ. ಇಂದು ನಡೆದ ವಿಚಾರಣೆ ವೇಳೆ ಲಂಡನ್‌ನಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾದ ಸಂಗೀತಾ, ಅರ್ಜಿಯನ್ನು ಹಿಂಪಡೆಯಲು ಕಾರಣಗಳನ್ನು ನ್ಯಾಯಾಲಯಕ್ಕೆ ತಿಳಿಸಿದರು. ಈ ವರ್ಷದ ಫೆಬ್ರವರಿಯಲ್ಲಿ ಸಂಗೀತಾ ಅವರು ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ದಾಂಪತ್ಯವನ್ನು ರದ್ದುಗೊಳಿಸುವಂತೆ ಕೋರಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು.

ವಿಜಯ್ ಮತ್ತು ಸಂಗೀತಾ ದಂಪತಿಯ ವೈವಾಹಿಕ ವಿವಾದವು ಈ ವರ್ಷ ಹಲವು ಬಾರಿ ಮುಂದೂಡಿಕೆಗೆ ಒಳಗಾಗಿತ್ತು. ಜೂನ್ 15ರಂದು ನಡೆದ ವಿಚಾರಣೆಯಲ್ಲೇ ಸಂಗೀತಾ ಅವರು ಅರ್ಜಿಯನ್ನು ಹಿಂಪಡೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ನಂತರ ಈ ಪ್ರಕರಣವನ್ನು ಆಗಸ್ಟ್ 7ಕ್ಕೆ ಕಾಯ್ದಿರಿಸಲಾಗಿತ್ತು. ಪ್ರಸಿದ್ಧ ವ್ಯಕ್ತಿಗಳಾಗಿರುವ ಕಾರಣ ಮತ್ತು ಭದ್ರತಾ ಸಮಸ್ಯೆಯ ಹಿನ್ನೆಲೆಯಲ್ಲಿ ವಿಜಯ್ ಮತ್ತು ಸಂಗೀತಾ ಇಬ್ಬರೂ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಲು ಸಾಧ್ಯವಾಗಿರಲಿಲ್ಲ. ಅವರ ಪರ ವಕೀಲರು ಹಾಜರಾಗಿ ಪ್ರಕ್ರಿಯೆಗಳನ್ನು ನಡೆಸಿದ್ದರು.

ಇದನ್ನೂ ಓದಿ: ಕಾವೇರಿ ವಿವಾದ: ಕರ್ನಾಟಕ ಸಿಎಂ ಭೇಟಿ ವಿಚಾರವಾಗಿ ಕೊನೆಗೂ ಮೌನ ಮುರಿದ ತಮಿಳುನಾಡು ಸಿಎಂ ವಿಜಯ್

ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯಲ್ಲಿ ಸಂಗೀತಾ ಅವರು ಸರಿಪಡಿಸಲಾಗದ ಭಿನ್ನಾಭಿಪ್ರಾಯಗಳನ್ನು ಉಲ್ಲೇಖಿಸಿದ್ದರು. ಜೊತೆಗೆ ಶಾಶ್ವತ ಜೀವನಾಂಶ ಮತ್ತು ಚೆನ್ನೈನ ನೀಲಂಗರೈನಲ್ಲಿರುವ ನಿವಾಸದಲ್ಲಿಯೇ ವಾಸಿಸಲು ಅನುಮತಿ ಕೋರಿದ್ದರು. ವಿಜಯ್ ಮತ್ತು ಸಂಗೀತಾ ಆಗಸ್ಟ್ 25, 1999ರಂದು ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಅಂತರ್ ಧರ್ಮೀಯ ವಿವಾಹವಾಗಿದ್ದರು. ಈ ದಂಪತಿಗೆ 2000ರಲ್ಲಿ ಒಬ್ಬ ಮಗ ಹಾಗೂ 2005ರಲ್ಲಿ ಒಬ್ಬಳು ಮಗಳು ಜನಿಸಿದ್ದರು.

2023ರಲ್ಲಿ ವಿಜಯ್ ಭಾಗವಹಿಸಿದ ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಂಗೀತಾ ಕಾಣಿಸಿಕೊಳ್ಳದಿದ್ದಾಗ ದಂಪತಿಯ ನಡುವಿನ ಭಿನ್ನಾಭಿಪ್ರಾಯಗಳ ಬಗ್ಗೆ ವದಂತಿಗಳು ಆರಂಭವಾಗಿದ್ದವು. ನಂತರ 2025ರಲ್ಲಿ ಟಿವಿಕೆ (TVK) ಪಕ್ಷದ ಎರಡನೇ ರಾಜ್ಯ ಸಮಾವೇಶದಲ್ಲೂ ಅವರು ಗೈರುಹಾಜರಾಗಿದ್ದರು.

ಇದನ್ನೂ ಓದಿ: ತಮಿಳುನಾಡಿಗಾಗಿ ಅವಮಾನ ಎದುರಿಸಲು ಸಿದ್ಧ; ಕಾವೇರಿ, ಮೇಕೆದಾಟು ವಿಚಾರದಲ್ಲಿ ಉದಯನಿಧಿ ವಿರುದ್ಧ ಸಿಎಂ ವಿಜಯ್ ವಾಗ್ದಾಳಿ

ಅದಾದ ಬಳಿಕ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ನೇತೃತ್ವದ TVK ಪಕ್ಷವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ವಿಜಯ್ ಸರ್ಕಾರ ರಚಿಸಿ ತಮಿಳುನಾಡಿನ ಮುಖ್ಯಮಂತ್ರಿಯಾದರು. ಆ ಕಾರ್ಯಕ್ರಮದಲ್ಲೂ ಸಂಗೀತಾ ಭಾಗಿಯಾಗಿರಲಿಲ್ಲ.

ವಿಚ್ಛೇದನ ಅರ್ಜಿ ಸಲ್ಲಿಸಲು ಕಾರಣವೇನಿತ್ತು?:

ವಿಜಯ್ ಅವರೊಂದಿಗಿನ ಸರಿಪಡಿಸಲಾಗದ ಭಿನ್ನಾಭಿಪ್ರಾಯಗಳನ್ನು ಉಲ್ಲೇಖಿಸಿ ಸಂಗೀತಾ ಅವರು ಫೆಬ್ರವರಿಯಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಅವರು ಜೀವನಾಂಶ ಹಾಗೂ ನೀಲಂಗರೈನಲ್ಲಿರುವ ದಂಪತಿಯ ನಿವಾಸದಲ್ಲಿ ವಾಸಿಸುವ ಹಕ್ಕನ್ನು ಕೋರಿದ್ದರು. ಅರ್ಜಿಯ ಪ್ರಕಾರ, ವಿಜಯ್ ಅವರು ನಟಿಯೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದರು. ಈ ವಿಷಯ ತಮಗೆ 2021ರಲ್ಲಿ ತಿಳಿಯಿತು ಎಂದು ಹೇಳಿದ್ದರು. ಆಗ ವಿಜಯ್ ಅವರು ಈ ಸಂಬಂಧವನ್ನು ಕೊನೆಗೊಳಿಸುವುದಾಗಿ ತಮಗೆ ಭರವಸೆ ನೀಡಿದ್ದರು. ಆದರೆ ಆ ಭರವಸೆಯ ಹೊರತಾಗಿಯೂ ಅಕೆಯ ಜೊತೆಗಿನ ಸಂಬಂಧವನ್ನು ಮುಂದುವರಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:14 pm, Fri, 7 August 26

Source link

ವಿಚ್ಛೇದನ ಅರ್ಜಿ ಹಿಂಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ; ಪ್ರಕರಣ ರದ್ದುಗೊಳಿಸಿದ ಕೋರ್ಟ್ – Kannada News | Thalapathy Vijay wife Sangeetha Sornalingam withdraws Divorce Petition

ತಮಿಳುನಾಡು ಮುಖ್ಯಮಂತ್ರಿ, ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಮತ್ತು ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ಅವರ ವಿಚ್ಛೇದನ ಪ್ರಕರಣಕ್ಕೆ ತೆರೆಬಿದ್ದಿದೆ. ಸಂಗೀತಾ ಅವರು ತಮ್ಮ ವಿಚ್ಛೇದನ (Divorce) ಅರ್ಜಿಯನ್ನು ಹಿಂಪಡೆದುಕೊಂಡ ಹಿನ್ನೆಲೆಯಲ್ಲಿ ಕೋರ್ಟ್‌ ಪ್ರಕರಣವನ್ನು ವಜಾಗೊಳಿಸಿ ಆದೇಶಿಸಿದೆ. ಶುಕ್ರವಾರದಂದು (ಆಗಸ್ಟ್ 7) ನಡೆದ ವಿಚಾರಣೆ ವೇಳೆ ಸಂಗೀತಾ (Sangeetha Sornalingam) ಅವರು ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅರ್ಜಿಯನ್ನು ಹಿಂಪಡೆಯಲು ಇರುವ ಕಾರಣಗಳನ್ನು ಕೋರ್ಟ್‌ಗೆ ವಿವರಿಸಿ ತಮ್ಮ ನಿರ್ಧಾರವನ್ನು ತಿಳಿಸಿದರು. ಇದನ್ನು ಆಲಿಸಿದ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ಪ್ರಕರಣವನ್ನು ಅಧಿಕೃತವಾಗಿ ರದ್ದುಗೊಳಿಸಿದೆ.

ಪ್ರಕರಣದ ಹಿನ್ನೆಲೆ:

ಈ ವರ್ಷದ ಫೆಬ್ರವರಿಯಲ್ಲಿ ಸಂಗೀತಾ ಅವರು ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ದಂಪತಿಗಳ ನಡುವೆ ಸರಿಪಡಿಸಲಾಗದ ಭಿನ್ನಾಭಿಪ್ರಾಯಗಳಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಅಲ್ಲದೆ, ಶಾಶ್ವತ ಜೀವನಾಂಶ ಹಾಗೂ ಚೆನ್ನೈನ ನೀಲಂಕರೈನಲ್ಲಿರುವ ನಿವಾಸದಲ್ಲೇ ವಾಸಿಸಲು ಅನುಮತಿ ನೀಡಬೇಕೆಂದು ಕೋರಿದ್ದರು.

ಈ ವಿಚ್ಛೇದನ ಪ್ರಕರಣದ ವಿಚಾರಣೆ ಹಲವು ಬಾರಿ ಮುಂದೂಡಲ್ಪಟ್ಟಿತ್ತು. ಜೂನ್ 15ರಂದು ನಡೆದ ವಿಚಾರಣೆಯಲ್ಲೇ ಸಂಗೀತಾ ಅವರು ಅರ್ಜಿಯನ್ನು ಹಿಂಪಡೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಆಗಲೂ ವೀಡಿಯೋ ಕಾನ್ಫರೆನ್ಸ್‌ ಮೂಲಕವೇ ಹಾಜರಾಗಿದ್ದ ಅವರು ತಮ್ಮ ನಿರ್ಧಾರ ತಿಳಿಸಿದ್ದರು. ತದನಂತರ ಮುಂದಿನ ವಿಚಾರಣೆಯನ್ನು ಆಗಸ್ಟ್ 7ಕ್ಕೆ ನಿಗದಿಪಡಿಸಲಾಗಿತ್ತು.

ಕಳೆದ ತಿಂಗಳು ನಡೆದ ವಿಚಾರಣೆಗೆ ವಿಜಯ್ ಹಾಗೂ ಸಂಗೀತಾ ಇಬ್ಬರೂ ಹಾಜರಾಗಿರಲಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಇಬ್ಬರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು. ಈಗ ಪ್ರಕರಣ ರದ್ದಾಗಿರುವ ಬಗ್ಗೆ ಸುದ್ದಿ ಹಬ್ಬಿದೆ. ಆದರೆ ಈ ಬಗ್ಗೆ ವಿಜಯ್ ಅವರಾಗಲಿ, ಸಂಗೀತಾ ಅವರಾಗಲೀ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ಕದ್ದುಮುಚ್ಚಿ ‘ಜನ ನಾಯಗನ್’ ನೋಡಲು ಚಿತ್ರಮಂದಿರಕ್ಕೆ ಬಂದ ವಿಜಯ್ ಪತ್ನಿ ಸಂಗೀತಾ?

3 ದಶಕಗಳ ದಂಪತ್ಯ:

ವಿಜಯ್ ಹಾಗೂ ಸಂಗೀತಾ ಅವರದ್ದು ಸುಮಾರು ಮೂರು ದಶಕಗಳ ಸುದೀರ್ಘ ದಾಂಪತ್ಯ. 1999ರ ಆಗಸ್ಟ್ 25ರಂದು ಇಬ್ಬರೂ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು. ಈ ದಂಪತಿಗೆ 2000ರಲ್ಲಿ ಜನಿಸಿದ ಮಗ ಹಾಗೂ 2005ರಲ್ಲಿ ಜನಿಸಿದ ಮಗಳಿದ್ದಾರೆ. ವಿಜಯ್ ಅವರು ಸಿಎಂ ಆದಾಗ ಅವರ ಪತ್ನಿ ಮತ್ತು ಮಕ್ಕಳು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಂದಿರಲಿಲ್ಲ.

2023ರಲ್ಲಿ ಸಂಗೀತಾ ಅವರು ವಿಜಯ್ ಪಾಲ್ಗೊಳ್ಳುತ್ತಿದ್ದ ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾದಾಗ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ವದಂತಿಗಳು ಹರಡಿದ್ದವು. 2025ರಲ್ಲಿ ಟಿವಿಕೆ ಪಕ್ಷದ ಪ್ರಮುಖ ರಾಜ್ಯ ಸಮಾವೇಶದಲ್ಲೂ ಅವರು ಭಾಗವಹಿಸಿರಲಿಲ್ಲ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳ ದಶಕಗಳ ರಾಜಕೀಯ ಪ್ರಾಬಲ್ಯಕ್ಕೆ ತೆರೆ ಎಳೆದಿತ್ತು. ಕಾಂಗ್ರೆಸ್ ಸೇರಿದಂತೆ ಹಲವು ಮೈತ್ರಿ ಪಕ್ಷಗಳ ಬೆಂಬಲದೊಂದಿಗೆ ವಿಜಯ್ ಸರ್ಕಾರ ರಚಿಸಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ತನ್ನ ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ಕೊಟ್ಟ ಮಗ – Kannada News | Son given surprises mother by buying the house where she worked as a maid

ತಾಯಿ ಪ್ರೀತಿ (mother love), ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತನ್ನ ಮಕ್ಕಳಿಗಾಗಿ ತಾಯಿ ತನ್ನ ಜೀವನವನ್ನೇ ಮುಡಿಪಾಗಿಡುತ್ತಾಳೆ. ಕೂಲಿ ಕೆಲಸ ಮಾಡಿ ಮಕ್ಕಳಿಗೆ ಭವಿಷ್ಯ ಕಟ್ಟುವ ತಾಯಿಯ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದೀಗ ತನ್ನ ತಾಯಿಗೆ ಹತ್ತು ವರ್ಷಗಳಿಂದ ಮನೆ ಕೆಲಸದಾಕೆ ದುಡಿಯುತ್ತಿದ್ದ  ಮನೆಯನ್ನೇ ಖರೀದಿಸಿ ಉಡುಗೊರೆಯಾಗಿ ಮಗ ನೀಡಿದ್ದಾನೆ.  ಮಗನ ಈ ಸರ್ಪ್ರೈಸ್ ನೋಡಿ ತಾಯಿ ಭಾವುಕಳಾಗಿದ್ದಾಳೆ. ಈ ವಿಡಿಯೋ ಸದ್ಯ ನೆಟ್ಟಿಗರ ಹೃದಯ ಗೆದ್ದಿದೆ.

ದೇಸಿ ಸೊಸೈಟಿ (_desisociety) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಮನೆ ಕೆಲಸ ಮಾಡಿ ತನನ್ನು ಬೆಳೆಸಿದ ತಾಯಿಗೆ ಉಡುಗೊರೆ ನೀಡಿದ್ದಾನೆ. ಮಗನೊಬ್ಬ ತನ್ನ ಕಳೆದ ಹತ್ತು ವರ್ಷಗಳಲ್ಲಿ  ಮನೆ ಕೆಲಸದಾಕೆಯಾಗಿ ದುಡಿಯುತ್ತಿದ್ದ  ಮನೆಯನ್ನೇ ಖರೀದಿಸಿ ಸರ್ಪ್ರೈಸ್ ನೀಡಿರುವುದನ್ನು ನೋಡಬಹುದು. ಅಮ್ಮನನ್ನು ಕೆಲಸ ಮಾಡುತ್ತಿದ್ದ ಮನೆಗೆ ಕರೆದುಕೊಂಡು ಹೋಗಿ ಹೊಸ ಮನೆಯನ್ನು ತೋರಿಸಿದ್ದಾನೆ.  ಇದು ನಿನ್ನ ಮನೆ ಎನ್ನುತ್ತಿದ್ದಂತೆ ನಿನಗೇನೂ ಹುಚ್ಚ ಎಂದು ಬೈದಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತಾಯಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿದ ಯುವಕ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅದ್ಭುತ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇದಕ್ಕಿಂತ ಸಕ್ಸಸ್ ಬೇರೊಂದಿಲ್ಲ ಎಂದಿದ್ದಾರೆ. ಇನ್ನೊಬ್ಬರು, ತಾಯೇ, ಇಂತಹ ಮಗನನ್ನು ಪಡೆದ ನೀವೇ ಧನ್ಯರು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version