Headlines

ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ – Kannada News | Chikkaballapur Student Talks about Cuts janivara During CET Exam

ಚಿಕ್ಕಬಳ್ಳಾಪುರ, (ಏಪ್ರಿಲ್ 25): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ, ಸಂಹಿತೆಯ ಬಗ್ಗೆ ವಿವರಿಸಿದೆ. ಆದರೂ ಸಹ ಮೊನ್ನೆ ನಡೆದ ಸಿಇಟಿ ಪರೀಕ್ಷೆ ವೇಳೆ ಅಭ್ಯರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಕೆಲವರನ್ನು ಅಮಾನತು ಸಹ ಮಾಡಲಾಗಿದೆ. ಇಂತಹ ಘಟನೆ ನಡೆದಿರುವುದು ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣದ ತನಿಖೆಗಾಗಿ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಜನಿವಾರ…

Read More

ವಿನಯ್ ಕುಲಕರ್ಣಿ ಪರ ಧಾರವಾಡದಲ್ಲಿ ಮೌನ ಕ್ರಾಂತಿ; ಕೈಗೆ ಕಪ್ಪು ಪಟ್ಟಿ ಧರಿಸಿ ಬೆಂಬಲಿಗರ ಮೆರವಣಿಗೆ! – Kannada News | Vinay Kulkarni Supporters Silent Protest in Dharwad Against Conspiracy Allegations

ಧಾರವಾಡ, ಏಪ್ರಿಲ್ 25: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಇಂದು ನಗರದಲ್ಲಿ ಅವರ ಬೆಂಬಲಿಗರು ಮೌನ ಮೆರವಣಿಗೆ ಹಮ್ಮಿಕೊಂಡಿದ್ದರು. ಕಲಾಭವನದ ಬಳಿ ಜಮಾಯಿಸಿರುವ ನೂರಾರು ಅಭಿಮಾನಿಗಳು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು, ಕಲಾಭವನದಿಂದ ಕೆಸಿಸಿ ಬ್ಯಾಂಕ್‌ವರೆಗೆ ಪ್ರತಿಭಟನೆ ನಡೆಸಿದ್ದಾರೆ. ಕುಲಕರ್ಣಿ ಅವರು ನಿರಪರಾಧಿ ಎಂದು ಪ್ರತಿಪಾದಿಸಿರುವ ಬೆಂಬಲಿಗರು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು? – Kannada News | Ranveer Singh Apologizes in Chavundi Daiva Case: Actor to Visit Temple Soon

ಚಾವುಂಡಿ ದೈವಕ್ಕೆ ರಣವೀರ್ ಸಿಂಗ್ ಅವಮಾನ ಮಾಡಿದ ಪ್ರಕರಣ ಕೊನೆಗೂ ಇತ್ಯರ್ಥವಾಗಿದೆ. ಈ ಪ್ರಕರಣದಲ್ಲಿ ರಣವೀರ್ ಕ್ಷಮೆಯಾಚನೆಯನ್ನು ವಕೀಲರು ಒಪ್ಪಿಕೊಂಡಿದ್ದಾರೆ. ಅವರು ಶೀಘ್ರದಲ್ಲೇ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಎಲ್ಲಾ ತಪ್ಪಿಗೂ ಕ್ಷಮೆ ಇದೆ ಎಂದು ವಕೀಲರು ಅಭಿಪ್ರಾಯಪಟ್ಟಿದ್ದಾರೆ. ದೇವಸ್ಥಾನ ಭೇಟಿಗೆ ಭದ್ರತೆಯ ಸಮಸ್ಯೆ ಆಗಬಹುದು ಎಂದು ರಣವೀರ್ ಸಿಂಗ್ ಹೇಳಿದ್ದರಂತೆ. ಆದರೆ, ಕರ್ನಾಟಕ ಪೊಲೀಸರು ಇದನ್ನು ನೋಡಿಕೊಳ್ಳುತ್ತಾರೆ ಎಂಬ ಭರವಸೆ ನೀಡಿರುವುದಾಗಿ ವಕೀಲರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

Shani Retrograde 2026: ಶನಿಯ ಹಿಮ್ಮುಖ ಚಲನೆ ಆರಂಭ! ಈ 4 ರಾಶಿಗೆ ಕಾದಿದೆ ಸಂಕಷ್ಟದ ಕಾಲ – Kannada News | Shani Retrograde 2026: 4 Zodiac Signs Face Major Challenges From July 27

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜ ಎನಿಸಿಕೊಂಡಿರುವ ಶನಿ ದೇವನು ‘ಕರ್ಮಫಲದಾತ’. ನಾವು ಮಾಡುವ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಶನಿಯು ಜುಲೈ 27 ರಿಂದ ಮೀನ ರಾಶಿಯಲ್ಲಿ ತನ್ನ ಪಥವನ್ನು ಬದಲಿಸಿ, ಹಿಮ್ಮುಖವಾಗಿ (Retrograde) ಚಲಿಸಲಿದ್ದಾನೆ. ಸುಮಾರು 138 ದಿನಗಳ ಕಾಲ ನಡೆಯುವ ಶನಿಯ ಈ ವಕ್ರ ಚಲನೆಯು ಎಲ್ಲಾ 12 ರಾಶಿಗಳ ಮೇಲೆ ಪ್ರಭಾವ ಬೀರಲಿದ್ದರೂ, ಮುಖ್ಯವಾಗಿ ನಾಲ್ಕು ರಾಶಿಗಳ ಜನರು ಜೀವನದಲ್ಲಿ ಅಗ್ನಿಪರೀಕ್ಷೆ ಎದುರಿಸಬೇಕಾಗಬಹುದು ಎಂದು ಜ್ಯೋತಿಷಿಗಳು ಎಚ್ಚರಿಸಿದ್ದಾರೆ. ಆ ಸಂಕಷ್ಟಕ್ಕೊಳಗಾಗುವ ರಾಶಿಗಳು…

Read More

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ರಾಜಮೌಳಿಗೆ ಅವಮಾನ; ಇದು ಸರಿ ಅಲ್ಲ ಎಂದ ಫ್ಯಾನ್ಸ್ – Kannada News | Rajamouli Faces Disrespect at Intl Forum for Varanasi; Racism Allegations Surface

ರಾಜಮೌಳಿ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸಿನಿಮಾದಿಂದ ಸಿನಿಮಾಗೆ ಅವರು ಏಳ್ಗೆ ಕಾಣುತ್ತಿದ್ದಾರೆ. ಗ್ರಾಫಿಕ್ಸ್, ಮೇಕಿಂಗ್ ಸೇರಿದಂತೆ ಪ್ರತಿ ವಿಷಯವನ್ನು ಮತ್ತಷ್ಟು ಅಭಿವೃದ್ಧಿ ಮಾಡಿಕೊಂಡು ಅವರು ಫೀಲ್ಡ್​ಗೆ ಇಳಿಯುತ್ತಾರೆ. ಪ್ರತಿ ಪ್ರಾಜೆಕ್ಟ್​ಗೆ ಅವರು 4-5 ವರ್ಷ ತೆಗೆದುಕೊಳ್ಳುತ್ತಾರೆ. ಈಗ ಅವರು ‘ವಾರಣಾಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಿಹೈಂಡ್​ ದಿ ಸೀನ್ಸ್​ (ಬಿಟಿಎಸ್) ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರದರ್ಶನ ಕಂಡಿದೆ. ಈ ವೇಳೆ ಅವರಿಗೆ ಅವಮಾನ…

Read More

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ! – Kannada News | Vinay Kulkarni Moves To High Court Seeking Bail And Stay On Life Sentence Yogesh Gowda Murder Case

ಬೆಂಗಳೂರು, ಏಪ್ರಿಲ್ 25: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಹೈಕೋರ್ಟ್‌ಗೆ ಮೇಲ್ಮನವಿಯನ್ನ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿದ್ದ ಕನ್ವಿಕ್ಷನ್ ಆದೇಶವನ್ನ ಪ್ರಶ್ನಿಸಿ, ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಮನವಿ ಮಾಡಿದ್ದಾರೆ. ತಮ್ಮ ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿರುವ ಕಾರಣ, ಶಿಕ್ಷೆಗೆ ತಕ್ಷಣ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮುಂದಿನ ವಾರ…

Read More

1,376 ಕಿ.ಮೀ ದೂರದ ತವರು ಮೈದಾನದಲ್ಲಿ 2 ಪಂದ್ಯಗಳನ್ನಾಡಲಿದೆ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್​ಸಿಬಿ ಆ ಬಳಿಕ ಸಿಎಸ್​ಕೆ ತಂಡವನ್ನು ಬಗ್ಗು ಬಡಿದಿದ್ದರು. ಇದಾದ ಬಳಿಕ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತರೂ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಸೋಲುಣಿಸಿ ಕಂಬ್ಯಾಕ್ ಮಾಡಿದ್ದರು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಗ್ಗರಿಸಿತು. ಆದರೆ ಇದೀಗ ಗುಜರಾತ್…

Read More

ಟಿಸಿಎಸ್ ಲೈಂಗಿಕ ಕಿರುಕುಳ, ಮತಾಂತರ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಮತ್ತಷ್ಟು ಆಘಾತಕಾರಿ ವಿಚಾರ ಬಯಲು – Kannada News | Nashik TCS Case: SIT Bypasses High Level Digital Security on Accused’s Phone; Intoxicating Sheer Khurma Lead Emerges

ಟಿಸಿಎಸ್ (ಸಾಂದರ್ಭಿಕ ಚಿತ್ರ)Image Credit source: TV9 Network ಮುಂಬೈ, ಏಪ್ರಿಲ್ 25: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ನಾಸಿಕ್ ಘಟಕದಲ್ಲಿ ನಡೆದಿರುವ ಮಹಿಳಾ ಉದ್ಯೋಗಿಗಳ ಮೇಲಿನ ಲೈಂಗಿಕ ಕಿರುಕುಳ ಹಾಗೂ ಬಲವಂತದ ಧಾರ್ಮಿಕ ಮತಾಂತರ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ಮಾಹಿತಿ ಬಯಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಪ್ರಮುಖ ಆರೋಪಿಯ ಮೊಬೈಲ್ ದತ್ತಾಂಶಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ದಾನಿಶ್ ಶೇಖ್ ಮೊಬೈಲ್ ಫೋನ್‌ನ ಪ್ರತಿ ಫೈಲ್ ಮತ್ತು ಅಪ್ಲಿಕೇಶನ್‌ಗೆ ಪ್ರತ್ಯೇಕ ಪಾಸ್‌ವರ್ಡ್…

Read More

Summer Health Tips: ಬೇಸಿಗೆಯಲ್ಲಿ ಇಡ್ಲಿ,ದೋಸೆ ಹಿಟ್ಟು ಬೇಗ ಹುಳಿಯಾಗುತ್ತಿದೆಯೇ? ಹಾಗಿದ್ದರೆ ಈ ಟಿಪ್ಸ್​ ಪಾಲಿಸಿ – Kannada News | Summer Batter Care: Prevent Idli/Dosa Spoilage and Ensure Health | Fermentation Tips

ಬೇಸಿಗೆಯಲ್ಲಿ ಇಡ್ಲಿ, ದೋಸೆ ಹಿಟ್ಟುImage Credit source: gemini ai ನಮ್ಮ ದೈನಂದಿನ ಜೀವನದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ಇಡ್ಲಿ ಅಥವಾ ಗರಿಗರಿಯಾದ ದೋಸೆ ಜೊತೆಗೆ ಒಂದು ಕಪ್ ಕಾಫಿ ಸಿಗದಿದ್ದರೆ ದಿನವೇ ಅಪೂರ್ಣ ಎನಿಸುತ್ತದೆ. ಈ ಪೌಷ್ಟಿಕ ಆಹಾರಗಳು ಕೇವಲ ಹೊಟ್ಟೆ ತುಂಬಿಸುವುದಲ್ಲದೆ, ನಾಲಿಗೆಗೂ ಹಿತ ನೀಡುತ್ತವೆ. ಆದರೆ, ಬೇಸಿಗೆಯ ಸುಡುವ ಬಿಸಿಲಿನಲ್ಲಿ ಒಂದು ಸಣ್ಣ ನಿರ್ಲಕ್ಷ್ಯವೂ ಈ ರುಚಿಕರ ಆಹಾರವನ್ನು ಆರೋಗ್ಯಕ್ಕೆ ಹಾನಿಕಾರಕವಾಗಿ ಬದಲಿಸಬಹುದು. ಹೀಗಾಗಿ, ಬೇಸಿಗೆಯಲ್ಲಿ ಹಿಟ್ಟಿನ ತಯಾರಿಕೆ ಮತ್ತು ಬಳಕೆಯ…

Read More

GBA Election: ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ! ಸೆಪ್ಟೆಂಬರ್​ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ! – Kannada News | GBA Election Delay: State Election Commission Seeks Extension Until September 30

ನವದೆಹಲಿ, ಏಪ್ರಿಲ್ 25: ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಯ ಕುರಿತಾಗಿ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಮನವಿ ಮಾಡಿದೆ. ಜಾತಿಗಣತಿಯಲ್ಲೇ ನಿರತರಾಗಿರುವ ಸಿಬ್ಬಂದಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಗಡುವಿನೊಳಗೆ ಚುನಾವಣೆಯನ್ನು ಪೂರ್ಣಗೊಳಿಸಲು ಸಿಬ್ಬಂದಿ ಮತ್ತು ಹಣದ ಕೊರತೆ ಇದೆ ಎಂದು ಆಯೋಗ ತಿಳಿಸಿದೆ. ಇದೇ ವೇಳೆ ಜನಗಣತಿ ಕಾರ್ಯಗಳು…

Read More