Headlines

Pakistan Accident: ಪಾಕಿಸ್ತಾನದಲ್ಲಿ ಕಂದಕಕ್ಕೆ ಉರುಳಿದ ಬಸ್, 40 ಪ್ರಯಾಣಿಕರು ಸಾವು – Kannada News | Pakistan Bus Crash: 40 Dead as Overcrowded Bus Plunges into Ravine in Balochistan

ಕ್ವೆಟ್ಟಾ, ಜುಲೈ 03: ಪಾಕಿಸ್ತಾನ(Pakistan)ದಲ್ಲಿ ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಭೀಕರ ಎನ್ನಬಹುದಾದ ರಸ್ತೆ ಅಪಘಾತ ಸಂಭವಿಸಿದೆ. ಶುಕ್ರವಾರ ಮುಂಜಾನೆ ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಬಸ್ಸೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತ ನಡೆದಿದ್ದು ಎಲ್ಲಿ?
ಬಲೂಚಿಸ್ತಾನ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯಗಳ ಗಡಿ ಭಾಗದ ದೂರದ ಪ್ರದೇಶವಾದ ಡಾನಾ ಸಾರ್ ಎಂಬಲ್ಲಿ ಈ ದುರ್ಘಟನೆ ನಡೆದಿದೆ ಎಂದು ಬಲೂಚಿಸ್ತಾನ್ ಸರ್ಕಾರದ ವಕ್ತಾರ ಶಾಹಿದ್ ರಿಂಡ್ ತಿಳಿಸಿದ್ದಾರೆ. ಅಪಘಾತಕ್ಕೀಡಾದ ಬಸ್ ತನ್ನಲ್ಲಿದ್ದ ಪ್ರಯಾಣಿಕರಷ್ಟೇ ಅಲ್ಲದೆ, ಮಾರ್ಗಮಧ್ಯೆ ಕೆಟ್ಟು ನಿಂತಿದ್ದ ಮತ್ತೊಂದು ಬಸ್ಸಿನ ಪ್ರಯಾಣಿಕರನ್ನೂ ಹತ್ತಿಸಿಕೊಂಡಿತ್ತು. ಹೀಗಾಗಿ ವಾಹನದಲ್ಲಿ ಮಿತಿಗಿಂತ ಹೆಚ್ಚು ಜನ ತುಂಬಿದ್ದರು.

ಅತಿ ವೇಗವಾಗಿ ಚಲಿಸುತ್ತಿದ್ದ ಬಸ್, ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದಿದೆ. ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮತ್ತು ಬಲೂಚಿಸ್ತಾನದ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಅವರು ಈ ದುರಂತಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮತ್ತಷ್ಟು ಓದಿ: ಭಾರತ-ಪಾಕ್ ಕೈದಿಗಳ ಪಟ್ಟಿ ವಿನಿಮಯ: 188 ಭಾರತೀಯರ ತಕ್ಷಣದ ಬಿಡುಗಡೆಗೆ ಪಾಕಿಸ್ತಾನಕ್ಕೆ ಭಾರತ ಒತ್ತಾಯ

ಮೃತಪಟ್ಟವರ ದೇಹಗಳು ತೀವ್ರವಾಗಿ ಜಜ್ಜಲ್ಪಟ್ಟಿದ್ದು, ರಕ್ಷಣಾ ಸಿಬ್ಬಂದಿ ಸದ್ಯ ಶವಗಳ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಪಾಕಿಸ್ತಾನದ ಪರ್ವತ ಪ್ರದೇಶಗಳಲ್ಲಿ ಕಳಪೆ ರಸ್ತೆಗಳು, ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಇಂತಹ ಭೀಕರ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಿರುತ್ತವೆ. ಕಳೆದ ಮೇ ತಿಂಗಳಿನಲ್ಲೂ ನಡೆದ ಇಂತಹುದೇ ಅಪಘಾತದಲ್ಲಿ 17 ಜನರು ಜೀವ ಕಳೆದುಕೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *