Headlines

RCB vs DC: ಫೈನಲ್​ನಲ್ಲಿ ಗೆಲ್ಲೋದು ಇವರಂತೆ… ಹೀಗೊಂದು ಲೆಕ್ಕಾಚಾರ – Kannada News | WPL 2026: Eliminator has always defeated the table topping team in the final

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ಕ್ಕೆ ಇಂದು (ಫೆ.5) ತೆರೆ ಬೀಳಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಮುಖಾಮುಖಿಯಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದೇ ಕುತೂಹಲ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತಹ ಲೆಕ್ಕಾಚಾರವೊಂದು ಎಲ್ಲರ ಗಮನ ಸೆಳೆಯುತ್ತಿದೆ. ಅದೇನೆಂದರೆ ಎಲಿಮಿನೇಟರ್ ಪಂದ್ಯ ಗೆದ್ದವರೇ ಚಾಂಪಿಯನ್.

ವುಮೆನ್ಸ್ ಪ್ರೀಮಿಯರ್ ಲೀಗ್​ನ ಕಳೆದ ಮೂರು ಆವೃತ್ತಿಗಳಲ್ಲಿ ಮುಂಬೈ ಇಂಡಿಯನ್ಸ್ 2 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಮ್ಮೆ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಫೈನಲ್ ಪಂದ್ಯ ಗೆದ್ದಿರುವ ತಂಡ.

ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಬದಲಾಗಿ ಎಲಿಮಿನೇಟರ್ ಪಂದ್ಯ ಗೆದ್ದು ಬಂದಂತಹ ತಂಡಗಳವೇ ಚಾಂಪಿಯನ್ ಪಟ್ಟ ಅಲಂಕರಿಸಿದೆ.

  • 2023 ರಲ್ಲಿ ನಡೆದ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿತ್ತು. ಈ ವೇಳೆ ದ್ವಿತೀಯ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದು ಫೈನಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು.
  • 2024 ರ ವುಮೆನ್ಸ್ ಪ್ರೀಮಿಯರ್ ಲೀಗ್​ನ ಅಂಕ ಪಟ್ಟಿಯ ಟಾಪ್-3 ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಾಣಿಸಿಕೊಂಡಿತ್ತು. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಫೈನಲ್​ಗೇರಿದರೆ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್  ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು. ಅಷ್ಟೇ ಅಲ್ಲದೆ ಫೈನಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಪ್ರಶಸ್ತಿ ಗೆದ್ದುಕೊಂಡಿದ್ದರು.
  • 2025 ರ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದರೆ, ಮುಂಬೈ ಇಂಡಿಯನ್ಸ್ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು. ಅದರಂತೆ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡಕ್ಕೆ ಸೋಲುಣಿಸಿ ಮುಂಬೈ ಇಂಡಿಯನ್ಸ್ ಫೈನಲ್​ಗೇರಿತ್ತು. ಫೈನಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು.

ಇದನ್ನೂ ಓದಿ: ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್

ಅಂದರೆ ಕಳೆದ ಮೂರು ಸೀಸನ್​ಗಳಲ್ಲೂ ಎಲಿಮಿನೇಟರ್ ಪಂದ್ಯವಾಡಿದ ತಂಡವೇ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದಿರುವುದು ಡೆಲ್ಲಿ ಕ್ಯಾಪಿಟಲ್ಸ್. ಹೀಗಾಗಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲಲಿದೆ ಎಂಬ ಲೆಕ್ಕಾಚಾರ ಶುರುವಾಗಿದೆ. ಇದಾಗ್ಯೂ ಆರ್​ಸಿಬಿ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಈ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದ್ದಾರಾ ಕಾದು ನೋಡಬೇಕಿದೆ.

Source link

Leave a Reply

Your email address will not be published. Required fields are marked *