IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಬಹುನಿರೀಕ್ಷಿತ ಈ ಪಂದ್ಯದಿಂದ 6 ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಆ ಆಟಗಾರರು ಯಾರೆಂದರೆ…
ಮಹೇಂದ್ರ ಸಿಂಗ್ ಧೋನಿ: ಅಭಿಮಾನಿಗಳ ನೆಚ್ಚಿನ 'ಥಲಾ' ಸ್ನಾಯು ಸೆಳೆತದ (Calf Strain) ಸಮಸ್ಯೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದು, ಹೀಗಾಗಿ ಆರ್ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
ಮ್ಯಾಥ್ಯೂ ಶಾರ್ಟ್: ಆಸ್ಟ್ರೇಲಿಯಾದ ಆಲ್ರೌಂಡರ್ ಮ್ಯಾಥ್ಯೂ ಶಾರ್ಟ್ ಹೆಬ್ಬೆರಳು ಮುರಿತಕ್ಕೆ ಒಳಗಾಗಿದ್ದು, ಹೀಗಾಗಿ ಆರ್ಸಿಬಿ ವಿರುದ್ಧದ ಪಂದ್ಯದಲ್ಲೂ ಶಾರ್ಟ್ ಕಾಣಿಸಿಕೊಳ್ಳುವುದಿಲ್ಲ.
ಡೆವಾಲ್ಡ್ ಬ್ರೆವಿಸ್: ಸೈಡ್ ಸ್ಟ್ರೈನ್ ಸಮಸ್ಯೆಯಿಂದ ಬಳಲುತ್ತಿರುವ ಸೌತ್ ಆಫ್ರಿಕಾದ ಹೊಡಿ ಬಡಿ ದಾಂಡಿಗ ಡೆವಾಲ್ಡ್ ಬ್ರೆವಿಸ್ ಕೂಡ ಆರ್ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
ಜೋಶ್ ಹೇಝಲ್ವುಡ್: ಕಾಲಿನ ನೋವಿನ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಆಸ್ಟ್ರೇಲಿಯನ್ ವೇಗಿ ಜೋಶ್ ಹೇಝಲ್ವುಡ್ ಶನಿವಾರ ಯಾವುದೇ ಬೌಲಿಂಗ್ ಅಭ್ಯಾಸ ನಡೆಸಿರಲಿಲ್ಲ. ಹೀಗಾಗಿ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ.
ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ.
ನುವಾನ್ ತುಷಾರ: ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಇನ್ನೂ ಸಹ ಎನ್ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.






