PBKS vs DC: ಸ್ಟಾರ್ಕ್ ಬೌಲಿಂಗ್‌ನಲ್ಲಿ ಸಿಕ್ಸರ್ ಬಾರಿಸಿ ಇತಿಹಾಸ ಸೃಷ್ಟಿಸಿದ ಪ್ರಿಯಾಂಶ್ ಆರ್ಯ – Kannada News | IPL 2026: Priyansh Arya’s Historic First Ball Six Record vs Delhi Capitals

ಐಪಿಎಲ್ 2026 ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಯುವ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಮೂಲಕ ಸಂಚಲನ ಸೃಷ್ಟಿಸಿದರು. ಪ್ರಿಯಾಂಶ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸ್ ಬಾರಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಬೇರೆ ಯಾವುದೇ ಬ್ಯಾಟ್ಸ್‌ಮನ್ ಸಾಧಿಸದ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ, ಆಸ್ಟ್ರೇಲಿಯಾದ ದಂತಕಥೆ ವೇಗಿ ಮಿಚೆಲ್ ಸ್ಟಾರ್ಕ್ ಎಸೆದ ಪಂದ್ಯದ ಮೊದಲ ಎಸೆತವನ್ನು ಸಿಕ್ಸರ್​ಗಟ್ಟಿದರು. ಪ್ರಿಯಾಂಶ್ ಸಿಕ್ಸ್‌ನೊಂದಿಗೆ ಪಂದ್ಯವನ್ನು ಪ್ರಾರಂಭಿಸಿದ್ದು ಇದೇ ಮೊದಲಲ್ಲ. ಇದಕ್ಕೂ ಮೊದಲು ಅವರು ಐಪಿಎಲ್ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಖಲೀಲ್ ಅಹ್ಮದ್ ಅವರ ಬೌಲಿಂಗ್‌ನಲ್ಲಿ ಈ ಸಾಧನೆ ಮಾಡಿದ್ದರು. ಪ್ರಿಯಾಂಶ್ ಜೊತೆಗೆ ವಿರಾಟ್ ಕೊಹ್ಲಿ ಮತ್ತು ಯಶಸ್ವಿ ಜೈಸ್ವಾಲ್ ಸೇರಿದಂತೆ ಇತರ ನಾಲ್ವರು ಕೂಡ ಪಂದ್ಯದ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ್ದಾರೆ. ಆದರೆ ಪ್ರಿಯಾಂಶ್​ನ ಹೊರತುಪಡಿಸಿ ಉಳಿದವರು ತಲಾ ಒಮ್ಮೆ ಮಾತ್ರ ಹಾಗೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Source link

Leave a Reply

Your email address will not be published. Required fields are marked *