IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮೇ 10 ರಂದು ರಾಯ್ಪುರ್ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಅವರೆಂದರೆ…
(PC: IPL)
ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿಯೇ ಅವರು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಅಲ್ಲದೆ ಬೆನ್ನು ನೋವಿನ ಕಾರಣ ಹಾರ್ದಿಕ್ ಪಾಂಡ್ಯ ಅವರಿಗೆ ವೈದ್ಯರು ಒಂದು ವಾರಗಳ ಕಾಲ ಕಡ್ಡಾಯ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. (PC: IPL)
ಸೂರ್ಯಕುಮಾರ್ ಯಾದವ್: ಹಾರ್ದಿಕ್ ಪಾಂಡ್ಯ ಅಲಭ್ಯತೆಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಈಗ ವೈಯಕ್ತಿಕ ಕಾರಣಗಳಿಂದಾಗಿ ಮುಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ. ಕೆಲ ಮೂಲಗಳ ಪ್ರಕಾರ, ಸೂರ್ಯಕುಮಾರ್ ಯಾದವ್ ಅವರು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಮೇ 10 ರಂದು ನಡೆಯುವ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. (PC: IPL)
ಇನ್ನು ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ ರಾಯ್ಪುರಕ್ಕೆ ಪ್ರಯಾಣ ಬೆಳೆಸಿದ್ದು, ಈ ಬಳಗದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿಲ್ಲ. ಅಂದರೆ ಬುಧವಾರದವರೆಗೆ ಪಾಂಡ್ಯ ಮುಂಬೈನಲ್ಲೇ ಇದ್ದರು. ಮತ್ತೊಂದೆಡೆ ಸೂರ್ಯಕುಮಾರ್ ಯಾದವ್ ಕೂಡ ಮುಂಬೈನಲ್ಲೇ ಉಳಿದುಕೊಂಡಿದ್ದಾರೆ. ಹೀಗಾಗಿ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಈ ಇಬ್ಬರು ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. (PC: IPL)
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಯಾನ್ ರಿಕಲ್ಟನ್, ರಾಬಿನ್ ಮಿಂಝ್, ರಾಜ್ ಬಾವಾ, ರಘು ಶರ್ಮಾ, ಮಿಚೆಲ್ ಸ್ಯಾಂಟ್ನರ್, ಕಾರ್ಬಿನ್ ಬಾಷ್, ನಮನ್ ಧೀರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಲ್ಲಾ ಗಫನ್ಝರ್, ಅಶ್ವನಿ ಕುಮಾರ್, ದೀಪಕ್ ಚಹರ್, ವಿಲ್ ಜ್ಯಾಕ್ಸ್, ಶೆರ್ಫೇನ್ ರದರ್ಫೋರ್ಡ್, ಮಯಾಂಕ್ ಮಾರ್ಕಂಡೆ, ಶಾರ್ದೂಲ್ ಠಾಕೂರ್, ಕ್ವಿಂಟನ್ ಡಿ ಕಾಕ್, ಡ್ಯಾನಿಶ್ ಮಾಲೆವಾರ್, ಮೊಹಮ್ಮದ್ ಇಝಾರ್, ಅಥರ್ವ ಅಂಕೋಲೆಕರ್, ಮಯಾಂಕ್ ರಾವತ್. (PC: IPL)




