IPL 2026: ಮೊದಲ ಮ್ಯಾಚ್ನಲ್ಲಿ ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತನ್ನ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಎದುರಿಸಲಿದೆ. ಏಪ್ರಿಲ್ 5 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸಿಎಸ್ಕೆ ತಂಡದ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ (MS Dhoni) ಅಲಭ್ಯರಾಗಲಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಇಂದು (ಮಾ.30) ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇನ್ನು ಏಪ್ರಿಲ್ 5 ರಂದು ನಡೆಯಲಿರುವ ಆರ್ಸಿಬಿ ವಿರುದ್ಧದ ಮ್ಯಾಚ್ನಿಂದಲೂ ಹೊರಗುಳಿಯುವುದು ಖಚಿತವಾಗಿದೆ.
ಸ್ನಾಯು ಸೆಳೆತದ ಕಾರಣದಿಂದಾಗಿ ಎಂಎಸ್ ಧೋನಿ ಕನಿಷ್ಠ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಸಿಎಸ್ಕೆ ಮ್ಯಾನೇಜ್ಮೆಂಟ್ ತಿಳಿಸಿದೆ. ಅಂದರೆ ಕನಿಷ್ಠ 6 ಪಂದ್ಯಗಳಿಂದ ಅವರು ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.
ಎಂಎಸ್ ಧೋನಿ ಅನುಪಸ್ಥಿತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಜವಾಬ್ದಾರಿಯನ್ನು ಸಂಜು ಸ್ಯಾಮ್ಸನ್ ನಿರ್ವಹಿಸಲಿದ್ದಾರೆ. ಅಂದರೆ ಸಂಜು ಸ್ಯಾಮ್ಸನ್ ಸಿಎಸ್ಕೆ ಪರ ವಿಕೆಟ್ ಕೀಪರ್-ಬ್ಯಾಟರ್ ಆಗಿ ಪಾದಾರ್ಪಣೆ ಮಾಡಲಿದ್ದಾರೆ.
ಇನ್ನು ಸಂಪೂರ್ಣ ಫಿಟ್ನೆಸ್ ಸಾಧಿಸಿದರೆ ಮಹೇಂದ್ರ ಸಿಂಗ್ ಧೋನಿ ಏಪ್ರಿಲ್ 23 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು. ಅಂದರೆ ಧೋನಿ ಕನಿಷ್ಠ 6 ಮ್ಯಾಚ್ಗಳನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಸ್ಪೆನ್ಸರ್ ಜಾನ್ಸನ್.
