PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ, ಮಾರ್ಚ್ 23: ದೆಹಲಿಯಲ್ಲಿ ಇಂದಿನಿಂದ ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆ ಆರಂಭವಾಗಿದೆ. ಈ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Modi in WITT Summit) ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಮಾಡಿದ ಪಾಪದ ಹೊರೆಗಳನ್ನು ನಾವು ಹೊತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

“ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬಿಕ್ಕಟ್ಟು ಉಂಟಾಗಿತ್ತು. ಆದರೆ ಕಾಂಗ್ರೆಸ್ ದೇಶದ ಬಗ್ಗೆ ಯೋಚಿಸುವ ಬದಲು ಅಧಿಕಾರದ ಬಗ್ಗೆ ಮಾತ್ರ ಚಿಂತಿಸುತ್ತಿತ್ತು. ಕಾಂಗ್ರೆಸ್ ತೈಲ ಬಾಂಡ್‌ಗಳನ್ನು ಬಿಡುಗಡೆ ಮಾಡಿತು. ವಿದ್ಯುತ್ ಉಳಿಸಲು ಅವರು ತಪ್ಪು ನಿರ್ಧಾರ ತೆಗೆದುಕೊಂಡರು. ಆ ತೈಲ ಬಾಂಡ್​ಗಳ ಹೊರೆಯನ್ನು ನಮ್ಮ ಸರ್ಕಾರ ಇನ್ನೂ ಹೊರುತ್ತಲೇ ಇದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಕಳೆದ 5ರಿಂದ 6 ವರ್ಷಗಳಲ್ಲಿ ನಮ್ಮ ಸರ್ಕಾರವು ಕಾಂಗ್ರೆಸ್ಸಿನ ಪಾಪದ ಹೊರೆಯನ್ನು ನಮ್ಮ ಸರ್ಕಾರ ಹೊತ್ತುಕೊಂಡಿದೆ. ತೈಲ ಬಾಂಡ್​​ಗಳಿಂದ ಸಾಕಷ್ಟು ಸಮಸ್ಯೆಯಾಯಿತು. 1,48,000 ಕೋಟಿ ರೂ. ಬದಲಿಗೆ, ನಾವು 3 ಲಕ್ಷ ಕೋಟಿಗೂ ಹೆಚ್ಚು ಪಾವತಿಸಬೇಕಾಯಿತು. ಇತ್ತೀಚಿನ ದಿನಗಳಲ್ಲಿ, ಕಾಂಗ್ರೆಸ್ ನಾಯಕರು ನಮ್ಮ ಸರ್ಕಾರದ ವಿರುದ್ಧ ಹೇಳಿಕೆಗಳ ಸುರಿಮಳೆಗೈಯುತ್ತಿದ್ದಾರೆ. ಆದರೆ ಅವರು ಈ ಬಗ್ಗೆ ಮಾತ್ರ ಮೌನವಾಗಿದ್ದಾರೆ” ಎಂದು ಮೋದಿ ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *