ದೆಹಲಿ, ಮೇ.25: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಭಾಗದಲ್ಲಿ ಉಂಟಾಗಿರುವ ಜಾಗತಿಕ ರಾಜತಾಂತ್ರಿಕ ಹಾಗೂ ಯುದ್ಧದ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಲ್ಲಿ ಅತ್ಯಂತ ಮಹತ್ವದ ಅಪೀಲು ಮಾಡಿದ್ದಾರೆ. ರಾಷ್ಟ್ರದ ಹಿತದೃಷ್ಟಿಯಿಂದ ಭಾರತೀಯರು ವಿದೇಶಿ ಪ್ರವಾಸಗಳಿಗಿಂತ ಸ್ವದೇಶಿ ಪ್ರವಾಸೋದ್ಯಮಕ್ಕೆ (Domestic Tourism) ಮೊದಲ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ವಿಡಿಯೋವೊಂದನ್ನು ಬಿಜೆಪಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತದ ವೈವಿಧ್ಯಮಯ ಪ್ರವಾಸಿ ತಾಣಗಳನ್ನು ಅನ್ವೇಷಿಸಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ಪ್ರಧಾನಿ ಕರೆ ನೀಡಿದ್ದಾರೆ. ನಾಗರಿಕರು ಭಾರತದ ಒಳಗೇ ಪ್ರವಾಸ ಮಾಡುವುದರಿಂದ ದೇಶದ ಅಮೂಲ್ಯವಾದ ವಿದೇಶಿ ವಿನಿಮಯ ಉಳಿತಾಯವಾಗುತ್ತದೆ. ಅಷ್ಟೇ ಅಲ್ಲದೆ, ಇದು ನಮ್ಮ ದೇಶದ ಆರ್ಥಿಕತೆಯನ್ನು ಆಂತರಿಕವಾಗಿ ಗಟ್ಟಿಗೊಳಿಸಲು ನೆರವಾಗುತ್ತದೆ ಹಾಗೂ ಪ್ರಧಾನಿಯವರ ಮಹತ್ವಾಕಾಂಕ್ಷೆಯ ‘ಆತ್ಮನಿರ್ಭರ ಭಾರತ’ ಅಭಿಯಾನಕ್ಕೆ ಹೊಸ ವೇಗ ಮತ್ತು ಬಲವನ್ನು ನೀಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
