IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 39ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಎರಡು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಆರ್ಸಿಬಿ ತಂಡದ ಇಬ್ಬರು ಆಟಗಾರರು ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.
- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ.
- ಆರ್ಸಿಬಿ ವೇಗಿ ರಾಸಿಖ್ ದಾರ್ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.
ಇಲ್ಲಿ ಫಿಲ್ ಸಾಲ್ಟ್ ಬದಲಿಗೆ ಆರ್ಸಿಬಿ ಪರ ಜೇಕಬ್ ಬೆಥೆಲ್ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಕಳೆದ ಮ್ಯಾಚ್ನಲ್ಲಿ ಬೆಥೆಲ್ ಆರಂಭಿಕನಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಿರಾಟ್ ಕೊಹ್ಲಿ ಹಾಗೂ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸಲಿದ್ದಾರೆ.
ಆದರೆ ರಾಸಿಖ್ ದಾರ್ ಬದಲಿಗೆ ಈ ಮ್ಯಾಚ್ನಲ್ಲಿ ಯಾರು ಆಡಲಿದ್ದಾರೆ ಎಂಬುದೇ ಪ್ರಶ್ನೆ. ಏಕೆಂದರೆ ಆರ್ಸಿಬಿ ತಂಡದಲ್ಲಿ ಹೆಚ್ಚುವರಿ ಅನುಭವಿ ವೇಗಿಗಳ ಕೊರತೆ ಇದೆ. ಈಗಾಗಲೇ ಅಭಿನಂದನ್ ಸಿಂಗ್ ಅವರಿಗೆ ಚಾನ್ಸ್ ನೀಡಿದರೂ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇನ್ನು ಉಳಿದಿರುವುದು ಮಂಗೇಶ್ ಯಾದವ್. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುವ ವೇಗಿ ಮಂಗೇಶ್ ಪಾದಾರ್ಪಣೆ ಮಾಡಿದರೂ ಅಚ್ಚರಿಪಡಬೇಕಿಲ್ಲ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ವಿರಾಟ್ ಕೊಹ್ಲಿ
- ಜೇಕಬ್ ಬೆಥೆಲ್
- ದೇವದತ್ ಪಡಿಕ್ಕಲ್
- ರಜತ್ ಪಾಟಿದಾರ್ (ನಾಯಕ)
- ಟಿಮ್ ಡೇವಿಡ್
- ಜಿತೇಶ್ ಶರ್ಮಾ
- ಕೃನಾಲ್ ಪಾಂಡ್ಯ
- ರೊಮಾರಿಯೊ ಶೆಫರ್ಡ್
- ಜೋಶ್ ಹೇಝಲ್ವುಡ್
- ಭುವನೇಶ್ವರ್ ಕುಮಾರ್
- ಮಂಗೇಶ್ ಯಾದವ್.
- ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).
ಇದನ್ನೂ ಓದಿ: ಚೆಂಡು ವಿಕೆಟ್ಗೆ ತಾಗದಿದ್ದರೂ ಔಟ್ ನೀಡಿದ್ದೇಕೆ? ಇಲ್ಲಿದೆ ಐಪಿಎಲ್ ನಿಯಮ
