ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಐಪಿಎಲ್ 2026 ರ ಇದುವರೆಗಿನ ಅತಿದೊಡ್ಡ ಪಂದ್ಯಕ್ಕೆ ಸಾಕ್ಷಿಯಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈ ಸೀಸನ್ನ 11 ನೇ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ರಜತ್ ಪಟಿದಾರ್ ತಂಡವು ಸತತ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಏತನ್ಮಧ್ಯೆ, ತನ್ನ ಎರಡೂ ಪಂದ್ಯಗಳಲ್ಲಿ ಸೋತಿರುವ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ.