
ಐಪಿಎಲ್ 2026 ರಲ್ಲಿ ಇಂದು (ಏಪ್ರಿಲ್ 10) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ್ ರಾಯಲ್ಸ್ (RR) ಮುಖಾಮುಖಿಯಾಗುತ್ತಿದ್ದು, ಈ ಋತುವಿನ ಹೈ-ವೋಲ್ಟೇಜ್ ಪಂದ್ಯಗಳಲ್ಲಿ ಇದೂ ಒಂದಾಗಲಿದೆ. ಆರ್‌ಆರ್ ಇದುವರೆಗಿನ ಮೂರು ಪಂದ್ಯಗಳನ್ನು ಗೆದ್ದು ಅಗ್ರಸ್ಥಾನದಲ್ಲಿದ್ದರೆ, ಆರ್‌ಸಿಬಿ ಆಡಿರುವ ಎರಡು ಪಂದ್ಯಗಳನ್ನು ಗೆದ್ದು ಉತ್ತಮ ಫಾರ್ಮ್ನಲ್ಲಿದೆ. ಆರ್‌ಆರ್ ತಂಡ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಅವರಂತಹ ಯುವ ಆರಂಭಿಕ ಆಟಗಾರರಿಂದ ಪ್ರಬಲ ಪ್ರದರ್ಶನವನ್ನು ನೀಡಿದೆ. ಮುಂಬೈ ಇಂಡಿಯನ್ಸ್ ವಿರುದ್ಧ 11 ಓವರ್ಗಳಲ್ಲಿ 150 ರನ್ ಗಳಿಸಿದ್ದು ಅವರ ಸ್ಫೋಟಕ ಬ್ಯಾಟಿಂಗ್ಗೆ ಸಾಕ್ಷಿ. ಬೌಲಿಂಗ್ನಲ್ಲಿ ಸಂದೀಪ್ ಶರ್ಮಾ, ಜಾಫ್ರಾ ಆರ್ಚರ್ ಮತ್ತು ರಿಯಾನ್ ಪರಾಗ್ ಉತ್ತಮ ಪ್ರದರ್ಶನ ನೀಡಿದ್ದಾರೆ.
ಮತ್ತೊಂದೆಡೆ, ಆರ್‌ಸಿಬಿ ಕೂಡ ಬಲಿಷ್ಠವಾದ ‘ವಿನ್ನಿಂಗ್ ಕಾಂಬಿನೇಶನ್’ ಹೊಂದಿದೆ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿಯೂ ತಂಡದ ಆಟಗಾರರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಂಡದ ಭಾರತೀಯ ಆಟಗಾರರು ನಿರ್ಣಾಯಕ ಸಂದರ್ಭಗಳಲ್ಲಿ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ತವರಿನಿಂದ ಹೊರಗೆ ಮೊದಲ ಪಂದ್ಯ ಇದಾಗಿದ್ದು, ಕುತೂಹಲ ಹೆಚ್ಚಿಸಿದೆ. ಹೇಗಿದೆ ಉಭಯ ತಂಡಗಳ ಬಲಾಬಲ ಎಂಬ ವಿಶ್ಲೇಷಣೆ ಇಲ್ಲಿದೆ ನೋಡಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ