ಉಡುಪಿಯ ಹೆಜಮಾಡಿ ಟೋಲ್ ಬಳಿ ಮದ್ಯದ ನಶೆಯಲ್ಲಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ: ವಿಡಿಯೋ ವೈರಲ್ – Kannada News | Kerala Students Udupi Trip Turns Chaotic with Hejamadi Toll Disturbance
ಉಡುಪಿ, ಫೆಬ್ರವರಿ 04: ಕೇರಳದಿಂದ ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಪುಂಡಾಟ ನಡೆಸಿರುವ ಘಟನೆ ನಡೆದಿದೆ. ಎರಡು ಬಸ್ಸುಗಳಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಟೋಲ್ ಗೇಟ್ ಬಳಿ ಬಸ್ ನಿಲ್ಲಿಸಿ ಮದ್ಯಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ಇವರ ಈ ಕಿರಿಕ್ ಮತ್ತು ಪುಂಡಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಇಂತಹ ಅನಗತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಇತರ…