​​RCB ಮಾರಾಟದ ಬೆನ್ನಲ್ಲೇ ಮಹತ್ವದ ಕೋರಿಕೆ ಇಟ್ಟ ವಿಜಯ್ ಮಲ್ಯ

​​RCB ಮಾರಾಟದ ಬೆನ್ನಲ್ಲೇ ಮಹತ್ವದ ಕೋರಿಕೆ ಇಟ್ಟ ವಿಜಯ್ ಮಲ್ಯ

ಯುನೈಟೆಡ್‌ ಸ್ಪಿರಿಟ್ಸ್‌ ಲಿಮಿಟೆಡ್‌ (ಯುಎಸ್‌ಎಲ್‌) ಕಂಪನಿಯು ತನ್ನ ಹಿಡಿತದಲ್ಲಿ ಇದ್ದ ಆರ್​​​ಸಿಬಿ (RCB)  ಒಡೆತನವನ್ನು ಸಂಪೂರ್ಣವಾಗಿ ಮಾರಾಟ ಮಾಡಿದೆ. ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ಆರ್​​ಸಿಬಿ ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದೆ. ಈ ಮೂಲಕ ಹೊಸ ಕ್ಷೇತ್ರಕ್ಕೆ ಆದಿತ್ಯ ಬಿರ್ಲಾ ಕಾಲಿಟ್ಟಿದೆ. ಆದಿತ್ಯ ಬಿರ್ಲಾ ಜೊತೆ ಅಮೆರಿಕದ ಹೂಡಿಕೆದಾರ ಡೇವಿಡ್‌ ಬ್ಲಿಟ್ಝರ್ ಒಡೆತನದ ಬೋಲ್ಟ್‌ ವೆಂಚರ್ಸ್‌, ಬ್ಲ್ಯಾಕ್‌ಸ್ಟೋನ್ ಇಕ್ವಿಟಿ ಫರ್ಮ್‌, ಟೈಮ್ಸ್‌ ಆಫ್‌ ಇಂಡಿಯಾ ಮಾಧ್ಯಮ ಸಮೂಹ ಕೂಡ ಇದೆ. ಈ ಮಾರಾಟದ ಬೆನ್ನಲ್ಲೇ ಮಲ್ಯ ಟ್ವೀಟ್ ಮಾಡಿದ್ದಾರೆ.

ಬಿಸಿಸಿಐ ಐಪಿಎಲ್ ಆರಂಭಿಸೋ ಸಂಧರ್ಭದಲ್ಲಿ ಫ್ರಾಂಚೈಸಿಗಳನ್ನು ಮಾಡಿ, ಮಾರಲು ಮುಂದಾಯಿತು. ಆಗ ಮಲ್ಯ ಎರಡು ಫ್ರಾಂಚೈಸಿ ನೀಡುವಂತೆ ಬೇಡಿಕೆ ಇಟ್ಟರು. ಆದರೆ, ಒಬ್ಬರಿಗೆ ಒಂದು ತಂಡ ಮಾತ್ರ ಖರೀದಿಸುವ ಅವಕಾಶ ನೀಡಲಾಯಿತು. ಅದರಂತೆ ಮಲ್ಯ 450 ಕೋಟಿ ರೂಪಾಯಿ ನೀಡಿ ಒಂದು ತಂಡ ಖರೀದಿ ಮಾಡಿದರು. ರಾಯಲ್ ಚಾಲೆಂಜ್ ವಿಸ್ಕಿ ಬ್ರ್ಯಾಂಡ್ ಪ್ರಚಾರ ಮಾಡೋದು ಇವರ ಉದ್ದೇಶ ಆಗಿತ್ತು. ಈ ಕಾರಣದಿಂದ ರಾಯಲ್ ಚಾಲೆಂಜರ್ಸ್ ಅಂತ ಇಟ್ಟರು. ಮಲ್ಯಗೆ ಬೆಂಗಳೂರು ಹಿನ್ನೆಲೆ ಇರುವುದರಿಂದ ಬೆಂಗಳೂರು ಎಂಬುದನ್ನು ಸೇರಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ತಂಡಕ್ಕೆ ಹೆಸರು ಇಟ್ಟರು. ವಿರಾಟ್ ಕೊಹ್ಲಿ ಖರೀದಿಯಲ್ಲೂ ಅವರು ಪ್ರಮುಖ ಪಾತ್ರವಹಿಸಿದ್ದರು. ಈಗ ತಂಡ ಮಾರಾಟ ಆಗಿದ್ದಕ್ಕೆ ಅವರು ಟ್ವೀಟ್ ಮಾಡಿದ್ದಾರೆ.

‘ಆರ್‌ಸಿಬಿಯ ಹೊಸ ಮಾಲೀಕರಿಗೆ ನನ್ನ ಹೃತ್ಪೂರ್ವಕವಾಗಿ ಅಭಿನಂದನೆಗಳು. ಐಪಿಎಲ್‌ನಲ್ಲಿ ಅತ್ಯಂತ ಅಮೂಲ್ಯವಾದ ಫ್ರಾಂಚೈಸಿಯನ್ನು ಖರೀದಿಸಿದ ನಿಮಗೆ ಶುಭ ಹಾರೈಸುತ್ತೇನೆ. ನಾನು 2008ರಲ್ಲಿ ಫ್ರಾಂಚೈಸಿಯನ್ನು 450 ಕೋಟಿ ರೂಪಾಯಿಗೆ ಖರೀದಿಸಿದೆ. ಆಗ ಬಹುತೇಕರು ನನ್ನನ್ನು ನೋಡಿ ನಕ್ಕರು. ನನ್ನ ಹೂಡಿಕೆ ವ್ಯರ್ಥ ಎಂದು ಟೀಕಿಸಿದರು’ ಎಂದಿದ್ದಾರೆ ಅವರು.

‘ರಾಯಲ್ ಚಾಲೆಂಜ್ ಬ್ರ್ಯಾಂಡ್ ಅನ್ನು ನಿರ್ಮಿಸಬೇಕು ಎಂದು ನನಗೆ ಬಹುವಾಗಿ ಇತ್ತು. ಈ ಕಾರಣದಿಂದ ನಾನು ತಂಡಕ್ಕೆ ಆರ್‌ಸಿಬಿ ಎಂದು ಹೆಸರಿಸಿದೆ. ನನ್ನ 450 ಕೋಟಿ ರೂಪಾಯಿ ಹೂಡಿಕೆ ಈಗ 16,500 ಕೋಟಿ ರೂಪಾಯಿಗಳಿಗೆ ಬೆಳೆದಿರುವುದನ್ನು ನೋಡಲು ಅಪಾರ ಸಂತೋಷವಾಗಿದೆ. ಆರ್‌ಸಿಬಿ ಯಾವಾಗಲೂ ನನ್ನ ಡಿಎನ್‌ಎಯ ಭಾಗವಾಗಿ ಉಳಿಯುತ್ತದೆ’ ಎಂದು ಮಲ್ಯ ಹೇಳಿದ್ದಾರೆ.

ಇದನ್ನೂ ಓದಿ: ಪ್ರೆಸ್​ಕಾನ್ಫರೆನ್ಸ್ ನಡೆಯುವಾಗಲೇ ಹೂಸುಬಿಟ್ಟ ರಿಜ್ವಾನ್; ಸಿಟ್ಟಾದ ವಾರ್ನರ್​ ಹೇಳಿದ್ದೇನು?

‘ಆರ್​​​ಸಿಬಿ ತಂಡದ ಆಟಗಾರರು ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರು. ಎಲ್ಲಾ ಆರ್‌ಸಿಬಿ ಅಭಿಮಾನಿಗಳಿಗೆ, ಕೃತಜ್ಞತಾಪೂರ್ವಕ ಧನ್ಯವಾದಗಳು. ದಯವಿಟ್ಟು ಬೆಂಗಳೂರಿನ ಸಿಂಹ ಆರ್‌ಸಿಬಿಯನ್ನು ಬೆಂಬಲಿಸುವುದನ್ನು ಮುಂದುವರಿಸಿ, ನಮಸ್ಕಾರ’ ಎಂದು ಅವರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *