RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ

ಬೆಂಗಳೂರು, ಮೇ 30: ನಾಳೆ ಆರ್​​ಸಿಬಿ (RCB) VS ಜಿಟಿ ತಂಡಗಳ ಮಧ್ಯೆ ಹೈವೋಲ್ಟೇಜ್​​ ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ. ಇತ್ತ ನಗರದಲ್ಲಿ ಬೆಂಗಳೂರು ನಗರ ಪೊಲೀಸರು ಅತ್ಯಂತ ಕಠಿಣ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​, ನಾಳೆ ಐಪಿಎಲ್ ಫೈನಲ್ ಮ್ಯಾಚ್ ನಡೆಯಲಿದೆ. ಬೆಂಗಳೂರು ಪೊಲೀಸರಿಗೆ ಸಲಹೆ, ಸೂಚನೆ ನೀಡಿದ್ದೇನೆ. ಅಭಿಮಾನಿಗಳ ಸೆಲೆಬ್ರೇಷನ್​​ನಿಂದ ಬೇರೆ ಅವರಿಗೆ ತೊಂದರೆ ಆಗಬಾರದು. ಎಲ್ಲರೂ ತಮ್ಮ ತಮ್ಮ ಮನೆ, ಕ್ಲಬ್​​ಗಳಲ್ಲಿ ಮಾಡಿಕೊಳ್ಳಿ. ರಸ್ತೆಯಲ್ಲಿ ಸೆಲೆಬ್ರೇಷನ್​ಗೆ ಅವಕಾಶವಿಲ್ಲ. ಒಂದು ವೇಳೆ ಹಾಗೇನಾದರೂ ಕಂಡುಬಂದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಡಿಡಿ ಚೆಕ್ಕಿಂಗ್ ಕಠಿಣವಾಗಿ ಮಾಡುತ್ತೇವೆ. ಜನ ಸೇರಿದರೆ ಕಂಟ್ರೋಲ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ವರದಿ: ವಿಕಾಸ್ ಟಿವಿ9 ಕ್ರೈಂ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *