IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 26ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳ ಒಟ್ಟು ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ….
ಮಿಚೆಲ್ ಸ್ಟಾರ್ಕ್: ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಇನ್ನೂ ಸಹ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಂಡಿಲ್ಲ. ಇದೇ ಕಾರಣದಿಂದಾಗಿ ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಸ್ಟಾರ್ಕ್ ಕಾಣಿಸಿಕೊಳ್ಳುವುದಿಲ್ಲ.
ನುವಾನ್ ತುಷಾರ: ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಇನ್ನೂ ಸಹ ಎನ್ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.
ಬೆನ್ ಡಕೆಟ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಇಂಗ್ಲೆಂಡ್ನ ಎಡಗೈ ದಾಂಡಿಗ ಬೆನ್ ಡಕೆಟ್ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ನತ್ತ ಗಮನ ಹರಿಸುವ ಸಲುವಾಗಿ ಐಪಿಎಲ್ನಿಂದ ಹಿಂದೆ ಸರಿಯುತ್ತಿರುವುದಾಗಿ ಡಕೆಟ್ ತಿಳಿಸಿದ್ದಾರೆ. ಹೀಗಾಗಿ ಡಕೆಟ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ.
ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ.




