Headlines

ವೇಣುಗೋಪಾಲ್​​ ಕೈತಪ್ಪಿದ ಕೇರಳ ಸಿಎಂ ಪಟ್ಟ: ಹೈಕಮಾಂಡ್​​ನಿಂದ ಸಿಕ್ಕಿದ್ಯಾ ಬಿಗ್​ ಆಫರ್​? – Kannada News | KC Venugopal Offered AICC President Post, Steps Back from Kerala CM Race

ತಿರುವನಂತಪುರಂ, ಮೇ 14: ಕೇರಳ ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿದ್ದ ಕೆ.ಸಿ. ವೇಣುಗೋಪಾಲ್‌ಗೆ ಒಂದು ವರ್ಷದ ಬಳಿಕ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗುವ ಭರವಸೆಯನ್ನು ಹೈಕಮಾಂಡ್ ನೀಡಿದೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ ಮುಗಿದ ನಂತರ ವೇಣುಗೋಪಾಲ್‌ಗೆ ಈ ಪಟ್ಟ ನೀಡಲು ಚಿಂತನೆ ನಡೆಸಲಾಗುತ್ತಿದೆ. ಈ ಭರವಸೆಯ ಹಿನ್ನೆಲೆಯಲ್ಲಿ ವೇಣುಗೋಪಾಲ್ ಕೇರಳ ಸಿಎಂ ಆಗುವುದರಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿ.ಡಿ. ಸತೀಶನ್ ಅವರನ್ನು ಕೇರಳದ ಮುಖ್ಯಮಂತ್ರಿಯಾಗಿ ನೇಮಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಸತೀಶನ್…

Read More

15 ಸಿಕ್ಸರ್, 175 ರನ್; ಹರಾರೆಯಲ್ಲಿ ವೈಭವ್ ಆರ್ಭಟಕ್ಕೆ ಇಂಗ್ಲೆಂಡ್ ಹೈರಾಣ

ಇಂಗ್ಲೆಂಡ್ ವಿರುದ್ಧ ಹರಾರೆಯಲ್ಲಿ ನಡೆದ 19 ವರ್ಷದೊಳಗಿನವರ ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ತೂಫಾನ್ ಶತಕ ಸಿಡಿಸಿದರು. ಈ ಪಂದ್ಯದಲ್ಲಿ ವೈಭವ್ ಕೇವಲ 80 ಎಸೆತಗಳಲ್ಲಿ 175 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ, ಅವರು 15 ಬೌಂಡರಿಗಳು ಮತ್ತು 15 ಸಿಕ್ಸರ್‌ಗಳನ್ನು ಬಾರಿಸಿದರು, 218.75 ರ ಸ್ಟೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ವೈಭವ್ ಅಂಡರ್-19 ವಿಶ್ವಕಪ್‌ನ ಫೈನಲ್‌ನಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ಬರೆದರು. ಇದು ಮಾತ್ರವಲ್ಲ…

Read More

ಬೆಂಗಳೂರು ಪೊಲೀಸ್ ಆಯುಕ್ತರನ್ನೂ ಬಿಡದ ಸೈಬರ್ ವಂಚಕರು: ಕಮಿಷನರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕೆ ಡಿಮ್ಯಾಂಡ್ – Kannada News | Cyber Fraudsters Target Bengaluru Police Commissioner: Fake Facebook Account Created to Demand Money

ಬೆಂಗಳೂರು, ಫೆಬ್ರವರಿ 16: ಬೆಂಗಳೂರು (Bangalore) ನಗರ ಪೊಲೀಸ್ ಆಯುಕ್ತರ ಹೆಸರನ್ನೇ ಬಳಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಜನರನ್ನು ಮೋಸಗೊಳಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ, ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು ಪೋಸ್ಟ್ ಮಾಡಿ ಜನರ ವಿಶ್ವಾಸ ಗಳಿಸಲು ವಂಚಕರು ಪ್ರಯತ್ನಿಸಿದ್ದಾರೆ. ಪೊಲೀಸ್ ಆಯುಕ್ತರೇ ಪೋಸ್ಟ್ ಮಾಡುತ್ತಿದ್ದಾರೆಂದು ನಂಬಿದ ಕೆಲವರು ಆ ಖಾತೆಗೆ ಪ್ರತಿಕ್ರಿಯೆ ನೀಡಿದ್ದು, ಬಳಿಕ ಖಾಸಗಿ ಸಂದೇಶಗಳ…

Read More

ಬಾಗಲಕೋಟೆಯಲ್ಲಿ ನದಿಗಳು ಖಾಲಿ ಖಾಲಿ, ಕುಸಿಯುತ್ತಿರುವ ಅಂತರ್ಜಲ: 114 ಗ್ರಾಮಗಳಲ್ಲಿ ಜಲಕ್ಷಾಮದ ಭೀತಿ – Kannada News | Bagalkote Water Crisis: Krishna and Malaprabha Rivers Reach Dead Storage; 114 Villages Face Water Scarcity Amid Heat wave

ಬಾಗಲಕೋಟೆ ನದಿಗಳಲ್ಲಿ ನೀರು ಕಡಿಮೆಯಾಗಿರುವುದುImage Credit source: tv9 ಬಾಗಲಕೋಟೆ, ಏಪ್ರಿಲ್ 20: ಬಾಗಲಕೋಟೆಯಲ್ಲಿ (Bagalkot) ಸೂರ್ಯನ ತಾಪ (Heat wave) ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬರೋಬ್ಬರಿ 39 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇದರ ಬೆನ್ನಲ್ಲೇ ಜಿಲ್ಲೆಯ ಪ್ರಮುಖ ಜಲಮೂಲಗಳು ಬತ್ತುತ್ತಿದ್ದು, ಜನರಲ್ಲಿ ಜಲಕ್ಷಾಮದ ಭೀತಿ ಆವರಿಸಿದೆ. ಜಿಲ್ಲೆಯ ಜೀವನದಿಗಳಾದ ಕೃಷ್ಣಾ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳಲ್ಲಿ ನೀರಿನ ಮಟ್ಟ ತಳಮಟ್ಟಕ್ಕೆ ಕುಸಿದಿದೆ. ಬತ್ತಿದ ಜಲಮೂಲಗಳು ಆಲಮಟ್ಟಿ ಹಿನ್ನೀರು ಹಾಗೂ ಕೃಷ್ಣಾ ನದಿ ಪಾತ್ರದಲ್ಲಿ ನೀರು ಸಂಪೂರ್ಣವಾಗಿ…

Read More

ಯಶ್ ರಾವಣನ ಪಾತ್ರ ಒಪ್ಪಿಕೊಳ್ಳಲು ಕಾರಣ ಆಗಿದ್ದು ಆ ಒಂದು ವಿಷಯ

ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರ ಜೂನ್​ 4ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಸಿನಿಮಾದ ಟೀಸರ್ ಹಾಗೂ ಸಾಂಗ್ ರಿಲೀಸ್​ ಆಗಿ ಸದ್ದು ಮಾಡಿತ್ತು. ಈ ಚಿತ್ರದ ಜೊತೆ ಅವರು ‘ರಾಮಾಯಣ’ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ್ದಾರೆ. ಈ ಚಿತ್ರ ಒಪ್ಪಿಕೊಳ್ಳಲು ಕಾರಣವಾದ ವಿಷಯವೇನು ಎಂಬ ವಿಷಯ ಈಗ ರಿವೀಲ್ ಆಗಿದೆ. ಇತ್ತೀಚೆಗೆ ರಿಲೀಸ್ ಆದ ‘ರಾಮಾಯಣ’ ಟೀಸರ್​​ನಲ್ಲಿ ಯಶ್ ಅವರು…

Read More

ಸೂಪರ್ ಹಿಟ್ ‘ಭಾಗ್ಯವಂತರು’ ಶೀರ್ಷಿಕೆಯಲ್ಲಿ ಹೊಸ ಸೀರಿಯಲ್; ಜುಲೈ 6ರಿಂದ ಪ್ರಸಾರ – Kannada News | Sun Udaya TV New Kannada Serial Bhagyavantaru on Air Date Cast Crew

ಧಾರಾವಾಹಿಗಳಿಗೆ ‘ಸನ್ ಉದಯ’ (Sun Udaya) ವಾಹಿನಿ ಮೊದಲಿನಿಂದಲೂ ಫೇಮಸ್. ಇತ್ತೀಚೆಗಷ್ಟೇ ‘ಮೂಗುತಿ ಮಲ್ಲಿ’, ‘ಮಹಾಲಕ್ಷ್ಮೀ ಮದುವೆ’ ರೀತಿಯ ವಿನೂತನ ಧಾರಾವಾಹಿಯನ್ನು ನೀಡಿ ನೋಡುಗರಿಂದ ಮೆಚ್ಚುಗೆ ಪಡೆದ ಈ ವಾಹಿನಿಯು ಈಗ ‘ಭಾಗ್ಯವಂತರು’ (Bhagyavantaru) ಶೀರ್ಷಿಕೆಯಲ್ಲಿ ಹೊಸ ಸೀರಿಯಲ್ ಆರಂಭಿಸುತ್ತಿದೆ. ಪವರ್​ಫುಲ್ ಶೀರ್ಷಿಕೆಯಿಂದ ಗಮನ ಸೆಳೆಯುತ್ತಿರುವ ಈ ಧಾರಾವಾಹಿ (Kannada Serial) ಜುಲೈ 6ರಿಂದ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 7.30ಕ್ಕೆ ಪ್ರಸಾರ ಆಗಲಿದೆ. ಎ.ಎಸ್.ಎಮ್ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣ ಆಗುತ್ತಿರುವ ‘ಭಾಗ್ಯವಂತರು’ ಧಾರಾವಾಹಿಗೆ ಸಂಪೃಥ್ವಿ ನಿರ್ದೇಶನ ಮಾಡುತ್ತಿದ್ದಾರೆ….

Read More

ಮನೆಯ ಕೊನೆಯ ಕ್ಯಾಪ್ಟನ್ ಪಟ್ಟ ಯಾರ ಮುಡಿಗೆ? ಸ್ಪರ್ಧೆ ಬಲು ಜೋರು – Kannada News | Bigg Boss Kannada 12: Last captain of the house, race is on

ಬಿಗ್​​ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಮುಗಿಯಲು ಉಳಿದಿರುವುದು ಕೆಲವು ದಿನಗಳಷ್ಟೆ. ಈಗಾಗಲೇ 95 ದಿನಗಳನ್ನು ಶೋ ಪೂರೈಸಿದೆ. ಮನೆಯಲ್ಲಿ ಪ್ರಸ್ತುತ ಒಂಬತ್ತು ಮಂದಿ ಮಾತ್ರವೇ ಉಳಿದುಕೊಂಡಿದ್ದಾರೆ. ಪ್ರತಿ ವಾರದಂತೆ ಈ ವಾರವೂ ಸಹ ಟಾಸ್ಕ್​​ಗಳು ಜೋರಾಗಿ ನಡೆಯುತ್ತಿದೆ. ಆದರೆ ಹಿಂದಿನ ವಾರಗಳಿಗೆ ಹೋಲಿಸಿದರೆ ಈ ವಾರ ಕ್ಯಾಪ್ಟೆನ್ಸಿ ರೇಸಿಗೆ ಹೆಚ್ಚಿನ ಮಹತ್ವ ಇದೆ. ಈ ಬಾರಿ ಕ್ಯಾಪ್ಟನ್ ಆಗುವವರು ಮನೆಯ ಕೊನೆಯ ಕ್ಯಾಪ್ಟನ್ ಆಗಲಿದ್ದಾರೆ ಮಾತ್ರವಲ್ಲ, ನೇರವಾಗಿ ಫಿನಾಲೆ ಸ್ಪರ್ಧಿ…

Read More

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ

ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್​​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್​ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್​ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ…

Read More

MI vs KKR: ಬಲಿಷ್ಠ ಮುಂಬೈ ಬೌಲಿಂಗ್​ನ ಧೂಳಿಪಟ ಮಾಡಿದ ರಹಾನೆ- ಅಲೆನ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಅಜಿಂಕ್ಯ ರಹಾನೆ ಹಾಗೂ ಫಿಲ್ ಅಲೆನ್ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಮುಂಬೈನ ಬಲಿಷ್ಠ ಬೌಲಿಂಗ್ ವಿಭಾಗದ ಬೆವರಿಳಿಸಿದರು. ಆರಂಭದಿಂದಲ್ಲೂ ಅಬ್ಬರದ ಬ್ಯಾಟಿಂಗ್‌ ಮಾಡಿದ ಇವರಿಬ್ಬರು ಮೊದಲ ವಿಕೆಟ್​ಗೆ ಕೇವಲ 32 ಎಸೆತಗಳಲ್ಲಿ 69 ರನ್‌ಗಳ…

Read More

ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ – Kannada News | Former CM BS Yediyurappa Receives TV9 Lifetime Achievement Award 2026 at Nava Nakshatra Sanmana

ಬೆಂಗಳೂರು, ಫೆಬ್ರವರಿ 14: ಟಿವಿ9 ನವ ನಕ್ಷತ್ರ ಪ್ರಶಸ್ತಿ 2026 (Nava Nakshatra Award 2026) ಸಮಾರಂಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜೀವಮಾನ ಶ್ರೇಷ್ಠ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ವೇಳೆ ತಮ್ಮ 55 ವರ್ಷಗಳ ಸಾರ್ವಜನಿಕ ಜೀವನವನ್ನು ಸ್ಮರಿಸಿದ ಯಡಿಯೂರಪ್ಪ, ಈ ಗೌರವವನ್ನು ಕರ್ನಾಟಕದ ಜನತೆಗೆ, ಅದರಲ್ಲೂ ವಿಶೇಷವಾಗಿ ರೈತರಿಗೆ ಸಮರ್ಪಿಸಿದರು. ಅಧಿಕಾರವಿರಲಿ, ಇಲ್ಲದಿರಲಿ, ರೈತರು ಮತ್ತು ಶೋಷಿತರ ಪರವಾಗಿ ದುಡಿಯುವ ತಮ್ಮ ಸಂಕಲ್ಪವನ್ನು ಅವರು ಪುನರುಚ್ಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More